ದೊಡ್ಡಬಳ್ಳಾಪುರ: ಸಂಕಷ್ಟ ಚತುರ್ಥಿ.. ಬಲಮುರಿ ಗಣಪತಿಗೆ ವಿಶೇಷ ವಿಭೂತಿ ಅಲಂಕಾರ..

Sankashta Chaturthi.. Special Vibhuti decoration for Balamuri Ganesha..

ದೊಡ್ಡಬಳ್ಳಾಪುರ: ಅಂಗಾರಕ ಸಂಕಷ್ಟ ಚತುರ್ಥಿ (Sankashta Chaturthi) ಹಿನ್ನೆಲೆಯಲ್ಲಿ ಮಂಗಳವಾರ ತಾಲೂಕಿನ ಆರೂಢಿ (Arudi) ಗ್ರಾಮದ ಬಸ್ ನಿಲ್ದಾಣ ಬಳಿಯಿರುವ ಬಲಮುರಿ ಗಣಪತಿ ದೇವಾಲಯದಲ್ಲಿ ವಿಭೂತಿ ಅಲಂಕಾರ, ಅಭಿಷೇಕ, ವಿಶೇಷ ಪೂಜೆ ಸಲ್ಲಿಸಲಾಯಿತು.

ಸಂಕಷ್ಟ ಚತುರ್ಥಿ ಹಿನ್ನೆಲೆಯಲ್ಲಿ ನಿರ್ಮಾಣ ಹಂತದಲ್ಲಿರುವ ದೇವಾಲಯಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು‌

ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೂ ದೇವಾಲಯದ ಆವರಣದಲ್ಲಿ ಪ್ರಸಾದ ವಿನಿಯೋಗ ಕೈಗೊಳ್ಳಲಾಗಿತ್ತು.

ಸ್ಥಳೀಯ ವರ್ತಕರು ಈ ಪೂಜಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

ಸಂಜೆ ಶ್ರೀರಾಮ ಭಜನಾ ಮಂಡಳಿಯಿಂದ ಭಜನೆ ಕಾರ್ಯಕ್ರಮ ನಡೆಯಿತು.

ಇಂದು ಹೊಸಹಳ್ಳಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮರಥೋತ್ಸವ

Kalyanotsva at Hosahalli Sri Lakshmi Narasimha Swamy Temple
Kalyanotsva at Hosahalli Sri Lakshmi Narasimha Swamy Temple

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿಯ ಬ್ರಹ್ಮರಥೋತ್ಸವ (Sri Lakshminarasimha Swamy Brahmarathotsava) ನಾಳೆ (ಮೇ.6 ರಂದು) ನಡೆಯಲಿದೆ.

ಶ್ರೀ ಲಕ್ಷ್ಮೀನರಸಿಂಹ ಸ್ವಾಮಿಯ ಜಾತ್ರಾ ಮಹೋತ್ಸವ ಮೇ.04 ಆರಂಭವಾಗಿ ಮೇ.08ರ ವರೆಗೆ ನಡೆಯಲಿದೆ.

ಐದು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವದ ಅಂಗವಾಗಿ ನಿನ್ನೆ ಕಲ್ಯಾಣೋತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯತ್ತಿದ್ದು, ವಿಶೇಷ ಅಲಂಕಾರ, ಅಭಿಷೇಕ, ಪೂಜೆ, ಆರತಿ ಕಾರ್ಯಕ್ರಮ ನೆರವೇರಿತು.

ನಾಳೆ (ಮೇ.6 ರಂದು) ಶುಭ ಅಭಿಜನ್ ಮುಹೂರ್ತದಲ್ಲಿ ಸ್ವಾಮಿಯ ಬ್ರಹ್ಮರಥೋತ್ಸವ ನೆರವೇರಲಿದೆ.ಇದೇ ದಿನ ರಾತ್ರಿ ಲಕ್ಷ್ಮೀನರಸಿಂಹಸ್ವಾಮಿ ಕಲಾತಂಡದವರಿಂದ ‘ಕುರುಕ್ಷೇತ್ರ’ ಅಥವಾ ‘ಶ್ರೀಕೃಷ್ಣಸಂಧಾನ’ ಎಂಬ ಪೌರಾಣಿಕ ನಾಟಕ ನಡೆಯಲಿದೆ.

ದೊಡ್ಡಬಳ್ಳಾಪುರ: ಮೇ.08 ರಂದು ಜೆಡಿಎಸ್ ಸಮಾವೇಶ.. 20 ಸಾವಿರ ಮಂದಿ ಸೇರುವ ನಿರೀಕ್ಷೆ

JDS convention on May 8th.. 20 thousand people expected to attend
JDS convention on May 8th.. 20 thousand people expected to attend

ಪ್ದೊಡ್ಡಬಳ್ಳಾಪುರ: ಪಕ್ಷದ ಎಲ್ಲಾ ಹಿರಿಯರನ್ನು ವಿಶ್ವಾಸಕ್ಕೆ ಪಡೆಯುವ ಮೂಲಕವೇ ಮೇ 8 ರಂದು ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜೆಡಿಎಸ್ (JDS) ರಜತ ಮಹೋತ್ಸವ ಸಮಾರಂಭ ನಡೆಸಲಾಗುವುದು ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ವಿ.ಮಂಜುನಾಥ್ ಹೇಳಿದರು.

ಅವರು ನಗರದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ದೊಡ್ಡಬಳ್ಳಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಬಿ.ಮುನೇಗೌಡ ಅವರು ಪಕ್ಷ ಸಂಘಟನೆಯಲ್ಲಿ ಸಾಕಷ್ಟು ಶ್ರಮಿಸಿದ್ದಾರೆ. ಅವರನ್ನು ವಿಶ್ವಾಸಕ್ಕೆ ಪಡೆದೇ ಕಾರ್ಯಕ್ರಮ ನಡೆಸಲಾಗುವುತ್ತಿದೆ.

ನಮ್ಮಲ್ಲಿ ಯಾವುದೇ ಗೊಂದಲಗಳು ಇಲ್ಲ, ಪದಾಧಿಕಾರಿಗಳ ಆಯ್ಕೆ ಸಮಯದಲ್ಲಿ ಎಲ್ಲಾ ಪಕ್ಷಗಳಲ್ಲಿ ಇರುವಂತೆಯೇ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದರಿಂದ ಒಂದಿಷ್ಟು ಅಸಮಧಾನಗಳು ಇವೆ.

25ರ ಸಂಭ್ರಮಾಚರಣೆಗೆ ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರ್ ಸ್ವಾಮಿ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲರು ಒಗ್ಗಟ್ಟಿನಿಂದ ಕೆಲಸ ಮಾಡಲಾಗುವುದು. ಈಗಾಗಲೇ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಹರೀಶ್ ಗೌಡ ಅವರು ಪಕ್ಷದ ಎಲ್ಲಾ ಹಿರಿಯ ಮುಖಂಡರ ಮನೆಗಳಿಗು ಭೇಟಿ ನೀಡಿ ಸಮಾರಂಭದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ ಎಂದರು.

ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಹರೀಶ್ ಗೌಡ ಮಾತನಾಡಿ, ಮೇ 8 ರಂದು ಭಗತ್ಸಿಂಗ್ ಕ್ರೀಡಾಂಣದಲ್ಲಿ ನಿಖಿಲ್ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭಕ್ಕೆ ಸುಮಾರು 20 ಸಾವಿರ ಸೇರುವ ನಿರೀಕ್ಷೆ ಇದ್ದು, ಇದಕ್ಕಾಗಿ ಮಂಗಳವಾರ ವೇದಿಕೆ ಸಿದ್ದತೆಗೆ ಭೂಮಿ ಪೂಜೆ ಮಾಡಲಾಗಿದೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ಪಕ್ಷದ ಎಲ್ಲಾ ಹಿರಿಯ ಹಾಗೂ ಯುವ ಮುಖಂಡರನ್ನು ಖುದ್ದಾಗಿ ಭೇಟಿ ಮಾಡಿ ಆಹ್ವಾನಿಸಲಾಗಿದೆ. ಸದ್ಯದಲ್ಲೇ ಬರುವ ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗೆ ಈ ಸಮಾವೇಶ ಪಕ್ಷದ ಕಾರ್ಯಕರ್ತರಿಗೆ ಶಕ್ತಿ ತುಂಬಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಟಿ.ಎನ್.ಪ್ರಭುದೇವ್, ಡಾ.ವಿಜಯಕುಮಾರ್, ಆನಂದ್, ಜಿ. ಸತ್ಯನಾರಾಯಣ್, ಅಶ್ವತ್ಥ್ನಾರಾಯಣಗೌಡ, ನಟರಾಜ್, ವಿ.ಆಂಜನೇಗೌಡ, ಆರ್.ಕೆಂಪರಾಜ್, ತಳವಾರ್ ನಾಗರಾಜ್, ನಾರಾಯಣಪ್ಪ, ಗೋವಿಂದರಾಜ್, ನರಸಿಂಹಗೌಡ, ಪ್ರವೀಣ್, ಅಶ್ವತ್ಥ್ ಇದ್ದರು.

ಇದಕ್ಕೂ ಮೊದಲು ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ನಡೆಯುವ ಜನರೊಂದಿಗೆ ಜನತಾದಳ ಬೃಹತ್ ಸಮಾವೇಶದ ವೇದಿಕೆ ನಿರ್ಮಾಣದ ಪೂಜೆಯನ್ನು ಮುಖಂಡರು ನೆರವೇರಿಸಿದರು.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]