ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

Excessive violence in West Bengal

ಕೋಲ್ಕತಾ: ಚುನಾವಣೆ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ (West Bengal) ರಾಜಕೀಯ ಕೋಭೆ ತೀವ್ರಗೊಂಡಿದೆ. ಬಿಜೆಪಿ (BJP) ಕಾರ್ಯಕರ್ತರು ಎನ್ನಲಾಗುತ್ತಿರುವವರು ನಡೆಸುತ್ತಿರುವ ರಾಜಕೀಯ ಹಿಂಸಾಚಾರ ತಾರಕಕ್ಕೇರಿದೆ ಎಂಬ ಆರೋಪ ವ್ಯಾಪಕವಾಗಿದೆ.

ಮತ್ತೊಂದೆಡೆ ಬುಧವಾರ ರಾತ್ರಿ ಕೋಲ್ಕತಾದ ಹೊರವಲಯದಲ್ಲಿರುವ ಮಧ್ಯಮ ಗ್ರಾಮದಲ್ಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಸುವೇಂದು ಅಧಿಕಾರಿಯ ಆಪ್ತ ಸಹಾಯಕ ಚಂದ್ರನಾಥ ದತ್ತರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ.

ಫಲಿತಾಂಶ ಬಂದ ಎರಡೇ ದಿನದಲ್ಲಿ ಸಾವಿನ ಸಂಖ್ಯೆ ಐದಕ್ಕೇರಿದೆ. ಹತ್ಯೆಗೆ ಕಾರಣವೇನು, ಗುಂಡಿಕ್ಕಿದವರು ಯಾರು ಎಂದು ಇನ್ನೂ ಖಚಿತವಾಗಿಲ್ಲ.

ಮೂಲಗಳ ಪ್ರಕಾರ ಚಂದ್ರನಾಥ ದತ್ತರ ಸಮೀಪದಿಂದಲೇ ನಾಲ್ಕು ಸುತ್ತು ಗುಂಡು ಹಾರಿಸಲಾಗಿದೆ. ಅವರನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಿದರೂ ಉಪಯೋಗವಾಗಿಲ್ಲ. ದಾರಿ ಮಧ್ಯೆಯಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸರು ತೀವ್ರ ಶೋಧ ಶುರು ಮಾಡಿದ್ದಾರೆ. ಸದ್ಯದ ಅಂದಾಜಿನ ಪ್ರಕಾರ ರಾಜಕೀಯ ದ್ವೇಷದಿಂದಲೇ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂಗಾಳ ದಲ್ಲೇ ಬೀಡು ಬಿಟ್ಟಿರುವ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.

ಹಿಂಸೆಗೆ 5 ಬಲಿ

ಚುನಾವಣೆ ಮುಗಿದ ಮೇಲೆ ಬಂಗಾಳದಲ್ಲಿ ಹಿಂಸಾಚಾರ ತೀವ್ರವಾಗಿದೆ. ಕೋಲ್ಕತಾದ ಬೆಲೆ ಘಟದಲ್ಲಿ, ಬೀರ್ಭೂಮ್‌ನ ನಾನೂರ್ ನಲ್ಲಿ ಇಬ್ಬರು ಟಿಎಂಸಿ ಕಾರ್ಯಕರ್ತರು, ಉತ್ತರ ಪರಗಣ ಜಿಲ್ಲೆ, ಉದಯ ನಾರಾಯಣಪುರದಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರು ಮೃತಪಟ್ಟಿದ್ದಾರೆಂದು ಹೇಳಲಾಗಿದೆ.

ಈ ಹಿಂಸಾಚಾರದ ನಡುವೆಯೇ ಸುವೇಂದು ಆಪ್ತ ಬಲಿ ಯಾಗಿದ್ದಾರೆ. ಬಿಜೆಪಿ ಕಾರ್ಯಕರ್ತರು ಕಚೇರಿಗಳಿಗೆ ಬೆಂಕಿ ಹಚ್ಚಿದ ಘಟನೆಗಳೂ ನಡೆದಿವೆ.

ರಾಜಕೀಯ

ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

ಚುನಾವಣೆ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ (West Bengal) ರಾಜಕೀಯ ಕೋಭೆ ತೀವ್ರಗೊಂಡಿದೆ. ಬಿಜೆಪಿ (BJP) ಕಾರ್ಯಕರ್ತರು ಎನ್ನಲಾಗುತ್ತಿರುವವರು ನಡೆಸುತ್ತಿರುವ ರಾಜಕೀಯ ಹಿಂಸಾಚಾರ ತಾರಕಕ್ಕೇರಿದೆ ಎಂಬ ಆರೋಪ ವ್ಯಾಪಕವಾಗಿದೆ.

[ccc_my_favorite_select_button post_id="121830"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]