K.J.George: ಲೋಡ್ ಶೆಡಿಂಗ್ ಮಾಡುವ ಪ್ರಶ್ನೆ ಉದ್ಭವವಾಗುವುದಿಲ್ಲ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಮುಂಬರುವ ಬೇಸಿಗೆಯ ಗರಿಷ್ಟ ಬೇಡಿಕೆ ಅವಧಿಯಲ್ಲಿ 19,000 ಮೆಗಾವ್ಯಾಟ್ ವಿದ್ಯುತ್ ಅಗತ್ಯವಿದೆ ಎಂದು ನಿರೀಕ್ಷಿಸಲಾಗಿದ್ದು, ಅದನ್ನು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೀಗಾಗಿ ಸದ್ಯಕ್ಕೆ ಲೋಡ್ ಶೆಡಿಂಗ್ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ (K.J.George) ಹೇಳಿದ್ದಾರೆ.

ಇಂಧನ ಇಲಾಖೆಗೆ ಸಂಬಂಧಿಸಿದಂತೆ ಇಲ್ಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಜಿಲ್ಲೆಯ ಜನಪ್ರತಿನಿಧಿಗಳು, ಬೆಸ್ಕಾಂ ಮತ್ತು ಕೆಪಿಟಿಸಿಎಲ್ ಅಧಿಕಾರಿಗಳೊಂದಿಗಿನ ಪರಿಶೀಲನಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇಸಿಗೆಯಲ್ಲಿ ಅಗತ್ಯವಿರುವ ವಿದ್ಯುತ್ ಪೂರೈಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದಕ್ಕೆ ತಕ್ಕಂತೆ ವಿತರಣೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಕಳೆದ ಬೇಸಿಗೆಯಲ್ಲಿ 17,000 ಮೆಗಾವ್ಯಾಟ್ ಗರಿಷ್ಠ ಬೇಡಿಕೆ ಬಂದಿತ್ತು. ಅದರಂತೆ ಮುಬರುವ ಬೇಸಿಗೆಯಲ್ಲಿ ಎಷ್ಟು ವಿದ್ಯುತ್ ಬೇಕಾಗಬಹುದು ಎಂಬ ಬಗ್ಗೆ ಕೃತಕ ಬುದ್ಧಿಮತ್ತೆ (ಐಎ) ತಂತ್ರಜ್ಞಾನ ಬಳಸಿಕೊಂಡು ಕೆಪಿಟಿಸಿಎಲ್, ಪಿಸಿಕೆಎಲ್ ಮತ್ತು ಎಸ್ ಎಲ್ ಡಿಸಿ ವತಿಯಿಂದ ನಡೆಸಿದ ಸಮೀಕ್ಷೆ ಪ್ರಕಾರ ಗರಿಷ್ಠ ಬೇಡಿಕೆ ಅವಧಿಯಲ್ಲಿ 19,000 ಮೆಗಾವ್ಯಾಟ್ ವಿದ್ಯುತ್ ಅವಶ್ಯಕತೆ ಬರಬಹುದು ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದರು.

ಅದರಂತೆ ಅಗತ್ಯ ವಿದ್ಯುತ್ ಪೂರೈಸಲು ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜತೆಗೆ ದೀರ್ಘಾವಧಿ ವಿದ್ಯುತ್ ಖರೀದಿ ಒಪ್ಪಂದದ ಮೂಲಕ ಹೆಚ್ಚುವರಿ ಅಗತ್ಯವಿರುವ ವಿದ್ಯುತ್ ಅನ್ನು ಕಡಿಮೆ ದರಕ್ಕೆ ಖರೀದಿಸಲು ಅನ್ಯ ರಾಜ್ಯಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಹೀಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಲೋಡ್ ಶೆಡಿಂಗ್ ಮಾಡುವ ಪ್ರಶ್ನೆ ಉದ್ಭವವಾಗುವುದಿಲ್ಲ ಎಂದರು.

ಜಿಲ್ಲೆಯಲ್ಲಿ ಅಗತ್ಯ ವಿದ್ಯುತ್ ಪೂರೈಕೆಗೆ ಕ್ರಮ

ಇದಕ್ಕೂ ಮುನ್ನ ಪರಿಶೀಲನಾ ಸಭೆಯಲ್ಲಿ ಮತನಾಡಿದ ಸಚಿವ ಕೆ.ಜೆ.ಜಾರ್ಜ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೈಗಾರಿಕೆಗಳು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಕೃಷಿ ಚಟುವಟಿಕೆ ಜತೆಗೆ ಕೈಗಾರಿಕೆಗಳಿಗೂ ಸಮರ್ಪಕ ವಿದ್ಯುತ್ ಪೂರೈಸಬೇಕಾಗಿದ. ಹೀಗಾಗಿ ಸುಗಮ ವಿದ್ಯುತ್ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಅದಕ್ಕಾಗಿ ಫೀಡರ್ ಗಳು, ಟ್ರಾನ್ಸ್ ಫಾರ್ಮರ್ ಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಫೀಡರ್ ಮಟ್ಟದ ಸೌರೀಕರಣದ ಮೂಲಕ ರೈತ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ಕುಸುಮ್- ಸಿ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೂ ಅನುಷ್ಠಾನಗೊಳಿಸಲಾಗುತ್ತಿದೆ. ಬೇಸಿಗೆಯಲ್ಲಿ ರೈತರಿಗೆ ಸಮಸ್ಯೆಯಾಗದಂತೆ ಈ ಫೀಡರ್ ಮಟ್ಟದ ಸೌರೀಕರಣ ಕಾಮಗಾರಿಯನ್ನು ಎಲ್ಲಾ ಕಡೆ ಏಕಕಾಲದಲ್ಲಿ ಕೈಗೊಂಡು ನಿಗದಿತ ಗಡುವಿನಲ್ಲಿ ಪೂರ್ಣಗೊಳಿಸಬೇಕು ಎಂದು ಅನುಷ್ಟಾನ ಏಜನ್ಸಿಗಳಿಗೆ ಸಚಿವರು ಸೂಚನೆ ನೀಡಿದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಕೃಷಿ ಪಂಪ್ ಸೆಟ್ ಗಳ ಅಕ್ರಮ- ಸಕ್ರಮ ಯೋಜನೆಯಡಿ 4.5 ಲಕ್ಷ ಅರ್ಜಿಗಳು ಬಾಕಿ ಇದ್ದವು. ಕಳೆದ ಒಂದೂವರೆ ವರ್ಷದಲ್ಲಿ 2.5 ಲಕ್ಷ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದೆ. ಇನ್ನುಳಿದ ಪಂಪ್ ಸೆಟ್ ಗಳನ್ನು ಮುಂದಿನ ಒಂದು ವರ್ಷದೊಳಗೆ ಸಕ್ರಮಗೊಳಿಸಲಾಗುವುದು. ವಿದ್ಯುತ್ ಫೀಡರ್ ಗಳಿಂದ 500 ಮೀಟರ್ ಗಿಂತ ಹೆಚ್ಚು ದೂರದಲ್ಲಿರುವ ಪಂಪ್ ಸೆಟ್ ಗಳನ್ನು ಸೌರೀಕರಣಗೊಳಿಸಲು ಆದ್ಯತೆ ನೀಡಲಾಗಿದೆ. ಅದಕ್ಕಾಗಿ ರಾಜ್ಯ ಸರ್ಕಾರದ ಸಬ್ಸಿಡಿಯನ್ನು ಶ. 50ಕ್ಕೆ ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರಶೇ. 30ರಷ್ಟು ಸಬ್ಸಿಡಿ ನೀಡುತ್ತಿದ್ದು, ರೈತರು ಶೇ. 20ರಷ್ಟು ಮೊತ್ತ ಭರಿಸಿದರೆ ಸಾಕು ಎಂದರು.

ಟ್ರಾನ್ಸ್ ಫಾರ್ಮರ್ ಗಳಲ್ಲಿ ಸಮಸ್ಯೆ ಉದ್ಭವವಾದರೆ ತಕ್ಷಣ ಅದನ್ನು ಬದಲಾಯಿಸಲು ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಟ್ರಾನ್ಸ್ ಫಾರ್ಮರ್ ಬ್ಯಾಂಕ್ ಗಳನ್ನು ಸ್ಥಾಪಿಸಲಾಗಿದ್ದು, ಅಲ್ಲಿ 213 ಟ್ರಾನ್ಸ್ ಫಾರ್ಮರ್ ಗಳು ಲಭ್ಯವಿದೆ. ಜತೆಗೆ ವಿದ್ಯುತ್ ಕಂಬಗಳು, ಕಂಡಕ್ಟರ್ ಗಳನ್ನು ಕೂಡ ಸಾಕಷ್ಟು ಪ್ರಮಾಣದಲ್ಲಿ ಸಂಗ್ರಹಿಸಿಡಲಾಗಿದೆ ಎಂದರು.

ನೆಲಮಂಗಲ ನಗರದಲ್ಲಿ ವಿದ್ಯುತ್ ತಂತಿಗಳನ್ನು ಭೂಗತವಾಗಿ ಅಳವಡಿಸಬೇಕು ಎಂಬ ಶಾಸಕ ಎನ್.ಶ್ರೀನಿವಾಸ್ ಅವರ ಮನವಿಗೆ ಸ್ಪಂದಿಸಿದ ಸಚಿವರು, ಈ ಬಗ್ಗೆ ಯೋಜನೆ ರೂಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಹೊಸಕೋಟೆ ತಾಲೂಕಿನಲ್ಲಿ ಕುಸುಮ್-ಸಿ ಯೋಜನೆಯಡಿ ಕೆರೆಗಳ ಅಂಗಳಗಳಲ್ಲಿ ನಡೆಯುತ್ತಿರುವ ಫೀಡರ್ ಸೌರೀಕರಣ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸೇಕು ಎಂಬ ಶಾಸಕ ಶರತ್ ಬಚ್ಚೇಗೌಡ ಅವರ ಮನವಿಗೆ ಪ್ರತಿಕ್ರಿಯಿಸಿ, ಈ ಬಗ್ಗೆ ತ್ವರಿತ ಕ್ರಮ ಕೈಗೊಳ್ಳುವಂತೆ ಬೆಸ್ಕಾಂ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಸಭೆಯಲ್ಲಿ ಬೆಂಗಳೂರು ಗ್ರಮಾಂತರ ಜಿಲ್ಲಾ ಉಸ್ತುವಾರಿಯೂ ಆಗಿರುವ ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಚಿವ ಕೆ.ಎಚ್.ಮುನಿಯಪ್ಪ, ಶಾಸಕರಾದ ಶರತ್ ಬಚ್ಚೇಗೌಡ, ಎನ್.ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಎಸ್.ರವಿ, ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ, ಬಯಪಾ ಅಧ್ಯಕ್ಷ ಶಾಂತಕುಮಾರ್, ಗ್ಯಾರಂಟಿಗಳ ಅನುಷ್ಟಾನ ಸಮಿತಿ ಅಧ್ಯಕ್ಷ ರಾಜಣ್ಣ ಮತ್ತಿತರರು ಪಾಲ್ಗೊಂಡಿದ್ದರು.

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!