ತಂದೆಯಾದ ಸಂಭ್ರಮದಲ್ಲಿ ಡಾಲಿ ಧನಂಜಯ್

Daali Dhananjaya celebrates becoming a father

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಯುವ ನಟ ಡಾಲಿ ಧನಂಜಯ್​ (Daali Dhananjaya) ಅವರು ಇಂದು ತಂದೆಯಾಗಿ ಪ್ರಮೋಷನ್ ಪಡೆದಿದ್ದಾರೆ. ಹೌದು ಡಾಲಿ ಧನಂಜಯ್ ಅವರ ಪತ್ನಿ ಧನ್ಯತಾ ಅವರು ಇಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಇತ್ತೀಚೆಗಷ್ಟೇ ಡಾಲಿ ಧನಂಜಯ್​ ಅವರು ಧನ್ಯತಾ ಅವರೊಂದಿಗಿನ ಬೇಬಿ ಬಂಪ್​ ಫೋಟೋ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಆ ಬೆನ್ನಲ್ಲೇ ನಾನು ಗಂಡು ಮಗುವಿಗೆ ತಂದೆಯಾಗಿದ್ದೇನೆ ನಿಮ್ಮ ಆಶೀರ್ವಾದ ಸದಾ ಹೀಗೆ ಇರಲಿ ಎಂದು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಹಂಚಿಕೊಂಡಿದ್ದಾರೆ.

ಬೆಳಕಾಗಿ ಬಂದ ಮಗ ಎಂದ ಡಾಲಿ
As the sun rose, so did our greatest joy, our baby boy (“ಸೂರ್ಯೋದಯದ ಹೊನ್ನ ಕಿರಣದಂತೆ, ನಮ್ಮ ಬಾಳಿಗೆ ಬೆಳಕಾಗಿ ಬಂದ ನಂದಾದೀಪ… ನಮ್ಮ ಪುಟ್ಟ ರಾಜಕುಮಾರ.”) ಎಂದು ನಿಮ್ಮ ಪ್ರೀತಿ ಆಶೀರ್ವಾದವಿರಲಿ ಎಂದು ಡಾಲಿ ಇನ್​ಸ್ಟಾಗ್ರಾಮ್​ನಲ್ಲಿ ಎಂಟು ಗಂಟೆಗೆ ಪೋಸ್ಟ್​ ಹಂಚಿಕೊಂಡಿದ್ದಾರೆ.

ಧನಂಜಯ್​ ಅವರ ಈ ಪೋಸ್ಟ್​ಗೆ ಅಭಿಮಾನಿಗಳು ಅಭಿನಂದನೆಯ ಸುರಿಮಳೆಯನ್ನು ಸುರಿಸಿದ್ದಾರೆ. ಡಾಲಿಗೊಬ್ಬ ಮರಿ ಡಾಲಿ ಬಂದ ಎಂದು ಕಿಚಾಯಿಸಿದ್ದಾರೆ.

ಡಾಲಿ ಧನಂಜಯ ಹಾಗೂ ಧನ್ಯತಾ ಮೈಸೂರಿನಲ್ಲಿ 2025ರ ಫೆಬ್ರವರಿ 16ರಂದು ಅದ್ದೂರಿಯಾಗಿ ಮದುವೆಯಾದರು. ಧನ್ಯತಾ ಅವರು ಗೈನಕಾಲಜಿಸ್ಟ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಧನ್ಯತಾ ಅವರು ಚಿತ್ರದುರ್ಗದವರು. ಸದ್ಯ ಧನಂಜಯ ಹಾಗೂ ಧನ್ಯತಾ ಅವರು ಗಂಡು ಮಗುವಿನ ಪೋಷಕರಾಗಿದ್ದಾರೆ.

ತಾತನಾದ ಡಿ.ಕೆ. ಶಿವಕುಮಾರ್: ಡಿಸಿಎಂ ಬದ್ದತೆ ಪ್ರಶಂಸಿಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ

Grandfather DCM D.K. Shivakumar
Grandfather DCM D.K. Shivakumar

ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರ ಹಿರಿಯ ಪುತ್ರಿ ಐಶ್ವರ್ಯಾ ಮತ್ತು ಅಳಿಯ ಅಮರ್ತ್ಯ ಹೆಗ್ಡೆ ದಂಪತಿಗೆ ಹೆಣ್ಣು ಮಗು ಜನಿಸಿದ್ದು, ಡಿ.ಕೆ.ಶಿವಕುಮಾರ್ ಕುಟುಂಬದಲ್ಲಿ ಹಬ್ಬದ ವಾತಾವರಣ ಮನೆಮಾಡಿದೆ. ಮೊಮ್ಮಗಳನ್ನು ಕಂಡು ಡಿಕೆಶಿ ಸಂತಸ ವ್ಯಕ್ತಪಡಿಸಿದ್ದಾರೆ.

ಡಿ.ಕೆ. ಶಿವಕುಮಾರ್ ಅವರ ಹಿರಿಯ ಪುತ್ರಿ ಐಶ್ವರ್ಯಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಮೊಮ್ಮಗಳನ್ನು ಎತ್ತಿ ಮುದ್ದಾಡಿದ ಡಿ.ಕೆ.ಶಿವಕುಮಾರ್

ಮಗಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಸುದ್ದಿ ತಿಳಿಯುತ್ತಿದ್ದಂತೆಯೇ ಡಿ.ಕೆ. ಶಿವಕುಮಾರ್ ಅವರು ತಮ್ಮ ಬಿಡುವಿಲ್ಲದ ರಾಜಕೀಯ ಕೆಲಸಗಳ ನಡುವೆಯೂ ಆಸ್ಪತ್ರೆಗೆ ಓಡೋಡಿ ಬಂದಿದ್ದಾರೆ. ಆಸ್ಪತ್ರೆಯಲ್ಲಿ ಮೊಮ್ಮಗಳನ್ನು ಮೊದಲ ಬಾರಿಗೆ ಕೈಯಲ್ಲಿ ಎತ್ತಿಕೊಂಡ ಶಿವಕುಮಾರ್ ಅವರ ಮುಖದಲ್ಲಿ ಮಂದಹಾಸ ಅರಳಿತ್ತು.

ಸದಾ ಗಂಭೀರವಾಗಿ ಕಾಣುತ್ತಿದ್ದ ಡಿಕೆಶಿ, ಮೊಮ್ಮಗಳನ್ನು ಎತ್ತಿಕೊಂಡಾಗ ಒಬ್ಬ ಸಾಮಾನ್ಯ ತಾತನಂತೆ ಭಾವುಕರಾಗಿ ಸಂಭ್ರಮಿಸಿದರು. ಆಸ್ಪತ್ರೆಯಲ್ಲಿ ಮಗುವನ್ನು ಎತ್ತಿಕೊಂಡಿರುವ ಅವರ ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಶುಭಾಶಯಗಳ ಸುರಿಮಳೆಗೈಯುತ್ತಿದ್ದಾರೆ.

ಡಿ.ಕೆ. ಶಿವಕುಮಾರ್ ಬದ್ದತೆಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಪ್ರಶಂಸೆ

ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹಿರಿಯ ಪುತ್ರಿ ಐಶ್ವರ್ಯಾ ಅವರು ಡೆಲಿವರಿಗೆಂದು ಆಸ್ಪತ್ರೆಗೆ ದಾಖಲಾಗಿದ್ದರು, ಪೂರ್ವ ನಿಯೋಜಿತ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ ಡಿಸಿಎಂ ಬದ್ದತೆ ಪ್ರದರ್ಶಿಸಿದ್ದಾರೆ.

ಈ ಕುರಿತಂತೆ ಪ್ರಶಂಸೆ ವ್ಯಕ್ತಪಡಿಸಿರುವ ಸಂಸದ ತೇಜಸ್ವಿ ಸೂರ್ಯ ಅವರು, ಇವತ್ತು DCM ಡಿ ಕೆ ಶಿವಕುಮಾರ್ ಅವರ ಜೊತೆ ಬೆಂಗಳೂರು ದಕ್ಷಿಣದ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದೆ.

ಕಾರ್ಯಕ್ರಮಗಳ ಮಧ್ಯೆ ಕಾರಿನಲ್ಲಿ ಜೊತೆಗೆ ಪ್ರಯಾಣಿಸುವಾಗ ಅವರಿಗೆ ಮನೆಯಿಂದ ಪದೇ ಪದೇ ಫೋನ್ ಬರುತ್ತಿತ್ತು. ವಿಚಾರಿಸಿದಾಗ, “ಇವತ್ತು ನನ್ನ ಮಗಳ ಡೆಲಿವರಿ. ನಾನು ತಾತ ಆಗುತ್ತಿದ್ದೇನೆ” ಎಂದರು.

ಒಂದು ಕಡೆ ಕುಟುಂಬದ ಅತ್ಯಂತ ಸಂತೋಷದ ಕ್ಷಣ. ಇನ್ನೊಂದು ಕಡೆ ಸಾರ್ವಜನಿಕ ಜವಾಬ್ದಾರಿ. ಆದರೂ ಅವರು ಫ್ಲೈಓವರ್ ಉದ್ಘಾಟನೆ, ಸ್ಕೈವಾಕ್ ಶಂಕುಸ್ಥಾಪನೆ ಸೇರಿದಂತೆ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗಿಯಾದರು.

The first casualty of public life is personal life ಅಂತ ಮಾತಿದೆ.

ಇಂತಹ ಸಂದರ್ಭಗಳಲ್ಲಿ ಆ ಮಾತಿನ ಅರ್ಥ ಇನ್ನಷ್ಟು ಸ್ಪಷ್ಟವಾಗುತ್ತದೆ.

ತಾತನಾದ ಡಿ ಕೆ ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರ ಮಗಳು ಐಶ್ವರ್ಯ ಅವರಿಗೆ, ಮಗುಗೆ ಮತ್ತು ಕುಟುಂಬಕ್ಕೆ ಭಗವಂತ ಆಯುಷ್ಯ, ಆರೋಗ್ಯ ಮತ್ತು ಸಂತೋಷ ಕರುಣಿಸಲಿ ಎಂದು ತೇಜಸ್ವಿ ಸೂರ್ಯ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]