ಮಂತ್ರಾಲಯ: 22 ದಿನಗಳಲ್ಲಿ ಗುರು ರಾಘವೇಂದ್ರ ಸ್ವಾಮಿ ಮಠದ ಹುಂಡಿ ಆದಾಯ ಎಷ್ಟು ಗೊತ್ತೆ.?

Mantralaya: Do you know how much income the Raghavendra Swamy Mutt has earned in 22 days?

ಮಂತ್ರಾಲಯ: ಮಾರ್ಚ್ 31, ಮಂಗಳವಾರದಿಂದ ಏಪ್ರಿಲ್ 21 ರವರೆಗೆ ಮಂತ್ರಾಲಯದ (Mantralaya) ಶ್ರೀ ರಾಘವೇಂದ್ರ ಸ್ವಾಮಿ (Raghavendra Swamy) ಮಠದಲ್ಲಿ ಭಕ್ತರು ಅರ್ಪಿಸಿದ ಹುಂಡಿ ಕಾಣಿಕೆಗಳ ಎಣಿಕೆ ಬುಧವಾರ ನಡೆಯಿತು. ಈ ಎಣಿಕೆಯಲ್ಲಿ ಒಟ್ಟು 3,25,96,854 ರೂ.ಗಳು ಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇವಾಲಯದ ಮುಖ್ಯಸ್ಥ ಸುಬುಧೇಂದ್ರ ತೀರ್ಥರ ಸೂಚನೆಯಂತೆ ಹುಂಡಿ ಎಣಿಕೆಗಾಗಿ ವಿಶೇಷ ಗ್ಯಾಲರಿಗಳನ್ನು ಸ್ಥಾಪಿಸಲಾಗಿತ್ತು. ಎಣಿಕೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆಗಾಗಿ, ಎಣಿಕೆ ಸಭಾಂಗಣವನ್ನು ಪ್ರವೇಶಿಸಿದ ನಂತರ ಯಾರಿಗೂ ಹೊರಹೋಗಲು ಅವಕಾಶವಿರಲಿಲ್ಲ.

ತಡವಾಗಿ ಬರುವವರು ಒಳಗೆ ಪ್ರವೇಶಿಸದಂತೆ ಸೈನ್ ಬೋರ್ಡ್‌ಗಳನ್ನು ಸ್ಥಾಪಿಸಲಾಗಿತ್ತು ಎಂದು ವ್ಯವಸ್ಥಾಪಕ ಎಸ್.ಕೆ. ಶ್ರೀನಿವಾಸ ರಾವ್ ತಿಳಿಸಿದ್ದಾರೆ.

ಶಾಲಾ-ಕಾಲೇಜುಗಳ ರಜೆ ಹಾಗೂ ರಾಯರ ದರ್ಶನದ ಹಂಬಲದಿಂದಾಗಿ ದೇಶದ ನಾನಾ ಮೂಲೆಗಳಿಂದ ಭಕ್ತರು ಮಂತ್ರಾಲಯಕ್ಕೆ ದೌಡಾಯಿಸುತ್ತಿದ್ದು, ಬಿರುಬೇಸಿಗೆಯಲ್ಲಿಯೂ ಕಾಣಿಕೆ ಮೊತ್ತದಲ್ಲಿ ಭಾರಿ ಏರಿಕೆ ಕಂಡುಬಂದಿದೆ.

ಹುಂಡಿ ಎಣಿಕೆಯ ಅಧಿಕೃತ ವರದಿಯ ಪ್ರಕಾರ, ಒಟ್ಟು 3,15,62,354 ರೂಪಾಯಿ ಮೌಲ್ಯದ ಕರೆನ್ಸಿ ನೋಟುಗಳು ಹಾಗೂ 10,34,500 ರೂಪಾಯಿ ಮೌಲ್ಯದ ನಾಣ್ಯಗಳು ಸಂಗ್ರಹವಾಗಿವೆ. ನಗದಿನ ಜೊತೆಗೆ ಭಕ್ತರು ರಾಯರಿಗೆ ತಮ್ಮ ಭಕ್ತಿಯ ಹರಕೆಯಾಗಿ 47 ಗ್ರಾಂ ಚಿನ್ನ ಮತ್ತು 592 ಗ್ರಾಂ ಬೆಳ್ಳಿಯನ್ನು ಸಮರ್ಪಿಸಿದ್ದಾರೆ.

ಮಠದ ಆವರಣದಲ್ಲಿ ನಡೆದ ಈ ಬೃಹತ್ ಎಣಿಕೆ ಕಾರ್ಯದಲ್ಲಿ ನೂರಾರು ಮಠದ ಸಿಬ್ಬಂದಿ, ಭಜನಾ ಮಂಡಳಿಯ ಸದಸ್ಯರು ಹಾಗೂ ಕರಸೇವಕರು ಅತ್ಯಂತ ಶ್ರದ್ಧೆಯಿಂದ ಭಾಗವಹಿಸಿ ಪ್ರಕ್ರಿಯೆಯನ್ನು ಸುಗಮವಾಗಿ ಪೂರೈಸಿದ್ದಾರೆ.

ಏಪ್ರಿಲ್ ತಿಂಗಳ ಅಂತ್ಯದವರೆಗೆ ರಜೆ ಇರುವುದರಿಂದ ಮುಂದಿನ ದಿನಗಳಲ್ಲಿ ಭಕ್ತರ ಸಂಖ್ಯೆ ಮತ್ತು ಕಾಣಿಕೆ ಸಂಗ್ರಹ ಇನ್ನೂ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಮಠದ ಮೂಲಗಳು ತಿಳಿಸಿವೆ.

ಗ್ರಾಮಪಂಚಾಯಿತಿ ಚುನಾವಣೆಗೂ ಅಫಿಡವಿಟ್ ಕಡ್ಡಾಯ..!

Affidavit is mandatory for Grama Panchayat elections too..!
Affidavit is mandatory for Grama Panchayat elections too..!

ಬೆಂಗಳೂರು: ಗ್ರಾಮಪಂಚಾಯತಿ (Gram Panchayat) ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ರಾಜ್ಯ ಸರಕಾರ ಸಿದ್ಧತೆ ನಡೆಸಿರುವ ಸಮಯದಲ್ಲಿಯೇ, ರಾಜ್ಯ ಚುನಾವಣಾ ಆಯೋಗ ನಾಮಪತ್ರ ಸಲ್ಲಿಕೆಯ ವಿಷಯದಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ವಿಧಾನಸಭೆ, ಲೋಕಸಭೆ ಅಭ್ಯರ್ಥಿಗಳಂತೆ ವಿವರವಾದ ಅಫಿಡವಿಟ್‌ಗಳನ್ನು (Affidavit) ಸಲ್ಲಿಸಬೇಕು ಎನ್ನುವ ಆದೇಶವನ್ನು ಹೊರಡಿಸಿದೆ.

2003 ಮತ್ತು 2018ರ ಹಿಂದಿನ ನಿರ್ದೇಶನ ಗಳೊಂದಿಗೆ ಇನ್ನಷ್ಟು ವಿಷಯಗಳನ್ನು ಸೇರಿಸಲಾಗಿದೆ. ಈ ಆದೇಶ ಗ್ರಾಮ ಪಂಚಾಯತಿ, ನಗರಸಭೆ, ಪಾಲಿಕೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವ ಣೆಗಳಿಗೂ ಅನ್ವಯವಾಗಲಿದೆ.

ಅಭ್ಯರ್ಥಿಗಳು ತಮ್ಮ ವೈಯಕ್ತಿಕ, ಆರ್ಥಿಕ ಮತ್ತು ಕಾನೂನು ಸಂಬಂಧಿತ ವಿವರಗಳನ್ನು ಸ್ಪಷ್ಟವಾಗಿ ಬಹಿರಂಗಪಡಿಸಬೇಕಾಗಿದೆ.

ಕುಟುಂಬ ಸದಸ್ಯರ ಮಾಹಿತಿ ಕಡ್ಡಾಯ

ಆಸ್ತಿ ವಿವರಗಳ ವಿಷಯದಲ್ಲಿ, ಅಭ್ಯರ್ಥಿಗಳು ತಮ್ಮ ಹಾಗೂ ಕುಟುಂಬ ಸದಸ್ಯರ ಚರ ಮತ್ತು ಸ್ಥಿರ ಆಸ್ತಿಗಳ ಸಂಪೂರ್ಣ ವಿವರಗಳನ್ನು ನೀಡಬೇಕು.

ಇದರಲ್ಲಿ ನಗದು, ಬ್ಯಾಂಕ್ ಠೇವಣಿಗಳು, ಷೇರುಗಳು, ಬಾಂಡ್, ವಾಹನ, ಜಮೀನು, ಮನೆಗಳು ಸೇರಿದಂತೆ ಎಲ್ಲಾ ಆಸ್ತಿಗಳ ಮಾಹಿತಿಯನ್ನು ಒಳಗೊಂಡಿರಬೇಕು. ಜತೆಗೆ, ಬ್ಯಾಂಕ್ ಸಾಲ, ಸರಕಾರಕ್ಕೆ ಬಾಕಿ ಇರುವ ತೆರಿಗೆಗಳು ಮತ್ತು ಇತರೆ ಹಣಕಾಸು ಬಾಧ್ಯತೆಗಳ ವಿವರಗಳನ್ನು ಕೂಡ ಸಲ್ಲಿಸಬೇಕಾಗಿದೆ.

SSLC ರಿಸಲ್ಟ್: ದೊಡ್ಡಬಳ್ಳಾಪುರದ ನಳಂದ ಪ್ರೌಢಶಾಲೆಗೆ ಶೇ.100 ಫಲಿತಾಂಶ

SSLC: 100% results for Nalanda High School in Doddaballapur
SSLC: 100% results for Nalanda High School in Doddaballapur

ದೊಡ್ಡಬಳ್ಳಾಪುರ: ನಿನ್ನೆ ಪ್ರಕಟವಾದ 2025-26ನೇ ಸಾಲಿನ ಎಸ್ಎಸ್ಎಲ್‌ಸಿ (SSLC) ಪರೀಕ್ಷಾ ಫಲಿತಾಂಶದಲ್ಲಿ ನಗರದ ಪ್ರತಿಷ್ಠಿತ ನಳಂದ ಪ್ರೌಢಶಾಲೆ ಶೇ.100% ರಷ್ಟು ಫಲಿತಾಂಶ ಪಡೆದಿದೆ.

2025- 26ನೇ ಸಾಲಿನಲ್ಲಿ 211 ವಿದ್ಯಾರ್ಥಿಗಳು SSLC ಪರೀಕ್ಷೆ ಬರೆದಿದ್ದು, ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಅತ್ಯುತ್ತಮ ಫಲಿತಾಂಶವನ್ನು ನಳಂದ ಪ್ರೌಢಶಾಲೆ ತಂದಿದ್ದಾರೆ.

ನಳಂದ ಪ್ರೌಢ ಶಾಲೆಯ ವಿದ್ಯಾರ್ಥಿ ಚಂದ್ರ ಆರ್ 625ಕ್ಕೆ 619 (ರಾಜ್ಯಕ್ಕೆ ಏಳನೇ ರ್‍ಯಾಂಕ್‌), ದೀಕ್ಷಾ ಆರ್ 625ಕ್ಕೆ 616 (ರಾಜ್ಯಕ್ಕೆ ಒಂಬತ್ತನೇ ರ್‍ಯಾಂಕ್‌) ಮತ್ತು ರಮ್ಯಾ ಕೆ 625ಕ್ಕೆ 615 (ರಾಜ್ಯಕ್ಕೆ ಹತ್ತನೇ ರ್‍ಯಾಂಕ್‌) ಅಂಕಗಳನ್ನು ಪಡೆಯುವ ಮೂಲಕ ಅತ್ಯುತ್ತಮ ಫಲಿತಾಂಶವನ್ನು ಪಡೆದಿದ್ದಾರೆ ಎಂದು ಶಾಲಾ ಮುಖ್ಯ ಶಿಕ್ಷಕರಾದ ಸುನೀತಾ ಪಿ ಅವರು ತಿಳಿಸಿದ್ದಾರೆ.

ಫಲಿತಾಂಶದ ಬಳಿಕ ಹರಿತಲೇಖನಿಗೆ ಪ್ರತಿಕ್ರಿಯೆ ನೀಡಿರುವ ಅವರು, ವಿದ್ಯಾರ್ಥಿಗಳೆಲ್ಲರೂ ಅತ್ಯಂತ ಕಠಿಣ ಪರಿಶ್ರಮದಿಂದ ಅಧ್ಯಯನಶೀಲರಾಗಿದ್ದು, ಈ ಫಲಿತಾಂಶವನ್ನು ಪಡೆಯಲು ಸಾಧ್ಯವಾಗಿದೆ ಎಂದರು.

ಈ ವರ್ಷ ಉತ್ತಮ ಫಲಿತಾಂಶ ಪಡೆದ ಎಲ್ಲಾ ವಿದ್ಯಾರ್ಥಿಗಳನ್ನು, ನಿರಂತರ ಪರಿಶ್ರಮದಿಂದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ಶಿಕ್ಷಕರನ್ನು ಹಾಗೂ ಉತ್ತಮವಾಗಿ ಸಹಕರಿಸಿದ ಎಲ್ಲಾ ಪೋಷಕರನ್ನು ಶಾಲಾ ಕಾರ್ಯದರ್ಶಿ ಅನುರಾಧಾ ಕೆಆರ್ ರವರು ಅಭಿನಂದಿಸಿ ವಿದ್ಯಾರ್ಥಿಗಳೆಲ್ಲರಿಗೂ ಉಜ್ವಲ ಭವಿಷ್ಯವನ್ನು ಹಾರೈಸಿದ್ದಾರೆ.

ಈ ಸಾಲಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ಚಂದ್ರ ಆರ್, ಶಾಲೆಯಲ್ಲಿರುವ ಅತ್ಯುತ್ತಮವಾದ ಶೈಕ್ಷಣಿಕ ವಾತಾವರಣ, ಶಿಸ್ತು, ಸಮಯ ಪಾಲನೆ ಮತ್ತು ಅಧ್ಯಯನಶೀಲತೆಯೇ ನಮ್ಮ ಸಾಧನೆಗೆ ಕಾರಣವೆಂದು ತಿಳಿಸಿ, ಶಿಕ್ಷಕರ 24X7 ಪರಿಶ್ರಮ ನಮ್ಮನ್ನು ಇಲ್ಲಿಯವರೆಗೆ ಕರೆತಂದಿದೆ ಎಂದರು.

ಅತ್ಯುತ್ತಮ ಫಲಿತಾಂಶ ಪಡೆದ ಎಲ್ಲ ವಿದ್ಯಾರ್ಥಿಗಳಿಗೆ ಶಾಲೆಯ ಆಡಳಿತ ಮಂಡಳಿ ಮತ್ತು ಗುರು ವೃಂದದವರು ಶುಭವನ್ನು ಕೋರಿದ್ದಾರೆ.

ರಾಜಕೀಯ

ನಾನು ದೆಹಲಿಗೆ ಗಾಳಿ ಕುಡಿಯಲು ಬಂದಿಲ್ಲ: ಘರ್ಜಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ದೆಹಲಿಗೆ ಗಾಳಿ ಕುಡಿಯಲು ಬಂದಿಲ್ಲ: ಘರ್ಜಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

"ನಾನು ಪಕ್ಷದ ನಾಯಕರನ್ನು ಭೇಟಿಯಾಗಿದ್ದೇನೆ. ನಾನು ನಮ್ಮ ಕೆಲಸ ಮಾಡುತ್ತಿರುತ್ತೇನೆ. ಆದರೆ, ಯಾರನ್ನು ಭೇಟಿಯಾಗಿರುವೆ ಎಂದು ಹೇಳುವುದಿಲ್ಲ. ದೆಹಲಿಗೆ ಗಾಳಿ ಕುಡಿಯಲು ಬಂದಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಘರ್ಜಿಸಿದ್ದಾರೆ

[ccc_my_favorite_select_button post_id="121329"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!