ಯುವಕರು ಕೃಷಿಯತ್ತ ಮರಳಬೇಕು: ಸಿಎಂ ಸಿದ್ದರಾಮಯ್ಯ ಕರೆ

Youth should return to agriculture: CM Siddaramaiah's call

ಬೆಂಗಳೂರು: ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ Cm Siddaramaiah) ತಿಳಿಸಿದರು

ಅವರು ಶನಿವಾರ ನಗರದ ಓಕಳೀಪುರಂನಲ್ಲಿ ರೇಷ್ಮೆ ಮತ್ತು ಖನಿಜ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ಹಾಗೂ ಇ-ರೇಷ್ಮೆ ಪೋರ್ಟಲ್ ಬಿಡುಗಡೆಯನ್ನು ನೆರವೇರಿಸಿ ಮಾತನಾಡಿದರು.

ರೇಷ್ಮೆ ಮೇಲೆ 1.50 ಲಕ್ಷ ಕುಟುಂಬಗಳು ಇದರ ಮೇಲೆ ಅವಲಂಬಿಸಿದ್ದು, ರೇಷ್ಮೆ ಲಾಭದಾಯಕವಾದ ಕಸುಬು. ಅದಕ್ಕಾಗಿಯೇ ಹೆಚ್ಚು ಜನ ವ್ಯವಸಾಯದ ಜೊತೆಗೆ ಉಪಕಸುಬು ಮಾಡಬೇಕು ಎಂದರು. ಕೃಷಿ ಯಿಂದ ವಿಮುಖರಾಗುತ್ತಿರುವ ಯುವಜನಾಂಗವನ್ನು ಪುನ: ಸೆಳೆಯಲು ರೇಷ್ಮೆ ತೋಟಗಾರಿಕೆ, ಪಶುಸಂಗೋಪನೆಗೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ ಎಂದರು.

ಬೈವೋಲ್ಟೀನ್ ರೇಷ್ಮೆಗೆ ಬೇಡಿಕೆ

ಬೈವೋಲ್ಟೀನ್ ರೇಷ್ಮೆಗೆ ಬೇಡಿಕೆ ಹೆಚ್ಚಾಗಿದ್ದು, ನಮ್ಮ ಸರ್ಕಾರದ ಅವಧಿಯಲ್ಲಿ ಸಾಗಾಣಿಕೆ ವೆಚ್ಚವನ್ನು 10 ರಿಂದ 20. ರೂ.ಗಳಿಗೆ ಹೆಚ್ಚಿಸಲಾಯಿತು ಮತ್ತು ಬೈವೋಲ್ಟೀನ್ ಬೆಳೆಯಲು ಹೆಚ್ಚಿನ ನೆರವನ್ನು ನೀಡಲು ಬದ್ಧವಾಗಿದೆ ಎಂದರು. ಕಚ್ಚಾ ರೇಷ್ಮೆ ಉತ್ಪಾದನೆಯಲ್ಲಿ ಕರ್ನಾಟಕ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಹಾಲು ಉತ್ಪಾದನೆಯಲ್ಲಿ ಎರಡನೇ ಸ್ಥಾನ ಹಾಗೂ ಕಾಫಿ ಉತ್ಪಾದನೆಯಲ್ಲಿಯೂ ಮೊದಲ ಸ್ಥಾನದಲ್ಲಿದ್ದೇವೆ. ಒಂದು ದಿನಕ್ಕೆ 1 ಕೋಟಿ ಲೀ. ಹಾಲು ಹಾಲು ಉತ್ಪಾದನೆಯಲ್ಲಿ 1.22 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ರೇಷ್ಮೆ ಬೆಳೆ ಹಾಕಲಾಗಿದೆ ಎಂದು ವಿವರಿಸಿದರು.

ಇತರೆ ಇಲಾಖೆಗಳಿಗೂ ಸ್ಥಳಾವಾಕಾಶ

ಓಕಳೀಪುರಂನಲ್ಲಿರುವ 4 ಎಕರೆ 25 ಗುಂಟೆ ವಿಸ್ತೀರ್ಣದ ಈ ಸ್ಥಳ ರೇಷ್ಮೆ ಇಲಾಖೆಗೆ ಸೇರಿದ್ದು 1995 ರಲ್ಲಿ ಇದನ್ನು ಖರೀದಿಸಲಾಗಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರೇಷ್ಮೆ ಭವನದ ಅಗತ್ಯತೆಯನ್ನು ಮನಗಂಡು ಸ್ಥಳವನ್ನು ರೇಷ್ಮೆ ಇಲಾಖೆ ಕೊಟ್ಟರೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸೇರಿದ ಮೈಸೂರು ಖನಿಜ ಕಾರ್ಪೋರೇಷನ್ ವತಿಯಿಂದ ಭವನ ನಿರ್ಮಾಣ ಮಾಡುವುದು ಎಂದು ತೀರ್ಮಾನಿಸಿ ಈ ಕ್ರಮ ಕೈಗೊಳ್ಳಲಾಗಿದೆ. ರೇಷ್ಮೆ ಇಲಾಖೆಯ ಅಭಿವೃದ್ಧಿಯ ದೃಷ್ಟಿಯಿಂದ ಅಗತ್ಯವಿರುವಷ್ಟು ಸ್ಥಳವನ್ನು ಬಳಸಿಕೊಂಡು ಇತರೆ ಇಲಾಖೆಗಳಿಗೂ ಸ್ಥಳಾವಾಕಾಶವನ್ನು ಮಾಡಿಕೊಡುವಂತೆ ಸೂಚಿಸಲಾಗಿದೆ ಎಂದರು.

ಮೂರು ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಬೇಕು

ರೂ. 666.75 ಕೋಟಿ ಗಳಿಗೆ ಟೆಂಡರ್ ಆಗಿದ್ದು, ಮೂರು ವರ್ಷಗಳ ಅವಧಿಯಲ್ಲಿ ಕಟ್ಟಡ ನಿರ್ಮಾಣವಾಗಬೇಕು, 13 ಅಂತಸ್ತಿನ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲಿದ್ದು ಕಟ್ಟಡ ಸದೃಢವಾಗಿರಬೇಕು ಎಂದು ಸ್ಥಳದಲ್ಲಿ ಹಾಜರಿದ್ದ ಗುತ್ತಿಗೆದಾರರಿಗೆ ಮುಖ್ಯಮಂತ್ರಿಗಳು ಸೂಚಿಸಿದರು. ಮೂರು ವರ್ಷಗಳ ಕಾಲಮಿತಿಯಲ್ಲಿ ಕಟ್ಟಡ ಮುಗಿಯದಿದ್ದರೆ ಕ್ರಮ ನಿಮ್ಮ ವಿರುದ್ಧ ಕ್ರಮವಹಿಸಲಾಗುವುದು ಎಂದೂ ಎಚ್ಚರಿಕೆ ನೀಡಿದರು.

ಸಚಿವರಾದ ದಿನೇಶ್ ಗುಂಡೂರಾವ್, ವೆಂಕಟೇಶ್, ಖನಿಜ ನಿಗಮದ ಅಧ್ಯಕ್ಷ ಜಿ.ಎಸ್ .ಪಾಟೀಲ್, ಉಪಾಧ್ಯಕ್ಷ ಹೆಚ್. ಲಕ್ಷ್ಮಣ್, ರೇಷ್ಮೆ ಇಲಾಖೆ ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶನಿವಾರ ವಿಧಾನಸೌಧದ ಸಭಾಂಗಣದಲ್ಲಿ ನಡೆಸಿದ ಎಲ್ಲಾ ಇಲಾಖೆಗಳ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು/ಕಾರ್ಯದರ್ಶಿಗಳ ಸಭೆಯಲ್ಲಿ ನೀಡಿದ ಸೂಚನೆಗಳು

• ರಾಜ್ಯದ ಆಡಳಿತ ಸಮರ್ಪಕವಾಗಿ ನಡೆಯಲು ಇಲಾಖಾ ಕಾರ್ಯದರ್ಶಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಇದನ್ನು ಸಂವಿಧಾನದಲ್ಲಿಯೇ ಉಲ್ಲೇಖಿಸಲಾಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು, 1949 ನವೆಂಬರ್ 25 ರಂದು ಮಾಡಿದ ಭಾಷಣದಲ್ಲಿ ʻರಾಜಕೀಯ ಪ್ರಜಾಪ್ರಭುತ್ವವು ಸಾಮಾಜಿಕ ಹಾಗೂ ಆರ್ಥಿಕ ಸಮಾನತೆಯ ತಳಹದಿಯ ಮೇಲೆ ನಿಂತಿದೆʼ ಎಂದು ಹೇಳಿದ್ದರು. ಅಂದರೆ ದೇಶದ ಪ್ರತಿಯೊಬ್ಬರಿಗೂ ಆರ್ಥಿಕ ಹಾಗೂ ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯ ಮಾಡಿದರೆ ಮಾತ್ರ ನಿಜವಾದ ರಾಜಕೀಯ ಸ್ವಾತಂತ್ರ್ಯ ಸಾಕಾರಗೊಳ್ಳಲು ಸಾಧ್ಯ. ಸಂವಿಧಾನದ ಆಶಯಗಳ ಪ್ರಕಾರ ಕಾರ್ಯ ನಿರ್ವಹಿಸಬೇಕಾದುದು ಎಲ್ಲಾ ಕಾರ್ಯದರ್ಶಿಗಳ ಕರ್ತವ್ಯವಾಗಿದೆ. ಸಂವಿಧಾನಕ್ಕೆ ವಿರುದ್ಧವಾದ ಯಾವುದೇ ಕಾರ್ಯವನ್ನು ಮಾಡಬಾರದು.

• ಗೃಹ ಸಚಿವರಾಗಿದ್ದ ವಲ್ಲಭ ಬಾಯ್ ಪಟೇಲ್ ಅವರು, ʻಕಾರ್ಯದರ್ಶಿಗಳು ನಿರ್ಭಯವಾಗಿ ಸ್ವತಂತ್ರವಾಗಿ ತಮ್ಮ ಅಭಿಪ್ರಾಯಗಳನ್ನು ಮಂತ್ರಿಗಳಿಗೆ ತಿಳಿಸಬೇಕು. ಮಂತ್ರಿ ಅಸಮಾಧಾನಗೊಳ್ಳುತ್ತಾರೆ ಎಂದು ಸತ್ಯ ಹೇಳುವುದರಿಂದ ಹಿಂಜರಿಯಬಾರದುʼ ಎಂದು ಸಂವಿಧಾನ ಸಭೆಯಲ್ಲಿ ಹೇಳಿದ್ದರು. ಇದರಂತೆ ಹಿರಿಯ ಅಧಿಕಾರಿಗಳು ನಿಮ್ಮ ಅಭಿಪ್ರಾಯಗಳನ್ನು ನಿರ್ಭಯವಾಗಿ, ಸ್ವತಂತ್ರವಾಗಿ, ಸತ್ಯವಾಗಿ ಹೇಳಬೇಕು.

• ಅಧಿಕಾರಿಗಳು ಯಾವತ್ತೂ ಸರ್ಕಾರಕ್ಕೆ ತಪ್ಪು ಮಾಹಿತಿಯನ್ನು ನೀಡಬಾರದು ಹಾಗೂ ತಪ್ಪು ಹಾದಿಗೆ ಎಳೆಯಬಾರದು. ನಮ್ಮ ನಿಲುವುಗಳು, ತೀರ್ಮಾನಗಳು ಯಾವತ್ತೂ ಜನಪರವಾಗಿರಬೇಕು. ಅಧಿಕಾರಿಗಳು 30-35 ವರ್ಷಗಳ ಕಾಲ ಆಡಳಿತ ವ್ಯವಸ್ಥೆಯಲ್ಲಿದ್ದರೆ, ಜನಪ್ರತಿನಿಧಿಗಳು ಕೇವಲ 5 ವರ್ಷಗಳ ಕಾಲ ಮಾತ್ರ ಇರುತ್ತಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಧಿಕಾರಿಗಳ ಜವಾಬ್ದಾರಿ ಹೆಚ್ಚಾಗಿದೆ.

• ಬಜೆಟ್ನಲ್ಲಿ ಮಾಡಿರುವ ಘೋಷಣೆಗಳನ್ನು ಜಾರಿಗೊಳಿಸುವ ಕಾರ್ಯ ಅಧಿಕಾರಿಗಳದ್ದು. ಕಳೆದ ವರ್ಷದ ಬಜೆಟ್ನ 15 ಘೋಷಣೆಗಳ ಜಾರಿ ಇನ್ನೂ ಆಗಿಲ್ಲ. ಇದಕ್ಕೆ ಯಾರು ಹೊಣೆ? ಈ ವರ್ಷದ ಬಜೆಟ್ನಲ್ಲಿ 218 ಹೊಸ ಘೋಷಣೆಗಳು ಸೇರಿದಂತೆ ಒಟ್ಟಾರೆ 565 ಘೋಷಣೆಗಳನ್ನು ಮಾಡಿದ್ದೇವೆ. ಬಜೆಟ್ನ ಎಲ್ಲಾ ಘೋಷಣೆಗಳನ್ನು ಅದೇ ವರ್ಷ ಜಾರಿಗೊಳಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಬಜೆಟ್ ಘೋಷಣೆಗಳು ಯಾವುದೇ ಕಾರಣಕ್ಕೂ ಅನುಷ್ಠಾನಗೊಳ್ಳದೆ ಇರಬಾರದು. ಅನುಷ್ಠಾನದಲ್ಲಿನ ಪ್ರಾಯೋಗಿಕ ತೊಡಕುಗಳನ್ನು ನೇರವಾಗಿ ನನ್ನ ಅಥವಾ ಮುಖ್ಯ ಕಾರ್ಯದರ್ಶಿಯವರ ಗಮನಕ್ಕೆ ತರಬೇಕು.

• 2026-27 ನೇ ಬಜೆಟ್ನಲ್ಲಿನ ಘೋಷಣೆಗಳ ಪೈಕಿ ಕೇವಲ 5 ಘೋಷಣೆಗಳ ಬಗ್ಗೆ ಮಾತ್ರ ಸರ್ಕಾರಿ ಆದೇಶ ಮಾಡಲಾಗಿದೆ. ಮೇ ತಿಂಗಳ ಒಳಗಾಗಿ ಎಲ್ಲಾ ಸರ್ಕಾರಿ ಆದೇಶಗಳನ್ನು ಜಾರಿಗೊಳಿಸಿ, ಅನುಷ್ಠಾನ ಕಾರ್ಯ ಆರಂಭಿಸಬೇಕು ಇಲ್ಲದಿದ್ದರೆ ಆಯಾ ಕಾರ್ಯದರ್ಶಿಗಳನ್ನೇ ಜವಾಬ್ದಾರರನ್ನಾಗಿ ಮಾಡಲಾಗುವುದು.

• ಅಧಿಕಾರಕ್ಕೆ ಬಂದ ಬಳಿಕ ರಾಜ್ಯಮಟ್ಟದಲ್ಲಿ ಎರಡು ಜನಸ್ಪಂದನ ಸಭೆಯಲ್ಲಿ ಸ್ವೀಕರಿಸಲಾಗಿದ್ದ 15334 ಸ್ವೀಕೃತಿಗಳ ಪೈಕಿ 15295 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಬಾಕಿಯಿರುವ 45 ಅರ್ಜಿಗಳನ್ನು ವಿಲೇವಾರಿ ಮಾಡಬೇಕು.

• ಸಾರ್ವಜನಿಕ ಕುಂದುಕೊರತೆ (IPGRS)ಯಡಿ 3,27,052 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, 3,17,576 ವಿಲೇವಾರಿ ಮಾಡಲಾಗಿದೆ. 1828 ಅರ್ಜಿಗಳ ವಿಲೇವಾರಿ ನಿಗದಿತ ಕಾಲಾವಧಿ ಮುಗಿದಿದೆ. ಸಾರ್ವಜನಿಕರ ಕುಂದುಕೊರತೆಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡದಿದ್ದರೆ ಜನರಿಗೆ ಸರ್ಕಾರದ ಮೇಲಿನ ನಂಬಿಕೆಯೇ ಹೊರಟು ಹೋಗುತ್ತದೆ. ಇದಕ್ಕೆ ಅವಕಾಶ ಮಾಡಬಾರದು. ಇದೇ ರೀತಿ ಸಕಾಲ ಅಡಿ ಸ್ವೀಕರಿಸಲಾಗುವ ಅರ್ಜಿಗಳನ್ನು ಸಹ ಸಕಾಲದಲ್ಲಿಯೇ ವಿಲೇವಾರಿ ಮಾಡಬೇಕು.

• ಭರ್ತಿ ಮಾಡಿಕೊಳ್ಳಲು ಮಂಜೂರಾತಿ ನೀಡಲಾಗಿರುವ ಹುದ್ದೆಗಳ ಭರ್ತಿಗೆ ತಕ್ಷಣ ಕ್ರಮ ಕೈಗೊಳ್ಳಬೇಕು. ಆರ್ಥಿಕ ಇಲಾಖೆಯಿಂದ 24,300 ಹುದ್ದೆಗಳ ಭರ್ತಿಗೆ ಮಂಜೂರಾತಿ ನೀಡಲಾಗಿದೆ. ಕಲ್ಯಾಣ ಕರ್ನಾಟಕಕ್ಕೆ ಸಂಬಂಧಿಸಿದ ವೃಂದದಲ್ಲಿ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗದೇ ಬಾಕಿಯಿರುವ 32132 ಹುದ್ದೆಗಳಿವೆ. ಕೆಲವು ಇಲಾಖೆಗಳಲ್ಲಿ ವೃಂದ ಮತ್ತು ನೇಮಕಾತಿ ನಿಯಮಾವಳಿ ಪರಿಷ್ಕರಣೆ ಬಾಕಿಯಿದ್ದು, ಇದನ್ನು ಆದಷ್ಟು ಬೇಗನೆ ಮುಗಿಸಬೇಕು.

• ವಿವಿಧ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳಡಿಯಲ್ಲಿ 2025-26 ನೇ ಸಾಲಿನಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ರೂ. 22,768 ಕೋಟಿ ಬಿಡುಗಡೆ ಮಾಡಿದ್ದು, ಕೇಂದ್ರ ಸರ್ಕಾರ ರೂ. 16,729 ಕೋಟಿ ಬಿಡುಗಡೆ ಮಾಡಿದೆ. ಕೇಂದ್ರದಿಂದ ರೂ.11,367 ಕೋಟಿ ಅನುದಾನ ಬಿಡುಗಡೆಗೆ ಬಾಕಿಯಿದೆ. ಈ ಅವಧಿಯಲ್ಲಿ ಒಟ್ಟಾರೆ ರೂ.42222 ಕೋಟಿ ಲಭ್ಯ ಅನುದಾನವಿದ್ದು, ರೂ.38,236 ಕೋಟಿ ವೆಚ್ಚ ಮಾಡಲಾಗಿದೆ. ಅನುದಾನವನ್ನು ನಿಗದಿತ ಅವಧಿಯ ಒಳಗಾಗಿ ಖರ್ಚು ಮಾಡಲು ಕ್ರಮ ಕೈಗೊಳ್ಳಬೇಕು.

• ಗುತ್ತಿಗೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ರೂ.2 ಕೋಟಿವರೆಗೆ ಮೀಸಲಾತಿ ಕಲ್ಪಿಸಲಾಗಿದೆ. ವಿವಿಧ ಕಾಮಗಾರಿಗಳನ್ನು ಒಟ್ಟು ಸೇರಿಸಿ ಪ್ಯಾಕೇಜ್ ಮಾಡುವ ಮೂಲಕ ಮೀಸಲಾತಿ ತಪ್ಪಿಸಲು ಅವಕಾಶ ನೀಡಬಾರದು. ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಕಾಮಗಾರಿ ವಿಳಂಬದಿಂದ ನಿರ್ಮಾಣ ವೆಚ್ಚ ಹೆಚ್ಚಳಕ್ಕೆ ಅವಕಾಶ ಮಾಡಬಾರದು.

• ಈ ವರ್ಷ ಮಳೆ ಶೇ.5ರಷ್ಟು ಮಳೆ ಕಡಿಮೆಯಾಗುವ ಸಾಧ್ಯತೆಯಿದ್ದು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಮ್ಮ ವ್ಯಾಪ್ತಿಯ ಜಿಲ್ಲೆಯಲ್ಲಿನ ಕುಡಿಯುವ ನೀರಿನ ಪರಿಸ್ಥಿತಿ ಬಗ್ಗೆ ನಿರಂತರ ನಿಗಾ ವಹಿಸಬೇಕು. ಈ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಜೊತೆ ಸಭೆ ನಡೆಸಬೇಕು. ತಮ್ಮ ಉಸ್ತುವಾರಿಯಲ್ಲಿನ ಜಿಲ್ಲೆಯ ಸಮಸ್ಯೆಗಳನ್ನು ಬಗೆಹರಿಸುವುದು ಆಯಾ ಕಾರ್ಯದರ್ಶಿಗಳ ಜವಾಬ್ದಾರಿಯಾಗಿದೆ. ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ತೊಂದರೆಯಾಗಬಾರದು.

• ಅಧಿಕಾರಿಗಳು ರಾಜಕಾರಣಿಗಳ ಓಲೈಕೆ ಮಾಡಲು ಹೋಗಬಾರದು, ಇದು ಸರ್ವಾಧಿಕಾರಕ್ಕೆ ಹಾದಿ ಮಾಡುತ್ತದೆʼ ಎಂದು ಅಂಬೇಡ್ಕರ್ ಅವರು ಎಚ್ಚರಿಕೆ ನೀಡಿದ್ದರು. ಅದರಂತೆ ನೀವು ಕಾನೂನಿನ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸಿ. ಸಚಿವರಿಗೆ ಕಾನೂನಿನ ವ್ಯಾಪ್ತಿಯೊಳಗೆ ಸಲಹೆಗಳನ್ನು ನೀಡಿ. ಸರ್ಕಾರಕ್ಕೆ ಒಳ್ಳೆಯ ಹೆಸರು ತರುವುದು ಕಾರ್ಯದರ್ಶಿಗಳ ಕಾರ್ಯ ಚಟುವಟಿಕೆಗಳ ಮೇಲೆ ಅವಲಂಬಿತವಾಗಿದೆ. ಆಡಳಿತಕ್ಕೆ ಇನ್ನಷ್ಟು ಚುರುಕು ಮೂಡಿಸಬೇಕು ಎಂದು ಸೂಚನೆ ನೀಡಿದರು.

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]