ಬೆಂಗಳೂರು: ಮೊಣಕಾಲು ಹಾಗೂ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ (Joint replacement surgery) ನಡೆಸಲು ಸರಕಾರಿ ಆಸ್ಪತ್ರೆಗಳ ಸಂಖ್ಯೆ ಯನ್ನು 39ಕ್ಕೆ ಹೆಚ್ಚಿಸಿರುವ ಆರೋಗ್ಯ ಇಲಾಖೆ ಪರಿಣಾಮ ಖಾಸಗಿ ಆಸ್ಪತ್ರೆಗಳಿಗೆ ಶಿಫಾರಸು ಆಗುವ ಪ್ರಕರಣಗಳ ಪ್ರಮಾಣ ಕಡಿಮೆಯಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಸಗಿ ಸೌಲಭ್ಯಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಮತ್ತು ರೋಗಿಗಳ ಮನೆಗೆ ಹತ್ತಿರದಲ್ಲಿ ಕೈಗೆಟುಕುವ ಆರೈಕೆಯನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ಮೂಳೆ ಶಸ್ತ್ರಚಿಕಿತ್ಸೆಗಳನ್ನು ಮಾಡುವ ಸಾರ್ವಜನಿಕ ಆಸ್ಪತ್ರೆಗಳನ್ನು ಅಗತ್ಯ ಮೂಲಸೌಕರ್ಯಗಳೊಂದಿಗೆ ಬಲಪಡಿಸಲಾಗುತ್ತಿದೆ ಎಂದು ಹೇಳಿದರು.

2023-24ನೇ ಸಾಲಿನ ದತ್ತಾಂಶದ ಪ್ರಕಾರ 1,709 ಮೊಣಕಾಲು ಹಾಗೂ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ ಪ್ರಕ್ರಿಯೆಗಳಲ್ಲಿ, 1,109 ಪ್ರಕ್ರಿಯೆಗಳನ್ನು (ಶೇ. 65) ಖಾಸಗಿ ಆಸ್ಪತ್ರೆಗಳಿಗೆ ಶಿಫಾರಿ, ಮಾಡಲಾಗಿತ್ತು.
ಸರಕಾರಿ ವ್ಯವಸ್ಥೆಯಡಿ ಕೇವಲ 601 ಪ್ರಕ್ರಿಯೆಗಳನ್ನು (ಶೇ.35) ನಡೆಸಲಾಗಿತ್ತು. ಪರಿಣಿತ ಮೂಳೆ ಶಸ್ತ್ರಚಿಕಿತ್ಸಕರನ್ನು ಸರಕಾರಿ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆಗೆ ನಿಯೋಜಿಸಿ, ವೈದ್ಯರಿಗೆ ಮಾರ್ಗದರ್ಶನ ಮಾಡಲು ನಿಯೋಜಿಸಲಾಗಿದೆ.
ತರಬೇತಿ ಪಡೆದ ವೈದ್ಯರು ಈ ಸ್ವತಂತ್ರವಾಗಿ ಮೊಣಕಾಲು ಹಾಗೂ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ ನಡೆಸುತ್ತಿದ್ದಾರೆ. ಈ ಶಸ್ತ್ರಚಿಕಿತ್ಸೆಗೆ ಹಿಂದೆ ಸರಕಾರಿ ಆಸ್ಪತ್ರೆಗಳಿಗೆ ಶೇ. 75 ಚಿಕಿತ್ಸಾ ವೆಚ್ಚವನ್ನು ಪಾವತಿಸಲಾಗುತ್ತಿತ್ತು. ಅದನ್ನು ಶೇ.100ಕ್ಕೆ ಏರಿಕೆ ಮಾಡಲಾಗಿದೆ ಎಂದು ಹೇಳಿದರು.
ಈ ಕ್ರಮದಿಂದ 2025-26ನೇ ಸಾಲಿನಲ್ಲಿ 1,119 ಶಸ್ತ್ರಚಿಕಿತ್ಸಾ ಪ್ರಕ್ರಿಯೆಗಳಲ್ಲಿ 14 ಪ್ರಕ್ರಿಯೆಗಳನ್ನು ಮಾತ್ರ ಖಾಸಗಿ ಆಸ್ಪತ್ರೆಗಳಲ್ಲಿ ನಡೆಸಲಾಗಿದೆ.
ಶಸ್ತ್ರಚಿಕಿತ್ಸೆ ನಡೆಸುತ್ತಿರುವ ಆಸ್ಪತ್ರೆಗಳ ಪಟ್ಟಿಯಲ್ಲಿ 13 ಜಿಲ್ಲಾ ಆಸ್ಪತ್ರೆಗಳು, 8 ತಾಲ್ಲೂಕು ಆಸತ್ರೆಗಳೂ ಸೇರಿವೆ. ಸರಕಾರಿ ಆಸತ್ರೆಗಳಲ್ಲಿ ಶಸ್ತ್ರಚಿಕಿತ್ಸೆಯ ಪಾಲು ಶೇ. 35ರಿಂದ ಶೇ.99ಕ್ಕೆ ಏರಿಕೆಯಾಗಿದೆ. ಈಗ ರೋಗಿಗಳು, ಮನೆಯ ಹತ್ತಿರವೇ ಚಿಕಿತ್ಸೆ ಪಡೆಯಬಹುದಾಗಿದೆ ಎಂದರು.
ದೊಡ್ಡಬಳ್ಳಾಪುರಕ್ಕಿಲ್ಲ ಈ ಸೌಲಭ್ಯ..?
ಆರೋಗ್ಯ ಸಚಿವರ ಈ ಹೇಳಿಕೆ ಪ್ರಶಂಸನೀಯವಾದರೂ, ಈ ಸೌಲಭ್ಯದಿಂದ ದೊಡ್ಡಬಳ್ಳಾಪುರ ತಾಲ್ಲೂಕು ವಂಚಿತವಾಗಿರುವುದು ಬೇಸರ ಮೂಡಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಿಲ್ಲಾಸ್ಪತ್ರೆಗೂ ಹೆಚ್ಚಿನದಾಗಿ ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆ ಸೌಲಭ್ಯ ನೀಡುತ್ತಿದೆ. ಇಲ್ಲಿನ ಅಚ್ಚುಕಟ್ಟಾದ ವ್ಯವಸ್ಥೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಳಿದ ಮೂರು ತಾಲೂಕು ಸೇರಿ, ಅಕ್ಕಪಕ್ಕದ ಅನ್ಯ ಜಿಲ್ಲೆಯ ಜನರಿಗೂ ಉತ್ತಮ ಸೌಲಭ್ಯ ದೊರಕಿಸುತ್ತಿದೆ.
ಆದರೆ ರಾಜ್ಯದ 7 ತಾಲೂಕು ಆಸ್ಪತ್ರೆಗೆ ನೀಡಲಾಗಿರುವ ಕೀಲು ಬದಲಿ ಶಸ್ತ್ರಚಿಕಿತ್ಸೆ ಸೌಲಭ್ಯದಿಂದ ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆ ವಂಚಿತವಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಇದರಿಂದಾಗಿ ಇಲ್ಲಿನ ಜನರು ಸಾವಿರಾರು ರೂ ವೆಚ್ಚಮಾಡಿ ಅನಿರ್ವಾರ್ಯವಾಗಿ ಖಾಸಗಿ ಆಸ್ಪತ್ರೆಗೆ ತೆರಳಬೇಕಿದೆ.
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ; ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.
ಈ ಕುರಿತಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವಿಶ್ವ ಹಿಂದೂ ಪರಿಷದ್ ಭಜರಂಗದಳದ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೈರಲ್ ಆಗಿದ್ದು, ದೊಡ್ಡಬಳ್ಳಾಪುರ ಶ್ರೀರಾಮೋತ್ಸವ ಯಾತ್ರೆ ವೇಳೆ ಡಿಜೆ ಬಳಸಿದ್ದಕ್ಕಾಗಿ 9 ಕಾರ್ಯಕರ್ತರ ಮೇಲೆ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನೆರವು ನೀಡಿದ ವಕೀಲರಾದ ಗಿರೀಶ್ ಭಾರದ್ವಾಜ್ ಅವರಿಗೆ ಧನ್ಯವಾದಗಳು ಎಂದು ಬರೆದಿದೆ.
ಹಿನ್ನಲೆ
ಪ್ರತಿ ವರ್ಷದಂತೆಯೇ ಮಾರ್ಚ್ 29 ರಂದು ಡಿ.ಜೆಗೆ ಅನುಮತಿ ನೀಡದೆ ಧ್ವನಿವರ್ಧಕಗಳ ಬಳಕೆಗೆ ಮಾತ್ರ ಅನುಮತಿ ನೀಡಲಾಗಿತು. ಆದರೆ ಡಿಜೆ ಸೌಂಡ್ಸ್ ಬಳಸುವುದನ್ನು ನಿಷೇಧಿಸಿರುವ ಆದೇಶ ಉಲ್ಲಂಘಿಸಿ ಡಿಜೆ ಬಳಕೆ ಮಾಡಿರುವ ಆರೋಪದ ಬಜರಂಗದಳದ ಕಾರ್ಯಕರ್ತರು, ಡಿಜೆ ಮಾಲೀಕ, ವಾಹನಗಳ ಮಾಲೀಕ ಹಾಗೂ ಚಾಲಕರು ಸೇರಿ 9 ಜನರ ವಿರುದ್ಧ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರತಿಭಟನೆ
ಇದಕ್ಕೂ ಮುನ್ನ ಶೋಭಾಯಾತ್ರೆಯಲ್ಲಿ ಡಿಜೆ ಸೌಂಡ್ಸ್ ಬಳಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶ ಖಂಡಿಸಿ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಮುಂದೆ ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರು ಶ್ರೀರಾಮ ಭಜನೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದರು.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಡಿವೈಎಸ್ಪಿ ಪಾಂಡುರಂಗ ಅವರ ಸಮ್ಮುಖದಲ್ಲಿ ಶಾಸಕ ಧೀರಜ್ ಮುನಿರಾಜು ಹಾಗೂ ಹಿಂದೂಪರ ಸಂಘಟನೆಗಳ ಮುಖಂಡರ ಸಭೆಯಲ್ಲಿ ‘ಡಿಜೆ ಬಳಸದೆ ಶೋಭಾಯಾತ್ರೆಯಲ್ಲಿ ಧ್ವನಿ ವರ್ಧಕಗಳನ್ನು ಮಾತ್ರ ಬಳಸಬೇಕು’ ಎಂದು ಪೊಲೀಸರು ತಿಳಿಸಿದ್ದರು.
ಅದರಂತೆಯೇ ಮಾರ್ಚ್ 29 ರಂದು ಮಧ್ಯಾಹ್ನ 3 ಗಂಟೆಗೆ ಭಗತ್‌ಸಿಂಗ್ ಕ್ರೀಡಾಂಗಣದಿಂದ ಪ್ರಾರಂಭವಾದ ಶೋಭಾಯಾತ್ರೆಯಲ್ಲಿ ಶ್ರೀರಾಮ, ಶಿವ, ಆಂಜನೇಯ, ಇಮ್ಮಡಿ ಪುಲಿಕೇಶಿ, ಡಾ.ಬಿ.ಆರ್.ಅಂಬೇಡ್ಕರ್ ಸೇರಿದಂತೆ ವಿವಿಧ ದೇವತೆಗಳ ಪ್ರತಿಮೆಗಳು ಮೆರವಣಿಗೆ ನಡೆಲಾಯಿತು. ವಿವಿಧ ಕಲಾತಂಡಗಳು ಭಾಗವಹಿಸಿದ್ದವು.
ಈ ಶೋಭಾಯಾತ್ರೆಯಲ್ಲಿ ಡಿಜೆ ಆದೇಶ ಉಲ್ಲಂಘಿಸಿ ಡಿಜೆ ಬಳಕೆ ಮಾಡಿರುವ ಆರೋಪ ಹಾಗೂ ಕಾರ್ಯಕ್ರಮದ ಅನುಮತಿ ರಾತ್ರಿ 10 ಗಂಟೆಗೆ ಮಾತ್ರ ನೀಡಿದ್ದರು, 11, 45ರ ವರೆಗೂ ನಡೆಸಿದ್ದಾರೆಂಬ ಕಾರಣ ಪ್ರಕರಣ ದಾಖಲಾಗಿತ್ತು.
