ದೊಡ್ಡಬಳ್ಳಾಪುರ: ದೇಶಾದ್ಯಂತ ಗೋ ಹತ್ಯೆ (Cow slaughter) ನಿಷೇಧ ಜಾರಿ ಮಾಡುವಂತೆ ಒತ್ತಾಯಿಸಿ ದೊಡ್ಡಬಳ್ಳಾಪುರ ನಗರದ ತಾಲೂಕು ಕಚೇರಿ ಆವರಣದಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು.
ಈ ವೇಳೆ ಮಾತನಾಡಿದ ಮುಖಂಡರು, ಗೋ ಹತ್ಯೆ ನಿಷೇಧ ರಾಷ್ಟ್ರಾದ್ಯಂತ ಜಾರಿಗೆ ಬರಬೇಕು, ಗೋಮಾತೆಗೆ ರಾಷ್ಟ್ರಮಾತೆ ಸಾಂವಿಧಾನಿಕ ಸ್ಥಾನಮಾನ ನೀಡುವುದು, ಕೇಂದ್ರ ಗೋಸೇವಾ ಸಚಿವಾಲಯ ಸ್ಥಾಪನೆ, ಮತ್ತು ಏಕೀಕೃತ ಕೇಂದ್ರ ಕಾನೂನು ರೂಪಿಸುವಂತೆ ಸಹಿ ಸಂಗ್ರಹಿಸಿ ಒತ್ತಾಯಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗೋ ಸನ್ಮಾನ ಆಹ್ವಾನ ಅಭಿಯಾನ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಬಳಿಕ ತಹಶಿಲ್ದಾರ್ ಅವರ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಶ್ರೀರಾಮ ಸೇನೆಯ ರಾಜ್ಯ ಧರ್ಮ ಪ್ರಚಾರಕ ಶ್ರೀ ಶ್ರೀನಿವಾಸ್ ಗುರೂಜಿ, ಘಾಟಿ ಗೋಶಾಲಯ ಮುಖ್ಯಸ್ಥ ಜೀವನ್ ಜೀ, ಪ್ರಮುಖರಾದ ಘನಶ್ಯಾಮ್, ರಾಮರಾವ್, ಯಶೋಧ, ರಘುನಾಥ್, ಮಲ್ಲೇಶ್, ಸುರೇಶ್, ರಾಮಣ್ಣ ಮತ್ತಿತರರಿದ್ದರು.
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಸರಕು ವಾಹನಕ್ಕೆ ಡಿಕ್ಕಿ (Accident) ಹೊಡೆದ ಪರಿಣಾಮ ಬೈಕ್ ಸಾವರ ಸಾವನಪ್ಪಿರುವ ಘಟನೆ ನಗರದ ಡಿಕ್ರಾಸ್ ರಸ್ತೆಯ ಎಲ್ಐಸಿ ಕಚೇರಿ ಸಮೀಪ ಸಂಭವಿಸೆ.
ಮೃತನನ್ನು ದೊಡ್ಡಬಳ್ಳಾಪುರದ ನಿವಾಸಿ ರಾಜು (28 ವರ್ಷ) ಎಂದು ಗುರುತಿಸಲಾಗಿದೆ.
ಡಿಕ್ರಾಸ್ ಕಡೆಯಿಂದ ದೊಡ್ಡಬಳ್ಳಾಪುರ ಬಸ್ ನಿಲ್ದಾಣದ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ಮೃತ ರಾಜು, ನಿಯಂತ್ರಣ ತಪ್ಪಿ ಮುಂದೆ ಸಾಗುತ್ತಿದ್ದ ಸರಕು ವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾರೆ, ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ರಾಜುನನ್ನು ಆಸ್ಪತ್ರೆಗೆ ದಾಖಲಿಸಲಾಗಿಯಿತಾದರೂ ಚಿಕಿತ್ಸೆ ಫಲಕಾರಿಯಾಗದೆಸಾವನಪ್ಪಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ ಸವಾರ ಹೆಲ್ಮೆಟ್ ಧರಿಸದೇ ಇರುವುದು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಸಾವನಪ್ಪಲು ಕಾರಣ ಎಂದು ಪೊಲೀಸರು ಬೇಸರ ವ್ಯಕ್ತಪಡಿಸಿದ್ದಾರೆ.
ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಹಲವು ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್ ಧರಿಸದ ಕಾರಣ ಸಾವನಪ್ಪಿದ್ದರು.
ಬೆಂಗಳೂರು ಗ್ರಾಮಾಂತರ ಸೇರಿ ಜಿ.ಪಂ. ಕ್ಷೇತ್ರಗಳ ಪುನರ್ ವಿಂಗಡಣೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಸೇರಿದಂತೆ ಎಂಟು ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಗಡಿ ಗುರುತಿಸಿ ಮತ್ತು ಚುನಾಯಿತ ಸದಸ್ಯರ ಸಂಖ್ಯೆ ನಿಗದಿಪಡಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೆಂಗಳೂರು ದಕ್ಷಿಣ, ಹಾಸನ, ಉತ್ತರ ಕನ್ನಡ, ಯಾದಗಿರಿ, ಬೀದರ್, ಕೊಪ್ಪಳ ಗಡಿ ಗುರುತಿಸಿದ ಕ್ಷೇತ್ರಗಳಾಗಿವೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 28 ಏಕ ಸದಸ್ಯ ಜಿಲ್ಲಾ ಪಂಚಾಯಿತಿ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳನ್ನು ಗುರುತಿಸಲಾಗಿದೆ. ಇದರಲ್ಲಿ ದೊಡ್ಡಬಳ್ಳಾಪುರ (7), ಹೊಸಕೋಟೆ (8), ದೇವನಹಳ್ಳಿ (7) ಮತ್ತು ನೆಲಮಂಗಲ (6) ಕ್ಷೇತ್ರಗಳಿವೆ.
ಪ್ರತಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಅಡಿಯಲ್ಲಿ ಬರುವ ಗ್ರಾಮಗಳ ವಿವರವಾದ ಪಟ್ಟಿಯನ್ನು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ.
ಭೌಗೋಳಿಕ ವ್ಯಾಪ್ತಿಗೆ ಅನುಗುಣವಾಗಿ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ಗಡಿಗಳನ್ನು ಮರುನಿಗದಿಪಡಿಸಲಾಗಿದೆ. ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಕ್ರಮಸಂಖ್ಯೆಯ ನಿರಂತರತೆ ಕಾಪಾಡುವ ಉದ್ದೇಶದಿಂದ ಹಳೆಯ ಅಧಿಸೂಚನೆಗಳನ್ನು ಹಿಂಪಡೆದು ಹೊಸ ಕ್ರಮಸಂಖ್ಯೆಗ ಳೊಂದಿಗೆ ಕ್ಷೇತ್ರಗಳ ಹೆಸರು ಮತ್ತು ವ್ಯಾಪ್ತಿ ಪ್ರಕಟಿಸಲಾಗಿದೆ.
ಈ ಹಿಂದೆ ಜಿಲ್ಲಾ ಪಂಚಾಯಿತಿಗಳ ಸದಸ್ಯರ ಸಂಖ್ಯೆ ಮತ್ತು ಗಡಿ ಗುರುತಿಸಿ ಹೊರಡಿಸಿದ್ದ ಅಧಿಸೂಚನೆಯ ನಂತರ ಆಗಿರುವ ಕೆಲವು ಆಡಳಿತಾತ್ಮಕ ಬದಲಾವಣೆಗಳ ಕಾರಣಕ್ಕೆ ಮತ್ತು ನಗರಾಭಿವೃದ್ಧಿ ಇಲಾಖೆಯು ಕೆಲವು ಗ್ರಾಮೀಣ ಪ್ರದೇಶಗಳನ್ನು ನಗರ ಸ್ಥಳೀಯ ಸಂಸ್ಥೆಗಳಾಗಿ ಪರಿವರ್ತಿಸಿರುವುದರಿಂದ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡಲಾಗಿದೆ.
ಕಂದಾಯ ಇಲಾಖೆಯು ಮಾಗಡಿ ಮತ್ತು ನೆಲಮಂಗಲ ತಾಲ್ಲೂಕುಗಳ ಭೌಗೋಳಿಕ ಗಡಿಗಳನ್ನು ಪುನರ್ ರಚಿಸಿತ್ತು. ಈ ಕಾರಣಗಳಿಂದಾಗಿ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಗಡಿಗಳನ್ನು ಮತ್ತೊಮ್ಮೆ ಪರಿಷ್ಕರಿಸುವುದು ಅನಿವಾರ್ಯವಾಗಿತ್ತು ಎನ್ನಲಾಗಿದೆ.

