ಇಂದು ವರನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ: ದೊಡ್ಡಬಳ್ಳಾಪುರದಲ್ಲಿ ರಕ್ತದಾನ ಶಿಬಿರ

ದೊಡ್ಡಬಳ್ಳಾಪುರ: ನಗರದ ಖಾಸ್ ಬಾಗ್‌ನಲ್ಲಿನ ಶ್ರೀಗಂಗಾ ಭಗತ್ ಸಿಂಗ್-ಚಂದ್ರಶೇಖರ್ ಆಜಾದ್ ಆಸ್ಪತ್ರೆ ವತಿಯಿಂದ ತಾಲೂಕು ಶಿವರಾಜ್‌ಕುಮಾರ್ ಕನ್ನಡ ಸೇನಾ ಸಮಿತಿ, ಲಯನ್ಸ್ ಕ್ಲಬ್ ಸಹಯೋಗದಲ್ಲಿ ವರನಟ ಡಾ.ರಾಜ್‌ಕುಮಾರ್ (Dr. Rajkumar) 98ನೇ ಜನ್ಮ ದಿನಾಚರಣೆ ಅಂಗವಾಗಿ ಏಪ್ರಿಲ್ 24 ರಂದು ಬೆಳಿಗ್ಗೆ 9.30ಕ್ಕೆ ಖಾಸ್‌ಬಾಗ್ನ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಲಿದೆ.

ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ರಾಜ್‌ಕುಮಾರ್ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿಸಬೇಕಿದೆ ಎಂದು ಆಸ್ಪತ್ರೆಯ ಮುಖ್ಯಸ್ಥ ಡಾ.ರಮೇಶ್‌ಗೌಡ ತಿಳಿಸಿದ್ದಾರೆ.

ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದಿಂದ ಜನ್ಮ ದಿನಾಚರಣೆ

ತಾಲೂಕು ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ಏಪ್ರಿಲ್ 24ರಂದು ಡಾ.ರಾಜ್‌ಕುಮಾರ್ 98ನೇ ಜನ್ಮ ದಿನಾಚರಣೆ ಅಂಗವಾಗಿ, ಬೆಳಿಗ್ಗೆ 9 ಗಂಟೆಗೆ ನಗರದ ನೆಲದಾಂಜನೇಯಸ್ವಾಮಿ ದೇವಾಲಯದಲ್ಲಿ ಅಭಿಷೇಕ, ಪೂಜಾ ಕಾರ್ಯಂಕ್ರಮ, ಸಿಹಿ ವಿತರಣೆಯಿದೆ.

ಜಯಚಾಮರಾಜೇಂದ್ರ ವೃತ್ತದಲ್ಲಿನ ಡಾ.ರಾಜ್‌ಕುಮಾರ್ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿ ಡಾ.ರಾಜ್‌ಕುಮಾರ್ ಸ್ಮರಣೆ ಕಾರ್ಯಂಕ್ರಮ ಹಮ್ಮಿಕೊಳ್ಳಲಾಗಿದೆ. ಶ್ರೀ ರಾಮ್‌ ಮೆಲೋಡಿಸ್‌ ತಂಡದಿಂದ ವಾದ್ಯಗೋಷ್ಟಿ ಕಾರ್ಯಕ್ರಮವಿದೆ ಎಂದು ಸಂಘದ ಅಧ್ಯಕ್ಷ ಸು.ನರಸಿಂಹಮೂರ್ತಿ ತಿಳಿಸಿದ್ದಾರೆ.

ಇನ್ಸ್‌ಪೆಕ್ಟರ್ ಹರೀಶ್ ಅವರಿಗೆ ಪಿತೃವಿಯೋಗ

Inspector Harish loses his father
ಇನ್ಸ್‌ಪೆಕ್ಟರ್ ಹರೀಶ್ ಹಾಗೂ ಅವರ ತಂದೆ ರಾಮಪ್ಪ

ದೊಡ್ಡಬಳ್ಳಾಪುರ: ನಗರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸಿದ್ದ ಇನ್ಸ್‌ಪೆಕ್ಟರ್ ಹರೀಶ್ ಅವರ ತಂದೆ ರಾಮಪ್ಪ ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.

ಬಿಎಂಟಿಸಿ ಬಸ್ ನಿರ್ವಾಹಕರಾಗಿ ಕಾರ್ಯನಿರ್ವಹಸಿದ್ದ ರಾಮಪ್ಪ ಅವರು, ಮಡದಿ, ಇನ್ಸ್‌ಪೆಕ್ಟರ್ ಹರೀಶ್ ಅವರು ಸೇರಿದಂತೆ ಇಬ್ಬರು ಗಂಡು ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಮೃತ ಅಂತಿಮ ದರ್ಶನಕ್ಕೆ ಬೆಂಗಳೂರಿನ ಲಗ್ಗೆರೆಯ ಚೌಡೇಶ್ವರಿ ನಗರದಲ್ಲಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಅಂತ್ಯಕ್ರಿಯೆ ಸ್ವಗ್ರಾಮ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಸ್ಧೆನಹಳ್ಳಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

2022ರಲ್ಲಿ ನಡೆದಿದ್ದ ಕೊಲೆ ಮತ್ತು ಡಕಾಯಿತಿ ಪ್ರಕರಣ ಒಂದರ ಹಿನ್ನೆಲೆಯಲ್ಲಿ ತನಿಖಾ ಕಾರ್ಯದಲ್ಲಿ ನಿರತರಾಗಿದ್ದ ಹರೀಶ್ ಅವರಿಗೆ, ಗುರುವಾರ ಸಂಜೆ ತಂದೆ ಅಗಲಿಕೆಯ ಆಘಾತಕಾರಿ ಮಾಹಿತಿ ತಿಳಿದು ಬಂದಿದೆ.

ರಾಜಕೀಯ

ಗ್ರಾಮಪಂಚಾಯಿತಿ ಚುನಾವಣೆಗೂ ಅಫಿಡವಿಟ್ ಕಡ್ಡಾಯ..!

ಗ್ರಾಮಪಂಚಾಯಿತಿ ಚುನಾವಣೆಗೂ ಅಫಿಡವಿಟ್ ಕಡ್ಡಾಯ..!

ಗ್ರಾಮಪಂಚಾಯತಿ (Grama Panchayat) ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ರಾಜ್ಯ ಸರಕಾರ ಸಿದ್ಧತೆ ನಡೆಸಿರುವ ಸಮಯದಲ್ಲಿಯೇ, ರಾಜ್ಯ ಚುನಾವಣಾ ಆಯೋಗ ನಾಮಪತ್ರ ಸಲ್ಲಿಕೆಯ ವಿಷಯದಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ವಿಧಾನಸಭೆ, ಲೋಕಸಭೆ ಅಭ್ಯರ್ಥಿಗಳಂತೆ

[ccc_my_favorite_select_button post_id="121323"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!