ದೊಡ್ಡಬಳ್ಳಾಪುರ: ಚನ್ನವೀರನಹಳ್ಳಿಯಲ್ಲಿ ಸರ್ಕಾರಿ PU ಕಾಲೇಜು ಆರಂಭ; ದಾಖಲಾತಿಗಾಗಿ ಪ್ರಾಂಶುಪಾಲರ ಅವಿರತ ಶ್ರಮ

Government PUC college opens in Channaveeranahalli

ದೊಡ್ಡಬಳ್ಳಾಪುರ: ತಾಲೂಕಿನ ಚನ್ನವೀರನಹಳ್ಳಿಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು (PUC) 2026-27ನೇ ಸಾಲಿನಿಂದ ಆರಂಭವಾಗುತ್ತಿದ್ದು, ವಿದ್ಯಾರ್ಥಿಗಳ ನೇಮಕಾತಿಗಾಗಿ ಪ್ರಾಂಶುಪಾಲರು ಹಾಗೂ ಸಾಸಲು ಹೋಬಳಿ ಯುವಕರು ಅವಿರತ ಶ್ರಮಿಸುತ್ತಿದ್ದಾರೆ.

ಹೌದು ದೊಡ್ಡಬಳ್ಳಾಪುರ ತಾಲೂಕು ಕೇಂದ್ರದಿಂದ 26 ಕಿಮೀ ದೂರದಲ್ಲಿರುವ ಸಾಸಲು ಹೋಬಳಿಗೊಂದು ಪಿಯು ಕಾಲೇಜು ಬೇಕೆಂಬುದು ಬಹು ವರ್ಷಗಳ ಬೇಡಿಕೆಯಾಗಿದ್ದು, ಶಾಸಕ ಟಿ.ವೆಂಕಟರಮಣಯ್ಯ ಅವರು ಶಾಸಕರಾಗಿದ್ದ ಸಂದರ್ಭದಲ್ಲಿ ಮಂಜೂರಾಗಿದ್ದ ಕಾಲೇಜಿಗೆ, ಈಗ ಧೀರಜ್ ಮುನಿರಾಜು ಅವರು ಶಾಸಕರಾದ ಬಳಿಕ ಮತ್ತೆ ಮರು ಜೀವ ದೊರೆತಿದೆ.

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಇಲಾಖೆ 2026-27 ನೇ ಶೈಕ್ಷಣಿಕ ಸಾಲಿನಿಂದ ನೂತನವಾಗಿ ಪ್ರಥಮ ಪಿಯುಸಿ (PUC) ಕಾಲೇಜು ಆರಂಭಿಸುತ್ತಿದ್ದು, ವಾಣಿಜ್ಯ ವಿಭಾಗ (EBACS) ಆರಂಭಿಸುತ್ತಿದೆ.

ಚನ್ನವೀರನಹಳ್ಳಿಯ ನೂತನ ಪಿಯು ಕಾಲೇಜಿಗೆ ಪ್ರಾಂಶುಪಾಲರಾಗಿ ಸಾಸಲು ಹೋಬಳಿಯವರೇ ಆದ ಶ್ರೀರಾಮನಹಳ್ಳಿಯ ಕೇಶವ ಮೂರ್ತಿ ಎಸ್.ಎನ್ ಅವರನ್ನು ನೇಮಿಸಿದ್ದು, ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ, ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಗತಿಯಲ್ಲಿದೆ.

ಇನ್ನೂ ಚನ್ನವೀರನಹಳ್ಳಿಯಲ್ಲಿನ ಪ್ರೌಢಶಾಲಾ ಆವರಣದಲ್ಲಿ ಆರಂಭಿಸಲಾಗುತ್ತಿರುವ ನೂತನವಾಗಿ ಕಾಲೇಜಿನಲ್ಲಿ ಅರ್ಹತೆಯುಳ್ಳ ಅನುಭವಿ ಉಪನ್ಯಾಸಕರ ನೇಮಕ, ವಿದ್ಯಾರ್ಥಿ ವೇತನ ಸೇರಿದಂತೆ ಎಲ್ಲಾ ಸರ್ಕಾರಿ ಸೌಲಭ್ಯ, ವಿಶಾಲ ಆಟದ ಮೈದಾನ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಯೋಜಿತ ಕಲಿಕೆ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಅವಕಾಶ, ಪ್ರತಿ ವಿದ್ಯಾರ್ಥಿಗಳಿಗೂ ವೈಯಕ್ತಿಕ ಗಮನ ನೀಡುವುದಾಗಿ ಪ್ರಾಂಶುಪಾಲರಾದ ಕೇಶವ ಮೂರ್ತಿ ಭರವಸೆ ನೀಡಿದ್ದಾರೆ.

ಇನ್ನೂ ಪ್ರಥಮವಾಗಿ ಆರಂಭವಾಗುತ್ತಿರುವ ಕಾಲೇಜಿಗೆ ದಾಖಲಾತಿಗಾಗಿ, ಸಾಸಲು ಗ್ರಾಮಪಂಚಾಯಿತಿ ಹಾಗೂ ಆರೂಢಿ ಗ್ರಾಮಪಂಚಾಯಿತಿ ವ್ಯಾಪ್ತಿಯ ವಿದ್ಯಾರ್ಥಿಗಳ ಮನೆ ಮನೆಗಳಿಗೆ ಪ್ರಾಂಶುಪಾಲರಾದ ಕೇಶವ ಮೂರ್ತಿ ಹಾಗೂ ಸಾಸಲು ಹೋಬಳಿಯ ಯುವಕರು ಭೇಟಿ ನೀಡಿ, ಪೋಷಕರು, ವಿದ್ಯಾರ್ಥಿಗಳ ಮನವೊಲಿಸುತ್ತಿದ್ದು, ಶತಗತಾಯ ಸಾಸಲು ಹೋಬಳಿಯಲ್ಲಿ ಪ್ರಾರಂಭವಾಗುತ್ತಿರುವ ನೂತನ ಕಾಲೇಜಿಗೆ ಹೆಚ್ಚಿನ ದಾಖಲಾತಿ ಮಾಡಿಸಲು ಶ್ರಮಿಸುತ್ತಿದ್ದಾರೆ.

ಅದ್ಧೂರಿಯಾಗಿ ನೆರವೇರಿದ ಹೊಸಹಳ್ಳಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮರಥೋತ್ಸವ

Grand Sri Lakshmi Narasimha Swamy Brahmarathotsava in Hosahalli
Grand Sri Lakshmi Narasimha Swamy Brahmarathotsava in Hosahalli

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿನ ಇತಿಹಾಸ ಪ್ರಸಿದ್ದ ಶ್ರೀಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವ (Sri Lakshminarasimha Swamy Brahmarathotsava) ಸಾವಿರಾರು ಭಕ್ತರ ಸಮ್ಮುಖದಲ್ಲಿ ಬುಧವಾರ ಮಧ್ಯಾಹ್ನ ವಿಜೃಂಭಣೆಯಿಂದ ನೆರವೇರಿತು.

ಬ್ರಹ್ಮರಥೋತ್ಸವದ ಪ್ರಯುಕ್ತ ದೇವಾಲಯದಲ್ಲಿ ಬೆಳಗ್ಗಿನಿಂದಲೂ ಅಭಿಷೇಕ, ಅರ್ಚನೆ ನೆಡೆದು ಶ್ರೀಲಕ್ಷ್ಮೀನರಸಿಂಹಸ್ವಾಮಿಯನ್ನು ದೇವಾಲಯದಿಂದ ತಂದು ಪಂಚ ಕಳಸ ಊಡಿದ ರಥದಲ್ಲಿ ಪ್ರತಿಸ್ಠಾಪಿಸುತಿದ್ದಂತೆ, ಮಧ್ಯಾಹ್ನ 3ಕ್ಕೆ ವೇದಬ್ರಹ್ಮರ ಮಂತ್ರ ಘೋಷಗಳೊಂದಿಗೆ ರಥ ಮುಂದೆ ಸಾಗುತಿದ್ದಂತೆ, ಜಯಘೋಷ ಹಾಕುತ್ತ ಹರಕೆ ಹೊತ್ತ ಭಕ್ತರು, ಭಕ್ತಿ ಭಾವದಿಂದ ಬಾಳೆಹಣ್ಣು, ದವನ ಎಸೆದು ಹರಕೆ ತೀರಿಸಿದರು.

ರಥೋತ್ಸವದಲ್ಲಿ ಭಕ್ತರ ಜೈಕಾರ, ತಮಟೆ ವಾದ್ಯಗಳ ಸದ್ದು ಮುಗಿಲು ಮುಟ್ಟುವಂತಿತ್ತು.
ರಥವನ್ನು ಗ್ರಾಮದ ಮುಖ್ಯ ಬೀದಿಯಿಂದ ಗೊಡ್ಡರಾಯಿಕಲ್ಲಿನವರೆಗೆ ಎಳೆದು ತಂದರು.

ಬ್ರಹ್ಮರಥೋತ್ಸವದ ಅಂಗವಾಗಿ ರಥ ಹಾಗೂ ಗರ್ಭಗುಡಿಯಲ್ಲಿನ ದೇವರಿಗೆ ವಿಶೇಷವಾಗಿ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು.

ವಿವಿಧ ಸಮುದಾಯದವತಿಯಿಂದ ಬ್ರಹ್ಮರಥೊತ್ಸವದ ಬರುವ ಭಕ್ತಾಧಿಗಳಿಗೆ ಪಾನಕ, ಮಜ್ಜಿಗೆ, ಹೆಸರುಬೇಳೆ ಹಾಗೂ ಪ್ರಸಾದ ವಿತರಿಸಲು ರಸ್ತೆ ಬದಿಗಳಲ್ಲಿ ಶಾಮಿಯಾನ, ಟೆಂಟ್ ಮತ್ತು ಅರವಂಟಿಕೆಗಳ ವ್ಯವಸ್ಥೆ ಮಾಡಿದ್ದರು.

ಶ್ರೀ ಲಕ್ಷ್ಮೀನರಸಿಂಹ ಸ್ವಾಮಿಯ ಜಾತ್ರಾ ಮಹೋತ್ಸವ ಮೇ.04 ಆರಂಭವಾಗಿ ಮೇ.08ರ ವರೆಗೆ ನಡೆಯಲಿದೆ.

ಐದು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವದ ಅಂಗವಾಗಿ ನಿನ್ನೆ ಕಲ್ಯಾಣೋತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯತ್ತಿದ್ದು, ವಿಶೇಷ ಅಲಂಕಾರ, ಅಭಿಷೇಕ, ಪೂಜೆ, ಆರತಿ ಕಾರ್ಯಕ್ರಮ ನೆರವೇರಿಸಲಾಗಿದೆ.

ಇಂದು ರಾತ್ರಿ ಲಕ್ಷ್ಮೀನರಸಿಂಹಸ್ವಾಮಿ ಕಲಾತಂಡದವರಿಂದ ‘ಕುರುಕ್ಷೇತ್ರ’ ಅಥವಾ ‘ಶ್ರೀಕೃಷ್ಣಸಂಧಾನ’ ಎಂಬ ಪೌರಾಣಿಕ ನಾಟಕ ನಡೆಯಲಿದೆ.

ರಾಜಕೀಯ

ಸಿಎಂ ಬದಲಾವಣೆ ವರಿಷ್ಠರ ತೀರ್ಮಾನಕ್ಕೆ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಿಎಂ ಬದಲಾವಣೆ ವರಿಷ್ಠರ ತೀರ್ಮಾನಕ್ಕೆ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಯೋಜನೆಗಳು ಜನಮೆಚ್ಚುಗೆಗೆ ಪಾತ್ರವಾಗಿದ್ದು, ಜನಾಶೀರ್ವಾದದಿಂದ ರಾಜ್ಯದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ತಿಳಿಸಿದರು.

[ccc_my_favorite_select_button post_id="121818"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]