ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

Young man commits suicide after not finding a girl to marry..!

ಬೇಲೂರು: ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ಬೇಲೂರು ಪಟ್ಟಣದಲ್ಲಿ ನಡೆದಿದೆ.

ಮೃತನನ್ನು ಚಿಕ್ಕಮಗಳೂರು ಜಿಲ್ಲೆಯ ಆಲೂರು ತಾಲ್ಲೂಕಿನ ಗುಡ್ಡರು ಗ್ರಾಮದ ಮೂಲದ ವಿನಯ್ (35 ವರ್ಷ) ಎಂದು ಗುರುತಿಸಲಾಗಿದೆ.

ಈತ ಕಳೆದ ಹತ್ತು ವರ್ಷಗಳಿಂದ ಬೇಲೂರು ಪಟ್ಟಣದ ಶಂಕರದೇವರ ಪೇಟೆಯಲ್ಲಿ ತಂದೆ ತಾಯಿಯೊಂದಿಗೆ ವಾಸವಾಗಿದ್ದನು ಎನ್ನಲಾಗಿದೆ.

​ಪದವಿ ಮುಗಿಸಿದ್ದ ವಿನಯ್ ವೃತ್ತಿಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ವಿನಯ್, ಕಳೆದ ಐದಾರು ವರ್ಷಗಳಿಂದ ಮದುವೆಗಾಗಿ ಹುಡುಗಿ ಹುಡುಕುತ್ತಿದ್ದರೂ, ಸಕಾಲಕ್ಕೆ ಸಂಬಂಧ ಕೂಡಿ ಬಂದಿರಲಿಲ್ಲಂತೆ. ಇದರಿಂದಾಗಿ ತೀವ್ರವಾಗಿ ನೊಂದಿದ್ದ ವಿನಯ್, ಕಳೆದ ಒಂದು ವಾರದಿಂದ ಕೆಲಸಕ್ಕೂ ಹೋಗದೆ ಮನೆಯಲ್ಲೇ ಉಳಿದುಕೊಂಡಿದ್ದನಂತೆ.

​ಮಗ ಕೆಲಸಕ್ಕೆ ಹೋಗದಿರುವುದನ್ನು ಗಮನಿಸಿದ ಪೋಷಕರು ಈ ಬಗ್ಗೆ ಬುದ್ಧಿಮಾತು ಹೇಳಿ ಕೆಲಸಕ್ಕೆ ಹೋಗುವಂತೆ ಒತ್ತಾಯಿಸಿದ್ದರು. ಇದರಿಂದ ಮತ್ತಷ್ಟು ಬೇಸರಗೊಂಡ ಯುವಕ, ಪಟ್ಟಣದ ವಿಷ್ಣು ಸಮುದ್ರ ಕೆರೆಯ ಪಕ್ಕದಲ್ಲಿರುವ ಕಲ್ಯಾಣಿಗೆ ಜಿಗಿದು ತನ್ನ ಜೀವನ ಅಂತ್ಯಗೊಳಿಸಿಕೊಂಡಿದ್ದಾನೆ.

​ಘಟನೆಯ ಬಗ್ಗೆ ಮಾಹಿತಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯ ಮೀನುಗಾರರು ಸ್ಥಳಕ್ಕೆ ಆಗಮಿಸಿ, ಕಾರ್ಯಾಚರಣೆ ನಡೆಸಿ ಮೃತ ದೇಹವನ್ನು ಕಲ್ಯಾಣಿಯಿಂದ ಹೊರತೆಗೆದಿದ್ದಾರೆ.

ಸ್ಥಳಕ್ಕೆ ಬೇಲೂರು ಪಿಎಸ್‌ಐ ಎಸ್.ಜಿ. ಪಾಟೀಲ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ.

ತಿಂಗಳ ಮೊದಲ ದಿನವೇ ವಾಣಿಜ್ಯ LPG ಸಿಲಿಂಡರ್ ಬೆಲೆ ರೂ. 993 ಹೆಚ್ಚಳ..!

Commercial LPG Prices Hiked By Rs 993
Commercial LPG Prices Hiked By Rs 993

ನವದೆಹಲಿ: ಚುನಾವಣೆ ಮುಗಿಯುತ್ತಿದ್ದಂತೆ ದೇಶಾದ್ಯಂತ 19 ಕೆಜಿ ವಾಣಿಜ್ಯ LPG ಸಿಲಿಂಡರ್ (Commercial LPG cylinder) ಬೆಲೆಯನ್ನು ಶುಕ್ರವಾರ 993 ರೂ. ಏರಿಕೆ ಮಾಡಲಾಗಿದೆ. ಬೆಲೆ ಏರಿಕೆ ಕುರಿತು ಸುದ್ದಿ ಸಂಸ್ಥೆ ಎಎನ್‌ಐ (ANI) ವರದಿ ಮಾಡಿದೆ.

ದೇಶೀಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ಈಗ 3,071.50 ರೂ. ಏರಿಕೆಯಾಗಿದೆ.

ಭಾರತದ ಇಂಧನ ಪೂರೈಕೆ ಪರಿಸ್ಥಿತಿಯ ಕುರಿತು ವ್ಯಾಪಕ ಚರ್ಚೆಗಳ ನಡುವೆ, ವಿಶೇಷವಾಗಿ ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆಗಳು ಜಾಗತಿಕ ತೈಲ ಮಾರ್ಗಗಳಲ್ಲಿ ಸಂಭಾವ್ಯ ಅಡಚಣೆಗಳ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿರುವುದರಿಂದ ಬೆಲೆ ಏರಿಕೆಯಾಗಿದೆ.

ಪೆಟ್ರೋಲ್, ಡೀಸೆಲ್ ಮತ್ತು ದೇಶೀಯ ಎಲ್‌ಪಿಜಿ (14.2 ಕೆಜಿ ಸಿಲಿಂಡರ್‌ಗಳು) ಚಿಲ್ಲರೆ ಬೆಲೆಗಳು ಬದಲಾಗದೆ ಉಳಿದಿವೆ, ಇದು ಅಂತರರಾಷ್ಟ್ರೀಯ ಇಂಧನ ಬೆಲೆಗಳಲ್ಲಿನ ಇತ್ತೀಚಿನ ಹೆಚ್ಚಳದಿಂದ ದೇಶೀಯ ಗ್ರಾಹಕರನ್ನು ಸಂಪೂರ್ಣವಾಗಿ ರಕ್ಷಿಸುತ್ತದೆ ಎಂದು ಭಾರತೀಯ ತೈಲ ನಿಗಮ ತಿಳಿಸಿದೆ.

“33 ಕೋಟಿ ದೇಶೀಯ ಎಲ್‌ಪಿಜಿ ಗ್ರಾಹಕರಿಗೆ ದೇಶೀಯ ಎಲ್‌ಪಿಜಿ (14.2 ಕೆಜಿ) ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ದೇಶೀಯ ವಿಮಾನಯಾನ ಸಂಸ್ಥೆಗಳಿಗೆ (ನಿಗದಿತ ಕಾರ್ಯಾಚರಣೆಗಳು) ಎಟಿಎಫ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ” ಎಂದು ಐಒಸಿ ಹೇಳಿದೆ.

“ಒಟ್ಟಾರೆಯಾಗಿ, ಸರಿಸುಮಾರು 80% ಪೆಟ್ರೋಲಿಯಂ ಉತ್ಪನ್ನಗಳು ಬೆಲೆಯಲ್ಲಿ ಯಾವುದೇ ಬದಲಾವಣೆಯನ್ನು ಕಂಡಿಲ್ಲ, ಇದು ಬಹುಪಾಲು ಗ್ರಾಹಕರಿಗೆ ಸ್ಥಿರತೆಯನ್ನು ಖಚಿತಪಡಿಸುತ್ತದೆ. ಬೃಹತ್ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಗಳನ್ನು (ಒಟ್ಟು ಬಳಕೆಯ 1% ಕ್ಕಿಂತ ಕಡಿಮೆ) ಪರಿಷ್ಕರಿಸಲಾಗಿದೆ. ಅಂತರರಾಷ್ಟ್ರೀಯ ವಿಮಾನಯಾನ ಕಾರ್ಯಾಚರಣೆಗಳಿಗೆ ಬೃಹತ್ ಡೀಸೆಲ್ ಮತ್ತು ಎಟಿಎಫ್ ಬೆಲೆಗಳನ್ನು ಮೇಲಕ್ಕೆ ಹೊಂದಿಸಲಾಗಿದೆ.

ಅದೇ ಸಮಯದಲ್ಲಿ, ಸುಮಾರು 4% ಪೆಟ್ರೋಲಿಯಂ ಉತ್ಪನ್ನಗಳು ಕೆಳಮುಖ ಪರಿಷ್ಕರಣೆಯನ್ನು ಕಂಡಿವೆ, ಇದು ಜಾಗತಿಕ ಬೆಲೆ ಚಲನೆಗಳ ಕ್ರಿಯಾತ್ಮಕ ಸ್ವರೂಪವನ್ನು ಪ್ರತಿಬಿಂಬಿಸುತ್ತದೆ” ಎಂದು ಅದು ಹೇಳಿದೆ.

ದೇಶೀಯ ಗ್ರಾಹಕರನ್ನು ರಕ್ಷಿಸುವಾಗ ಮತ್ತು ಆರ್ಥಿಕ ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಜಾಗತಿಕ ಮಾರುಕಟ್ಟೆ ಪ್ರವೃತ್ತಿಗಳೊಂದಿಗೆ ಹೊಂದಿಕೊಳ್ಳಲು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಮಾರ್ಗದರ್ಶನದಲ್ಲಿ ಒಎಂಸಿಗಳು ಅಳವಡಿಸಿಕೊಂಡ ಮಾಪನಾಂಕ ನಿರ್ಣಯಿಸಿದ ಮತ್ತು ಸಮತೋಲಿತ ವಿಧಾನವನ್ನು ಈ ಕ್ರಮಗಳು ಪ್ರತಿಬಿಂಬಿಸುತ್ತವೆ ಎಂದು ಅದು ಹೇಳಿದೆ.

ಈಗಾಗಲೇ ವಾಣಿಜ್ಯ LPG ಸಿಲಿಂಡರ್ ಸಮರ್ಪಕ ಪೂರೈಕೆ ಇಲ್ಲದೆ ಬಸವಳಿದಿರುವ ಹೋಟೆಲ್ ಉದ್ಯಮ, ಈಗ ಏಕಾಏಕಿ 993 ರೂ ಬೆಲೆ ಹೆಚ್ಚಳದಿಂದ ಗ್ರಾಹಕರಿಗೆ ಮತ್ತಷ್ಟು ಬರೆ ಎಳೆಯುವುದು ಖಚಿತ ಎಂಬ ಮಾತು ಸಾರ್ವಜನಿಕ ವಲಯದಲ್ಲಿ ವ್ಯಾಪಕವಾಗಿದೆ.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]