ಶೃಂಗೇರಿ ಷಡ್ಯಂತ್ರ ದೇಶ, ಪ್ರಜಾಪ್ರಭುತ್ವಕ್ಕೆ ಕಳಂಕ: ಡಿಸಿಎಂ ಡಿ.ಕೆ. ಶಿವಕುಮಾರ್

Sringeri conspiracy a stain on the country and democracy: DCM D.K. Shivakumar

ಬೆಂಗಳೂರು/ಹೊಸಪೇಟೆ: ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಷಡ್ಯಂತ್ರ ಹಾಗೂ ವ್ಯವಸ್ಥಿತ ಅಪರಾಧ ನಡೆದಿದೆ. ಇದು ದೇಶ, ಪ್ರಜಾಪ್ರಭುತ್ವಕ್ಕೆ ಕಳಂಕ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.Shivakumar) ಅವರು ಕಿಡಿಕಾರಿದರು.

ಬೆಂಗಳೂರಿನ ಸದಾಶಿವನಗರ ನಿವಾಸ ಹಾಗೂ ಹೊಸಪೇಟೆಯಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.

“ಈ ರೀತಿಯೂ ಮಾಡುತ್ತಾರೆ ಎಂದು ಊಹೆ ಮಾಡಿರಲಿಲ್ಲ. ಮಾಜಿ ಶಾಸಕ ಜೀವರಾಜ್ ಅವರು ಅಧಿಕಾರಿಗಳ ದುರ್ಬಳಕೆ ಮಾಡಿಕೊಂಡು ಅಂಚೆ ಮತಗಳಲ್ಲಿ ಅಕ್ರಮ ಮಾಡಿದ್ದಾರೆ ಎಂದು ವರದಿಯಾಗಿದೆ. ನಮ್ಮ ಸ್ಥಳೀಯ ಅಭ್ಯರ್ಥಿಗಳು, ಎಜೆಂಟರು ದೂರು ನೀಡಿದ್ದರು. ಚುನಾವಣೆ ಮತ ಎಣಿಕೆ ಬಳಿಕ ನಮ್ಮ ಎಜೆಂಟರು ಅವರ ಎಜೆಂಟರು ಹಾಗೂ ಅಧಿಕಾರಿಗಳು ಸಹಿ ಹಾಕಿದ್ದಾರೆ. ಇದಾದ ಬಳಿಕ ಈ ರೀತಿ ನಡೆಸಿದ್ದಾರೆ” ಎಂದರು.

ಕಾನೂನು ಹೋರಾಟ ಮಾಡುತ್ತೇವೆ

“ಎಲ್ಲಾ ರಾಜಕೀಯ ಪಕ್ಷಗಳು ಈ ವಿಚಾರದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು. ನಮ್ಮ ಅಭ್ಯರ್ಥಿಗೆ ಬಂದ ಅಂಚೆ ಮತಗಳನ್ನು ತಿದ್ದಿ ಅವುಗಳನ್ನು ಅಸಿಂಧುಗೊಳಿಸಲು ಷಡ್ಯಂತ್ರ ಮಾಡಲಾಗಿತ್ತು. ಈ ವಿಚಾರವಾಗಿ ದೊಡ್ಡ ತನಿಖೆ ಆಗಬೇಕು. ಕಾನೂನು ಹಾಗೂ ನ್ಯಾಯಾಲಯದಲ್ಲಿ ಇರುವ ಅವಕಾಶದಲ್ಲಿ ಹೋರಾಟ ಮಾಡಲಾಗುವುದು. ಜಯನಗರ ಕ್ಷೇತ್ರದಲ್ಲೂ ಇದೇ ರೀತಿ ಅನ್ಯಾಯ ಮಾಡಲಾಗಿದೆ. ನಾವು ಕಾನೂನು ಹೋರಾಟ ಮಾಡುತ್ತೇವೆ” ಎಂದು ತಿಳಿಸಿದರು.

ಮೇ 15ರಂದು ತುಂಗಭದ್ರಾ ಅಣೆಕಟ್ಟು ಹೊಸ ಗೇಟ್ ಉದ್ಘಾಟನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಹೊಸಪೇಟೆ: “ತುಂಗಭದ್ರಾ ಅಣೆಕಟ್ಟಿನ 33 ನೂತನ ಗೇಟ್ ಗಳ ಅಳವಡಿಕೆಯಾಗಿದ್ದು, ಸ್ವಲ್ಪ ಕೆಲಸ ಬಾಕಿ ಇದೆ. ಮೇ 7ರ ಒಳಗಾಗಿ ಈ ಕೆಲಸ ಪೂರ್ಣಗೊಳಿಸಿ, ಮೇ 15ರಂದು ಇದರ ಉದ್ಘಾಟನೆ ಮಾಡಲು ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ತುಂಗಭದ್ರಾ ಅಣೆಕಟ್ಟು ಗೇಟ್ ಅಳವಡಿಕೆ ಕಾರ್ಯ ಪರಿಶೀಲನೆ ನಡೆಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಇಂದು ಬಹಳ ಸಂತೋಷದ ದಿನ. 7.50 ಲಕ್ಷ ರೈತರ ಬದುಕಿಗೆ ರಕ್ಷಣೆ ನೀಡಲಾಗಿದೆ. ಅಣೆಕಟ್ಟು ವಿಚಾರವಾಗಿ ಟೀಕೆ ಮಾಡಿದವರಿಗೆ ಇಂದು ಉತ್ತರ ಸಿಕ್ಕಿದೆ. ನಾವು ಕೈಗೊಂಡ ತೀರ್ಮಾನಕ್ಕೆ ಫಲ ಸಿಕ್ಕಿದೆ. ನಾಲ್ಕು ಜಿಲ್ಲೆಗಳ ರೈತರನ್ನು ಕರೆಸಿ ಕಾರ್ಯಕ್ರಮ ಮಾಡಲಾಗುವುದು. ಈಗ ಅಣೆಕಟ್ಟಿನಲ್ಲಿ 10.50 ಟಿಎಂಸಿ ನೀರು ಇದೆ. ಮಳೆ ಬಿದ್ದರೆ 2 ತಿಂಗಳಲ್ಲಿ 44 ಟಿಎಂಸಿ ನೀರು ತುಂಬಲಿದೆ. ಈಗ ₹54 ಕೋಟಿ ವೆಚ್ಚ ಮಾಡಲಾಗಿದೆ. 64:34 ಅನುಪಾತದಲ್ಲಿ ಎರಡು ರಾಜ್ಯಗಳು ಬಂಡವಾಳ ಹಾಕಲಾಗುತ್ತಿದೆ” ಎಂದು ತಿಳಿಸಿದರು.

“ಅಣೆಕಟ್ಟು ಆಡಳಿತ ವಿಚಾರದಲ್ಲಿ ಸ್ವಾತಂತ್ರ್ಯ ನೀಡಿದ್ದು, ಯಾವುದೇ ಹಸ್ತಕ್ಷೇಪ ಆಗದಂತೆ ನೋಡಿಕೊಂಡಿದ್ದೇವೆ. 33 ಗೇಟ್ ಅಳವಡಿಕೆ ದೇಶಕ್ಕೆ ಮಾದರಿಯಾಗಿದೆ. ಇಡೀ ದೇಶ ಈ ಗೇಟ್ ಅಳವಡಿಕೆ ಕಾರ್ಯವನ್ನು ಇಡೀ ದೇಶ ನೋಡುತ್ತಿತ್ತು. 19ನೇ ಕ್ರೇಸ್ಟ್ ತುಂಡರಿಸಿದಾಗ ನಾವು ತಜ್ಞರ ಅಭಿಪ್ರಾಯ ಪಡೆದು ಅವರ ನೇತೃತ್ವದಲ್ಲೇ ಗೇಟ್ ಅಳವಡಿಕೆ ಕಾರ್ಯ ಮಾಡಿದ್ದೆವು” ಎಂದರು.

“ಇದರ ಜೊತೆಗೆ ಬೇರೆ ಯೋಜನೆಗಳಿಗೆ 300 ಕೋಟಿ ರೂ. ನೀಡಿದ್ದೇವೆ. ಸರಪಳಿ ಚೆನ್ನಾಗಿದೆ ಎಂದು ಹೇಳಿದ್ದರೂ, ಅದನ್ನು ಬದಲಿಸಲು ಸೂಚಿಸಿರುವೆ. ಇದರ ಜವಾಬ್ದಾರಿ ಚೆನ್ನೈ ಮೂಲದ ಸಂಸ್ಥೆಗೆ ನೀಡಲಾಗಿದೆ. ಮೊದಲ ಹಂತದ ಸರಪಳಿ ಆಗಮಿಸಲಿದೆ. ಈ ಕಾರ್ಯದಿಂದ ರೈತರು, ಜನರು ಸಂತೋಷವಾಗಿದ್ದಾರೆ. ಮುಂದಿನ 50 ವರ್ಷ ಈ ಗೇಟ್ ಗಳು ಏನೂ ಆಗುವುದಿಲ್ಲ” ಎಂದು ಹೇಳಿದರು.

ಟೀಕಾಕಾರರ ಬಾಯಿ ಮುಚ್ಚಿಸಿದ್ದೇವೆ

“ರೈತರು ನಮ್ಮ ಪರಿಸ್ಥಿತಿ ಅರಿತು, ತಮ್ಮ ಒಂದು ಬೆಳೆಯನ್ನು ತ್ಯಾಗ ಮಾಡಿದ್ದಾರೆ. ಈ ಸಹಕಾರ ನೀಡಿದ ರೈತರಿಗೆ ನಮನ ಸಲ್ಲಿಸುತ್ತೇನೆ. ರಾಜಕೀಯವಾಗಿ ಟೀಕೆ ಮಾಡುವವರು ಚಟಕ್ಕೆ ಮಾತನಾಡುತ್ತಾರೆ ಹೊರತು ಇಂತಹ ಕೆಲಸ ಮಾಡಿದ್ದಾರಾ? ಈ ಕೆಲಸದ ಮೂಲಕ ಟೀಕಾಕಾರರ ಬಾಯಿ ಮುಚ್ಚಿಸಿದ್ದೇವೆ” ಎಂದರು.

ನವಲಿ ಯೋಜನೆ ಚರ್ಚೆಗೆ ಆಂಧ್ರ ಸಿಎಂ ಸಮಯ ನೀಡುತ್ತಿಲ್ಲ

ನವಲಿ ಸಮಾನಾಂತರ ಜಲಾಶಯ ಹಾಗೂ ಹೂಳು ಎತ್ತುವ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿಗಳು ನಮಗೆ ಸಮಯ ನೀಡುತ್ತಿಲ್ಲ. ಇನ್ನು ಈ ನೀರನ್ನು ಪಂಪ್ ಮಾಡಿ ಬೇರೆ ಕಡೆ ಸಂಗ್ರಹಣೆ ಮಾಡಬೇಕು ಎಂಬ ಪ್ರಸ್ತಾವನೆ ವರದಿಯೂ ನಮ್ಮ ಮುಂದೆ ಇದೆ. ಈ ವಿಚಾರವಾಗಿ ಮಂಡಳಿಯಲ್ಲಿ ಚರ್ಚೆ ಮಾಡಲು ಆಂಧ್ರ ಸಿಎಂ ಮುಂದಾಗುತ್ತಿಲ್ಲ. ಅವರಿಗೆ ಈಗ ಹೆಚ್ಚಿನ ನೀರು ಸಿಗುತ್ತಿದೆ. ಹೀಗಾಗಿ ಅವರು ಈ ಬಗ್ಗೆ ಆಸಕ್ತಿ ವಹಿಸುತ್ತಿಲ್ಲ. ಈ ಬಗ್ಗೆ ಏನೇ ತೀರ್ಮಾನ ಆಗಬೇಕಿದ್ದರೂ ಮಂಡಳಿಯಲ್ಲಿ ತೀರ್ಮಾನ ಆಗಬೇಕು” ಎಂದು ತಿಳಿಸಿದರು.

ಚೈನಾ ಮಾದರಿಯಲ್ಲಿ ಹೂಳು ಎತ್ತಬಹುದು ಎಂದು ಕೇಳಿದಾಗ, “ಈ ಹೂಳನ್ನು ಎತ್ತಿ ಬೇರೆ ಕಡೆ ಹಾಕುವುದು ಸುಲಭದ ಮಾತಲ್ಲ. ಇದನ್ನು ಖಾಸಗಿಯವರಿಗೆ ನೀಡಬೇಕು. ಖಾಸಗಿ ಅವರಿಗೆ ಲಾಭ ಆಗುವುದಿದ್ದರೆ ಅವರು ಅದನ್ನು ಮಾಡುತ್ತಾರೆ. ಅಲ್ಲಿ ತೆಗೆದ ಹೂಳನ್ನು ಎಲ್ಲಿ ಹಾಕಬೇಕು? ಇದನ್ನು ಖಾಸಗಿಯವರಿಗೆ ನೀಡಬೇಕಾದರೆ ಜಾಗತಿಕ ಟೆಂಡರ್ ಕರೆಯಬೇಕು” ಎಂದರು.

ಅಣೆಕಟ್ಟು ಎತ್ತರ ಹೆಚ್ಚಳ ಪ್ರಸ್ತಾಪವಿಲ್ಲ

ಅಣೆಕಟ್ಟು ಎತ್ತರ ಮಾಡಲಾಗುವುದೇ ಎಂದು ಕೇಳಿದಾಗ, “ಆ ವಿಚಾರಕ್ಕೆ ಕೈ ಹಾಕುವುದಿಲ್ಲ. ಈಗ ಇರುವ ವ್ಯವಸ್ಥೆಯಲ್ಲಿ ವ್ಯರ್ಥವಾಗುತ್ತಿರುವ ನೀರನ್ನು ಉಳಿಸಿಕೊಳ್ಳಲು ದಾರಿ ಹುಡುಕಲಾಗುತ್ತಿದೆ” ಎಂದು ತಿಳಿಸಿದರು.

ಗೇಟ್ ಗಾತ್ರ 2 ಅಡಿ ಎತ್ತರ ಮಾಡಲಾಗಿದ್ದು, ಹೆಚ್ಚಿನ ನೀರು ಸಂಗ್ರಹದ ಬಗ್ಗೆ ಕೇಳಿದಾಗ, “ನಾನು ಈ ತಾಂತ್ರಿಕ ವಿಚಾರವಾಗಿ ಮಾತನಾಡಿ ವಿವಾದ ಮಾಡಿಕೊಳ್ಳುವುದಿಲ್ಲ. ನಮ್ಮ ಅಣೆಕಟ್ಟು ಭದ್ರತೆಗೆ ಅಗತ್ಯ ತೀರ್ಮಾನ ಮಾಡಿದ್ದೇವೆ” ಎಂದು ತಿಳಿಸಿದರು.

ರಾಜ್ಯದಲ್ಲಿ 86 ಸಾವಿರ ಕಡತಗಳು ವಿಲೇವಾರಿ ಆಗದೆ ಬಾಕಿ ಉಳಿದಿವೆ ಎಂದು ಕೇಳಿದಾಗ, “ಈ ವಿಚಾರವಾಗಿ ಸಿಎಂ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿದ್ದು, ಎಲ್ಲವನ್ನು ವಿಲೇವಾರಿ ಮಾಡಲು ಹೇಳಿದ್ದಾರೆ. ಇವುಗಳ ಸರ್ಕಾರಿ ಆದೇಶ ಹೊರಡಿಸಲು ಸೂಚಿಸಿದ್ದಾರೆ” ಎಂದರು.

ಕೈಗಾರಿಗೆಗಳಿಂದಾಗಿ ಅಣೆಕಟ್ಟು ನೀರು ಕಲುಷಿತವಾಗುತ್ತಿದೆ ಎಂದು ಕೇಳಿದಾಗ, “ಈ ಬಗ್ಗೆ ವರದಿ ತರಿಸಿಕೊಂಡು ನೋಡುತ್ತೇವೆ” ಎಂದರು.

ದೊಡ್ಡಬಳ್ಳಾಪುರದಲ್ಲಿ 100 ಹಾಸಿಗೆಗಳ ESIC ಆಸ್ಪತ್ರೆ ಉದ್ಘಾಟನೆ

ದೊಡ್ಡಬಳ್ಳಾಪುರ: ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ (ESIC) ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ ಸೇವೆಯ ಸದುಪಯೋಗ ಪಡೆಯಬೇಕು ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಹಾಗೂ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವರಾದ ಡಾ. ಮನ್ಸುಖ್ ಮಾಂಡವೀಯ (Dr. Mansukh Mandaviya) ಅವರು ಹೇಳಿದರು.

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ 100 ಹಾಸಿಗೆ ಸಾಮರ್ಥ್ಯದ ಇಎಸ್ಐಸಿ (ESIC) ಆಸ್ಪತ್ರೆ ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಮಿಕರ ಕಲ್ಯಾಣ ಮತ್ತು ಸಾಮಾಜಿಕ ಭದ್ರತೆಯೇ ಕೇಂದ್ರ ಸರ್ಕಾರದ ಮೂಲಮಂತ್ರವಾಗಿದ್ದು, ದೊಡ್ಡಬಳ್ಳಾಪುರದಲ್ಲಿ ಸುಮಾರು 101 ಕೋಟಿ ರೂ. ವೆಚ್ಚದಲ್ಲಿ ಇಎಸ್ಐಸಿ ಆಸ್ಪತ್ರೆ ಕಟ್ಟಡ ನಿರ್ಮಿಸಲಾಗಿದೆ. ಜತೆಗೆ ಬಳ್ಳಾರಿಯಲ್ಲಿ ಸುಮಾರು 1.5 ಲಕ್ಷ ಜವಳಿ ಕಾರ್ಮಿಕರಿಗಾಗಿ ₹150 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಇಎಸ್‌ಐಸಿ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದೆ. ಕೇಂದ್ರ ಸರ್ಕಾರವು ಕಾರ್ಮಿಕರ ಘನತೆ ಮತ್ತು ಅವರಿಗೆ ಸಿಗಬೇಕಾದ ಹಕ್ಕುಗಳ ಬಗ್ಗೆ ಅಚಲ ಬದ್ಧತೆಯನ್ನು ಹೊಂದಿದೆ ಎಂದರು.

ಕೇಂದ್ರ ಸರ್ಕಾರವು ಇಎಸ್‌ಐಸಿ ಆಸ್ಪತ್ರೆ ಮೂಲಕ ಕಾರ್ಮಿಕರಿಗೆ ಆರ್ಥಿಕ ಹೊರೆ ತಗ್ಗಿಸಿ ಗುಣಮಟ್ಟದ ಉಚಿತ ಆರೋಗ್ಯ ಸೇವೆ ಹಾಗೂ ಹೊಸ ಕಾರ್ಮಿಕ ಸಂಹಿತೆಯಡಿ ಲಿಂಗ ತಾರತಮ್ಯವಿಲ್ಲದೇ ಸಮಾನ ಕೆಲಸಕ್ಕೆ ಸಮಾನ ವೇತನ ಸಹ‌ ನೀಡುತ್ತಿದ್ದೇವೆ ತಿಳಿಸಿದರು.

ದೇಶಾದಲ್ಲಿ 20 ಇಎಸ್ಐಸಿ (ESIC) ಮೆಡಿಕಲ್ ಕಾಲೇಜು ಸ್ಥಾಪನೆ

ದೇಶಾದ್ಯಂತ 20 ಇಎಸ್‌ಐಸಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವ ಮೂಲಕ ಕಾರ್ಮಿಕರ ಕುಟುಂಬಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಚಿಕಿತ್ಸೆಯ ಭರವಸೆ ನೀಡಲಾಗಿದೆ.

ವೈದ್ಯಕೀಯ ಕಾಲೇಜುಗಳಲ್ಲಿ ಕಾರ್ಮಿಕರ ಮಕ್ಕಳಿಗಾಗಿ ಮೀಸಲಾತಿಯನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಜಾರಿಗೆ ತರಲಾಗಿರುವ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳು ಖಾಸಗಿ ವಲಯದ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ ಮತ್ತು ನೇಮಕಾತಿ ಪತ್ರದ ಖಾತರಿ ಒದಗಿಸುತ್ತವೆ. ಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ 40 ವರ್ಷ ದಾಟಿದ ಪ್ರತಿಯೊಬ್ಬ ಕಾರ್ಮಿಕನಿಗೂ ವಾರ್ಷಿಕ ಉಚಿತ ಆರೋಗ್ಯ ತಪಾಸಣೆ ಕಡ್ಡಾಯಗೊಳಿಸಲಾಗಿದೆ. ಇದರ ಉದ್ದೇಶ ರೋಗಗಳನ್ನು ಪ್ರಾಥಮಿಕ ಹಂತದಲ್ಲೇ ಪತ್ತೆ ಹಚ್ಚಿ ಕಾರ್ಮಿಕರ ಜೀವ ರಕ್ಷಣೆಗೆ ಒತ್ತು ನೀಡಲಾಗಿದೆ ಎಂದು ಸಚಿವರು ಹೇಳಿದರು.

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಹಾಗೂ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಇಂದು ಸುಮಾರು 101 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಇಎಸ್ಐಸಿ ಆಸ್ಪತ್ರೆ ನಿರ್ಮಿಸಲಾಗಿದ್ದು, ದೊಡ್ಡಬಳ್ಳಾಪುರ ಭಾಗದಲ್ಲಿ ಕಾರ್ಮಿಕರ ಸಂಖ್ಯೆ ಹೆಚ್ಚಿದ್ದು, ಈ ಹಿಂದೆ ಉತ್ತಮ ಚಿಕಿತ್ಸೆಗಾಗಿ ಬೆಂಗಳೂರಿಗೆ ಅಲೆದಾಡುವ ಪರಿಸ್ಥಿತಿ ಇತ್ತು. ಈಗ ಕಾರ್ಮಿಕರಿಗೆ ಇಲ್ಲಿಯೇ ಗುಣಮಟ್ಟದ ವೈದ್ಯಕೀಯ ಚಿಕಿತ್ಸೆ ದೊರೆಯಲಿದೆ. ಪ್ರಸ್ತುತ ಈ ಆಸ್ಪತ್ರೆಗೆ 9 ಜನ ತಜ್ಞ ವೈದ್ಯರು, ನರ್ಸಿಂಗ್ ಸಿಬ್ಬಂದಿ ಹಾಗೂ ತಾಂತ್ರಿಕ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಸದ್ಯಕ್ಕೆ ಇದು ರಾಜಾಜಿನಗರ ಆಸ್ಪತ್ರೆಯ ಮೇಲ್ವಿಚಾರಣೆಯಲ್ಲಿದ್ದು, ಮುಂದಿನ ದಿನಗಳಲ್ಲಿ ಸ್ವತಂತ್ರವಾಗಿ ಕಾರ್ಯನಿರ್ವಹಿಸಲಿದೆ ಎಂದರು.

ದೇಶಾದ್ಯಂತ ಇರುವ 15 ಕೋಟಿ ಕಾರ್ಮಿಕರು ಮತ್ತು ಅವರ ಕುಟುಂಬದವರಿಗೆ ಗುಣಮಟ್ಟದ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ದೇಶದ ಇಎಸ್ಐಸಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರಸ್ತುತ 1,550 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಅದರಲ್ಲಿ ವಿಶೇಷವಾಗಿ ಕಾರ್ಮಿಕರ ಮಕ್ಕಳಿಗಾಗಿ 702 ಸೀಟುಗಳನ್ನು ಮೀಸಲಿಡಲಾಗಿದೆ. ಮುಂಬರುವ ವರ್ಷದಲ್ಲಿ ಕೇಂದ್ರ ಸರ್ಕಾರದಿಂದ ನಿರ್ವಹಿಸಲ್ಪಡುವ ಇಂತಹ ಆಸ್ಪತ್ರೆಗಳ ಸಂಖ್ಯೆ ಹೆಚ್ಚಾಗಲಿದೆ ಎಂದು ಸಚಿವರು ತಿಳಿಸಿದರು.

ಚಿಕ್ಕಬಳ್ಳಾಪುರ ಲೋಕಸಭಾ ಮತಕ್ಷೇತದ ಸಂಸದರಾದ ಡಾ. ಕೆ.ಸುಧಾಕರ ಅವರು ಮಾತನಾಡಿ, ಇಎಸ್ಐಸಿ ಆಸ್ಪತ್ರೆಯು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರಿಗೆ ಉಚಿತ ಆರೋಗ್ಯ ಸೇವೆ ಒದಗಿಸುತ್ತಿದೆ. ದೊಡ್ಡಬಳ್ಳಾಪುರದ ಇಎಸ್ಐಸಿ ಆಸ್ಪತ್ರೆಯು ಐದು ಎಕರೆ ವಿಶಾಲವಾದ ಜಾಗದಲ್ಲಿ ನಿರ್ಮಾಣವಾಗಿದ್ದು, ಕಾರ್ಮಿಕರಿಗೆ ಗುಣಮಟ್ಟದ ವೈದ್ಯಕೀಯ ಒದಗಿಸಲಿದೆ. ಈ ಭಾಗದಲ್ಲಿ 5 ಲಕ್ಷ ಕಾರ್ಮಿಕರು ಇದ್ದು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಜಿಲ್ಲೆಯ ಕಾರ್ಮಿಕರು ಸಹ ವೈದ್ಯಕೀಯ ಸೇವೆ ಪಡೆಯಲು ಸಹಕಾರಿಯಾಗಲಿದೆ ಎಂದರು.

ವೈದ್ಯರು ದಯಾ ಶಕ್ತಿಯಿಂದ ಕಾರ್ಮಿಕ ವರ್ಗಕ್ಕೆ ಅನಾರೋಗ್ಯ ವಾಸಿ ಮಾಡಿ ಆರೋಗ್ಯ ಸೇವೆ ಒದಗಿಸುವ ಮೂಲಕ ಕಾರ್ಮಿಕರ ಕಣ್ಣಿರು ಒರೆಸುವ ಒಳ್ಳೆಯ ಸೇವಾ ಕೆಲಸ ಆಗಬೇಕು ಎಂದು ಹೇಳಿದರು.

ಇದೇ ವೇಳೆ ವರ್ಚುವಲ್ ಮೂಲಕ ಬಳ್ಳಾರಿಯಲ್ಲಿ ನಿರ್ಮಾಣಗೊಳ್ಳಲಿರುವ 100 ಹಾಸಿಗೆಗಳ ಇ.ಎಸ್.ಐ.ಸಿ ಆಸ್ಪತ್ರೆಗೆ ಶಂಕುಸ್ಥಾಪನೆಯನ್ನು ನೆರವೇರಿಸಿದರು‌.

ಕಾರ್ಯಕ್ರಮದಲ್ಲಿ ಇ.ಎಸ್.ಐ.ಸಿ. ಯೋಜನೆಯಡಿ ಅವಲಂಬಿತ ಭತ್ಯೆ, ಶಾಶ್ವತ ಅಂಗವೈಕಲ್ಯ ಭತ್ಯೆ, ಮಾತೃತ್ವ ಭತ್ಯೆಯ ಫಲಾನುಭವಿಗಳಿಗೆ ನಗದು ಸೌಲಭ್ಯದ ಚೆಕ್ ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜು ವೈದ್ಯಕೀಯ ಆಯುಕ್ತರಾದ ಡಾ.ಆರ್ ಶ್ರೀನಿವಾಸ್, ಬಾಶೇಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪ್ರೇಮ ಕುಮಾರ್, ಇಎಸ್ಐಸಿ ಆಸ್ಪತ್ರೆ ವೈದ್ಯರು, ಸಿಬ್ಬಂದಿಗಳು, ಗಣ್ಯರು ಉಪಸ್ಥಿತರಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ

ವಿವಿಧ ರಾಜ್ಯಗಳ ಚುನಾವಣೆಗಳು ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಬೆಲೆಯನ್ನು ಏಕಾಏಕಿ ರೂ.993 ಹೆಚ್ಚಳ ಮಾಡಿರುವ ಕುರಿತು ದೇಶಾದ್ಯಂತ ಆಕ್ರೋಶ ತೀವ್ರಗೊಂಡಿವೆ. ಈ ಕುರಿತು ಪ್ರತಿಕ್ರಿಯೆ ಕೇಳುತ್ತಿದ್ದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

[ccc_my_favorite_select_button post_id="121678"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]