ದೊಡ್ಡಬಳ್ಳಾಪುರ (Doddaballapura): ಇತ್ತೀಚಿಗೆ ನಿಧನರಾದ ಜೆಡಿಎಸ್ ಹಿರಿಯ ಮುಖಂಡ ಹೆಚ್.ಅಪ್ಪಯ್ಯಣ್ಣ ಅವರ ನುಡಿ ನಮನ ಕಾರ್ಯಕ್ರಮ ನಾಳೆ (ಜ. 11) ಹಾಡೋನಹಳ್ಳಿಯಲ್ಲಿ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಜೆಡಿಎಸ್ ವರಿಷ್ಠರಾದ ಹೆಚ್ಡಿ ಕುಮಾರಸ್ವಾಮಿ ಅವರು ದೊಡ್ಡಬಳ್ಳಾಪುರಕ್ಕೆ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಅದ್ಧೂರಿ ಸ್ವಾಗತ ಕೋರಲು ಜೆಡಿಎಸ್ ಹಿರಿಯ ಮುಖಂಡ ಹರೀಶ್ ಗೌಡ ಅವರು ಸಿದ್ಧತೆ ನಡೆಸಿದ್ದಾರೆ.
ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿಯ ಬ್ಯಾಂಕ್ ಸರ್ಕಲ್ ಬಳಿ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮಿಜಿ ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಅದ್ಧೂರಿ ಸ್ವಾಗತ ಕೋರಲು ಮುಂದಾಗಿರುವುದಾಗಿ ಮೂಲಗಳು ತಿಳಿಸಿವೆ.
ಅಪ್ಪಯ್ಯಣ್ಣ ಅವರ ಅಕಾಲಿಕ ನಿಧನ ಹಿನ್ನೆಲೆಯಲ್ಲಿ ಜ.11ರ ಶನಿವಾರ ಬೆಳಗ್ಗೆ 11ಗಂಟೆ ಹಾಡೋನಹಳ್ಳಿ ಗ್ರಾಮದ ರಂಗಮಂದಿರದಲ್ಲಿ ನುಡಿ ನಮನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.