ದೊಡ್ಡಬಳ್ಳಾಪುರ: ಮೇ.6ರಂದು ಹೊಸಹಳ್ಳಿಯಲ್ಲಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವ

brahmarathotsava-will-be-held-in-hosahalli-on-may-6th

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹಸ್ವಾಮಿಯ ಬ್ರಹ್ಮರಥೋತ್ಸವ (Sri Lakshminarasimha Swamy Brahmarathotsava) ಇದೇ ತಿಂಗಳ 6 ರಂದು ನಡೆಯಲಿದೆ ಎಂದು ದೇವಾಲಯದ ಧರ್ಮಾಧಿಕಾರಿ ಹೆಚ್.ಎಸ್. ಅಶ್ವಥ್ ನಾರಾಯಣ ಕುಮಾರ್ ತಿಳಿಸಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿರುವ ಅವರು ಶ್ರೀ ಲಕ್ಷ್ಮೀನರಸಿಂಹಸ್ವಾಮಿಯ ಜಾತ್ರಾ ಮಹೋತ್ಸವ ಇಂದಿನಿಂದ (ಮೇ.04) ಆರಂಭವಾಗಿ ಮೇ.08ರ ವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಐದು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಕಲ್ಯಾಣೋತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಮೇ.6 ರಂದು ಶುಭ ಅಭಿಜನ್ ಮುಹೂರ್ತದಲ್ಲಿ ಸ್ವಾಮಿಯ ಬ್ರಹ್ಮರಥೋತ್ಸವ ನೆರವೇರಲಿದೆ.

ಇದೇ ದಿನ ರಾತ್ರಿ ಲಕ್ಷ್ಮೀನರಸಿಂಹಸ್ವಾಮಿ ಕಲಾತಂಡದವರಿಂದ ‘ಕುರುಕ್ಷೇತ್ರ’ ಅಥವಾ ‘ಶ್ರೀಕೃಷ್ಣಸಂಧಾನ’ ಎಂಬ ಪೌರಾಣಿಕ ನಾಟಕ ನಡೆಯಲಿದೆ ಎಂದು ತಿಳಿಸಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ 100 ಹಾಸಿಗೆಗಳ ESIC ಆಸ್ಪತ್ರೆ ಉದ್ಘಾಟನೆ

100-bed ESIC hospital inaugurated in Doddaballapur
100-bed ESIC hospital inaugurated in Doddaballapur

ದೊಡ್ಡಬಳ್ಳಾಪುರ: ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ (ESIC) ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ ಸೇವೆಯ ಸದುಪಯೋಗ ಪಡೆಯಬೇಕು ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಹಾಗೂ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವರಾದ ಡಾ. ಮನ್ಸುಖ್ ಮಾಂಡವೀಯ (Dr. Mansukh Mandaviya) ಅವರು ಹೇಳಿದರು.

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ 100 ಹಾಸಿಗೆ ಸಾಮರ್ಥ್ಯದ ಇಎಸ್ಐಸಿ (ESIC) ಆಸ್ಪತ್ರೆ ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಮಿಕರ ಕಲ್ಯಾಣ ಮತ್ತು ಸಾಮಾಜಿಕ ಭದ್ರತೆಯೇ ಕೇಂದ್ರ ಸರ್ಕಾರದ ಮೂಲಮಂತ್ರವಾಗಿದ್ದು, ದೊಡ್ಡಬಳ್ಳಾಪುರದಲ್ಲಿ ಸುಮಾರು 101 ಕೋಟಿ ರೂ. ವೆಚ್ಚದಲ್ಲಿ ಇಎಸ್ಐಸಿ ಆಸ್ಪತ್ರೆ ಕಟ್ಟಡ ನಿರ್ಮಿಸಲಾಗಿದೆ. ಜತೆಗೆ ಬಳ್ಳಾರಿಯಲ್ಲಿ ಸುಮಾರು 1.5 ಲಕ್ಷ ಜವಳಿ ಕಾರ್ಮಿಕರಿಗಾಗಿ ₹150 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಇಎಸ್‌ಐಸಿ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದೆ. ಕೇಂದ್ರ ಸರ್ಕಾರವು ಕಾರ್ಮಿಕರ ಘನತೆ ಮತ್ತು ಅವರಿಗೆ ಸಿಗಬೇಕಾದ ಹಕ್ಕುಗಳ ಬಗ್ಗೆ ಅಚಲ ಬದ್ಧತೆಯನ್ನು ಹೊಂದಿದೆ ಎಂದರು.

ಕೇಂದ್ರ ಸರ್ಕಾರವು ಇಎಸ್‌ಐಸಿ ಆಸ್ಪತ್ರೆ ಮೂಲಕ ಕಾರ್ಮಿಕರಿಗೆ ಆರ್ಥಿಕ ಹೊರೆ ತಗ್ಗಿಸಿ ಗುಣಮಟ್ಟದ ಉಚಿತ ಆರೋಗ್ಯ ಸೇವೆ ಹಾಗೂ ಹೊಸ ಕಾರ್ಮಿಕ ಸಂಹಿತೆಯಡಿ ಲಿಂಗ ತಾರತಮ್ಯವಿಲ್ಲದೇ ಸಮಾನ ಕೆಲಸಕ್ಕೆ ಸಮಾನ ವೇತನ ಸಹ‌ ನೀಡುತ್ತಿದ್ದೇವೆ ತಿಳಿಸಿದರು.

ದೇಶಾದಲ್ಲಿ 20 ಇಎಸ್ಐಸಿ (ESIC) ಮೆಡಿಕಲ್ ಕಾಲೇಜು ಸ್ಥಾಪನೆ

ದೇಶಾದ್ಯಂತ 20 ಇಎಸ್‌ಐಸಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವ ಮೂಲಕ ಕಾರ್ಮಿಕರ ಕುಟುಂಬಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಚಿಕಿತ್ಸೆಯ ಭರವಸೆ ನೀಡಲಾಗಿದೆ.

ವೈದ್ಯಕೀಯ ಕಾಲೇಜುಗಳಲ್ಲಿ ಕಾರ್ಮಿಕರ ಮಕ್ಕಳಿಗಾಗಿ ಮೀಸಲಾತಿಯನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಜಾರಿಗೆ ತರಲಾಗಿರುವ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳು ಖಾಸಗಿ ವಲಯದ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ ಮತ್ತು ನೇಮಕಾತಿ ಪತ್ರದ ಖಾತರಿ ಒದಗಿಸುತ್ತವೆ. ಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ 40 ವರ್ಷ ದಾಟಿದ ಪ್ರತಿಯೊಬ್ಬ ಕಾರ್ಮಿಕನಿಗೂ ವಾರ್ಷಿಕ ಉಚಿತ ಆರೋಗ್ಯ ತಪಾಸಣೆ ಕಡ್ಡಾಯಗೊಳಿಸಲಾಗಿದೆ. ಇದರ ಉದ್ದೇಶ ರೋಗಗಳನ್ನು ಪ್ರಾಥಮಿಕ ಹಂತದಲ್ಲೇ ಪತ್ತೆ ಹಚ್ಚಿ ಕಾರ್ಮಿಕರ ಜೀವ ರಕ್ಷಣೆಗೆ ಒತ್ತು ನೀಡಲಾಗಿದೆ ಎಂದು ಸಚಿವರು ಹೇಳಿದರು.

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಹಾಗೂ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಇಂದು ಸುಮಾರು 101 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಇಎಸ್ಐಸಿ ಆಸ್ಪತ್ರೆ ನಿರ್ಮಿಸಲಾಗಿದ್ದು, ದೊಡ್ಡಬಳ್ಳಾಪುರ ಭಾಗದಲ್ಲಿ ಕಾರ್ಮಿಕರ ಸಂಖ್ಯೆ ಹೆಚ್ಚಿದ್ದು, ಈ ಹಿಂದೆ ಉತ್ತಮ ಚಿಕಿತ್ಸೆಗಾಗಿ ಬೆಂಗಳೂರಿಗೆ ಅಲೆದಾಡುವ ಪರಿಸ್ಥಿತಿ ಇತ್ತು. ಈಗ ಕಾರ್ಮಿಕರಿಗೆ ಇಲ್ಲಿಯೇ ಗುಣಮಟ್ಟದ ವೈದ್ಯಕೀಯ ಚಿಕಿತ್ಸೆ ದೊರೆಯಲಿದೆ. ಪ್ರಸ್ತುತ ಈ ಆಸ್ಪತ್ರೆಗೆ 9 ಜನ ತಜ್ಞ ವೈದ್ಯರು, ನರ್ಸಿಂಗ್ ಸಿಬ್ಬಂದಿ ಹಾಗೂ ತಾಂತ್ರಿಕ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಸದ್ಯಕ್ಕೆ ಇದು ರಾಜಾಜಿನಗರ ಆಸ್ಪತ್ರೆಯ ಮೇಲ್ವಿಚಾರಣೆಯಲ್ಲಿದ್ದು, ಮುಂದಿನ ದಿನಗಳಲ್ಲಿ ಸ್ವತಂತ್ರವಾಗಿ ಕಾರ್ಯನಿರ್ವಹಿಸಲಿದೆ ಎಂದರು.

ದೇಶಾದ್ಯಂತ ಇರುವ 15 ಕೋಟಿ ಕಾರ್ಮಿಕರು ಮತ್ತು ಅವರ ಕುಟುಂಬದವರಿಗೆ ಗುಣಮಟ್ಟದ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ದೇಶದ ಇಎಸ್ಐಸಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರಸ್ತುತ 1,550 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಅದರಲ್ಲಿ ವಿಶೇಷವಾಗಿ ಕಾರ್ಮಿಕರ ಮಕ್ಕಳಿಗಾಗಿ 702 ಸೀಟುಗಳನ್ನು ಮೀಸಲಿಡಲಾಗಿದೆ. ಮುಂಬರುವ ವರ್ಷದಲ್ಲಿ ಕೇಂದ್ರ ಸರ್ಕಾರದಿಂದ ನಿರ್ವಹಿಸಲ್ಪಡುವ ಇಂತಹ ಆಸ್ಪತ್ರೆಗಳ ಸಂಖ್ಯೆ ಹೆಚ್ಚಾಗಲಿದೆ ಎಂದು ಸಚಿವರು ತಿಳಿಸಿದರು.

ಚಿಕ್ಕಬಳ್ಳಾಪುರ ಲೋಕಸಭಾ ಮತಕ್ಷೇತದ ಸಂಸದರಾದ ಡಾ. ಕೆ.ಸುಧಾಕರ ಅವರು ಮಾತನಾಡಿ, ಇಎಸ್ಐಸಿ ಆಸ್ಪತ್ರೆಯು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರಿಗೆ ಉಚಿತ ಆರೋಗ್ಯ ಸೇವೆ ಒದಗಿಸುತ್ತಿದೆ. ದೊಡ್ಡಬಳ್ಳಾಪುರದ ಇಎಸ್ಐಸಿ ಆಸ್ಪತ್ರೆಯು ಐದು ಎಕರೆ ವಿಶಾಲವಾದ ಜಾಗದಲ್ಲಿ ನಿರ್ಮಾಣವಾಗಿದ್ದು, ಕಾರ್ಮಿಕರಿಗೆ ಗುಣಮಟ್ಟದ ವೈದ್ಯಕೀಯ ಒದಗಿಸಲಿದೆ. ಈ ಭಾಗದಲ್ಲಿ 5 ಲಕ್ಷ ಕಾರ್ಮಿಕರು ಇದ್ದು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಜಿಲ್ಲೆಯ ಕಾರ್ಮಿಕರು ಸಹ ವೈದ್ಯಕೀಯ ಸೇವೆ ಪಡೆಯಲು ಸಹಕಾರಿಯಾಗಲಿದೆ ಎಂದರು.

ವೈದ್ಯರು ದಯಾ ಶಕ್ತಿಯಿಂದ ಕಾರ್ಮಿಕ ವರ್ಗಕ್ಕೆ ಅನಾರೋಗ್ಯ ವಾಸಿ ಮಾಡಿ ಆರೋಗ್ಯ ಸೇವೆ ಒದಗಿಸುವ ಮೂಲಕ ಕಾರ್ಮಿಕರ ಕಣ್ಣಿರು ಒರೆಸುವ ಒಳ್ಳೆಯ ಸೇವಾ ಕೆಲಸ ಆಗಬೇಕು ಎಂದು ಹೇಳಿದರು.

ಇದೇ ವೇಳೆ ವರ್ಚುವಲ್ ಮೂಲಕ ಬಳ್ಳಾರಿಯಲ್ಲಿ ನಿರ್ಮಾಣಗೊಳ್ಳಲಿರುವ 100 ಹಾಸಿಗೆಗಳ ಇ.ಎಸ್.ಐ.ಸಿ ಆಸ್ಪತ್ರೆಗೆ ಶಂಕುಸ್ಥಾಪನೆಯನ್ನು ನೆರವೇರಿಸಿದರು‌.

ಕಾರ್ಯಕ್ರಮದಲ್ಲಿ ಇ.ಎಸ್.ಐ.ಸಿ. ಯೋಜನೆಯಡಿ ಅವಲಂಬಿತ ಭತ್ಯೆ, ಶಾಶ್ವತ ಅಂಗವೈಕಲ್ಯ ಭತ್ಯೆ, ಮಾತೃತ್ವ ಭತ್ಯೆಯ ಫಲಾನುಭವಿಗಳಿಗೆ ನಗದು ಸೌಲಭ್ಯದ ಚೆಕ್ ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜು ವೈದ್ಯಕೀಯ ಆಯುಕ್ತರಾದ ಡಾ.ಆರ್ ಶ್ರೀನಿವಾಸ್, ಬಾಶೇಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪ್ರೇಮ ಕುಮಾರ್, ಇಎಸ್ಐಸಿ ಆಸ್ಪತ್ರೆ ವೈದ್ಯರು, ಸಿಬ್ಬಂದಿಗಳು, ಗಣ್ಯರು ಉಪಸ್ಥಿತರಿದ್ದರು.

ರಾಜಕೀಯ

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ ಆರ್. ಅಶೋಕ್ ಪುತ್ರ..!

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಸ್ವರಾಜ್ ದ್ವೀಪದಲ್ಲಿ ಭಾರತದ ಸಾಹಸಯಾನದ ಸುವರ್ಣ ಅಧ್ಯಾಯವೊಂದು ಬರೆಯಲ್ಪಟ್ಟಿದೆ. ಸಮುದ್ರದ ಆಳದಲ್ಲಿ ಭಾರತದ ಅತಿ ದೊಡ್ಡ ತ್ರಿವರ್ಣ ಧ್ವಜವನ್ನು (Tricolor flag) ಯಶಸ್ವಿಯಾಗಿ ಅನಾವರಣಗೊಳಿಸುವ ಮೂಲಕ ‘ಗಿನ್ನೆಸ್

[ccc_my_favorite_select_button post_id="121685"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]