
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್ (Canter) ಹಾಗೂ ಕೆಎಸ್‌ಆರ್‌ಟಿಸಿ (KSRTC) ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು (Accident), ಅದೃಷ್ಟವಶಾತ್ ಪ್ರಯಾಣಿಕರು ಪಾರಾಗಿದ್ದಾರೆ.
ಇಂದು ಬೆಳಗ್ಗೆ 6.45 ರ ಸುಮಾರಿನಲ್ಲಿ ಬಾಶೆಟ್ಟಿಹಳ್ಳಿ ಹೊರವಲಯದಲ್ಲಿರುವ ಬ್ಯಾಂಕ್ ಸರ್ಕಲ್ ಬಳಿ ಎಳ್ಳುಪುರದ ಕಡೆಯಿಂದ ಬಂದ ಟ್ಯಾಂಕರ್ ಹಾಗೂ ದೊಡ್ಡಬಳ್ಳಾಪುರ ಕಡೆಯಿಂದ ಬಂದ ಎಸ್‌ಆರ್‌ಟಿಸಿ (KSRTC) ಬಸ್ ಡಿಕ್ಕಿ ಹೊಡೆದಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ಮುಂದೆ ಸಾಗಿ, ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕುಹೊಡೆದಿದ್ದು, ವಿದ್ಯುತ್ ಕಂಬ ಮುರಿದು ಬಿದ್ದಿದೆ.
ದೊಡ್ಡಬಳ್ಳಾಪುರ: ಕ್ಯಾಂಟರ್- KSRTC ಬಸ್ ನಡುವೆ ಅಪಘಾತ.. ತಪ್ಪಿದ ಪ್ರಮಾದ pic.twitter.com/FAFq1iDtKa
— Harithalekhani (@harithalekhani) April 26, 2026
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದೆ.
ಕೀಲು ಬದಲಿ ಶಸ್ತ್ರಚಿಕಿತ್ಸೆಗೆ ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯನ್ನು ಪರಿಗಣಿಸಿ: ರಾಜಘಟ್ಟರವಿ ಆಗ್ರಹ

ದೊಡ್ಡಬಳ್ಳಾಪುರ: ಮೊಣಕಾಲು ಹಾಗೂ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ (Joint replacement surgery) ನಡೆಸಲು ದೊಡ್ಡಬಳ್ಳಾಪುರ ಸರಕಾರಿ ಆಸ್ಪತ್ರೆಯನ್ನು ಪರಿಗಣಿಸಬೇಕೆಂದು ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ ಆಗ್ರಹಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಖಾಸಗಿ ಸೌಲಭ್ಯಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಮತ್ತು ರೋಗಿಗಳ ಮನೆಗೆ ಹತ್ತಿರದಲ್ಲಿ ಕೈಗೆಟುಕುವ ಆರೈಕೆಯನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ಮೂಳೆ ಶಸ್ತ್ರಚಿಕಿತ್ಸೆಗಳನ್ನು ಮಾಡುವ ಸಾರ್ವಜನಿಕ ಆಸ್ಪತ್ರೆಗಳನ್ನು ಅಗತ್ಯ ಮೂಲಸೌಕರ್ಯಗಳೊಂದಿಗೆ ಬಲಪಡಿಸಲಾಗುತ್ತಿರುವುದು ಪ್ರಶಂಸನೀಯ.
ಶಸ್ತ್ರಚಿಕಿತ್ಸೆ ನಡೆಸುತ್ತಿರುವ ಆಸ್ಪತ್ರೆಗಳ ಪಟ್ಟಿಯಲ್ಲಿ 13 ಜಿಲ್ಲಾ ಆಸ್ಪತ್ರೆಗಳು, 8 ತಾಲ್ಲೂಕು ಆಸತ್ರೆಗಳೂ ಸೇರಿವೆ. ಸರಕಾರಿ ಆಸತ್ರೆಗಳಲ್ಲಿ ಶಸ್ತ್ರಚಿಕಿತ್ಸೆಯ ಪಾಲು ಶೇ. 35ರಿಂದ ಶೇ.99ಕ್ಕೆ ಏರಿಕೆಯಾಗಿದೆ. ಈಗ ರೋಗಿಗಳು, ಮನೆಯ ಹತ್ತಿರವೇ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ. ಆದರೆ ದೊಡ್ಡಬಳ್ಳಾಪುರದ ಆಸ್ಪತ್ರೆ ಈ ಪಟ್ಟಿಗೆ ಸೇರಿಲ್ಲವೇಕೆ ಎಂದು ಪ್ರಶ್ನಿಸಿದ್ದಾರೆ.
ಆರೋಗ್ಯ ಸಚಿವರ ಈ ಹೇಳಿಕೆ ಪ್ರಶಂಸನೀಯವಾದರೂ, ಈ ಸೌಲಭ್ಯದಿಂದ ದೊಡ್ಡಬಳ್ಳಾಪುರ ತಾಲ್ಲೂಕು ವಂಚಿತವಾಗಿರುವುದು ಬೇಸರವಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಿಲ್ಲಾಸ್ಪತ್ರೆಗೂ ಹೆಚ್ಚಿನದಾಗಿ ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆ ಸೌಲಭ್ಯ ನೀಡುತ್ತಿದೆ. ಆದಾಗ್ಯೂ ನಮ್ಮದು ಶಾಪಗ್ರಸ್ತ ತಾಲ್ಲೂಕು ದೊಡ್ಡಬಳ್ಳಾಪುರ ಎಂದು ಬೇಸರ ವ್ಯಕ್ತಪಡಿಸಿದರು.
ನಮ್ಮ ಸರ್ಕಾರಿ ಆಸ್ಪತ್ರೆ ತಾಲೂಕು ಆಸ್ಪತ್ರೆಯಾದರು ಸಹ ಅದು ತನ್ನ ಇತಿಮಿತಿಗಳನ್ನು ಮೀರಿ ಕಾರ್ಯ ನಿರ್ವಹಿಸುತ್ತ ಬಂದಿದೆ. ಪ್ರತಿದಿನ ಸರಿ ಸುಮಾರು ಸಾವಿರಕ್ಕೂ ಹೆಚ್ಚು ಹೊರ ರೋಗಿಗಳಿಗೆ ಆರೋಗ್ಯ ಸೌಲಭ್ಯಗಳನ್ನು ನೀಡುತ್ತಿದೆ.
ನಮ್ಮ ಸುತ್ತಮುತ್ತಲಿನ ತಾಲೂಕುಗಳಾದ ದೇವನಹಳ್ಳಿ, ನೆಲಮಂಗಲ,ಗೌರಿಬಿದನೂರು ಸೇರಿದಂತೆ ಇತರೆ ತಾಲೂಕುಗಳ ರೋಗಿಗಳು ಕೂಡ ಆರೋಗ್ಯ ಸೌಲಭ್ಯ ಪಡೆಯುತ್ತಿದ್ದಾರೆ. ತಿಂಗಳಿಗೆ ನೂರಾರು ಶಸ್ತ್ರಚಿಕಿತ್ಸೆ ಕೂಡ ನಡೆಯುತ್ತಿದೆ, ಈ ಎಲ್ಲಾ ವಿಷಯಗಳು ಅಂಕಿ ಅಂಶಗಳಿಂದ ಸಾಬೀತಾಗಿದೆ. ಆದ್ದರಿಂದಲೆ ರಾಷ್ಟ್ರ ಪ್ರಶಸ್ತಿ ಕೂಡ ಸಂದಿದೆ.
ಇಷ್ಟೆಲ್ಲಾ ಸೌಲಭ್ಯ ಒದಗಿಸಿ, ಉತ್ತಮ ಹೆಸರು ಗಳಿಸಿರುವ ನಮ್ಮ ತಾಲೂಕು ಆಸ್ಪತ್ರೆಗೆ ಕೀಲು ಬದಲಿ ಶಸ್ತ್ರಚಿಕಿತ್ಸೆ ಸೌಲಭ್ಯ ವಂಚಿತವಾಗಿರುವುದು ಬಹಳ ಬೇಸರದ ಸಂಗತಿ. ಈ ಮೇಲ್ಕಂಡ ಎಲ್ಲಾ ಅಂಶಗಳನ್ನು ಪರಿಗಣಿಸಿ ಆರೋಗ್ಯ ಸಚಿವರು ಈ ಕೂಡಲೆ ದೊಡ್ಡಬಳ್ಳಾಪುರ ತಾಲೂಕನ್ನು ಕೂಡ ಪರಿಗಣಿಸಬೇಕೆಂದು ಆಗ್ರಹಿಸಿದರು.

