ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ನೀಡಿದೆ.
ಬೆಂಗಳೂರು ಗ್ರಾಮಾಂತರ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚುವ ನಿರೀಕ್ಷೆಯ ಹಿನ್ನೆಲೆಯಲ್ಲಿ ರಾಜ್ಯದ 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯ ಬಹುತೇಕದ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ಇದೆ.
ಬೀದರ್, ವಿಜಯಪುರ, ಬಾಗಲಕೋಟೆ ಹೊರತುಪಡಿಸಿ ಎಲ್ಲಾ ಕಡೆಗಳಲ್ಲಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.
ರಾಜ್ಯ ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಬುಧವಾರದಿಂದ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಉತ್ತರ ಒಳನಾಡು, ಮಲೆನಾಡು, ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ದಕ್ಷಿಣ, ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಭಾರೀ ಮಳೆ ಅಲರ್ಟ್ ಇದೆ.
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.
ಇದರ ನಡುವೆ ಮಂಗಳವಾರ ಸಂಜೆ ಸಿಡಿಲು ಬಡಿದು ತಾಲೂಕಿನ ತೂಬಗೆರೆ ಹೋಬಳಿಯ ಗಂಟಿಗಾನಹಳ್ಳಿ ಸಮೀಪ ಎರಡು ಸೀಮೆ ಹಸುಗಳು ಸಾವನಪ್ಪಿವೆ.
ಮಂಗಳವಾರ ಸಂಜೆ 5.30ರ ವೇಳೆಗೆ ಗಂಟಿಗಾನಹಳ್ಳಿ ಕೀರ್ತಿ ಎನ್ನುವವರಿಗೆ ಸೇರಿದ ಎರಡು ಸೀಮೆ ಹಸುಗಳನ್ನು ತೋಟದಲ್ಲಿನ ಮರದ ಕೆಳಗೆ ಕಟ್ಟಿದ್ದ ವೇಳೆ ಸಿಡಿಲು ಬಡಿದು ಹಸುಗಳು ಸಾವನಪ್ಪಿವೆ ಎಂದು ತಿಳಿದು ಬಂದಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

