ದೊಡ್ಡಬಳ್ಳಾಪುರ: ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.
ಇದರ ನಡುವೆ ಇಂದು ಸಂಜೆ ಸಿಡಿಲು ಬಡಿದು ತಾಲೂಕಿನ ತೂಬಗೆರೆ ಹೋಬಳಿಯ ಗಂಟಿಗಾನಹಳ್ಳಿ ಸಮೀಪ ಎರಡು ಸೀಮೆ ಹಸುಗಳು ಸಾವನಪ್ಪಿವೆ.
ಇಂದು ಸಂಜೆ 5.30ರ ವೇಳೆಗೆ ಗಂಟಿಗಾನಹಳ್ಳಿ ಕೀರ್ತಿ ಎನ್ನುವವರಿಗೆ ಸೇರಿದ ಎರಡು ಸೀಮೆ ಹಸುಗಳನ್ನು ತೋಟದಲ್ಲಿನ ಮರದ ಕೆಳಗೆ ಕಟ್ಟಿದ್ದ ವೇಳೆ ಸಿಡಿಲು ಬಡಿದು ಹಸುಗಳು ಸಾವನಪ್ಪಿವೆ ಎಂದು ತಿಳಿದು ಬಂದಿದೆ.
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಗಾಳಿ, ಗುಡುಗು, ಮಿಂಚು ಹಾಗೂ ಅಲ್ಪ ಮಳೆ ಸಂಜೆಯಿಂದ ಕಂಡುಬರುತ್ತಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮೇ.1 ರ ವರೆಗೆ ಮಳೆ ಸಾಧ್ಯತೆ
ವರದಿಗಳ ಪ್ರಕಾರ, ಮಂಗಳವಾರ, ಏಪ್ರಿಲ್ 28 ರಿಂದ ಮೇ 1 ರವರೆಗೆ ರಾಜಧಾನಿ ಬೆಂಗಳೂರು, ಗ್ರಾಮಾಂತರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ, ಜೊತೆಗೆ ಗುಡುಗು ಸಹಿತ ಬಿರುಗಾಳಿ ಬೀಸುವ ಸಾಧ್ಯತೆಯಿದೆ.
ಈ ಮಳೆಯು ತೀವ್ರವಾದ ಬಿಸಿಲಿನ ಝಳದಿಂದ, ದಿನನಿತ್ಯದ ಸೆಕೆಯಿಂದ ಕಂಗೆಟ್ಟಿದ್ದ ಜನರಿಗೆ ಕೊಂಚ ನೆಮ್ಮದಿ ನೀಡಬಹುದು.
ದೊಡ್ಡಬಳ್ಳಾಪುರ: ನಟ ಚೇತನ್ ಅಹಿಂಸಾ ವಿರುದ್ಧ ದೂರು. ಗಡಿಪಾರಿಗೆ ಕನ್ನಡಪರ ಸಂಘಟನೆಗಳ ಆಗ್ರಹ

ದೊಡ್ಡಬಳ್ಳಾಪುರ: ವರನಟ ಡಾ.ರಾಜ್ ಕುಮಾರ್ ಸಮಾಧಿಗೆ ಜಾಗ ನೀಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ನಟ ಚೇತನ್ ಅಹಿಂಸಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಚೇತನ್ ಅಹಿಂಸಾ (Chethan Ahimsa) ವಿರುದ್ಧ ಕನ್ನಡಪರ ಸಂಘಟನೆಗಳು ಪೊಲೀಸರಿಗೆ ದೂರು ನೀಡಿದ್ದಾರೆ.
ಡಾ.ರಾಜ್ ಕುಮಾರ್ ಸಮಾಧಿಗೆ ಸರ್ಕಾರ 2.5 ಎಕರೆ ಜಾಗ ನೀಡಿದ್ದಕ್ಕೆ ನಟ ಚೇತನ್ ಅಹಿಂಸಾ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದರು.
2.5 ಎಕರೆ ಜಾಗ ನೀಡಿದ್ದು ತಿಳುವಳಿಕೆಯ ನಿರ್ಧಾರವಾಗಿತ್ತಾ? 21ನೇ ಶತಮಾನದಲ್ಲಿ ಪ್ರಮುಖ ಹೋರಾಟವೇ ಭೂಮಿ. ಸರ್ಕಾರ ಸಾರ್ವಜನಿಕರ ಉಪಯೋಗಕ್ಕೆ ಭೂಮಿ ಹಂಚಬೇಕು ಮತಗಳ ಉದ್ದೇಶದಿಂದ ಹಂಚಬಾರದು ಎಂದು ಪೋಸ್ಟ್ ಹಾಕಿದ್ದರು.
ನಟ ಚೇತನ್ ಅಹಿಂಸಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಚೇನತ್ ವಿರುದ್ಧ ಡಾ.ರಾಜ್ ಕುಮಾರ್ ಅಭಿಮಾನಿಗಳು, ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಅಲ್ಲದೇ ದೊಡ್ಡಬಳ್ಳಾಪುರ ನಗರ ಪೊಲಿಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಅಮರೇಶ್ ಗೌಡ ಅವರಿಗೆ ಚೇತನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ಗಡಿಪಾರು ಮಾಡುವಂತೆ ಒತ್ತಾಯಿಸಿವೆ.
ಈ ವೇಳೆ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ತಾಲೂಕು ಅಧ್ಯಕ್ಷ ಸು. ನರಸಿಂಹಮೂರ್ತಿ, ಕನ್ನಡಪರ ಸಂಘಟನೆಗಳ ಮುಖಂಡರಾದ ತ.ನ.ಪ್ರಭುದೇವ, ಸಂಜೀವನಾಯ್ಕ್, ರಾಜಘಟ್ಟರವಿ, ಡಿ.ಪಿ. ಆಂಜನೇಯ, ಪ್ರಮಿಳಾ ಮಹದೇವ್, ಪರಮೇಶ್, ಚೌಡರಾಜ್, ರಮೇಶ್, ಜನಪರ ಮಂಜುನಾಥ್, ಗುರು, ನವೀನ್, ಸೂರಿ, ಮಂಜು, ಮನು, ನಾಗಣ್ಣ ಮತ್ತಿತರರಿದ್ದರು.

