
ದೊಡ್ಡಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ (Tempo) ಡಿವೈಡರ್ ಮೇಲೆ ಸಾಗಿ, ಮತ್ತೊಂದು ರಸ್ತೆಯಲ್ಲಿ ಎದುರು ಬರುತ್ತಿದ್ದ ಟ್ಯಾಂಕರ್ಗೆ (Canter) ಡಿಕ್ಕಿ ಹೊಡೆದ ಪರಿಣಾಮ (Accident), ಟೆಂಪೋ ಚಾಲಕ ಸಾವನಪ್ಪಿರುವ ಘಟನೆ ತಾಲೂಕಿ ಕೂಗೇನಹಳ್ಳಿ ಕಾಲೋನಿ ಬಳಿ ಸಂಭವಿಸಿದೆ.
ಮೃತನನ್ನು ಬೆಂಗಳೂರಿನ ಮಂಡೂರು ನಿವಾಸಿ ವೇಣು (45 ವರ್ಷ) ಎಂದು ಗುರುತಿಸಲಾಗಿದೆ.
ಶನಿವಾರ ತಡರಾತ್ರಿ ದೊಡ್ಡಬಳ್ಳಾಪುರ ಮೂಲಕ ರಾಷ್ಟ್ರೀಯ ಹೆದ್ದಾರಿಯಲ್ಲಿ ದಾಬಸ್ ಪೇಟೆ ಮಾರ್ಗವಾಗಿ ತೆರಳುವ ವೇಳೆ, ಕೂಗೇನಹಳ್ಳಿ ಕಾಲೋನಿ ಬಳಿ ಟೆಂಪೋ ಚಾಲಕನ ನಿಯಂತ್ರಣ ತಪ್ಪಿದ್ದು, ಡಿವೈಡರ್ ಮೇಲೆ ಹಾರಿ ಸಾಗಿ, ದಾಬಸ್ ಪೇಟೆ ಕಡೆಯಿಂದ ದೊಡ್ಡಬಳ್ಳಾಪುರ ಮಾರ್ಗವಾಗಿ ಬರುತ್ತಿದ್ದ ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಟೆಂಪೋ ಚಾಲಕ ವೇಣು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.
ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.
ದೊಡ್ಡಬಳ್ಳಾಪುರ: ಬೈಕ್- ಟ್ರ್ಯಾಕ್ಟರ್ ಡಿಕ್ಕಿ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಅಪಘಾತ. (Accident) ಸಂಭವಿಸಿ ಖಾಸಗಿ ಬ್ಯಾಂಕ್ ಉದ್ಯೋಗಿಗಳಿಬ್ಬರು ಸಾವನಪ್ಪಿರುವ ಘಟನೆ ನಗರದ ಕೋರ್ಟ್ ರಸ್ತೆಯಲ್ಲಿ ಶನಿವಾರ ರಾತ್ರಿ 11 ಗಂಟೆಗೆ ಸಂಭವಿಸಿದೆ.
ಮೃತರನ್ನು ಗೌರಿಬಿದನೂರು ತಾಲೂಕಿನ ನಾಮಗೊಂಡ್ಲು ನಿವಾಸಿ ನಾಗೇಶ್ (26 ವರ್ಷ) ಮತ್ತು ಪಾಂಡುಪುರ ತಾಲೂಕಿನ ಹರಳು ಕುಪ್ಪೆ ಗ್ರಾಮದ ಮನೋಜ್ (24 ವರ್ಷ) ಎಂದು ಗುರುತಿಸಲಾಗಿದೆ.
ಮೃತರು ಡಿ ಕ್ರಾಸ್ ಬಳಿಯ ಖಾಸಗಿ ಬ್ಯಾಂಕ್ ಉದ್ಯೋಗಿಗಳು ಎನ್ನಲಾಗಿದೆ.
ದೊಡ್ಡಬಳ್ಳಾಪುರ ಕಡೆಯಿಂದ ದ್ವಿಚಕ್ರ ವಾಹನದಲ್ಲಿ ಬಂದ ಸವಾರರು ಎದುರು ಬದಿಯಿಂದ ಬಂದ ಟ್ರ್ಯಾಕ್ಟರ್ಗೆ ಮುಖಾಮುಖಿ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.
ಘಟನೆಯಲ್ಲಿ ಮನೋಜ್ ಸ್ಥಳದಲ್ಲಿಯೇ ಸಾವನಪ್ಪಿದ್ದು, ನಾಗೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಇರುವುದು ಸಾವಿಗೆ ಪ್ರಮುಖ ಕಾರಣ ಎನ್ನಲಾಗುತ್ತಿದ್ದು, ಈ ವ್ಯಾಪ್ತಿಯಲ್ಲಿ ಬೀದಿ ದೀಪಗಳ ಅಳವಡಿಕೆಯಲ್ಲಿ ನಗರಸಭೆ ಆದಿಕಾರಿಗಳ ನಿರ್ಲಕ್ಷ್ಯ ಆಕ್ರೋಶಕ್ಕೆ ಕಾರಣವಾಗಿದೆ.
ಈ ಕುರಿತಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೊಡ್ಡಬಳ್ಳಾಪುರ: ಕ್ಯಾಂಟರ್- KSRTC ಬಸ್ ನಡುವೆ ಅಪಘಾತ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್ (Canter) ಹಾಗೂ ಕೆಎಸ್ಆರ್ಟಿಸಿ (KSRTC) ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು (Accident), ಅದೃಷ್ಟವಶಾತ್ ಪ್ರಯಾಣಿಕರು ಪಾರಾಗಿದ್ದಾರೆ.
ಇಂದು ಬೆಳಗ್ಗೆ 6.45 ರ ಸುಮಾರಿನಲ್ಲಿ ಬಾಶೆಟ್ಟಿಹಳ್ಳಿ ಹೊರವಲಯದಲ್ಲಿರುವ ಬ್ಯಾಂಕ್ ಸರ್ಕಲ್ ಬಳಿ ಎಳ್ಳುಪುರದ ಕಡೆಯಿಂದ ಬಂದ ಟ್ಯಾಂಕರ್ ಹಾಗೂ ದೊಡ್ಡಬಳ್ಳಾಪುರ ಕಡೆಯಿಂದ ಬಂದ ಎಸ್ಆರ್ಟಿಸಿ (KSRTC) ಬಸ್ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ಮುಂದೆ ಸಾಗಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕುಹೊಡೆದಿದ್ದು, ವಿದ್ಯುತ್ ಕಂಬ ಮುರಿದು ಬಿದ್ದಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದೆ.

