ಇ-ಸ್ವತ್ತು ಅರ್ಜಿ ಸಲ್ಲಿಕೆ ಮತ್ತಷ್ಟು ಸುಲಭ; ಪ್ರಿಯಾಂಕ್ ಖರ್ಗೆ

E-property application submission made easier: Priyank Kharge

ಬೆಂಗಳೂರು: ಇ-ಸ್ವತ್ತು (E-property) ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ ಕಲ್ಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ (IT/BT) ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ ಅಡಿಯಲ್ಲಿನ ನಾಗರಿಕ ಸೇವೆಗಳ ವಿದ್ಯುನ್ಮಾನ ವಿತರಣಾ ನಿರ್ದೇಶನಾಲಯ (ಇಡಿಸಿಎಸ್) ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದೆ.

ಇನ್ನು ಮುಂದೆ ನಾಗರಿಕರು ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಸಮಗ್ರ ನಾಗರಿಕ ಸೇವಾ ಕೇಂದ್ರಗಳ ಮೂಲಕವೂ ಇ-ಸ್ವತ್ತು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಈ ಒಪ್ಪಂದವು 3 ವರ್ಷಗಳ ಅವಧಿಗೆ ಚಾಲ್ತಿಯಲ್ಲಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಅಭಿವೃದ್ಧಿಪಡಿಸಿರುವ ಇ-ಸ್ವತ್ತು ವ್ಯವಸ್ಥೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆ ಸೇವೆ ಇನ್ನು ಮುಂದೆ ರಾಜ್ಯದಾದ್ಯಂತ ಇರುವ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಲಭ್ಯವಾಗಲಿದೆ.

ಕೇಂದ್ರಗಳ ನಿರ್ವಾಹಕರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆ ವತಿಯಿಂದ ಇ-ಸ್ವತ್ತು ವ್ಯವಸ್ಥೆಯ ಬಗ್ಗೆ ಅಗತ್ಯ ತರಬೇತಿ ನೀಡಲಾಗುವುದು ಹಾಗೂ ನಿರ್ವಾಹಕರಿಗೆ ಪ್ರತ್ಯೇಕ ಲಾಗಿನ್ ಖಾತೆಗಳನ್ನು ಇಲಾಖೆ ರಚಿಸಿಕೊಡಲಾಗುವುದು.

ಸೇವೆಗಳ ಸಮನ್ವಯಕ್ಕಾಗಿ ಇಲಾಖೆ ವತಿಯಿಂದ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು.

ಹೊಸ ಖಾತಾ ಸೇವೆಗೆ 45 ರೂ. ಶುಲ್ಕ ನಿಗದಿಪಡಿಸಿದ್ದು ಈ ವೆಚ್ಚವನ್ನು ನಾಗರಿಕರೇ ಭರಿಸಬೇಕು. ಇ-ಆಸ್ತಿ ಅರ್ಜಿಗೆ ಬೇಕಾದ ದಾಖಲೆಗಳ ಸ್ಕ್ಯಾನಿಂಗ್ ಮತ್ತು ಅಪ್‌ಲೋಡ್ ಮಾಡಲು ಪ್ರತಿ ಪುಟಕ್ಕೆ 5 ರೂ. ಪಾವತಿಸಬೇಕಾಗುವುದು. ಎಲ್ಲಾ ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳು ವರ್ಷದ ಎಲ್ಲ ದಿನಗಳು ಬೆಳಿಗ್ಗೆ 8 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಕಾರ್ಯನಿರ್ವಹಿಸಲಿವೆ.

ಸ್ವಾತಂತ್ರ್ಯ ದಿನ, ಗಣರಾಜ್ಯೋತ್ಸವ, ಕಾರ್ಮಿಕರ ದಿನ, ಗಾಂಧಿ ಜಯಂತಿ, ಕನ್ನಡ ರಾಜ್ಯೋತ್ಸವ ಮತ್ತು ಮತದಾನದ ದಿನಗಳಂದು ಈ ಕೇಂದ್ರಗಳಿಗೆ ರಜೆ ಇರುತ್ತದೆ ಎಂದವರು ಹೇಳಿದ್ದಾರೆ.

39 ಸರಕಾರಿ ಆಸ್ಪತ್ರೆಗಳಲ್ಲಿ ಕೀಲು ಬದಲಿ ಶಸ್ತ್ರಚಿಕಿತ್ಸೆ: ದೊಡ್ಡಬಳ್ಳಾಪುರ ವಂಚಿತ..?

Joint replacement surgery in 39 government hospitals: Doddaballapura deprived
Joint replacement surgery in 39 government hospitals: Doddaballapura deprived

ಬೆಂಗಳೂರು: ಮೊಣಕಾಲು ಹಾಗೂ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ (Joint replacement surgery) ನಡೆಸಲು ಸರಕಾರಿ ಆಸ್ಪತ್ರೆಗಳ ಸಂಖ್ಯೆ ಯನ್ನು 39ಕ್ಕೆ ಹೆಚ್ಚಿಸಿರುವ ಆರೋಗ್ಯ ಇಲಾಖೆ ಪರಿಣಾಮ ಖಾಸಗಿ ಆಸ್ಪತ್ರೆಗಳಿಗೆ ಶಿಫಾರಸು ಆಗುವ ಪ್ರಕರಣಗಳ ಪ್ರಮಾಣ ಕಡಿಮೆಯಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಸಗಿ ಸೌಲಭ್ಯಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಮತ್ತು ರೋಗಿಗಳ ಮನೆಗೆ ಹತ್ತಿರದಲ್ಲಿ ಕೈಗೆಟುಕುವ ಆರೈಕೆಯನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ಮೂಳೆ ಶಸ್ತ್ರಚಿಕಿತ್ಸೆಗಳನ್ನು ಮಾಡುವ ಸಾರ್ವಜನಿಕ ಆಸ್ಪತ್ರೆಗಳನ್ನು ಅಗತ್ಯ ಮೂಲಸೌಕರ್ಯಗಳೊಂದಿಗೆ ಬಲಪಡಿಸಲಾಗುತ್ತಿದೆ ಎಂದು ಹೇಳಿದರು.

2023-24ನೇ ಸಾಲಿನ ದತ್ತಾಂಶದ ಪ್ರಕಾರ 1,709 ಮೊಣಕಾಲು ಹಾಗೂ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ ಪ್ರಕ್ರಿಯೆಗಳಲ್ಲಿ, 1,109 ಪ್ರಕ್ರಿಯೆಗಳನ್ನು (ಶೇ. 65) ಖಾಸಗಿ ಆಸ್ಪತ್ರೆಗಳಿಗೆ ಶಿಫಾರಿ, ಮಾಡಲಾಗಿತ್ತು.

ಸರಕಾರಿ ವ್ಯವಸ್ಥೆಯಡಿ ಕೇವಲ 601 ಪ್ರಕ್ರಿಯೆಗಳನ್ನು (ಶೇ.35) ನಡೆಸಲಾಗಿತ್ತು. ಪರಿಣಿತ ಮೂಳೆ ಶಸ್ತ್ರಚಿಕಿತ್ಸಕರನ್ನು ಸರಕಾರಿ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆಗೆ ನಿಯೋಜಿಸಿ, ವೈದ್ಯರಿಗೆ ಮಾರ್ಗದರ್ಶನ ಮಾಡಲು ನಿಯೋಜಿಸಲಾಗಿದೆ.

ತರಬೇತಿ ಪಡೆದ ವೈದ್ಯರು ಈ ಸ್ವತಂತ್ರವಾಗಿ ಮೊಣಕಾಲು ಹಾಗೂ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ ನಡೆಸುತ್ತಿದ್ದಾರೆ. ಈ ಶಸ್ತ್ರಚಿಕಿತ್ಸೆಗೆ ಹಿಂದೆ ಸರಕಾರಿ ಆಸ್ಪತ್ರೆಗಳಿಗೆ ಶೇ. 75 ಚಿಕಿತ್ಸಾ ವೆಚ್ಚವನ್ನು ಪಾವತಿಸಲಾಗುತ್ತಿತ್ತು. ಅದನ್ನು ಶೇ.100ಕ್ಕೆ ಏರಿಕೆ ಮಾಡಲಾಗಿದೆ ಎಂದು ಹೇಳಿದರು.

ಈ ಕ್ರಮದಿಂದ 2025-26ನೇ ಸಾಲಿನಲ್ಲಿ 1,119 ಶಸ್ತ್ರಚಿಕಿತ್ಸಾ ಪ್ರಕ್ರಿಯೆಗಳಲ್ಲಿ 14 ಪ್ರಕ್ರಿಯೆಗಳನ್ನು ಮಾತ್ರ ಖಾಸಗಿ ಆಸ್ಪತ್ರೆಗಳಲ್ಲಿ ನಡೆಸಲಾಗಿದೆ.

ಶಸ್ತ್ರಚಿಕಿತ್ಸೆ ನಡೆಸುತ್ತಿರುವ ಆಸ್ಪತ್ರೆಗಳ ಪಟ್ಟಿಯಲ್ಲಿ 13 ಜಿಲ್ಲಾ ಆಸ್ಪತ್ರೆಗಳು, 8 ತಾಲ್ಲೂಕು ಆಸತ್ರೆಗಳೂ ಸೇರಿವೆ. ಸರಕಾರಿ ಆಸತ್ರೆಗಳಲ್ಲಿ ಶಸ್ತ್ರಚಿಕಿತ್ಸೆಯ ಪಾಲು ಶೇ. 35ರಿಂದ ಶೇ.99ಕ್ಕೆ ಏರಿಕೆಯಾಗಿದೆ. ಈಗ ರೋಗಿಗಳು, ಮನೆಯ ಹತ್ತಿರವೇ ಚಿಕಿತ್ಸೆ ಪಡೆಯಬಹುದಾಗಿದೆ ಎಂದರು.

ದೊಡ್ಡಬಳ್ಳಾಪುರಕ್ಕಿಲ್ಲ ಸೌಲಭ್ಯ..!

ಆರೋಗ್ಯ ಸಚಿವರ ಈ ಹೇಳಿಕೆ ಪ್ರಶಂಸನೀಯವಾದರೂ, ಈ ಸೌಲಭ್ಯದಿಂದ ದೊಡ್ಡಬಳ್ಳಾಪುರ ತಾಲ್ಲೂಕು ವಂಚಿತವಾಗಿರುವುದು ಬೇಸರ ಮೂಡಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಿಲ್ಲಾಸ್ಪತ್ರೆಗೂ ಹೆಚ್ಚಿನದಾಗಿ ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆ ಸೌಲಭ್ಯ ನೀಡುತ್ತಿದೆ. ಇಲ್ಲಿ ಅಚ್ಚುಕಟ್ಟಾದ ವ್ಯವಸ್ಥೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಳಿದ ಮೂರು ತಾಲೂಕು ಅಕ್ಕಪಕ್ಕದ ಅನ್ಯ ಜಿಲ್ಲೆಯ ಜನರಿಗೂ ಉತ್ತಮ ಸೌಲಭ್ಯ ದೊರಕಿಸುತ್ತಿದೆ.

ಆದರೆ ರಾಜ್ಯದ 7 ತಾಲೂಕು ಆಸ್ಪತ್ರೆಗೆ ನೀಡಲಾಗಿರುವ ಕೀಲು ಬದಲಿ ಶಸ್ತ್ರಚಿಕಿತ್ಸೆ ಸೌಲಭ್ಯ ದೊಡ್ಡಬಳ್ಳಾಪುರಕ್ಕಿಲ್ಲವಾಗಿದ್ದು, ಇಲ್ಲಿನ ಜನರು ಸಾವಿರಾರು ರೂ‌ ವೆಚ್ಚಮಾಡಿ ಅನಿರ್ವಾರ್ಯವಾಗಿ ಖಾಸಗಿ ಆಸ್ಪತ್ರೆಗೆ ತೆರುವಂತಾಗಿದೆ.

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

High Court stays Doddaballapura DJ case
High Court stays Doddaballapura DJ case

ದೊಡ್ಡಬಳ್ಳಾಪುರ; ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

ಈ ಕುರಿತಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವಿಶ್ವ ಹಿಂದೂ ಪರಿಷದ್ ಭಜರಂಗದಳದ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೈರಲ್ ಆಗಿದ್ದು, ದೊಡ್ಡಬಳ್ಳಾಪುರ ಶ್ರೀರಾಮೋತ್ಸವ ಯಾತ್ರೆ ವೇಳೆ ಡಿಜೆ ಬಳಸಿದ್ದಕ್ಕಾಗಿ 9 ಕಾರ್ಯಕರ್ತರ ಮೇಲೆ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನೆರವು ನೀಡಿದ ವಕೀಲರಾದ ಗಿರೀಶ್ ಭಾರದ್ವಾಜ್ ಅವರಿಗೆ ಧನ್ಯವಾದಗಳು ಎಂದು ಬರೆದಿದೆ.

ಪ್ರತಿ ವರ್ಷದಂತೆಯೇ ಮಾರ್ಚ್ 29 ರಂದು ಡಿ.ಜೆಗೆ ಅನುಮತಿ ನೀಡದೆ ಧ್ವನಿವರ್ಧಕಗಳ ಬಳಕೆಗೆ ಮಾತ್ರ ಅನುಮತಿ ನೀಡಲಾಗಿತು. ಆದರೆ ಡಿಜೆ ಸೌಂಡ್ಸ್ ಬಳಸುವುದನ್ನು ನಿಷೇಧಿಸಿರುವ ಆದೇಶ ಉಲ್ಲಂಘಿಸಿ ಡಿಜೆ ಬಳಕೆ ಮಾಡಿರುವ ಆರೋಪದ ಬಜರಂಗದಳದ ಕಾರ್ಯಕರ್ತರು, ಡಿಜೆ ಮಾಲೀಕ, ವಾಹನಗಳ ಮಾಲೀಕ ಹಾಗೂ ಚಾಲಕರು ಸೇರಿ 9 ಜನರ ವಿರುದ್ಧ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರತಿಭಟನೆ

ಇದಕ್ಕೂ ಮುನ್ನ ಶೋಭಾಯಾತ್ರೆಯಲ್ಲಿ ಡಿಜೆ ಸೌಂಡ್ಸ್ ಬಳಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶ ಖಂಡಿಸಿ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಮುಂದೆ ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರು ಶ್ರೀರಾಮ ಭಜನೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದರು.

ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಡಿವೈಎಸ್ಪಿ ಪಾಂಡುರಂಗ ಅವರ ಸಮ್ಮುಖದಲ್ಲಿ ಶಾಸಕ ಧೀರಜ್ ಮುನಿರಾಜು ಹಾಗೂ ಹಿಂದೂಪರ ಸಂಘಟನೆಗಳ ಮುಖಂಡರ ಸಭೆಯಲ್ಲಿ ‘ಡಿಜೆ ಬಳಸದೆ ಶೋಭಾಯಾತ್ರೆಯಲ್ಲಿ ಧ್ವನಿ ವರ್ಧಕಗಳನ್ನು ಮಾತ್ರ ಬಳಸಬೇಕು’ ಎಂದು ಪೊಲೀಸರು ತಿಳಿಸಿದ್ದರು.

ಅದರಂತೆಯೇ ಮಾರ್ಚ್ 29 ರಂದು ಮಧ್ಯಾಹ್ನ 3 ಗಂಟೆಗೆ ಭಗತ್‌ಸಿಂಗ್ ಕ್ರೀಡಾಂಗಣದಿಂದ ಪ್ರಾರಂಭವಾದ ಶೋಭಾಯಾತ್ರೆಯಲ್ಲಿ ಶ್ರೀರಾಮ, ಶಿವ, ಆಂಜನೇಯ, ಇಮ್ಮಡಿ ಪುಲಿಕೇಶಿ, ಡಾ.ಬಿ.ಆರ್.ಅಂಬೇಡ್ಕರ್ ಸೇರಿದಂತೆ ವಿವಿಧ ದೇವತೆಗಳ ಪ್ರತಿಮೆಗಳು ಮೆರವಣಿಗೆ ನಡೆಲಾಯಿತು. ವಿವಿಧ ಕಲಾತಂಡಗಳು ಭಾಗವಹಿಸಿದ್ದವು.

ಈ ಶೋಭಾಯಾತ್ರೆಯಲ್ಲಿ ಡಿಜೆ ಆದೇಶ ಉಲ್ಲಂಘಿಸಿ ಡಿಜೆ ಬಳಕೆ ಮಾಡಿರುವ ಆರೋಪ ಹಾಗೂ ಕಾರ್ಯಕ್ರಮದ ಅನುಮತಿ ರಾತ್ರಿ 10 ಗಂಟೆಗೆ ಮಾತ್ರ ನೀಡಿದ್ದರು, 11, 45ರ ವರೆಗೂ ನಡೆಸಿದ್ದಾರೆಂಬ ಕಾರಣ ಪ್ರಕರಣ ದಾಖಲಾಗಿತ್ತು.

ರಾಜಕೀಯ

ಬೆಂಗಳೂರು ಗ್ರಾಮಾಂತರ ಜಿ.ಪಂ ಸೇರಿ 8 ಕ್ಷೇತ್ರಗಳ ಪುನರ್ ವಿಂಗಡಣೆ

ಬೆಂಗಳೂರು ಗ್ರಾಮಾಂತರ ಜಿ.ಪಂ ಸೇರಿ 8 ಕ್ಷೇತ್ರಗಳ ಪುನರ್ ವಿಂಗಡಣೆ

ಬೆಂಗಳೂರು ಗ್ರಾಮಾಂತರ ಸೇರಿದಂತೆ ಎಂಟು ಜಿಲ್ಲೆಗಳ ಜಿಲ್ಲಾ ಪಂಚಾಯಿತಿ (Z.P) ಕ್ಷೇತ್ರಗಳ (Constituencies) ಗಡಿ ಗುರುತಿಸಿ ಮತ್ತು ಚುನಾಯಿತ ಸದಸ್ಯರ ಸಂಖ್ಯೆ ನಿಗದಿಪಡಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

[ccc_my_favorite_select_button post_id="121409"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]