ಕೇಂದ್ರ ರಕ್ಷಣಾ ಸಚಿವರನ್ನು ಭೇಟಿಯಾದ ಡಿಸಿಎಂ ಡಿ.ಕೆ. ಶಿವಕುಮಾರ್

DCM D.K. Shivakumar meets Union Defence Minister

ನವದೆಹಲಿ: ರಕ್ಷಣಾ ಇಲಾಖೆ ವಿಮಾನ ನಿಲ್ದಾಣಗಳ ಸುತ್ತಮುತ್ತಲ ಪ್ರದೇಶದಲ್ಲಿ ವಿಧಿಸಲಾಗಿರುವ ಕಟ್ಟಡಗಳ ಎತ್ತರದ ನಿರ್ಬಂಧಗಳು ಬೆಂಗಳೂರಿನ ಪ್ರಗತಿಗೆ ಅಡ್ಡಿಯಾಗಿದ್ದು, ಸುರಕ್ಷತೆ ಹಾಗೂ ಪ್ರಗತಿಯ ವಿಚಾರವನ್ನು ಗಮನದಲ್ಲಿಟ್ಟುಕೊಂಡು ನಿರ್ಬಂಧಗಳನ್ನು ಸಡಿಲಗೊಳಿಸಿ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರಿಗೆ ಮನವಿ ಮಾಡಿದರು.

ನವದೆಹಲಿಯಲ್ಲಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವರನ್ನು ಶುಕ್ರವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿ, ಮನವಿ ಪತ್ರ ಸಲ್ಲಿಸಿದರು.

“ಬೆಂಗಳೂರಿನ ರಕ್ಷಣಾ ಇಲಾಖೆ ಸುಪರ್ದಿಯ ವಿಮಾನ ನಿಲ್ದಾಣಗಳ 20 ಕಿ.ಮೀ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣ ಚಟುವಟಿಕೆಗಳಿಗೆ ನಿರಾಕ್ಷೇಪಣಾ ಪತ್ರ (NOC) ನೀಡುವಾಗ ವಿಮಾನ ನಿಲ್ದಾಣದ ಅಧಿಕಾರಿಗಳು ವಿಪರೀತ ನಿರ್ಬಂಧಗಳನ್ನು ವಿಧಿಸುತ್ತಿದ್ದಾರೆ. ಬೆಂಗಳೂರು ವಿಶ್ವದ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದೆ. ಹೆಚ್ಎಎಲ್ ವಿಮಾನ ನಿಲ್ದಾಣ ಬೆಂಗಳೂರಿನ ಹೃದಯ ಭಾಗದಲ್ಲಿದ್ದು, ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಬೇಡಿಕೆ ಇದೆ. ಆದರೆ ಹೆಚ್ಚುವರಿಯಾಗಿ ವಿಧಿಸಲಾಗಿರುವ ನಿರ್ಬಂಧಗಳು ಈ ಪ್ರದೇಶಗಳಲ್ಲಿ ಅಭಿವೃದ್ಧಿಗೆ ಅಡ್ಡಿಯಾಗಿವೆ” ಎಂದು ಪತ್ರದಲ್ಲಿ ವಿವರಿಸಿದ್ದಾರೆ.

“ಈ ವಿಚಾರವಾಗಿ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿಗಳು, ರಕ್ಷಣಾ ಸಚಿವಾಲಯದ ರಕ್ಷಣಾ ಉತ್ಪಾದನಾ ಇಲಾಖೆ ಕಾರ್ಯದರ್ಶಿಗಳು ಹಾಗೂ ರಕ್ಷಣಾ ಕಾರ್ಯದರ್ಶಿಗಳಿಗೆ ಪತ್ರಗಳನ್ನು ಬರೆಯಲಾಗಿದೆ. ವಿಮಾನ ಸುರಕ್ಷತೆ ಹಾಗೂ ನಗರದ ಅಭಿವೃದ್ಧಿ ಎರಡರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಪರಿಶೀಲನೆ ನಡೆಸಿ, ಎದುರಾಗಿರುವ ಸಮಸ್ಯೆಗಳನ್ನು ಪರಿಹರಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿ” ಎಂದು ಮನವಿ ಮಾಡಿದ್ದಾರೆ.

ಪ್ರಸ್ತುತ ಬೆಂಗಳೂರಿನಲ್ಲಿ ನಾಲ್ಕು ವಿಮಾನ ನಿಲ್ದಾಣಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳಲ್ಲಿ ಹೆಚ್ಎಎಲ್ ಹಾಗೂ ಯಲಹಂಕ ವಾಯುನೆಲೆ ರಕ್ಷಣಾ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಈ ವಿಮಾನ ನಿಲ್ದಾಣಗಳ ಸುತ್ತಮುತ್ತಲ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಮಾಡಲು ವಿಮಾನ ನಿಲ್ದಾಣ ಅಧಿಕಾರಿಗಳಿಂದ ನಿರಾಕ್ಷೇಪಣ ಪತ್ರ ಪಡೆಯಬೇಕಾಗಿದೆ.

ವಿಮಾನ ನಿಲ್ದಾಣದ ಸುತ್ತಮುತ್ತಲ 15 ಕಿ.ಮೀ ವ್ಯಾಪ್ತಿಯಲ್ಲಿ ಕಟ್ಟಡಗಳ ಎತ್ತರದ ಮಿತಿಯನ್ನು 150 ಮೀ. ನಿಗದಿಪಡಿಸಲಾಗಿದೆ ಎಂದು ಜಿ.ಎಸ್.ಆರ್ 751 (ಇ) ನಿಯಮದಲ್ಲಿ ಸೂಚಿಸಲಾಗಿದೆ. ಆದರೆ ರಕ್ಷಣಾ ಇಲಾಖೆ ವಿಮಾನ ನಿಲ್ದಾಣಗಳು ಈ ವಿಪರೀತ ನಿರ್ಬಂಧ ಹೇರುವುದರ ಜತೆಗೆ 150 ಮೀ. ಎತ್ತರದ ಮಿತಿಯನ್ನು 15 ಕಿ.ಮೀ ಮೀರಿ 20 ಕಿ.ಮೀ ವರೆಗೂ ವಿಸ್ತರಿಸಿವೆ. ಈ ನಿರ್ಬಂಧಗಳು ಈ ಬೆಂಗಳೂರು ನಗರದ ಪ್ರಗತಿಗೆ ಮಾರಕವಾಗಿವೆ.

ಸಿಗಾಪುರ, ಆಂಸ್ಟ್ರಡಾಮ್, ಡಲ್ಲಾಸ್, ಲಂಡನ್ ಹಾಗೂ ದುಬೈ ಸೇರಿದಂತೆ ಅನೇಕ ನಗರಗಳಲ್ಲಿ ವಿಮಾನ ನಿಲ್ದಾಣಗಳನ್ನು ಕಚೇರಿ, ಮನರಂಜನೆ ಸೇರಿದಂತೆ ವಿವಿದೋದ್ದೇಶಕ್ಕೆ ಬಳಸಲಾಗುತ್ತಿದೆ. ಈ ನಗರಗಳಲ್ಲಿ ವಿಮಾನ ನಿಲ್ದಾಣಗಳು ಕೇವಲ ಸಂಚಾರ ಉದ್ದೇಶಕ್ಕೆ ಮಾತ್ರವಲ್ಲದೇ ಉದ್ಯೋಗದ ಕೇಂದ್ರವಾಗಿ ನಗರ ಪರಿವರ್ತನೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿವೆ.

ಹೀಗಾಗಿ ಜಿ.ಎಸ್.ಆರ್ 751 (ಇ) ನಿಯಮವನ್ನು ಸಡಿಲಗೊಳಿಸಬೇಕು. 150 ಮೀ. ಎತ್ತರದ ಮಿತಿಯನ್ನು 20 ಕಿ.ಮೀ ಬದಲಿಗೆ 15 ಕಿ.ಮೀ ವ್ಯಾಪ್ತಿಗೆ ಸೀಮಿತಗೊಳಿಸಬೇಕು ಎಂದು ರಾಜ್ಯ ಸರ್ಕಾರದ ವಿವಿಧ ಅಧಿಕಾರಿಗಳು ಕೇಂದ್ರ ರಕ್ಷಣಾ ಇಲಾಖೆ ಅಧಿಕಾರಿಗಳಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ ಜೆಡಿಎಸ್ಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ ಜೆಡಿಎಸ್ಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾದಳ (JDS) ಪಕ್ಷಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

[ccc_my_favorite_select_button post_id="121342"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]