ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಸರಕು ವಾಹನಕ್ಕೆ ಡಿಕ್ಕಿ (Accident) ಹೊಡೆದ ಪರಿಣಾಮ ಬೈಕ್ ಸಾವರ ಸಾವನಪ್ಪಿರುವ ಘಟನೆ ಇಂದು ಬೆಳಗ್ಗೆ ನಗರದ ಡಿಕ್ರಾಸ್ ರಸ್ತೆಯಲ್ಲಿನ ಎಲ್ಐಸಿ (LIC) ಕಚೇರಿ ಸಮೀಪ ಸಂಭವಿಸಿದೆ.
ಮೃತನನ್ನು ದೊಡ್ಡಬಳ್ಳಾಪುರದ ನಿವಾಸಿ ರಾಜು (28 ವರ್ಷ) ಎಂದು ಗುರುತಿಸಲಾಗಿದೆ.
ಈ ಕುರಿತಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ ಸವಾರ ಹೆಲ್ಮೆಟ್ ಧರಿಸದೇ ಇರುವುದು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಸಾವನಪ್ಪಲು ಕಾರಣ ಎಂದು ಪೊಲೀಸರು ಬೇಸರ ವ್ಯಕ್ತಪಡಿಸಿದ್ದಾರೆ.
ಹೆಲ್ಮೆಟ್ ಕಡ್ಡಾಯ ಜಾರಿಯಾಗಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇವ್ವರಯ ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್ ಧರಿಸದ ಕಾರಣ ಸಾವನಪ್ಪಿದ್ದರು.
ಬೆಂಗಳೂರು ಗ್ರಾಮಾಂತರ ಸೇರಿ ಜಿ.ಪಂ. ಕ್ಷೇತ್ರಗಳ ಪುನರ್ ವಿಂಗಡಣೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಸೇರಿದಂತೆ ಎಂಟು ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಗಡಿ ಗುರುತಿಸಿ ಮತ್ತು ಚುನಾಯಿತ ಸದಸ್ಯರ ಸಂಖ್ಯೆ ನಿಗದಿಪಡಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೆಂಗಳೂರು ದಕ್ಷಿಣ, ಹಾಸನ, ಉತ್ತರ ಕನ್ನಡ, ಯಾದಗಿರಿ, ಬೀದರ್, ಕೊಪ್ಪಳ ಗಡಿ ಗುರುತಿಸಿದ ಕ್ಷೇತ್ರಗಳಾಗಿವೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 28 ಏಕ ಸದಸ್ಯ ಜಿಲ್ಲಾ ಪಂಚಾಯಿತಿ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳನ್ನು ಗುರುತಿಸಲಾಗಿದೆ. ಇದರಲ್ಲಿ ದೊಡ್ಡಬಳ್ಳಾಪುರ (7), ಹೊಸಕೋಟೆ (8), ದೇವನಹಳ್ಳಿ (7) ಮತ್ತು ನೆಲಮಂಗಲ (6) ಕ್ಷೇತ್ರಗಳಿವೆ.
ಪ್ರತಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಅಡಿಯಲ್ಲಿ ಬರುವ ಗ್ರಾಮಗಳ ವಿವರವಾದ ಪಟ್ಟಿಯನ್ನು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ.
ಭೌಗೋಳಿಕ ವ್ಯಾಪ್ತಿಗೆ ಅನುಗುಣವಾಗಿ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ಗಡಿಗಳನ್ನು ಮರುನಿಗದಿಪಡಿಸಲಾಗಿದೆ. ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಕ್ರಮಸಂಖ್ಯೆಯ ನಿರಂತರತೆ ಕಾಪಾಡುವ ಉದ್ದೇಶದಿಂದ ಹಳೆಯ ಅಧಿಸೂಚನೆಗಳನ್ನು ಹಿಂಪಡೆದು ಹೊಸ ಕ್ರಮಸಂಖ್ಯೆಗ ಳೊಂದಿಗೆ ಕ್ಷೇತ್ರಗಳ ಹೆಸರು ಮತ್ತು ವ್ಯಾಪ್ತಿ ಪ್ರಕಟಿಸಲಾಗಿದೆ.
ಈ ಹಿಂದೆ ಜಿಲ್ಲಾ ಪಂಚಾಯಿತಿಗಳ ಸದಸ್ಯರ ಸಂಖ್ಯೆ ಮತ್ತು ಗಡಿ ಗುರುತಿಸಿ ಹೊರಡಿಸಿದ್ದ ಅಧಿಸೂಚನೆಯ ನಂತರ ಆಗಿರುವ ಕೆಲವು ಆಡಳಿತಾತ್ಮಕ ಬದಲಾವಣೆಗಳ ಕಾರಣಕ್ಕೆ ಮತ್ತು ನಗರಾಭಿವೃದ್ಧಿ ಇಲಾಖೆಯು ಕೆಲವು ಗ್ರಾಮೀಣ ಪ್ರದೇಶಗಳನ್ನು ನಗರ ಸ್ಥಳೀಯ ಸಂಸ್ಥೆಗಳಾಗಿ ಪರಿವರ್ತಿಸಿರುವುದರಿಂದ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡಲಾಗಿದೆ.
ಕಂದಾಯ ಇಲಾಖೆಯು ಮಾಗಡಿ ಮತ್ತು ನೆಲಮಂಗಲ ತಾಲ್ಲೂಕುಗಳ ಭೌಗೋಳಿಕ ಗಡಿಗಳನ್ನು ಪುನರ್ ರಚಿಸಿತ್ತು. ಈ ಕಾರಣಗಳಿಂದಾಗಿ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಗಡಿಗಳನ್ನು ಮತ್ತೊಮ್ಮೆ ಪರಿಷ್ಕರಿಸುವುದು ಅನಿವಾರ್ಯವಾಗಿತ್ತು ಎನ್ನಲಾಗಿದೆ.

