ಶೃಂಗೇರಿ ಮತ ಮರು ಎಣಿಕೆ ಪ್ರಕರಣ: ರಾಜ್ಯಪಾಲರ ಮೊರೆ ಹೋದ ಬಿಜೆಪಿ

Sringeri vote recount case: BJP approaches Governor

ಬೆಂಗಳೂರು: ಶೃಂಗೇರಿ (Sringeri) ಶಾಸಕ (MLA) ಡಿ.ಎನ್.ಜೀವರಾಜ್ (D.N. Jeevaraj) ಅವರಿಗೆ ಸ್ಪೀಕರ್ ಯು.ಟಿ.ಖಾದರ್ (U.T. Khader) ಪ್ರಮಾಣವಚನ ಬೋಧಿಸಲು ತಡ ಮಾಡುತ್ತಿದ್ದಾರೆ.‌ ಆದ್ದರಿಂದ ರಾಜ್ಯಪಾಲರೇ (Governor) ನೇರವಾಗಿ ಪ್ರಮಾಣವಚನ ಬೋಧಿಸಲು ಕೋರಿದ್ದೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಮರು ಎಣಿಕೆಯಲ್ಲಿ ಬಿಜೆಪಿಯ ಡಿ.ಎನ್.ಜೀವರಾಜ್ ಶಾಸಕರು ಎಂಬ ಫಲಿತಾಂಶ ಬಂದಿದೆ. ಚುನಾವಣಾ ಆಯೋಗದಿಂದ ಎಲ್ಲ ಶಾಸಕರಿಗೆ ಪ್ರಮಾಣ ಪತ್ರ ನೀಡುವಂತೆ ಇವರಿಗೂ ಪ್ರಮಾಣಪತ್ರ ಸಿಕ್ಕಿದೆ.

ರಾಜ್ಯ ಸರ್ಕಾರದ ರಾಜ್ಯಪತ್ರದ ಆದೇಶವೂ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಎಲ್ಲ ಶಾಸಕರು ಇದೇ ರೀತಿ ಶಾಸಕರು ಎನಿಸಿಕೊಳ್ಳುತ್ತಾರೆ. ಈ ಕುರಿತು ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಫೋನ್ ಕರೆ ಮಾಡಿ ಮಾತಾಡಲು ಯತ್ನಿಸಿದರೆ ಬೇಕೆಂದೇ ಕರೆ ಸ್ವೀಕರಿಸಲಿಲ್ಲ.

ಈಗ ಭೇಟಿ ಮಾಡಿದರೆ ನನಗೆ ಕಾನೂನಿನ ಬೋಧನೆ ಮಾಡುತ್ತಿದ್ದಾರೆ. ಸ್ಪೀಕರ್ ಕೂಡ ಇದೇ ರೀತಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಾಗೆ ಆಯ್ಕೆಯಾಗುವಾಗ ಅವರೇನೂ ಕೋರ್ಟ್‌ಗೆ ಹೋಗಿರಲಿಲ್ಲ. ಯಾವುದೇ ಶಾಸಕರ ವಿರುದ್ಧ ಕೋರ್ಟ್ ಗೆ ಹೋಗಲು 45 ದಿನಗಳ ಕಾಲಾವಕಾಶವಿದ್ದರೂ ಪ್ರಮಾಣವಚನಕ್ಕೆ ಅದು ಅಡ್ಡಿಯಾಗುವುದಿಲ್ಲ. ಆದರೆ ಸ್ಪೀಕರ್ ಯು.ಟಿ.ಖಾದರ್ ಮಾತ್ರ ಪ್ರಮಾಣವಚನಕ್ಕೆ ಅವಕಾಶ ಮಾಡಿಕೊಡದೆ ಹೊಸ ಸಂಪ್ರದಾಯ ಆರಂಭಿಸಿದ್ದಾರೆ ಎಂದು ದೂರಿದರು.

ಜೀವರಾಜ್ ಅವರ ವಿರುದ್ಧದ ದೂರಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ ಹಾಕಿದೆ. ಕಾಂಗ್ರೆಸ್ ನವರೇ ದೊಡ್ಡ ಡಕಾಯಿತಿ ಮಾಡುತ್ತಾರೆ. ಮತ ಎಣಿಕೆ ವೇಳೆ ಚುನಾವಣಾಧಿಕಾರಿಗೆ ಸಿದ್ದರಾಮಯ್ಯ ಅಥವಾ ಡಿ.ಕೆ.ಶಿವಕುಮಾರ್ ಕರೆ ಮಾಡಿ ಒತ್ತಡ ಹೇರಿದ್ದಾರೆಯೇ ಎಂದು ಸಿಬಿಐ ತನಿಖೆ ಆಗಬೇಕಿದೆ.

ಫಲಿತಾಂಶವನ್ನು ಕೋರ್ಟ್ ಗೆ ಸಲ್ಲಿಸಿ ಎಂದು ಎಲ್ಲೂ ಹೇಳಿಲ್ಲ. ಫಲಿತಾಂಶವನ್ನು ಕೂಡಲೇ ಪ್ರಕಟಿಸಿ ಎಂಬ ಸೂಚನೆ ಇದೆ. ಇಲ್ಲಿ ಸ್ಪೀಕರ್ ಭೇಟಿಯಾಗಿ ಕೇಳಿದರೆ, ನಾಳೆ‌ ಬಾ ನೋಡೋಣ, ಕಾನೂನು ಸಲಹೆ ಪಡೆಯಬೇಕಿದೆ ಎನ್ನುತ್ತಾರೆ. ಹಾಗಿದ್ದರೆ 224 ಶಾಸಕರ ಬಗ್ಗೆಯೂ ಕಾನೂನು ಸಲಹೆ ಪಡೆಯಬೇಕಿತ್ತು ಎಂದರು.

ಸಂವಿಧಾನದ ವಿಧಿ 188 ಪ್ರಕಾರ, ಪ್ರಮಾಣವಚನವನ್ನು ರಾಜ್ಯಪಾಲರು ಬೋಧಿಸುತ್ತಾರೆ. ಸ್ಪೀಕರ್‌ ಇಲ್ಲವಾದರೆ ಬೇರೆಯವರ ಹೆಸರು ಸೂಚಿಸುವ ಅಧಿಕಾರ ರಾಜ್ಯಪಾಲರಿಗಿದೆ. ಆದ್ದರಿಂದ ಸ್ಪೀಕರ್ ಬದಲು ನೀವೇ ಪ್ರಮಾಣವಚನ ಬೋಧಿಸಿ ಎಂದು ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರ ಹೀಗೆ ಮಾಡಿದಾಗ ಇಬ್ಬರು ಬಿಜೆಪಿ ಶಾಸಕರು ರಾಜ್ಯಪಾಲರಿಗೆ ಕೋರಿದ್ದರು‌. ಅದೇ ರೀತಿ ನಾವು ಕೂಡ ಕೋರಿದ್ದೇವೆ. ಈ ಪ್ರಕ್ರಿಯೆ ನಡೆಯದೇ ಇದ್ದಲ್ಲಿ ಸ್ಪೀಕರ್ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈ ಕೆಳಗಿನ ಅಧಿಕಾರಿಗಳು ಪೇಮೆಂಟ್ ಗಿರಾಕಿಗಳು ಅಂದಮೇಲೆ‌ ಅವರೇ ಟ್ಯಾಂಪರ್ ಮಾಡಲು ಹೇಗೆ ಸಾಧ್ಯ? ಜೀವರಾಜ್ ಸೋತು ಎಂಟು ವರ್ಷವಾಗಿರುವಾಗ ಅವರ ಮಾತನ್ನು ಅಧಿಕಾರಿಗಳು ಕೇಳಲು ಸಾಧ್ಯವೇ? ಅಧಿಕಾರಿಗಳು ಮುಖ್ಯಮಂತ್ರಿಯ ಮಾತನ್ನು ಕೇಳುತ್ತಾರೆ.

ಶೃಂಗೇರಿ ಕ್ಷೇತ್ರ ವೋಟ್ ಚೋರಿಗೆ ಉದಾಹರಣೆಯಾಗಿದ್ದು, ಇಡೀ ಸರ್ಕಾರ ವಜಾ ಮಾಡಬೇಕಿದೆ. ಎಲ್ಲ ಕಡೆ ಮತಗಳ್ಳತನ ಆಗುತ್ತಿದೆ ಎಂದರೆ ಸರ್ಕಾರದ ಎಲ್ಲ ಅಧಿಕಾರಿಗಳು ಡಕಾಯಿತರು ಎನ್ನಬೇಕಾಗುತ್ತದೆ. ಎಲ್ಲ ಕಡೆ ಸಿಸಿಟಿವಿ ಕ್ಯಾಮರಾ ಇರುವಾಗ ಕಳ್ಳತನವಾಗಲು ಸಾಧ್ಯವಿಲ್ಲ ಎಂದರು.

ತಮಿಳುನಾಡಿನಲ್ಲಿ ಕಾಂಗ್ರೆಸ್ ಊಟ ಸಿಗುವ ಕಡೆ ಓಡುತ್ತಿದೆ. ಈಗ ನಟ ವಿಜಯ್ ಬಳಿ ಹೋಗಿದ್ದಾರೆ. ಡಿಎಂಕೆಗೆ ಕಾಂಗ್ರೆಸ್ ಕೈ ಕೊಡುವ ಲಕ್ಷಣ‌ ಕಂಡುಬಂದಿದೆ. ಕಾಂಗ್ರೆಸ್ ಗೆ ನ್ಯಾಯ ನೀತಿ ಇಲ್ಲದೆ ಗೆದ್ದ ಎತ್ತಿನ ಬಾಲ ಹಿಡಿಯುತ್ತಿದ್ದಾರೆ. ಹಿಂದುತ್ವದ ವಿರುದ್ಧ ‌ಮಾತಾಡಿದ ಉದಯ್ ಹಾಗೂ ಸ್ಟಾಲಿನ್ ಸೋತಿದ್ದಾರೆ. ಹಿಂದುಗಳನ್ನು ಕೆಣಕಿದರೆ ಏನಾಗುತ್ತದೆ ಎಂದು ಇದರಿಂದ ತಿಳಿಯುತ್ತದೆ ಎಂದರು.

ರಾಜಕೀಯ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘ಜೆಡಿಎಸ್ 25’ ಸಂಭ್ರಮ: ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘ಜೆಡಿಎಸ್ 25’ ಸಂಭ್ರಮ: ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ

ಮೇ.8 ರಂದು ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜೆಡಿಎಸ್ (JDS) ಪಕ್ಷದ 25 ನೇ ವರ್ಷದ ರಜತ ಮಹೋತ್ಸವ ಸಮಾರಂಭವನ್ನು ಅದ್ಧೂರಿಯಾಗಿ ನಡೆಸಲಾಗುತ್ತಿದೆ.

[ccc_my_favorite_select_button post_id="121780"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]