ಮೋದಿ ಅವರ ನಾಯಕತ್ವಕ್ಕೆ ಶಕ್ತಿ ತುಂಬುವ ಫಲಿತಾಂಶ: ಬಿ.ವೈ.ವಿಜಯೇಂದ್ರ ವಿಶ್ಲೇಷಣೆ

Results that will strengthen Modiji's leadership: B.Y. Vijayendra

ಬೆಂಗಳೂರು: ಪಶ್ಚಿಮ ಬಂಗಾಲ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಗೆಲುವು ಒಂದು ಕಡೆ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ದೊಡ್ಡ ಶಕ್ತಿಯನ್ನು ತುಂಬಿದಂತಾಗಿದೆ. ನಮ್ಮ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್‍ ಅವರ ಮೊದಲ ಚುನಾವಣೆ ಇದಾಗಿದೆ. ಬಹುದೊಡ್ಡ ಸಂದೇಶವನ್ನು ನೀಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ವಿಶ್ಲೇಷಿಸಿದರು.

ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಡೀ ದೇಶದಲ್ಲಿ ಅಮಿತ್ ಶಾ ಅವರು ಚುನಾವಣಾ ಚಾಣಕ್ಯ ಎಂದು ಪ್ರತಿಯೊಬ್ಬರು ಮಾತನಾಡುತ್ತಿದ್ದಾರೆ. ಅಮಿತ್ ಶಾ ಅವರ ತಂತ್ರಗಾರಿಕೆಯೂ ಈ ಗೆಲುವಿನ ಹಿಂದಿದೆ ಎಂದರು.

ಪಶ್ಚಿಮ ಬಂಗಾಲದ ಗೆಲುವಿಗಾಗಿ ಅಲ್ಲಿನ ಕಾರ್ಯಕರ್ತರಿಗೆ ನಾವು ದೊಡ್ಡ ಸಲಾಂ ಹೇಳಬೇಕಿದೆ. ಅಲ್ಲಿ ಹಲವು ದಶಕಗಳಿಂದ ನಮ್ಮ ಕಾರ್ಯಕರ್ತರ ಮೇಲೆ ನಿರಂತರ ದಬ್ಬಾಳಿಕೆ ಆಗುತ್ತಿತ್ತು. ಇದೆಲ್ಲದಕ್ಕೂ ಇತಿಶ್ರೀ ಹಾಕುವ ಕೆಲಸವನ್ನು ನಮ್ಮ ಕಾರ್ಯಕರ್ತರು ಮಾಡಿದ್ದಾರೆ ಎಂದರಲ್ಲದೇ 3 ರಾಜ್ಯಗಳ ಕಾರ್ಯಕರ್ತರಿಗೆ ವಂದನೆ, ಅಭಿನಂದನೆ ತಿಳಿಸುವುದಾಗಿ ಹೇಳಿದರು.

ಎರಡೂ ಕ್ಷೇತ್ರಗಳಲ್ಲಿ ನಮ್ಮ ಕಾರ್ಯಕರ್ತರು ಸಾಕಷ್ಟು ಶ್ರಮ ಹಾಕಿದ್ದಾರೆ

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳ ಉಪ ಚುನಾವಣೆಗಳ ಕುರಿತು ಪ್ರಸ್ತಾಪಿಸಿದ ಅವರು, ದಾವಣಗೆರೆ ದಕ್ಷಿಣದಲ್ಲಿ ಕಡಿಮೆ ಅಂತರದಲ್ಲಿ ನಿರ್ಧಾರ ಆಗಲಿದೆ. ದಾವಣಗೆರೆಯಲ್ಲಿ ಬಿಜೆಪಿ ಗೆದ್ದೇ ಗೆಲ್ಲುವ ವಿಶ್ವಾಸ ಇದೆ ಎಂದು ತಿಳಿಸಿದರು.

ಬಾಗಲಕೋಟೆಯ ಸೋಲನ್ನು ನಿರೀಕ್ಷಿಸಿರಲಿಲ್ಲ. ಹಿಂದೆ ಕಾಂಗ್ರೆಸ್ ಪಕ್ಷ ಗೆದ್ದಿದ್ದರೂ ಈ ಬಾರಿ ಮತದಾರರು ನಮ್ಮ ಕೈಹಿಡಿಯುವ ವಿಶ್ವಾಸ ಇತ್ತು. ಎರಡೂ ಕ್ಷೇತ್ರಗಳಲ್ಲಿ ನಮ್ಮ ಕಾರ್ಯಕರ್ತರು ಸಾಕಷ್ಟು ಶ್ರಮ ಹಾಕಿದ್ದಾರೆ ಎಂದು ತಿಳಿಸಿದರು.
ಇದರ ಮಿಗಿಲಾಗಿ ಮುಖ್ಯಮಂತ್ರಿಯವರು ಬಾಗಲಕೋಟೆಯಲ್ಲಿ ಬಂದು 15 ದಿನ ಬೀಡು ಬಿಟ್ಟಿದ್ದರು. ಸಚಿವ ಸಂಪುಟದ ಸದಸ್ಯರೂ ಬೀಡು ಬಿಟ್ಟಿದ್ದರು. ಆದರೂ ಗೆಲುವಿನ ವಿಶ್ವಾಸ ನಮಗಿತ್ತು. ಆದರೆ, ಬಾಗಲಕೋಟೆಯಲ್ಲಿ ನಮಗೆ ಹಿನ್ನಡೆ ಆಗಿದೆ ಎಂಬುದನ್ನು ಒಪ್ಪಿಕೊಳ್ಳುವುದಾಗಿ ಹೇಳಿದರು.

ಉಪ ಚುನಾವಣೆ ಗೆದ್ದಿದೆ ಎಂದರೆ ಕಾಂಗ್ರೆಸ್ ಪಕ್ಷದ ಕಡೆ ಒಲವಿದೆ ಎನ್ನಲು ಸಾಧ್ಯವಿಲ್ಲ ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು. ಬಾಗಲಕೋಟೆಯಲ್ಲಿನ ಹಿನ್ನಡೆ ಕುರಿತು ನಾವು ಮುಖಂಡರ ಜೊತೆ ಕುಳಿತು ಚರ್ಚೆ ಮಾಡಬೇಕಾಗಿದೆ. ತದನಂತರ ನಮ್ಮ ಸಂಘಟಿತ ಕಾರ್ಯದ ಕುರಿತು ಕಾರ್ಯತಂತ್ರ ಮಾಡುತ್ತೇವೆ ಎಂದು ನುಡಿದರು.

ಎರಡೂ ಕ್ಷೇತ್ರಗಳಲ್ಲಿ ಯಾವುದೇ ಸಣ್ಣ ಒಡಕಿಲ್ಲದೇ, ಸ್ಥಳೀಯ ಮುಖಂಡರು ತಮ್ಮ ಸಮಸ್ಯೆಗಳನ್ನು ಬದಿಗಿಟ್ಟು ಪಕ್ಷದ ಅಭ್ಯರ್ಥಿ ಪರವಾಗಿ ಒಟ್ಟಾಗಿ, ಒಂದಾಗಿ ಎಲ್ಲರೂ ಶ್ರಮ ಹಾಕಿದ್ದಾರೆ. ಪಕ್ಷದ ನಾಯಕರು ಸಂಘಟಿತರಾಗಿ ಶ್ರಮ ಹಾಕಿದ್ದಾರೆ. ನಾವು ಕೂಡ ಕೈಜೋಡಿಸಿದ್ದೇವೆ. ಕಾರ್ಯಕರ್ತರೂ ಹಗಲೂ ರಾತ್ರಿ ಶ್ರಮ ಹಾಕಿದ್ದಾರೆ ಎಂದು ಅವರು ವಿವರಿಸಿದರು.

ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿಯ ಆಡಳಿತಕ್ಕೆ, ದೇಶದ ಸುಭದ್ರತೆಗೆ ಸಿಕ್ಕ ಗೆಲುವು: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿಯ ಆಡಳಿತಕ್ಕಾಗಿ ಹಾಗೂ ದೇಶದ ಸುಭದ್ರತೆಗಾಗಿ ಜನರು ಬಿಜೆಪಿಯನ್ನು ಗೆಲ್ಲಿಸಿದ್ದಾರೆ. ಈ ಚುನಾವಣಾ ಫಲಿತಾಂಶದಿಂದ ದೇಶದಲ್ಲಿ ಕಾಂಗ್ರೆಸ್‌ ಮುಕ್ತವಾಗುವ ಲಕ್ಷಣ ಕಂಡುಬಂದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.

ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ದೇಶವನ್ನು ಭದ್ರವಾಗಿ ಇಡಲು ಪ್ರಧಾನಿ ನರೇಂದ್ರ ಮೋದಿಯವರಿಂದ ಮಾತ್ರ ಸಾಧ್ಯ ಎಂದು ಮತದಾರರು ಸಂದೇಶ ನೀಡಿದ್ದಾರೆ. ಮುಖ್ಯವಾಗಿ ಪಶ್ಚಿಮ ಬಂಗಾಳದಲ್ಲಿ ಆಗಿರುವ ದೊಡ್ಡ ಬದಲಾವಣೆಯ ಬಗ್ಗೆ ಎಲ್ಲ ಕಡೆ ಚರ್ಚೆ ನಡೆಯುತ್ತಿದೆ. ಪಶ್ಚಿಮ ಬಂಗಾಳವನ್ನು ಭಯೋತ್ಪಾದಕರ ಹೆಬ್ಬಾಗಿಲಾಗಿಸಿದ, 2 ಕೋಟಿ ಬಾಂಗ್ಲಾ ವಲಸಿಗರಿಗೆ ಗುರುತಿನ ಚೀಟಿ ಕೊಟ್ಟ ಮಮತಾ ಬ್ಯಾನರ್ಜಿ ಅವರ ರಾಜಕೀಯ ಬದುಕು ಅಂತ್ಯಗೊಂಡಿದೆ.

ದೇಶದ ಭದ್ರತೆಗೆ ಪ್ರಧಾನಿ ನರೇಂದ್ರ ಮೋದಿಯೇ ಸೂಕ್ತ ಎಂದು ಜನರು ತೀರ್ಮಾನಿಸಿದ್ದಾರೆ. ಅಲ್ಲಿ ಪ್ರತಿ ದಿನ ಟಿಎಂಸಿ ಗೂಂಡಾಗಳು ಜನರ ಮೇಲೆ, ಅಧಿಕಾರಿಗಳ ಮೇಲೆ ಹಲ್ಲೆ ಮಾಡುತ್ತಿದ್ದರು. ಅಂತಹ ಪಕ್ಷವನ್ನು ಜನರು ತಿರಸ್ಕರಿಸಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಮುಕ್ತ ದೇಶವಾಗಲು ಸಿದ್ಧತೆ ನಡೆದಿದೆ ಎಂದರು.

ದೇಶವಿರೋಧಿ ಚಟುವಟಿಕೆ ಮಾಡುವವರನ್ನು, ದೇಶದ್ರೋಹಿಗಳನ್ನು ದೇಶದಿಂದ ಹೊರಕ್ಕೆ ಹಾಕಲು ಮತದಾರರ ಪಟ್ಟಿಯ ಪರಿಷ್ಕರಣೆ ನೆರವಾಗುತ್ತದೆ. ಅಂಥವರು ದೇಶದಿಂದ ಹೊರಗೆ ಹೋದಾಗಲೇ ದೇಶ ಸಮೃದ್ಧವಾಗುತ್ತದೆ. ನಿಜವಾದ ಮತದಾರರು ದೇಶದ ಅಭಿವೃದ್ಧಿಗೆ ಮತ ನೀಡುತ್ತಾರೆ. ಹೊರಗಿನ ದೇಶದವರು ಇದ್ದರೆ, ದೇಶದ್ರೋಹಿ ಕೆಲಸ ಮಾಡುವ ಪಕ್ಷಕ್ಕೆ ಮತ ನೀಡುತ್ತಾರೆ. ಮತದಾರರ ಪಟ್ಟಿಯ ಪರಿಷ್ಕರಣೆ ಸರಿಯಾಗಿ ನಡೆದಿದೆ.

ಬೆಂಗಳೂರಿನಲ್ಲೂ ಹೀಗೆಯೇ ನಡೆಯುತ್ತಿದೆ. ರಾಮನಗರ, ಚನ್ನಪಟ್ಟಣ ಮೊದಲಾದ ಭಾಗಗಳಿಂದ ಬೆಂಗಳೂರಿಗೆ ಬಂದು ಮತ ಚಲಾಯಿಸುತ್ತಾರೆ. ಮತದಾರರ ಪಟ್ಟಿ ಪರಿಷ್ಕರಣೆಯಿಂದ ಬಿಜೆಪಿಗೆ ಲಾಭವೇ ನಷ್ಟವೇ ಎನ್ನುವ ಪ್ರಶ್ನೆಯೇ ಬರುವುದಿಲ್ಲ. ಇದು ದೇಶದ ಭದ್ರತೆಗೆ ಸಂಬಂಧಿಸಿದ ವಿಚಾರವಾಗಿದ್ದು, ಈ ಪ್ರಕ್ರಿಯೆಯಿಂದ ದೇಶಕ್ಕೆ ಲಾಭವಾಗುತ್ತದೆ ಎಂದರು.

ಅಸ್ಸಾಂ, ಪುದುಚೇರಿ, ಪಶ್ಚಿಮ ಬಂಗಾಳ ರಾಜ್ಯಗಳ ಚುನಾವಣಾ ಫಲಿತಾಂಶದಿಂದ ಕರ್ನಾಟಕದ ಕಾಂಗ್ರೆಸ್‌ ಸರ್ಕಾರ ಪಾಠ ಕಲಿಯಬೇಕಿದೆ. ಗ್ಯಾರಂಟಿಗಳ ಹೆಸರಲ್ಲಿ ಅಧಿಕಾರಕ್ಕೆ ಬಂದು, ಜನರ ಮೇಲೆ ತೆರಿಗೆಗಳ ಹೊರೆ ಹೇರಿ, ರಾಜ್ಯವನ್ನು ಸಾಲದ ಸುಳಿಯಲ್ಲಿ ಸಿಲುಕಿಸಿರುವ ಕಾಂಗ್ರೆಸ್‌ ಮುಂದಿನ ಚುನಾವಣೆಯಲ್ಲಿ ನೆಲಕಚ್ಚಲಿದೆ ಎಂಬುದು ಸ್ಪಷ್ಟವಾಗಿದೆ. ರೈತರ ಆತ್ಮಹತ್ಯೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವು, ಬೆಂಗಳೂರಿನಲ್ಲಿ ಮಳೆಯಿಂದಾಗಿ ಜೀವಹಾನಿ, ಸಾರಿಗೆ ನೌಕರರು ಸೇರಿದಂತೆ ಎಲ್ಲ ಸಿಬ್ಬಂದಿಗೆ ವೇತನ ಬಾಕಿ, ಅಬಕಾರಿ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಹೀಗೆ ಅನೇಕ ತಪ್ಪುಗಳ ಮೂಲಕ ಕಾಂಗ್ರೆಸ್‌ ಜನರ ಕೆಂಗಣ್ಣಿಗೆ ಗುರಿಯಾಗಿದೆ.

ಆಡಳಿತದ ಕಡೆಗೆ ಗಮನ ಕೊಡದೆ ಸಿಎಂ ಕುರ್ಚಿ ಕಚ್ಚಾಟದಲ್ಲೇ ನಿರತರಾಗಿರುವ ಕಾಂಗ್ರೆಸ್‌ ನಾಯಕರಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜನರು ಉತ್ತರ ನೀಡಲಿದ್ದಾರೆ. ಪಶ್ಚಿಮ ಬಂಗಾಳದಂತೆಯೇ ಕರ್ನಾಟಕದಲ್ಲೂ ಕಾಂಗ್ರೆಸ್‌ ಸೋತು ಮನೆಗೆ ಹೋಗಲಿದೆ ಎಂದರು.

ಕರ್ನಾಟಕದಲ್ಲಿ ಉಪಚುನಾವಣೆ ಸಿಂಪತಿ ಮೇಲೆ ನಡೆದಿದೆ. ಶಾಸಕರು ನಿಧನರಾಗಿದ್ದರಿಂದ ಆ ದಯೆಯ ಮೇಲೆ ಮತ ಕೇಳಲಾಗಿದೆ. ಬಾಗಲಕೋಟೆ ಹಾಗೂ ದಾವಣಗೆರೆಯಲ್ಲಿ ಬಿಜೆಪಿಗೆ ಜನರಿಂದ ಉತ್ತಮ ಬೆಂಬಲ ಸಿಕ್ಕಿದೆ. ಕಾಂಗ್ರೆಸ್‌ನಲ್ಲಿ ಆಗಿರುವ ಒಡಕಿನಿಂದ ಬಿಜೆಪಿಗೆ ಯಾವುದೇ ಲಾಭವಿಲ್ಲ. ಕಾಂಗ್ರೆಸ್‌ ಪಕ್ಷ ಮುಸ್ಲಿಮರಿಗೆ ಅನ್ಯಾಯ ಮಾಡುತ್ತಿದೆ ಎಂದು ಈಗಾದರೂ ಗೊತ್ತಾಗಿದೆ. ಈ ಬಗ್ಗೆ ಮುಸ್ಲಿಮರಲ್ಲಿ ಹೆಚ್ಚು ಅರಿವು ಮೂಡಬೇಕಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್‌ ಶಾ, ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಹಾಗೂ ಬಿಜೆಪಿಯ ಮುಖಂಡರು, ಕಾರ್ಯಕರ್ತರ ಒಟ್ಟಾದ ಶ್ರಮದಿಂದಾಗಿ ಕಮಲ ಇನ್ನಷ್ಟು ಅರಳಿ ಬಲವಾಗಿದೆ. ಚುನಾವಣೆಯಲ್ಲಿ ಶ್ರಮಿಸಿದ ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ. ಸಿ.ಎನ್. ಅಶ್ವಥನಾರಾಯಣ್, ವಿಧಾನಪರಿಷತ್ ಸದಸ್ಯರಾದ ಸಿ.ಟಿ. ರವಿ, ಪ್ರತಾಪ್ ಸಿಂಹ ನಾಯಕ್, ಶಾಸಕ ಹರೀಶ್ ಪೂಂಜಾ ಅವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ರಾಜಕೀಯ

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿಸಿಎಂ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿಸಿಎಂ ಡಿ.ಕೆ.

“ಶೃಂಗೇರಿ ಮರು ಎಣಿಕೆ ಫಲಿತಾಂಶವು ಇಡೀ ದೇಶಕ್ಕೇ ಮಾರಕ. ಬಿಜೆಪಿಯಲ್ಲಿ ಇಷ್ಟರಮಟ್ಟಿಗಿನ ಕ್ರಿಮಿನಲ್ ಗಳಿದ್ದಾರೆ ಎಂದು ನಾನು ಎಣಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="121720"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]