ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ ಆರ್. ಅಶೋಕ್ ಪುತ್ರ..!

India's huge tricolor flag unveiled under the sea

ಬೆಂಗಳೂರು; ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಸ್ವರಾಜ್ ದ್ವೀಪದಲ್ಲಿ ಭಾರತದ ಸಾಹಸಯಾನದ ಸುವರ್ಣ ಅಧ್ಯಾಯವೊಂದು ಬರೆಯಲ್ಪಟ್ಟಿದೆ. ಸಮುದ್ರದ ಆಳದಲ್ಲಿ ಭಾರತದ ಅತಿ ದೊಡ್ಡ ತ್ರಿವರ್ಣ ಧ್ವಜವನ್ನು (Tricolor flag) ಯಶಸ್ವಿಯಾಗಿ ಅನಾವರಣಗೊಳಿಸುವ ಮೂಲಕ ‘ಗಿನ್ನೆಸ್ ವರ್ಲ್ಡ್ ರೆಕಾರ್ಡ್’ ನಿರ್ಮಿಸಲಾಗಿದೆ.

ಈ ಸಾಹಸದಲ್ಲಿ ವಿರೋಧ ಪಕ್ಷದ ನಾಯಕ, ಆರ್. ಅಶೋಕ್ ಪುತ್ರ, ಸಾಹಸ ಕ್ರೀಡಾ ತಜ್ಞ ಶರತ್ ಆರ್. ಅಶೋಕ್ ಅವರು ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಕರ್ನಾಟಕದ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಎತ್ತಿ ಹಿಡಿದಿದ್ದಾರೆ.

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ ಆರ್. ಅಶೋಕ್ ಪುತ್ರ..!

ಶರತ್ ಆರ್. ಅಶೋಕ್ ಅವರು ಸಾಹಸ ಕ್ರೀಡಾ ಕ್ಷೇತ್ರದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ತೊಡಗಿಸಿಕೊಂಡಿದ್ದು, ಅಪಾರ ಅನುಭವ ಹೊಂದಿದ್ದಾರೆ. ಆಟೋಮೊಬೈಲ್ ಇಂಜಿನಿಯರಿಂಗ್ ಪದವೀಧರರಾಗಿರುವ ಇವರು, ಪ್ರಮಾಣೀಕೃತ ‘ಡೈವ್ ಮಾಸ್ಟರ್’ ಮತ್ತು ಸ್ಕೂಬಾ ಇನ್ಸ್ಟ್ರಕ್ಟರ್ ಆಗಿ ಅಂತರಾಷ್ಟ್ರೀಯ ಮಟ್ಟದ ಪರಿಣತಿ ಪಡೆದಿದ್ದಾರೆ.

ಜಲ ಸಾಹಸ ಮಾತ್ರವಲ್ಲದೆ, ಪ್ಯಾರಾಗ್ಲೈಡಿಂಗ್ ಮತ್ತು ಪ್ಯಾರಾಮೋಟರ್ ಪೈಲಟ್ ಆಗಿ ಆಕಾಶದಲ್ಲೂ ಸಾಹಸ ಮೆರೆದಿರುವ ಇವರು, ಮೊಟೊಕ್ರಾಸ್ ಮತ್ತು ಪರ್ವತಾರೋಹಣದಲ್ಲಿಯೂ ಸಿದ್ಧಹಸ್ತರು. ಇಂತಹ ಹತ್ತು ವರ್ಷಗಳ ವೈವಿಧ್ಯಮಯ ಸಾಹಸೀ ಹಿನ್ನೆಲೆಯೇ ಇಂದು ಸಮುದ್ರದಾಳದ ಈ ಕಠಿಣ ಸವಾಲನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಅವರಿಗೆ ಸಹಕಾರಿಯಾಗಿದೆ.

ಮೇ 2ರಂದು ನಡೆದ ಈ ಬೃಹತ್ ಕಾರ್ಯಾಚರಣೆಯಲ್ಲಿ ದೇಶದ ವಿವಿಧ ಭಾಗಗಳ ಸುಮಾರು 200ಕ್ಕೂ ಹೆಚ್ಚು ನುರಿತ ಸ್ಕೂಬಾ ಡೈವರ್‌ಗಳು ಭಾಗವಹಿಸಿದ್ದರು.

ಅಂಡಮಾನ್ ಆಡಳಿತ ಮತ್ತು ಭಾರತೀಯ ರಕ್ಷಣಾ ಪಡೆಗಳ ಸಹಯೋಗದೊಂದಿಗೆ ನಡೆದ ಈ ಅಭಿಯಾನದಲ್ಲಿ, 60×40 ಮೀಟರ್ (2,400 ಚದರ ಮೀಟರ್) ವಿಸ್ತೀರ್ಣದ ಬೃಹತ್ ರಾಷ್ಟ್ರಧ್ವಜವನ್ನು ಅಲೆಗಳ ಅಬ್ಬರ ಮತ್ತು ನೀರಿನ ತೀವ್ರ ಒತ್ತಡದ ನಡುವೆ ಸಮುದ್ರದಾಳದಲ್ಲಿ ಅನಾವರಣಗೊಳಿಸಲಾಯಿತು.

ಈ ಅಪ್ರತಿಮ ಸಾಧನೆಯನ್ನು ಗುರುತಿಸಿ ಅಂಡಮಾನ್ ಮತ್ತು ನಿಕೋಬಾರ್‌ನ ಲೆಫ್ಟಿನೆಂಟ್ ಗವರ್ನರ್ ಡಿ.ಕೆ. ಜೋಶಿ ಅವರು ಗಿನ್ನೆಸ್ ವಿಶ್ವ ದಾಖಲೆಯ ಪ್ರಮಾಣಪತ್ರವನ್ನು ನೀಡಿ ಗೌರವಿಸಿದ್ದಾರೆ.

ಈ ಐತಿಹಾಸಿಕ ಕ್ಷಣದ ಬಗ್ಗೆ ಪ್ರತಿಕ್ರಿಯಿಸಿರುವ ಶರತ್ ಅಶೋಕ್, “ನಮ್ಮ ತ್ರಿವರ್ಣ ಧ್ವಜವು 140 ಕೋಟಿ ಭಾರತೀಯರ ಶಕ್ತಿ ಮತ್ತು ಏಕತೆಯ ಪ್ರತೀಕ. ಸಾಹಸವು ನನ್ನ ಆಸಕ್ತಿಯಾಗಿದ್ದು, ಅಲೆಗಳ ಅಂತರಾಳದಲ್ಲಿ ರಾಷ್ಟ್ರಧ್ವಜವನ್ನು ಅರಳಿಸಿದ ಆ ಕ್ಷಣ ನನ್ನ ಬದುಕಿನ ಅತ್ಯಂತ ಗೌರವದ ಸಂದರ್ಭ. ವನ್ಯಜೀವಿ ಸಂರಕ್ಷಣೆ ಮತ್ತು ಸಾಹಸ ಕ್ರೀಡೆಗಳಲ್ಲಿನ ನನ್ನ ಅನುಭವವು ಇಂತಹ ರಾಷ್ಟ್ರಮಟ್ಟದ ಸಾಧನೆಯಲ್ಲಿ ಭಾಗಿಯಾಗಲು ನನಗೆ ಸ್ಫೂರ್ತಿ ನೀಡಿದೆ” ಎಂದು ತಿಳಿಸಿದ್ದಾರೆ.

ರಾಜಕೀಯ

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ ಆರ್. ಅಶೋಕ್ ಪುತ್ರ..!

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಸ್ವರಾಜ್ ದ್ವೀಪದಲ್ಲಿ ಭಾರತದ ಸಾಹಸಯಾನದ ಸುವರ್ಣ ಅಧ್ಯಾಯವೊಂದು ಬರೆಯಲ್ಪಟ್ಟಿದೆ. ಸಮುದ್ರದ ಆಳದಲ್ಲಿ ಭಾರತದ ಅತಿ ದೊಡ್ಡ ತ್ರಿವರ್ಣ ಧ್ವಜವನ್ನು (Tricolor flag) ಯಶಸ್ವಿಯಾಗಿ ಅನಾವರಣಗೊಳಿಸುವ ಮೂಲಕ ‘ಗಿನ್ನೆಸ್

[ccc_my_favorite_select_button post_id="121685"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]