MB Patil ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ; ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಎಂ ಬಿ ಪಾಟೀಲ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಕೊಟ್ಟಿದ್ದ ಭರವಸೆಯಂತೆ ಬಳ್ಳಾರಿಗೆ ಹೊಂದಿಕೊಂಡಿರುವ ಸಂಜೀವರಾಯನ ಕೋಟೆಯಲ್ಲಿ ಕೆಐಎಡಿಬಿ ವತಿಯಿಂದ `ಜೀನ್ಸ್ ಪಾರ್ಕ್’ ಸ್ಥಾಪಿಸಲಾಗುವುದು (MB Patil).

ಇದಕ್ಕಾಗಿ ಈಗಾಗಲೇ 154 ಎಕರೆ ಜಮೀನನ್ನು ಸ್ವಾಧೀನಪಡಿಸಲಾಗಿದ್ದು, ಇಲ್ಲಿ ಅಂತಾರಾಷ್ಟ್ರೀಯ ಮಟ್ಟದ ಜೀನ್ಸ್ ಉಡುಪು ತಯಾರಿಕೆಯ ಕಂಪನಿಗಳೂ ಇರುವಂತೆ ನೋಡಿಕೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಗುರುವಾರ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, `ಬಾಂಗ್ಲಾದೇಶದಲ್ಲಿ ರಾಜಕೀಯ ಅಸ್ಥಿರತೆ ಉಂಟಾದ ಮೇಲೆ ಅಲ್ಲಿನ ಜೀನ್ಸ್ ಉಡುಪು ತಯಾರಿಕೆ ಉದ್ಯಮ ನೆಲ ಕಚ್ಚಿದೆ. ಹೂಡಿಕೆದಾರರು ಮತ್ತು ರಫ್ತುದಾರರ ಗಮನ ಈಗ ಬಳ್ಳಾರಿಯಲ್ಲಿನ ಜೀನ್ಸ್ ತಯಾರಿಕೆ ಉದ್ಯಮದ ಮೇಲೆ ಹರಿದಿದೆ. ಇದನ್ನು ನಾವು ಸದವಕಾಶವಾಗಿ ಪರಿವರ್ತಿಸಿಕೊಂಡು, ಹೂಡಿಕೆಯನ್ನು ಆಕರ್ಷಿಸಲಿದ್ದೇವೆ’ ಎಂದಿದ್ದಾರೆ.

ಬಳ್ಳಾರಿಯಲ್ಲಿ 500ಕ್ಕಿಂತಲೂ ಹೆಚ್ಚು ಜೀನ್ಸ್ ಉಡುಪು ತಯಾರಿಕೆ ಘಟಕಗಳಿದ್ದು, ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಹತ್ತಾರು ಸಾವಿರ ಉದ್ಯೋಗಗಳನ್ನು ಸೃಷ್ಟಿಸಿವೆ. ಇದಕ್ಕೆ ವ್ಯವಸ್ಥಿತ ರೂಪ ಕೊಟ್ಟು, ಇದನ್ನು ರಫ್ತು ಕೇಂದ್ರಿತವಾಗಿಯೂ ಬೆಳೆಸಬೇಕು ಎನ್ನುವುದು ಕೈಗಾರಿಕಾ ಇಲಾಖೆಯ ಚಿಂತನೆಯಾಗಿದೆ. ಇದಕ್ಕಾಗಿ ಜವಳಿ ಇಲಾಖೆಯ ಸಹಾಯವನ್ನೂ ಪಡೆಯಲಾಗುವುದು. ಆ ಇಲಾಖೆಯಲ್ಲಿ ಜೀನ್ಸ್ ತಯಾರಿಕೆ ಘಟಕಗಳಿಗೆ ರಿಯಾಯಿತಿ ಕೊಡುವ ವ್ಯವಸ್ಥೆ ಇದ್ದರೆ ಅದನ್ನೂ ಕೊಡಿಸುವ ಕೆಲಸ ಮಾಡಲಾಗುವುದು. ಈ ಸಂಬಂಧ ಜವಳಿ ಸಚಿವರ ಜತೆಗೂ ಸಭೆ ನಡೆಸಲಾಗುವುದು ಎಂದು ಅವರು ವಿವರಿಸಿದ್ದಾರೆ.

ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಬಳ್ಳಾರಿಯ ಜೀನ್ಸ್ ತಯಾರಿಕೆ ಘಟಕಗಳ ಉದ್ಯೋಗಿಗಳು ಮತ್ತು ಮಾಲೀಕರ ಜತೆ ಮಾತುಕತೆ ನಡೆಸಿದ್ದರು. ಆಗ ಅವರು, ಜೀನ್ಸ್ ಪಾರ್ಕ್ ಸ್ಥಾಪಿಸುವ ಭರವಸೆ ನೀಡಿದ್ದರು. ಇದಾದ ಮೇಲೆ, 2023ರ ಆಗಸ್ಟ್ 1ರಂದು ನಮ್ಮ ಇಲಾಖೆಗೆ ಪತ್ರ ಬರೆದು, ಈ ಬಗ್ಗೆ ಗಮನ ಸೆಳೆದಿದ್ದರು. ಈ ಯೋಜನೆಯ ಅನುಷ್ಠಾನಕ್ಕೆ ಈಗ ಕಾಲ ಪ್ರಶಸ್ತವಾಗಿದ್ದು, ಅಂತಾರಾಷ್ಟ್ರೀಯ ಪರಿಸ್ಥಿತಿ ಅನುಕೂಲಕರವಾಗಿದೆ ಎಂದು ಅವರು ನುಡಿದಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಕಳೆದ ಫೆಬ್ರವರಿಯಲ್ಲಿ ಮಂಡಿಸಿದ ಬಜೆಟ್ಟಿನಲ್ಲೂ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪಿಸುವ ಘೋಷಣೆ ಮಾಡಿದ್ದಾರೆ. ಈಗ ಅಸಂಘಟಿತವಾಗಿರುವ ಜೀನ್ಸ್ ಉದ್ಯಮಕ್ಕೆ ಸಂಘಟಿತ ರೂಪ ಕೊಟ್ಟು, ಇದನ್ನು ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ಏರಿಸುವುದು ಇದರ ಹಿಂದಿನ ಉದ್ದೇಶವಾಗಿದೆ. ಬಳ್ಳಾರಿ ಜೀನ್ಸ್ ಪಾರ್ಕ್ ನಿಂದ ಪ್ರಾದೇಶಿಕ ಆರ್ಥಿಕತೆಗೆ ಚೈತನ್ಯ ಬರಲಿದೆ. ಜತೆಗೆ ನಾವೀನ್ಯತೆ ಮತ್ತು ಉಡುಪು ಕ್ಷೇತ್ರಕ್ಕೆ ಸಂಬಂಧಿಸಿದ ಸಂಶೋಧನೆಗಳಿಗೆ ಆದ್ಯತೆ ಸಿಗಲಿದೆ ಎಂದು ಪಾಟೀಲ ಭರವಸೆ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿ ಸುತ್ತಮುತ್ತ ಈಗಾಗಲೇ ಸಕ್ರಿಯವಾಗಿರುವ ಜೀನ್ಸ್ ಉಡುಪು ತಯಾರಿಕೆ ಘಟಕಗಳಿಗೂ ಹೆಚ್ಚಿನ ನೆರವು ನೀಡಲಾಗುವುದು. ಜೀನ್ಸ್ ಉಡುಪುಗಳು ಯುವಜನಾಂಗಕ್ಕೆ ಅಚ್ಚುಮೆಚ್ಚಿನದಾಗಿವೆ. ಇಲ್ಲಿರುವ ಮಾರುಕಟ್ಟೆಯನ್ನು ನಾವು ಗುರಿಯಾಗಿಟ್ಟುಕೊಂಡು, ದಾಪುಗಾಲಿಡಲಿದ್ದೇವೆ. ರಾಜ್ಯದ ಉದ್ಯಮಸ್ನೇಹಿ ಕೈಗಾರಿಕಾ ನೀತಿಯು ಇದಕ್ಕೆ ಮತ್ತಷ್ಟು ಇಂಬು ಕೊಡಲಿದೆ ಎಂದು ಸಚಿವರು ಹೇಳಿದ್ದಾರೆ.

ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪಿಸಬೇಕೆಂಬುದು ರಾಹುಲ್ ಗಾಂಧಿಯವರು ಕೊಟ್ಟ ಮಾತಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಕಳೆದ ಬಜೆಟ್ಟಿನಲ್ಲಿ ಇದನ್ನು ಘೋಷಿಸಿದ್ದರು. ಈಗ ಇದಕ್ಕೆ ಮುಂದಡಿ ಇಡಲಾಗಿದೆ. ಜವಳಿ ಇಲಾಖೆಯ ಸಹಕಾರ, ಸಲಹೆಗಳನ್ನೂ ಪಡೆದುಕೊಂಡು, ಅಲ್ಲಿ ಈಗಾಗಲೇ ಇರುವ ಯೋಜನೆಗಳ ಪ್ರಯೋಜನವನ್ನೂ ಜೀನ್ಸ್ ಘಟಕಗಳಿಗೆ ತಲುಪಿಸಲಾಗುವುದು ಎಂದಿದ್ದಾರೆ.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!