ಬೆಂಗಳೂರು: ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾದಳ (JDS) ಪಕ್ಷಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ರಾಜ್ಯ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಕೃಷ್ಣಾರೆಡ್ಡಿ ಹಾಗೂ ಬೆಂಗಳೂರು ಗ್ರಾಮಾಂತರ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ವಿ. ಮಂಜುನಾಥ್ ನೇತೃತ್ವದಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ಇದರ ಅನ್ವಯ ದೊಡ್ಡಬಳ್ಳಾಪುರ ಜೆಡಿಎಸ್ ಅಧ್ಯಕ್ಷರಾಗಿ ಹರೀಶ್ ಗೌಡ (Harish Gowda) ಅವರನ್ನು ನೇಮಕ ಮಾಡಲಾಗಿದೆ.
ಉಳಿದಂತೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ಆಂಜನೇಗೌಡ, ಉಪಾಧ್ಯಕ್ಷರಾಗಿ ಆನಂದ್ ಕೊನಘಟ್ಟ, ಪುಟ್ಟರಾಜು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಗೋವಿಂದ ರಾಜು ಅವರನ್ನು ನೇಮಿಸಲಾಗಿದೆ.
ಈ ನೇಮಕಾತಿ ತಕ್ಷಣದಿಂದಲೇ ಜಾರಿಗೆ ಬಂದಿದೆ.
ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸಿ, ಮುಖಂಡರು ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸಿ ಕ್ಷೇತ್ರದಲ್ಲಿ ಪಕ್ಷವನ್ನು ಸಂಘಟಿತವಾಗಿ ಬಲಪಡಿಸುವಲ್ಲಿ ಹರೀಶ್ ಗೌಡ ಅವರು ಪ್ರಮುಖ ಪಾತ್ರವಹಿಸುವರೆಂಬ ವಿಶ್ವಾಸವನ್ನು ನಾಯಕರು ವ್ಯಕ್ತಪಡಿಸಿದ್ದಾರೆ.
ನೂತನ ಅಧ್ಯಕ್ಷರಿಗೆ ಪಕ್ಷದ ಹಿರಿಯರು, ಕಾರ್ಯಕರ್ತರು ಮತ್ತು ಬೆಂಬಲಿಗರು ಅಭಿನಂದನೆಗಳನ್ನು ತಿಳಿಸಿದ್ದಾರೆ.
