ತಿರುಪತಿಗೆ ಬಮುಲ್ ನಿಂದ ತಿಂಗಳಿಗೆ 2 ಲಕ್ಷ ಕೆ.ಜಿ ತುಪ್ಪ ಸರಬರಾಜು; ಡಿ.ಕೆ. ಸುರೇಶ್

Tirupati to get 2 lakh kg ghee supply from Bamul per month; D.K. Suresh

ಬೆಂಗಳೂರು: “ಮುಂದಿನ ಆರು ತಿಂಗಳ ಕಾಲ ತಿರುಪತಿ ತಿರುಮಲ (Tirupati Tirumala) ಸನ್ನಿಧಾನಕ್ಕೆ ಬಮುಲ್ (Bamul) ನಿಂದ ತಿಂಗಳಿಗೆ 2 ಲಕ್ಷ ಕೆ.ಜಿ ತುಪ್ಪವನ್ನು (Ghee) ಸರಬರಾಜು ಮಾಡಲಾಗುತ್ತದೆ. ಪ್ರತಿವರ್ಷ ಕೆಎಂಎಫ್ ನಿಂದ ತುಪ್ಪ ಸರಬರಾಜು ಮಾಡಲಾಗುತ್ತಿತ್ತು‌” ಎಂದು ಬಮುಲ್ ಅಧ್ಯಕ್ಷರು, ನಿಕಟಪೂರ್ವ ಸಂಸದ ಡಿ.ಕೆ. ಸುರೇಶ್ (D.K. Suresh) ತಿಳಿಸಿದರು‌.

ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್) ಕಚೇರಿಯಲ್ಲಿ ಸುರೇಶ್ ಅವರು ಬುಧವಾರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಇದಕ್ಕೂ ಮೊದಲು ತಿರುಪತಿಗೆ ತುಪ್ಪ ಪೂರೈಕೆ ವಾಹನಕ್ಕೆ ಬಮುಲ್ ನಿರ್ದೇಶಕರು, ಅಧಿಕಾರಿಗಳ ಜತೆಗೆ ಹಸಿರು ಬಾವುಟ ತೋರಿ ಬೀಳ್ಕೊಟ್ಟರು.

“ತಿರುಪತಿಗೆ ನಂದಿನಿ ತುಪ್ಪ ಪೂರೈಕೆಗೆ ನಾವು ಟೆಂಡರ್ ಪಡೆದಿದ್ದು, ಇದರ ಮೊತ್ತ 136 ಕೋಟಿ ರೂಪಾಯಿಗಳು. ಪ್ರತಿನಿತ್ಯ 12.5 ಟನ್ ನಂತೆ ಮುಂದಿನ ಆರು ತಿಂಗಳು ತುಪ್ಪ ಸರಬರಾಜಾಗಲಿದೆ. ಬಮುಲ್ ಒಕ್ಕೂಟ ಟಿಟಿಡಿ ಜೊತೆ ಪ್ರತ್ಯೇಕವಾಗಿ ಒಪ್ಪಂದ ಮಾಡಿಕೊಂಡು ಈ ಸರಬರಾಜು ಮಾಡುತ್ತಿದೆ. ಗುಣಮಟ್ಟದಲ್ಲಿ, ರುಚಿಯಲ್ಲಿ ನಂದಿನಿ ತುಪ್ಪ ರಾಷ್ಟ್ರ ಮಟ್ಟದಲ್ಲಿ ಹೆಸರನ್ನು ಗಳಿಸಿದೆ” ಎಂದರು.

ಸಾಗಾಣಿಕೆಗೆ ಡಿಜಿಟಲ್ ಲಾಕ್ ತಂತ್ರಜ್ಞಾನ

“ಸಾಗಾಣಿಕೆಗೆ ಡಿಜಿಟಲ್ ಲಾಕ್ ತಂತ್ರಜ್ಞಾನ ಬಳಸಿಕೊಳ್ಳಲಾಗಿದೆ. ನಾವು ಕೊಟ್ಟ ಪಾಸ್ ವರ್ಡ್ ಅಲ್ಲಿ ನಮೂದಿಸಿದರೆ ಮಾತ್ರ ತೆರೆಯಬಹುದು. ಗ್ರಾಹಕರಿಗೂ ಸಹ ಇದೆ ರೀತಿ ಗುಣಮಟ್ಟದ ಪದಾರ್ಥ ನೀಡುತ್ತಿದ್ದೇವೆ” ಎಂದರು.

“ಶ್ರೀ ವೆಂಕಟೇಶ್ವರ ಸ್ವಾಮಿ , ಪದ್ಮಾವತಿ ಅಮ್ಮನವರ ಆಶೀರ್ವಾದ ನಮ್ಮ ನಂದಿನಿಯ ಮೇಲೆ ಇರುವ ಕಾರಣಕ್ಕೆ ಇದು ಸಾಧ್ಯವಾಗಿದೆ. ನಂದಿನಿ ಹೆಸರನ್ನು ದುರ್ಬಳಕೆ ಮಾಡಿಕೊಂಡು ಮಾರುಕಟ್ಟೆಯಲ್ಲಿ ಅಕ್ರಮ ಎಸಗುತ್ತಿರುವವರ ವಿರುದ್ದ ಈಗಾಗಲೇ ಕ್ರಮ ತೆಗೆದುಕೊಳ್ಳಲಾಗಿದೆ. ಈಗಾಗಲೇ ಅಂತಹವರ ವಿರುದ್ದ ಒಕ್ಕೂಟದಿಂದ ದೂರುಗಳನ್ನು ನೀಡಲಾಗಿದೆ” ಎಂದರು‌.

“ಗುಣಮಟ್ಟದ ಇಂತಹ ಉತ್ಪನ್ನಗಳ ಬಗ್ಗೆ ಮಾಧ್ಯಮಗಳು ಹೆಚ್ಚು ಪ್ರಚಾರ ನೀಡಬೇಕು. ಇದರಿಂದ ಕರ್ನಾಟಕದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ. ನಾವು ಈಗ 1 ಕೋಟಿ ಲೀಟರ್ ಹಾಲಿನ ಸಂಗ್ರಹಣೆ ಮಾಡುತ್ತಿದ್ದೇವೆ. ಮುಂದಿ‌ನ ದಿನಗಳಲ್ಲಿ ವಿಶೇಷ ಹಾಲಿನ ಉತ್ಪನ್ನಗಳನ್ನು ಮಾರುಕಟ್ಟೆಗೆ ತರುವ ಬಗ್ಗೆ ಆಲೋಚನೆಯಿದೆ” ಎಂದರು‌.

“ಕನಕಪುರ ಮೆಗಾ ಡೈರಿ ಪ್ಲಾಂಟ್ ಸತತ ಮೂರನೇ ಬಾರಿಗೆ ಸಿಐಎ ಅವಾರ್ಡ್ ಅನ್ನು ಪಡೆದುಕೊಂಡಿದೆ. ಸ್ವಚ್ಚತೆ, ಗುಣಮಟ್ಟ ಕಾಪಾಡಿದ ಒಕ್ಕೂಟದ ಎಲ್ಲಾ ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ತಿಳಿಸುತ್ತೇನೆ. ಹೆಚ್ಚಿನ ತಂತ್ರಜ್ಞಾನ ಬಳಸಿಕೊಂಡು ಗುಣಮಟ್ಟ ಉತ್ಪನ್ನಗಳನ್ನು ಜನರಿಗೆ ನೀಡಬೇಕು. ನಿರ್ದೇಶಕರು ಸೇರಿದಂತೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ” ಎಂದರು.

ದರ ಏರಿಕೆ ಪ್ರಸ್ತಾವನೆ ಸದ್ಯಕ್ಕಿಲ್ಲ

ದರ ಏರಿಕೆ ವಿಚಾರವಾಗಿ ಕೇಳಿದಾಗ, “ಸದ್ಯಕ್ಕೆ ದರ ಏರಿಕೆ ಪ್ರಸ್ತಾವನೆಗಳು ಇಲ್ಲ‌. ಹಾಲಿನ ದರ ಮಾರುಕಟ್ಟೆಯಲ್ಲಿ ಎಷ್ಟಿದೆ ಎಂದು ಅಧ್ಯಯನ ಮಾಡಲಾಗುವುದು. ನಮ್ಮಲ್ಲೇ ಒಂದಷ್ಟು ಲೋಪದೋಷಗಳಿವೆ. ಅದನ್ನು ಸರಿಪಡಿಸಲು ಸರ್ಕಾರದ ಮುಂದೆ ಅನುಮತಿ ಕೇಳುತ್ತೇವೆ. ಉತ್ಪನ್ನಗಳ ಪ್ಯಾಕಿಂಗ್ ಸಲಕರಣೆಗಳ ಖರೀದಿ ವೆಚ್ಚ ಹೆಚ್ಚಳವಾಗುತ್ತಿದೆ. ಉದಾಹರಣಗೆ ಪ್ಲಾಸ್ಟಿಕ್ ಕ್ರೇಟ್, ಪ್ಯಾಕಿಂಗ್ ಕವರ್. ಅಲ್ಲದೇ ಶುದ್ದೀಕರಣ ರಾಸಾಯನಿಕಗಳನ್ನು ವಿದೇಶದಿಂದಲೇ ತರಿಸಿಕೊಳ್ಳಲಾಗುತ್ತಿದೆ. ಇದರ ಬಗ್ಗೆ ಕೆಎಂಎಫ್ ಜೊತೆ ಮಾತನಾಡಿ ಮುಂದಿನ ದಿನಗಳಲ್ಲಿ ಏನು ಮಾಡಬೇಕು ಎಂದು ಚಿಂತನೆ ಮಾಡುತ್ತೇವೆ. ಖಾಸಗಿಯವರು ಹಾಲಿನ ದರವನ್ನು 2 ರೂಪಾಯಿ ಹೆಚ್ಚಳ ಮಾಡಿದ್ದಾರೆ‌. ನಾವು ಸರ್ಕಾರದ ಅಧೀನದಲ್ಲಿ ಇರುವ ಕಾರಣಕ್ಕೆ ಇದನ್ನು ಸರ್ಕಾರದ ಗಮನಕ್ಕೆ ತರುತ್ತೇವೆ. ನಾವು ಗುಣಮಟ್ಟದ ಪದಾರ್ಥ ನೀಡಬೇಕು ಎನ್ನುವ ಗುರಿ ಹೊಂದಿದ್ದೇವೆ” ಎಂದರು.

“ಮಾರುಕಟ್ಟೆಯಲ್ಲಿ ಅರ್ಧ ಲೀಟರ್ ಹಾಲಿಗೆ ಬೇಡಿಕೆಯಿದೆ. ಅದರ ಬೆಲೆ ಹೆಚ್ಚಿದೆ. ಒಂದು ಲೀಟರ್ ಹಾಲಿನ ಬೆಲೆ ಕಡಿಮೆಯಿದೆ. ಹೊರೆ ಅನ್ನುವುದಿಲ್ಲ‌. ಏಕೆಂದರೆ ಒಂದೊಂದು ಒಕ್ಕೂಟದಲ್ಲಿ ಒಂದೊಂದು ಹಾಲಿನ ದರವಿದೆ. ಅಲ್ಲದೇ ಮಳೆಗಾಲ ಬಂದ ತಕ್ಷಣ 10-15 ಲಕ್ಷ‌ ಲೀಟರ್ ಹಾಲಿನ ಸರಬರಾಜು ಹೆಚ್ಚಾಗಲಿದೆ. ಕಳೆದ ವರ್ಷ ರಾಜ್ಯದಲ್ಲಿ 1.5 ಕೋಟಿ ಲೀಟರ್ ಹಾಲು ಬರುತಿತ್ತು. ಬಮುಲ್ ನಿಂದ 14 ಲಕ್ಷ ಲೀಟರ್ ಹಾಲನ್ನು ತೆಗೆದುಕೊಳ್ಳುತ್ತಿದ್ದೇವೆ. ಬೇಸಿಗೆಯಲ್ಲಿ 17.5 ಲಕ್ಷ ಲೀಟರ್ ಹಾಲು ಬರುತ್ತಿದೆ. ನಮ್ಮ ಗುರಿ 21 ಲಕ್ಷ ಲೀಟರ್ ಹಾಲು. ನಾವು ಹಾಲಿಗಿಂತ ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡಲು ಮುಂದಾಗುತ್ತಿದ್ದೇವೆ” ಎಂದರು.

ಬಮುಲ್ ನಿಂದ ತುಪ್ಪವನ್ನ ಏಕೆ ಸರಬರಾಜು ಮಾಡಲಾಗುತ್ತಿದೆ ಎಂದು ಕೇಳಿದಾಗ, “ಸಂಗ್ರಹಣೆ ಮುಖ್ಯವಾದುದು. ಇದಕ್ಕೆ ನಾವು ಕಳೆದ 6 ತಿಂಗಳಿನಿಂದ ತಯಾರಿ ಮಾಡಿಕೊಂಡಿದ್ದೆವು. ನಮ್ಮಲ್ಲಿ ಸರಬರಾಜು ಶಕ್ತಿ ಇಲ್ಲದೇ ಹೋದರೆ ಟೆಂಡರ್ ಪಡೆದ ಮೇಲೆ ಕಷ್ಟ ಪಡಬೇಕಾಗುತ್ತದೆ. ಅದಕ್ಕೆ ಸಿದ್ದತೆ ಮಾಡಿಕೊಂಡು ನಾವು ಟೆಂಡರ್ ಪಡೆದೆವು” ಎಂದರು.

ದಿನ 20 ಲಕ್ಷ ಲೀಟರ್ ಹಾಲು ಸಂಗ್ರಹ ಗುರಿ

“ಬಮುಲ್ ನಲ್ಲಿ ಪ್ರತಿನಿತ್ಯ 17.5 ಲಕ್ಷ ಲೀಟರ್ ಹಾಲನ್ನು ಪ್ರತಿ ನಿತ್ಯ ಶೇಖರಣೆ ಮಾಡಲಾಗುತ್ತಿದೆ. ಈ ವರ್ಷದ ನಮ್ಮ ಗುರಿ 20-21 ಲಕ್ಷ ಲೀಟರ್‌. ಹಾಲಿನ ಹೆಚ್ಚಳಕ್ಕೆ ಉತ್ಪಾದನಾ ಸಂಘಗಳಲ್ಲಿ ವಿಶೇಷ ತರಬೇತಿ ನೀಡಲಾಗುತ್ತಿದೆ. ಹೆಚ್ಚಿನ ಹೆಣ್ಣು ಕರುಗಳೇ ಆಗಬೇಕು ಎಂದು ಕಳೆದ ಜನವರಿಯಿಂದ ಕಾರ್ಯಕ್ರಮ ರೂಪಿಸಿ ಪ್ರತಿಹಂತದಲ್ಲಿಯೂ ಮೂರು ಲಕ್ಷ ಸೆಮನ್ಸ್ ಖರೀದಿ ಮಾಡಿ ರಾಸುಗಳಿಗೆ ಹಾಕಲಾಗುತ್ತಿದೆ. ಹಸುಗಳ ಬೆಳವಣಿಗೆ, ಆರೋಗ್ಯದ ಬಗ್ಗೆ ತರಬೇತಿ ನೀಡಲಾಗುತ್ತಿದೆ. ಗಮನಿಸಲು ತಂಡ ನೇಮಿಸಲಾಗಿದೆ. ಗುಣಮಟ್ಟವನ್ನ ಅಂತರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಹಾಲಿನ ಉತ್ಪನ್ನಗಳ ಗುಣಮಟ್ಟ ಹೇಗಿರಬೇಕು ಎಂದು ಆ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ” ಎಂದರು.

“ದೇಸಿ ತಳಿ ಹಾಲು, ಕೊಬ್ಬು ರಹಿತ, ಲ್ಯಾಕ್ಟೋಸ್ ಫ್ರೀ, ಪ್ರೋಬಯಾಟಿಕ್ ಮೊಸರು ಹೀಗೆ ಅನೇಕ ಉತ್ಪನ್ನಗಳ ಬಗ್ಗೆ ಚಿಂತನೆ ಮಾಡುತ್ತಿದ್ದೇವೆ. ಮಾರುಕಟ್ಟೆಗೆ ಅನುಗುಣವಾಗಿ ನಾವು ನೀಡಬೇಕಿದೆ. ಇದರ ಬಗ್ಗೆ ಒಂದಷ್ಟು ಸಂಶೋಧನೆ ಕೂಡ ನಡೆಸುತ್ತಿದ್ದೇವೆ” ಎಂದರು.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]