ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ

Artists receiving monthly allowances submit lifetime certificates

ಬೆಂ. ಗ್ರಾ ಜಿಲ್ಲೆ: ಕೃಷಿ ಇಲಾಖೆಯಲ್ಲಿ ಕೇಂದ್ರ ಪುರಸ್ಕೃತ ಆತ್ಮ ಯೋಜನೆಯಡಿ ನೇರಗುತ್ತಿಗೆ ಆಧಾರದ ಮೇಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ (Assistant Technical Manager) ಒಂದು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅಭ್ಯರ್ಥಿಗಳು ಕೃಷಿ ಮತ್ತು ಸಂಬಂಧಿತ ವಲಯದಲ್ಲಿ ಪದವಿ ಅಥವಾ ‌ಸ್ನಾತಕೋತ್ತರ ಪದವಿ ಹೊಂದಿರಬೇಕು. ಕನಿಷ್ಠ 01 ವರ್ಷ ಕೃಷಿ ಅಥವಾ ಕೃಷಿ ಸಂಬಂಧಿತ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿರಬೇಕು.

ಆಸಕ್ತರು ಅಗತ್ಯ ದಾಖಲಾತಿಗಳು ಹಾಗೂ ತಮ್ಮ ಬಯೋಡೇಟಾದೊಂದಿಗೆ ಮೇ. 22 ರೊಳಗೆ ಕೃಷಿ ನಿರ್ದೇಶಕರ ಕಛೇರಿ, ಕೊಠಡಿ ಸಂಖ್ಯೆ 208 & 209, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಸಲ್ಲಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶೃಂಗೇರಿ ಮರುಎಣಿಕೆ: ಕಾಂಗ್ರೆಸ್ ಅಭ್ಯರ್ಥಿಗೆ ಬಿದ್ದ ಮತಗಳನ್ನು ತಿದ್ದಲಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಶೃಂಗೇರಿ ಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬಿದ್ದಿರುವ ಅಂಚೆ ಮತಗಳನ್ನು ತಿದ್ದುವ ಮೂಲಕ ಮರುಎಣಿಕೆಯಲ್ಲಿ ಅಸಿಂಧುಗೊಳಿಸಲಾಗಿದೆ. ಇಡೀ ದೇಶದಲ್ಲಿ ಇಂತಹ ಅಪರಾಧ ನಡೆದಿಲ್ಲ. ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

ಶೃಂಗೇರಿ ಕ್ಷೇತ್ರದ ಮರುಎಣಿಕೆಯ ಬಗ್ಗೆ ಕೇಳಿದಾಗ, ಚುನಾವಣೆ ಮತ ಎಣಿಕೆ ಸಮಯದಲ್ಲಿ ಪ್ರತಿ ಅಂಚೆ ಮತವನ್ನು ತೆರೆದು ಎರಡೂ ಪಕ್ಷಗಳ ಏಜೆಂಟರು ಹಾಗೂ ಅಧಿಕಾರಿಗಳಿಗೆ ತೋರಿಸಿ ಅದನ್ನು ಮಾನ್ಯ ಮಾಡಿ ಎಣಿಕೆ ಮಾಡಲಾಗಿರುತ್ತದೆ.

ಈ ರೀತಿ ಮತ ಎಣಿಕೆ ಮಾಡಿದ ಬಳಿಕ ಬಿಜೆಪಿ ಅಭ್ಯರ್ಥಿ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಅಂಚೆ ಮತಗಳನ್ನು ತಿದ್ದಲಾಗಿದೆ. ಹೀಗಾಗಿಯೇ ಅವರು ನಿರ್ದಿಷ್ಟ ಮತಗಳ ಬಂಡಲ್ ಅನ್ನೇ ಮರು ಎಣಿಕೆ ಮಾಡಿ ಎಂದು ಪಟ್ಟು ಹಿಡಿದಿದ್ದರು.

ಅಧಿಕಾರಿಗಳು ಹಾಗೂ ಬಿಜೆಪಿ ಅಭ್ಯರ್ಥಿ ಈ ಅಕ್ರಮದಲ್ಲಿ ಭಾಗಿಯಾಗಿದ್ದು, ಗಂಭೀರವಾದ ತನಿಖೆ ನಡೆಯಬೇಕಿದೆ. ಚುನಾವಣಾ ಆಯೋಗವು ಈ ವಿಚಾರದಲ್ಲಿ ನ್ಯಾಯ ಒದಗಿಸಬೇಕಿದೆ. ಇದು ದೇಶದಲ್ಲೇ ಅತಿ ದೊಡ್ಡ ಷಡ್ಯಂತ್ರವಾಗಿದೆ.

ಕರ್ನಾಟಕದಲ್ಲಿ ಬಿಜೆಪಿ ಇಂತಹ ಕೆಲಸದಲ್ಲಿ ಭಾಗಿಯಾಗಿದ್ದು, ನಾವು ಕಾನೂನಾತ್ಮಕ ಹೋರಾಟ ಮಾಡುತ್ತೇವೆ. ರಾಜಕೀಯ ಹೇಗೆ ಮಾಡಬೇಕು ಎಂದು ನಮಗೆ ಗೊತ್ತಿದೆ ಎಂದು ಕಿಡಿಕಾರಿದರು.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]