ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

Doddaballapura: Annual sports event awards ceremony at Lawyers' Hall..

ದೊಡ್ಡಬಳ್ಳಾಪುರ: ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರ್, ಡಾಕ್ಟರ್ ಬಾಬು ಜಗಜೀವನ್ ರಾಮ್, ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಹಾಗೂ ಬಸವ ಜಯಂತಿ ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ರೇಖಾ ಅವರು ಬಂದು ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ಡಾಕ್ಟರ್ ಬಿ.ಆರ್‌. ಅಂಬೇಡ್ಕರ್ ಅವರು ದೀನ ದಲಿತರ ಪರ, ಎಲ್ಲಾ ವರ್ಗದವರ ಪರ, ನೊಂದವರ ಪರ ಧ್ವನಿಯಾಗಿ ಸದೃಢ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬುನಾದಿಯನ್ನ ಹಾಕಿಕೊಟ್ಟವರು ಎಂದು ಸ್ಮರಿಸಿದರು.

ಡಾಕ್ಟರ್ ಬಾಬು ಜಗಜೀವನ ರಾಮ್ ಅವರು ರೈತಪರ ಅವರ ಕಾಳಜಿಯನ್ನ ಸ್ಮರಿಸಿದರು.

ಡಾಕ್ಟರ್ ಶ್ರೀ ಶಿವಕುಮಾರ ಸ್ವಾಮೀಜಿಗಳ ಕುರಿತು ಮಾತನಾಡಿ, ಶಿವಕುಮಾರ ಸ್ವಾಮೀಜಿಗಳನ್ನು ನಡೆದಾಡುವ ದೇವರು ಎಂದು ಕರೆಯುತ್ತಿದ್ದರು, ಅನ್ನದಾಸೋಹ ಹಾಗೂ ವಿದ್ಯಾದಾನ ಎಲ್ಲ ವರ್ಗದವರಿಗೂ ತಲುಪುವಂತೆ ನೋಡಿಕೊಂಡವರು.

ಬಸವಣ್ಣನವರು ಕಾಯಕವೇ ಕೈಲಾಸ ಎನ್ನುತ್ತಾ ಜಾತಿ ಮತಗಳ ಭೇದವನ್ನು ತೊಡೆದು ಹಾಕಲು ಅವರ ಕಾಲಘಟ್ಟದಲ್ಲಿ ಪ್ರಾರಂಭಿಸಿದರು ಎಂಬುದನ್ನು ಸ್ಮರಿಸಿದ್ದರು.

ಇದೇ ವೇಳೆ ದೊಡ್ಡಬಳ್ಳಾಪುರ ವಕೀಲರ ಸಂಘದ ಹಾಗೂ ನ್ಯಾಯಾಲಯದ ಮೂಲಭೂತ ಸೌಕರ್ಯಗಳ ಕೊರತೆಯನ್ನು ಬಗೆಹರಿಸಿಕೊಡುವ ನಿಟ್ಟಿನಲ್ಲಿ ಭರವಸೆ ನೀಡಿದರು.

ಬಳಿಕ ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಪ್ರಶಸ್ತಿಯನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನಿರ್ಮಲಾ ಕೆ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಚ್ ಎ ಶಿಲ್ಪ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರವೀಣ ಜೆ ಎಸ್, ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರಾದ ದಾಸರಿ ಕ್ರಾಂತಿ ಕಿರಣ್, ಒಂದನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ಪ್ರೀತಿ ಕೆ, ಸಂಘದ ಅಧ್ಯಕ್ಷ ರೇಣುಕಾ ಮೂರ್ತಿ, ಪ್ರಧಾನ ಕಾರ್ಯದರ್ಶಿ, ಬಿ ಕೆ ಕನಕ ರಾಜ್, ಉಪಾಧ್ಯಕ್ಷರಾದ ಜಗನ್ನಾಥ್ ಕೆ., ಖಜಾಂಚಿ ಗೀತಾ ಆರ್., ಜಂಟಿ ಕಾರ್ಯದರ್ಶಿ ನರಸಿಂಹಮೂರ್ತಿ ಸೇರಿದಂತೆ ಸಂಘದ ಪದಾಧಿಕಾರಿಗಳು ಹಿರಿಯ ವಕೀಲರುಗಳು ನ್ಯಾಯಾಂಗದ ಸಿಬ್ಬಂದಿ ಹಾಜರಿದ್ದರು.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಯಲ್ಲಿ ನಿಂತ ಆರು ಯುವತಿಯರು ಪುರುಷರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿದ್ದ (Sexually arousing) ಆರೋಪದ ಅಡಿಯಲ್ಲಿ ಆರು ವಿದೇಶಿ ಮಹಿಳೆಯರನ್ನು ಬಂಧಿಸಲಾಗಿದೆ.

[ccc_my_favorite_select_button post_id="121454"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]