ಒಳಮೀಸಲಾತಿ: ಸಚಿವ ಸಂಪುಟ ಸಭೆಯ ನಿರ್ಧಾರ.. ನೇಮಕಾತಿ ಪ್ರಕ್ರಿಯೆ ಶೀಘ್ರವೇ ಪ್ರಾರಂಭ

Internal reservation: Recruitment process to begin soon

ಬೆಂಗಳೂರು: ಪರಿಶಿಷ್ಟ ಜಾತಿಯ ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಇಂದಿನ ಸಚಿವ ಸಂಪುಟ ಸಭೆ ನಿರ್ಧಾರವನ್ನು ತೆಗೆದುಕೊಂಡಿದ್ದು, ಎಡ, ಬಲ ಹಾಗೂ ಇತರೇ ಸಮುದಾಯಗಳಿಗೆ 5.25:5.25:4.5 ಮೀಸಲಾತಿ (Internal reservation) ಕಲ್ಪಿಸಲು ಸರ್ವಾನುಮತದಿಂದ ಒಪ್ಪಿಗೆ ನೀಡಿದೆ.

ಒಳಮೀಸಲಾತಿಗೆ ಸಂಬಂಧಿಸಿದಂತೆ ಇಂದು ನಡೆದ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಮೀಸಲಾತಿಯನ್ನು ಶೇ.50ಕ್ಕೆ ಮಿತಿಗೊಳಿಸುವ ಹೈಕೋರ್ಟ್ ತೀರ್ಪಿನ ಪ್ರಕಾರ ಪರಿಶಿಷ್ಟ ಜಾತಿಯೊಳಗೆ ಒಳ ಮೀಸಲಾತಿಯನ್ನು ಮರು ನಿಗಧಿಪಡಿಸಿ ಪರಿಶಿಷ್ಟ ಜಾತಿಗೆ 15% ಹಾಗೂ ಪರಿಶಿಷ್ಟ ವರ್ಗಗಳಿಗೆ ಶೇ3 ರಷ್ಟು ಮೀಸಲಾತಿ ನೀಡಲಾಗಿದೆ.

ಒಳಮೀಸಲಾತಿಗೆ ರಚಿಸಲಾಗಿದ್ದ ಕಾಯ್ದೆಗೆ ಅನುಗುಣವಾಗಿ 17 % ಮೀಸಲಾತಿಗೆ 6:6:5 ಇದ್ದರೆ, ಇದೀಗ 15 % ಮೀಸಲಾತಿಗೆ 5.3, 5.3 ಹಾಗೂ 4.4 ಮೀಸಲಾತಿಯನ್ನು ನಿಗದಿ ಮಾಡಿ ವರದಿ ನೀಡಲಾಗಿದ್ದು, ಅಂತಿಮವಾಗಿ ಸಚಿವ ಸಂಪುಟ ಸಭೆಯು ಎಡಗೈ ಸಂಬಂಧಿತ ಜಾತಿಗಳಿಗೆ 5.25, ಬಲಗೈ ಜಾತಿಗಳಿಗೆ 5.25 ಬೋವಿ , ಲಂಬಾಣಿ, ಕೊರಚ, ಕೊರಮ ಹಾಗೂ 59 ಅಲೆಮಾರಿ ಜಾತಿಗಳು ಸೇರಿ 4.5 ಮೀಸಲಾತಿ ನೀಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದರು.

ಎಲ್ಲಾ ಸಮುದಾಯಗಳಿಗೂ ಸಮಾನ ನ್ಯಾಯ ದೊರೆಯಲಿದೆ

ಈ ನಿರ್ಧಾರದಿಂದ ಎಲ್ಲ ಸಮುದಾಯಗಳಿಗೂ ಸಮಾನ ನ್ಯಾಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ನೇಮಕಾತಿ ಮಾಡುವ ಸಂದರ್ಭದಲ್ಲಿ ಒಳಮೀಸಲಾತಿಯನ್ನು ಇದರನ್ವಯ ನಿರ್ಧರಿಸಬೇಕು ಎಂದರು.

ಶೇ. ಆರರಷ್ಟು ಮೀಸಲಾತಿಗೆ ಸಂಬಂಧಿಸಿದಂತೆ ಉಚ್ಛ ನ್ಯಾಯಾಲಯ ಅಂತಿಮವಾಗಿ ತೀರ್ಮಾನ ಕೈಗೊಳ್ಳುವವರೆಗೆ ಬ್ಯಾಕ್ ಲಾಗ್ ಎಂದು ಪರಿಗಣಿಸಲಾಗುವುದು ಎಂದರು.

ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿಗೆ ಸಂಬಂಧಿಸಿದಂತೆ ರಾಷ್ಟ್ರದಲ್ಲಿಯೇ ಮಹತ್ವಪೂರ್ಣ ನಿರ್ಧಾರ ಇದಾಗಿದ್ದು, ರೋಸ್ಟರ್ ಸಂಬಂಧಿಸಿದಂತೆ ಸೂಕ್ತ ಪರಿಹಾರವನ್ನು ಕೈಗೊಂಡು ರಾಜ್ಯದ ಶೋಷಿತ ವರ್ಗಗಳ ಬದುಕಿನಲ್ಲಿ ತಿರುವು ನೀಡಲಾಗುತ್ತಿದೆ ಎಂದರು.

ನ್ಯಾಯಾಲಯದ ಆದೇಶಕ್ಕೆ ಒಳಪಟ್ಟು ನಿರ್ಧಾರ

ಒಳಮೀಸಲಾತಿ ಕುರಿತು ಬಹುಕಾಲದಿಂದ ಅನೇಕ ಹೋರಾಟಗಳು ನಡೆದಿವೆ. ನಂತರ ಚಿತ್ರದುರ್ಗದಲ್ಲಿ ನಡೆದ ಪರಿಶಿಷ್ಟ ಜಾತಿ ಸಮಾವೇಶದಲ್ಲಿ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸುವ ಐತಿಹಾಸಿಕ ನಿರ್ಧಾರವನ್ನು ಕೈಗೊಳ್ಳಲಾಗಿತ್ತು.

ಈ ಸಮಾವೇಶದಲ್ಲಿ 101 ಪರಿಶಿಷ್ಟ ಜಾತಿಗಳು ಸೇರಿದಂತೆ ಅಲೆಮಾರಿ ಸೇರಿದಂತೆ 59 ಜಾತಿಗಳ ಪ್ರತಿನಿಧಿಗಳು ಪಾಲ್ಗೊಂಡು ಒಳಮೀಸಲಾತಿಗೆ ಸರ್ವಾನುಮತದಿಂದ ಒಪ್ಪಿಗೆ ನೀಡಿದ್ದರು ಎಂದು ವಿವರಿಸಿದ ಮುಖ್ಯಮಂತ್ರಿಗಳು ಗೃಹ ಸಚಿವ ಡಾ: ಜಿ. ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಪ್ರಣಾಳಿಕಾ ಸಮಿತಿಯಲ್ಲಿಯೂ ಒಳಮೀಸಲಾತಿಯನ್ನು ಸರ್ಕಾರ ನೀಡಲಿದೆ ಎಂಬ ಭರವಸೆ ನೀಡಲಾಗಿತ್ತು.

ಸುಪ್ರೀಂ ಕೋರ್ಟ್ ಒಳಮೀಸಲಾತಿ ಕಲ್ಪಿಸುವ ತೀರ್ಮಾನವನ್ನು ಆಯಾ ರಾಜ್ಯಗಳೇ ತೆಗೆದುಕೊಳ್ಳಬಹುದು ಎಂದು ಆದೇಶ ನೀಡಿದ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚಿಸಲಾಯಿತು.

ಅವರು ನೀಡಿದ ವರದಿ ಆಧರಿಸಿ ಸಚಿವ ಸಂಪುಟವು ಪರಿಶಿಷ್ಟ ಜಾತಿಯ ಬಲ, ಎಡ ಸಮುದಾಯಗಳು ಹಾಗೂ ಇತರೇ ಅಲೆಮಾರಿ ಜಾತಿಗಳಿಗೆ ಕ್ರಮವಾಗಿ 6:6:5 ಮೀಸಲಾತಿ ಕಲ್ಪಿಸುವ ನಿರ್ಧಾರ ತೆಗೆದುಕೊಳ್ಳಲಾಯಿತು.

ಪರಿಶಿಷ್ಟ ಜಾತಿಗೆ ಒಟ್ಟು 24 % ಅಂದರೆ ಶೇ 7% ರಷ್ಟು ಎಸ್.ಟಿಗೆ ಹಾಗೂ 17% ಎಸ್ .ಸಿ ಸಮುದಾಯಗಳಿಗೆ ಮೀಸಲಿಡಲಾಯಿತು. ಹೀಗಾಗಿ ಒಟ್ಟು ಶೇ 56% ರಷ್ಟು ಮೀಸಲಾತಿ ನೀಡಿದಂತಾಯಿತು.

ನ್ಯಾಯಾಲಯವು ಇಂದಿರಾ ಸಹಾನಿ ಪ್ರಕರಣವನ್ನು ಉಲ್ಲೇಖಿಸಿ ಮೀಸಲಾತಿ ಶೇ 50 ರಷ್ಟು ಮೀರಬಾರದು ಎಂದು ಪುನರುಚ್ಛರಿಸಿತ್ತು ಎಂದರು.

ಆದರೆ ಈ ಮೀಸಲಾತಿಗೆ ಅಪಸ್ವರಗಳು ಎದ್ದ ನಂತರ ಗೊಂದಲ ನಿವಾರಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ತಾಂತ್ರಿಕ ಸಮಿತಿ ರಚಿಸಿ ವರದಿಯನ್ನು ಪಡೆಯಲಾಗಿದೆ. ಅದರಂತೆ ಕೋರ್ಟ್ ಆದೇಶದ ಶೇಕಡ 50 ಮಿತಿಗೆ ಒಳಪಟ್ಟು ಇಂದಿನ ಸಚಿವ ಸಂಪುಟದಲ್ಲಿ ಎಡ, ಬಲ ಹಾಗೂ ಇತರೇ ಸಮುದಾಯಗಳಿಗೆ 5.25:5.25:4.5 ಮೀಸಲಾತಿ ಕಲ್ಪಿಸುವ ದಿಟ್ಟ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.

ನೇಮಕಾತಿ ಪ್ರಕ್ರಿಯೆ ಶೀಘ್ರವೇ ಪ್ರಾರಂಭಿಸಲಾಗುವುದು

ಈಗಾಗಲೇ ಬಜೆಟ್ ನಲ್ಲಿ ಘೋಷಿಸಿರುವಂತೆ ಈ ವರ್ಷ 56432 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಿ, ತುರ್ತು ಕ್ರಮ ಕೈಗೊಳ್ಳಲಾಗುವುದು.

ನೇಮಕಾತಿಗಳಲ್ಲಿ ಶೇಕಡ 50ರ ಮೀಸಲಾತಿಯು ನ್ಯಾಯಾಲಯವು ಅಂತಿಮ ತೀರ್ಮಾನ ತೆಗೆದುಕೊಳ್ಳುವವರೆಗೆ. ನಮ್ಮ ಸರ್ಕಾರವು ಈಗಾಗಲೇ ಶೇಕಡ 56ರ ಮೀಸಲಾತಿ ನೀಡಬೇಕೆನ್ನುವ ನಿರ್ಧಾರಕ್ಕೆ ಬದ್ಧವಾಗಿದೆ.

ಸಿ ಕೆಟಗರಿಯಲ್ಲಿ ನೇಮಕಾತಿಗೆ ಲಭ್ಯವಾಗುವ ಹುದ್ದೆಗಳಲ್ಲಿ ಶೇ.20ರಷ್ಟು ನ್ನು 59 ಅಲೆಮಾರಿ ಜಾತಿಗಳಿಗೆ ಮೀಸಲಿಡಲು ಸoಪುಟದಲ್ಲಿ ನಿರ್ಧರಿಸಲಾಗಿದೆ. ಈಗ ಪ್ರಸಕ್ತ ತೀರ್ಮಾನದಂತೆ ಸಿ ಕೆಟಗರಿಗೆ 4.5 ಮೀಸಲಾತಿ ಕಲ್ಪಿಸಲಾಗಿದೆ ಎಂದರು.

ಸರ್ಕಾರದ ಒಕ್ಕೊರಲ ಐತಿಹಾಸಿಕ ತೀರ್ಮಾನ

ನಮ್ಮ ಸರ್ಕಾರವು ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ನೀತಿಗೆ ಬದ್ಧವಾಗಿದೆ ನೀಡಿದ ವಚನದಂತೆ ನಡೆದು ಕೊಂಡಿದ್ದೇವೆ. ದಲಿತ ಸಂಘಟನೆಗಳು ಸೇರಿದಂತೆ ಇತರ ಸಮುದಾಯಗಳು ಈ ನಿರ್ಧಾರವನ್ನು ಸ್ವಾಗತಿಸುವ ವಿಶ್ವಾಸವನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದರು.

ಶೇಕಡಾ 24 ಮೀಸಲಾತಿ ಕಲ್ಪಿಸಲು ನಮ್ಮ ಸರ್ಕಾರ ಬದ್ಧವಾಗಿದೆ

ನಮ್ಮ ಸರ್ಕಾರವು ಶೇಕಡ 24 ಮೀಸಲಾತಿಗೆ ಅಂದರೆ ಪರಿಶಿಷ್ಟ ಜಾತಿ- ಶೇಕಡ 17 ಮತ್ತು ಪರಿಶಿಷ್ಟ ಪಂಗಡ ಶೇಕಡಾ -7 ತೀರ್ಮಾನಕ್ಕೆ ಬದ್ಧವಾಗಿದೆ. ಭವಿಷ್ಯದಲ್ಲಿ ಶೇಕಡ 17ರಷ್ಟು ಮೀಸಲಾತಿ ಕಲ್ಪಿಸಬಹುದು ಎಂದು ಕೋರ್ಟ್ ತೀರ್ಪು ಸರ್ಕಾರದ ಪರವಾಗಿ ಬಂದಲ್ಲಿ ಈ ಹಿಂದೆ ಸಚಿವ ಸಂಪುಟದಲ್ಲಿ ತೆಗೆದುಕೊಂಡಿರುವ 6:6:5 ಮೀಸಲಾತಿ ತೀರ್ಮಾನದಂತೆ ಶೇಕಡ 6ನ್ನು ಬ್ಯಾಕ್ ಲಾಗ್ ಎಂದು ತೀರ್ಮಾನಿಸಲಾಗುವುದು ಎಂದರು.

ರಾಜಕೀಯ

ಒಳಮೀಸಲಾತಿ: ಸಚಿವ ಸಂಪುಟ ಸಭೆಯ ನಿರ್ಧಾರ.. ನೇಮಕಾತಿ ಪ್ರಕ್ರಿಯೆ ಶೀಘ್ರವೇ ಪ್ರಾರಂಭ

ಒಳಮೀಸಲಾತಿ: ಸಚಿವ ಸಂಪುಟ ಸಭೆಯ ನಿರ್ಧಾರ.. ನೇಮಕಾತಿ ಪ್ರಕ್ರಿಯೆ ಶೀಘ್ರವೇ ಪ್ರಾರಂಭ

ಪರಿಶಿಷ್ಟ ಜಾತಿಯ ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಇಂದಿನ ಸಚಿವ ಸಂಪುಟ ಸಭೆ ನಿರ್ಧಾರವನ್ನು ತೆಗೆದುಕೊಂಡಿದ್ದು, ಎಡ, ಬಲ ಹಾಗೂ ಇತರೇ ಸಮುದಾಯಗಳಿಗೆ 5.25:5.25:4.5 ಮೀಸಲಾತಿ (Internal reservation) ಕಲ್ಪಿಸಲು ಸರ್ವಾನುಮತದಿಂದ ಒಪ್ಪಿಗೆ

[ccc_my_favorite_select_button post_id="121345"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]