HD Kumaraswamy| ಕುಡಿಯುವ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷೆ ಮಾಡಬೇಕು: ಹೆಚ್‌ಡಿ ಕುಮಾರಸ್ವಾಮಿ

ಮೈಸೂರು: ಕೇಂದ್ರ ಸರ್ಕಾರ ಜನರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಈ ಕೇಂದ್ರ ಪುರಸ್ಕೃತ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಈ ಯೋಜನೆಗಳ ಅನುದಾನವನ್ನು ಶೇ 100 ರಷ್ಟು ಬಳಕೆ ಆಗುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಉಕ್ಕು ಮತ್ತು ಬೃಹತ್ ಕೈಗಾರಿಕೆ ಕೇಂದ್ರ ಸಚಿವರಾದ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ತಿಳಿಸಿದರು.

ಇಂದು ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಅಭಿವೃದ್ಧಿ ಹಾಗೂ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಅವರಿಗೆ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಅಗತ್ಯವಿದ್ದ ಭೂಮಿಯನ್ನು ವಶಕ್ಕೆ ಪಡೆದು ಕೆ ಐ ಡಿ ಬಿ ಅವರು ಒದಗಿಸಬೇಕು. ನಾಗನಹಳ್ಳಿ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಅಗತ್ಯವಿರುವ ಭೂಮಿ ಪಡೆಯುವ ಕಾರ್ಯವನ್ನು ಪೂರ್ಣಗೊಳಿಸುವಂತೆ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಲ ಜೀವನ್ ಮಿಷನ್ ಯೋಜನೆಯು ಪ್ರತಿ ಮನೆಗೂ ನಲ್ಲಿ ಯ ಮೂಲಕ ನೀರನ್ನು ನೀಡುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು ಎಲ್ಲಾ ಹಳ್ಳಿಗಳಿಗೂ ನೀರು ಒದಗಿಸಿ. ಕುಡಿಯುವ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷೆ ಮಾಡಬೇಕು.

ಅಮೃತ್ ಯೋಜನೆಯಡಿ ನಗರ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ಪೂರೈಕೆಗೆ ಅನುಧಾನ ಬಿಡುಗಡೆ ಆಗಿದ್ದು ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಿ ನೀರಿನ ಪೂರೈಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ಉತ್ಪಾದನೆ, ವ್ಯಾಪಾರ ಸೇವೆ ಹಾಗೂ ಕೃಷಿಗೆ 10 ಲಕ್ಷದವರೆಗೆ ಸಾಲ ನೀಡಲಾಗುತ್ತಿದೆ. ಇದರಲ್ಲಿ ಜಿಲ್ಲೆಗೆ ಈ ವರ್ಷ 2902 ಕೋಟಿ ಸಾಲ ನೀಡಲಾಗಿರುವ ಕುರಿತು ಲೀಡ್ ಬ್ಯಾಂಕ್ ಮ್ಯಾನೇಜರ್ ಇಂದ ಮಾಹಿತಿ ಪಡೆದ ಅವರು ಈ ಯೋಜನೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ ಎಂದರು.

ರೈತರು ದೇಶದ ಬೆನ್ನೆಲುಬು. ಅತಿಯಾದ ಮಳೆಯಿಂದ ಆದ ಬೆಳೆ ಹಾನಿಗೆ ಪರಿಹಾರವನ್ನು ಅರ್ಹರಿಗೆ ವಿತರಣೆ ಮಾಡಬೇಕು. ಪ್ರಧಾನ ಮಂತ್ರಿ ಪಸಲ್ ಭೀಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸಲು ರೈತರಿಗೆ ಉತ್ತೇಜನ ನೀಡಬೇಕು. ಇದರಿಂದ ಬೆಳೆ ನಷ್ಟ ಉಂಟಾದರೆ ಬೆಳೆ ಪರಿಹಾರ ಪಡೆಯಲು ಸಾಧ್ಯವಾಗುತ್ತದೆ. ಹತ್ತಿ ಬೆಳೆಗೆ ಉತ್ತಮ ತಳಿಯ ಬಿತ್ತನೆ ಬೀಜ ಬಂದಿದ್ದು, ರಾಯಚೂರು ಭಾಗದಲ್ಲಿ ಬಿತ್ತನೆ ಆಗುತ್ತಿದೆ. ಇದರಿಂದ ಶೇಕಡಾ 50% ಉತ್ಪಾದನೆ ಹೆಚ್ಚಾಗುತ್ತದೆ. ಈ ಬಗ್ಗೆ ಅಧ್ಯಯನ ಮಾಡಿ ಹೆಚ್ ಡಿ ಕೋಟೆ ಭಾಗದ ಜನರಿಗೆ ಮಾಹಿತಿ ನೀಡುವಂತೆ ಕೃಷಿ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ಜಾನುವಾರುಗಳಿಗೆ ನಿಗದಿತ ಅವಧಿಯಲ್ಲಿ ಕಾಲುಬಾಯಿ, ಚಪ್ಪೆ ರೋಗದ ಲಸಿಕೆ ನೀಡಬೇಕು. ಮೇವು ಕಿಟ್ ಗಳ ವಿತರಣೆ ಮಾಡುವ ಮೂಲಕ ಜಾನುವಾರು ಮೇವು. ಕೊರತೆ ಆಗದಂತೆ ನೋಡಿಕೊಳ್ಳಬೇಕು. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕರ್ನಾಟಕ ರಾಜ್ಯದಲ್ಲಿ ಅರಣ್ಯ ಪ್ರದೇಶ ಕಡಿಮೆ ಆಗುತ್ತಿದೆ ಎಂದು ಸರ್ವೆಗಳು ಹೇಳುತ್ತಿವೆ. ಆದರೆ ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ಪ್ರತಿ ವರ್ಷ 1 ಕೋಟಿಯಷ್ಟು ಗಿಡಗಳನ್ನು ನೀಡುತ್ತಾ ಇದ್ದಾರೆ ಆದರೆ ಇವುಗಳ ಪೋಷಣೆ ಆಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಮುಖವಾಗಿ ನಿರುದ್ಯೋಗ ಸಮಸ್ಯೆ ಕಾಡುತ್ತಿದೆ. ಅಂತಹ ಯುವಕರಿಗೆ ಕೇಂದ್ರ ಸರ್ಕಾರದ ಹಲವು ಯೋಜನೆಗಳ ಮೂಲಕ ಸೌಲಭ್ಯ ಗಳನ್ನು ಕಲ್ಪಿಸಿ ಸ್ವಯಂ ಉದ್ಯೋಗ ಮಾಡಲು ಅಧಿಕಾರಿಗಳು ಅವಕಾಶ ಕಲ್ಪಿಸಬೇಕು ಎಂದರು.

ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ಸುನೀಲ್ ಬೋಸ್ ಅವರು ಮಾತನಾಡಿ, ಚಾಮರಾಜನಗರ ದಿಂದ ಮೈಸೂರು ರೈಲ್ವೆ ಮಾರ್ಗವನ್ನು ಮೇಲ್ದರ್ಜೆ ಗೆ ಏರಿಸಿ ವಿದ್ಯುಧಿಕರಣ ಮಾಡಲು ಅಗತ್ಯವಾದ ಎನ್ ಓ ಸಿ ಯನ್ನು ಪಡೆದು ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹೆಚ್ ಡಿ ಕೋಟೆಯಿಂದ ಬಾವಲಿ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚು ಇದ್ದು ಈಗಿರುವ ಎಸ್ ಹೆಚ್ ರಸ್ತೆಯನ್ನು ಎನ್ ಹೆ ರಸ್ತೆ ದರ್ಜೆಗೆ ಏರಿಸಲು ಪ್ರಪೋಸಲ್ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಮೃತ್ ಯೋಜನೆಯಡಿ ಪೈಪ್ ಲೈನ್ ಕಾಮಗಾರಿಗಳನ್ನು ವೈಜ್ಞಾನಿಕವಾಗಿ ಮಾಡಬೇಕು. ಕೆಲವು ಕಡೆ ಪೈಪ್ ಲೈನ್ ಮೇಲೆ ಮಾಡಿರುತ್ತಾರೆ. ಕೆಲವು ಕಡೆ ಪೈಪ್ ಲೈನ್ ಗುಂಡಿಗಳನ್ನು ಸರಿಯಾಗಿ ಮುಚ್ಚಿರುವುದಿಲ್ಲ ಎಂದು ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಟೆಂಡರ್ ಪಡೆದವರು 5 ವರ್ಷ ಅದರ ಮೆಂಟೇನ್ಸ್ ಮಾಡಬೇಕು ಈ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಬೇಕು.

ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ ಡಿ ಹರೀಶ್ ಗೌಡ ಅವರು ಮಾತನಾಡಿ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಫಲಾನುಭವಿಗಳ ಆಯ್ಕೆ ಮಾಡಿ ಅಪ್ರೂವ್ ಆಗಿದ್ದರೂ ಸಹ ಬ್ಯಾಂಕ್ ಗಳು ಸಾಲ ನೀಡುತ್ತಿಲ್ಲ. ಲೀಡ್ ಬ್ಯಾಂಕ್ ಮ್ಯಾನೇಜರ್ ಈ ನಿಟ್ಟಿನಲ್ಲಿ ಪರಿಶೀಲಿಸಿ ಸಾಲ ನೀಡುವಂತೆ ಕ್ರಮವಹಿಸಬೇಕು.

ಜಿಲ್ಲಾಧಿಕಾರಿ ಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ಮಾತನಾಡಿ, ಏರ್ಪೋರ್ಟ್ ಅಥಾರಿಟಿ ಅವರು 500 ಕೋಟಿಗಳ ವೆಚ್ಚದಲ್ಲಿ ಏರ್ಪೋರ್ಟ್ ಬೈಪಾಸ್ ರಸ್ತೆ ನಿರ್ಮಿಸಲು ನ್ಯಾಶನಲ್ ಹೈವೇ ಅಥಾರಿಟಿ ಅವರಿಗೆ ನೀಡಲು ಇದ್ದಾರೆ. ಆದರೆ ಇದರ ವೆಚ್ಚ 800 ಕೋಟಿ ಆಗುವುದಾಗಿ ವರದಿ ನೀಡಿರುತ್ತಾರೆ. ಏರ್ ಪೋರ್ಟ್ ಆಫ್ ಅಥಾರಿಟಿ ಇಂಡಿಯಾ ಅವರಿಗೆ ಅಗತ್ಯವಿದ್ದ ಭೂಮಿಯಲ್ಲಿ ಈಗಾಗಲೇ 150 ಎಕರೆ ಕೆ ಐ ಡಿ ಬಿ ವಶಕ್ಕೆ ಪಡೆದಿದ್ದು ಉಳಿದ 40 ಎಕರೆ ಪಡೆಯಲು ಪ್ರಗತಿ ಹಂತದಲ್ಲಿ ಇದೆ.

ಸಭೆಯಲ್ಲಿ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀವತ್ಸ, ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ ಎಂ ಗಾಯತ್ರಿ, ಮೈಸೂರು ನಗರ ಪೊಲೀಸ್ ಆಯುಕ್ತ ರಾದ ಸೀಮಾ ಲಾಟ್ಕರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಡಿ.ಕೆ.ಶಿವಕುಮಾರ್‌ ಬೆಂಗಳೂರಿನ ವಿಲನ್‌ ಆಗುವುದು ಬೇಡ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಡಿ.ಕೆ.ಶಿವಕುಮಾರ್‌ ಬೆಂಗಳೂರಿನ ವಿಲನ್‌ ಆಗುವುದು ಬೇಡ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸುರಂಗ ರಸ್ತೆ ಯೋಜನೆ ಕೂಡ ಅದೇ ರೀತಿಯಾಗಲಿದೆ. ಎಷ್ಟೇ ಅನುದಾನ ಹೆಚ್ಚಿದರೂ ಈ ಯೋಜನೆ ಜಾರಿಯಾಗಲು ಸಾಧ್ಯವಿಲ್ಲ. ಮೆಟ್ರೋ ಯೋಜನೆಯನ್ನು ಇದೇ ಹಣದಲ್ಲಿ ವಿಸ್ತರಣೆ ಮಾಡಬಹುದು. ಈ ಯೋಜನೆ ಮಾಡಿ ಡಿ.ಕೆ.ಶಿವಕುಮಾರ್‌ ಬೆಂಗಳೂರಿನ ವಿಲನ್‌

[ccc_my_favorite_select_button post_id="115408"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!