ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

Doddaballapura: Woman burnt to death in car.. Man who fled commits suicide..!

ದೊಡ್ಡಬಳ್ಳಾಪುರ: ತಾಲ್ಲೂಕಿನ ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಮೃತನನ್ನು ಮಾರಸಂದ್ರ ನಿವಾಸಿ ರಾಮಾಂಜಿನಪ್ಪ (46 ವರ್ಷ) ಎಂದು ಗುರುತಿಸಲಾಗಿದೆ.

ಬಿಡದಿ ಬಳಿ ರೈಲಿಗೆ ಸಿಲುಕಿ ರಾಮಾಂಜಿನಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಮೃತ ಶಶೀರದ ಬಳಿ ರಾಮಾಂಜಿನಪ್ಪಗೆ ಸೇರಿದ ಗುರುತಿನ ಚೀಟಿಗಳು ದೊರೆತಿದೆ. ಈ ಕುರಿತು ಮೆಜೆಸ್ಟಿಕ್ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ..

ಘಟನೆ ವಿವರ

ನಿನ್ನೆ ಶನಿವಾರ ತಾಲ್ಲೂಕಿನ ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿತ್ತು.

ಈ ಕಾರು ಮಾರಸಂದ್ರ ಸುರೇಶ್ ಎಂಬುವರಿಗೆ ಸೇರಿದೆ. ಅನಾರೋಗ್ಯದಿಂದ ಬಳಲುತ್ತಿರುವ ಕುಟುಂಬ ಸದಸ್ಯರನ್ನು ಆಸ್ಪತ್ರೆಗೆ ಕರೆದೊಯ್ಯುವುದಾಗಿ ಪಕ್ಕದ ಮನೆಯ ರಾಮಾಂಜಿನಪ್ಪ ಎಂಬುವರು ಕಾರನ್ನು ತೆಗೆದುಕೊಂಡು ಹೋಗಿದ್ದರು ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದಿ ಬಂದಿತ್ತು.

ಕಾರು ಬೆಂಕಿಯಿಂದ ಸಂಪೂರ್ಣ ಭಸ್ಮವಾಗಿದ್ದು, ಮಹಿಳೆಯ ಅಸ್ಥಿಪಂಜರ ಪತ್ತೆಯಾಗಿದೆ. ಶವದ ಗುರುತು ಪತ್ತೆಯಾಗಿರಲಿಲ್ಲ. ಪೊಲೀಸರು ಮಹಿಳೆಯ ಗುರುತು ಪತ್ತೆ ಹಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ. ಕಾರು ಪಡೆದಿದ್ದ ರಾಮಾಂಜಿನಪ್ಪ ಪರಾರಿಯಾಗಿದ್ದ.

ಅಸ್ಥಿ ಪಂಜರದ ಕೊರಳ ಭಾಗದಲ್ಲಿ ಚಿನ್ನದ ಸರದ ಮಾದರಿಯ ವಸ್ತು ಪತ್ತೆಯಾಗಿದೆ. ತಲೆಬುರುಡೆ ಹಾಗೂ ಕೈ ಕಾಲಿನ ಮೂಳೆಯ ಅವಶೇಷಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.

ಕಾರು ಬೆಂಕಿಗೆ ಆಹುತಿಯಾದ ಸ್ಥಳದ ಸಮೀಪ ಇರುವ ನೀಲಗಿರಿ ತೋಪಿನಲ್ಲಿ ಚಾಲಕನ ಮೊಬೈಲ್ ಫೋನ್ ಮತ್ತು ಸ್ವಲ್ಪ ದೂರದಲ್ಲಿ ಅಂಗಿ ಪತ್ತೆಯಾಗಿತ್ತು.

ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು. ಪರಾರಿಯಾದ ರಾಮಾಂಜಿನಪ್ಪನಿಗೆ ಪೊಲೀಸರು ಬಲೆ ಬೀಸಿದ್ದರು.

ಇನ್ನೂ ಕಾರಿನ ಮಾಲೀಕ ಸುರೇಶ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ಪಾಂಡುರಂಗ, ಇನ್‌ಸ್ಪೆಕ್ಟ‌ರ್ ಸಾದಿಕ್ ಪಾಷಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಮೃತ ಮಹಿಳೆಯನ್ನು ದೇವನಹಳ್ಳಿ ತಾಲೂಕಿನ ಸುಜಾತ (35ವರ್ಷ) ಎಂದು ಗುರುತು ಪತ್ತೆಯಾಗಿದ್ದು, ಗೌರಿಬಿದನೂರಿನ ತಾಯಿಯ ಮನೆಯಿಂದ ಗಂಡನ ಮನೆಗೆಂದು ತೆರಳಿದ್ದ ಸುಜಾತ, ನಿನ್ನೆ ಕಾರಿನಲ್ಲಿ ಸುಟ್ಟು ಭಸ್ಮವಾಗಿದ್ದರು.

ಈ ಬೆನ್ನಲ್ಲೇ ಇಂದು ಪರಾರಿಯಾಗಿದ್ದರು ಎನ್ನಲಾದ ರಾಮಾಂಜಿನಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ.

ರಾಜಕೀಯ

ಕಾಂಗ್ರೆಸ್ ಕುಟುಂಬ ಆಧಾರಿತ ಪಕ್ಷ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಕುಟುಂಬ ಆಧಾರಿತ ಪಕ್ಷ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ನಲ್ಲಿ (Congress) ಸೋನಿಯಾ ಗಾಂಧಿ (Soniya Gandhi), ರಾಹುಲ್ ಗಾಂಧಿ, ಪ್ರಿಯಾಕಾಂ ಗಾಂಧಿ (Rahul Gandhi) ಮನಸ್ಸು ಯಾರು ಗೆಲ್ಲುತ್ತಾರೆ ಅವರು ಸಿಎಂ ಆಗುತ್ತಾರೆ. ಇದು ಪ್ರಜಾಪಭುತ್ವದ ವ್ಯವಸ್ಥೆಗೆ ನಾಚಿಗೇಡಿನ ಸಂಗತಿ ಎಂದು

[ccc_my_favorite_select_button post_id="121658"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]