Chemical ಸೋರಿಕೆ.. ಕಾರ್ಮಿಕ ದುರ್ಮರಣ..!

ಚಿಕ್ಕಬಳ್ಳಾಪುರ: ಟ್ಯಾಂಕರ್‌ನಿಂದ ಕೆಮಿಕಲ್ (Chemical) ಸೋರಿಕೆಯಾದ ಪರಿಣಾಮ ಉಸಿರುಗಟ್ಟಿ ಲಾರಿಯಿಂದ ಕೆಳಗೆ ಬಿದ್ದು ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ನಗರ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಮೃತ ಕಾರ್ಮಿಕನನ್ನು ಬಿಹಾರ ಮೂಲದ ಮಹಮದ್ ರಜೀಕ್ (33) ಎಂದು ಗುರ್ತಿಸಲಾಗಿದೆ.

ಘಟನೆಯಲ್ಲಿ ವಿಕಾಸ್‌ ಹಾಗೂ ಸೋನು ಎಂಬ ಕಾರ್ಮಿಕರು ಉಸಿರಾಟದ ಸಮಸ್ಯೆಯಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಮದ್‌ ರಜೀಕ್ ಕಳೆದ 5 ವರ್ಷಗಳ ಹಿಂದೆ ಹೆಂಡತಿಯೊಂದಿಗೆ ಕೂಲಿ ಕೆಲಸ ಅರಸಿ ಚಿಕ್ಕಬಳ್ಳಾಪುರಕ್ಕೆ ಬಂದಿದ್ದ. ನಗರ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿನ ಶ್ರೀನಿವಾಸಮೂರ್ತಿ ಎಂಬುವವರಿಗೆ ಸೇರಿದ ರಾಮ್ ಕೀ(ರಾಮ್ ರಸಾಯನಿಕ್) ಕೆಮಿಕಲ್ ತಯಾರಿಕಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಈತನ ಜೊತೆ ಸೋನು ಹಾಗೂ ವಿಕಾಸ್ ಸಹ ಕೆಲಸ ಮಾಡುತ್ತಿದ್ದರು.

ಬುಧವಾರ ಸಂಜೆ ಫ್ಯಾಕ್ಟರಿಯ ಕೆಮಿಕಲ್‌ವೇಸ್ಟ್ ತುಂಬಿದ್ದ ಟ್ಯಾಂಕರ್‌ನ ಮೇಲ್ಬಾಗದ ಕ್ಯಾಪ್ ಓಪನ್‌ ಆಗಿದೆ. ಇದರಿಂದ ಕೆಮಿಕಲ್ ಸೋರಿಕೆಯಾಗಿ ಏಕಾಏಕಿ ಮೂವರಿಗೂ ಉಸಿರುಗಟ್ಟಿದಂತಾಗಿದೆ. ತಲೆ ಸುತ್ತು ಬಂದು ಲಾರಿಯಿಂದ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಮಹಮದ್ ರಜೀಕ್ ತಲೆಗೆ ಗಂಭೀರ ಗಾಯವಾಗಿ ಮೃತಪಟ್ಟಿದ್ದಾರೆ.

ಮಾಲಿಕನ ವಿರುದ್ದ ದೂರು: ವಿಕಾಸ್ ಹಾಗೂ ಸೋನು ಉಸಿರಾಟದ ಸಮಸ್ಯೆಗೆ ತುತ್ತಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಂತರ ಲಾರಿ ಚಾಲಕ ಲಾರಿಯೊಂದಿಗೆ ಪರಾರಿಯಾಗಿದ್ದಾನೆ. ವಿಷಯ ತಿಳಿದ ನಂದಿಗಿರಿಧಾಮ ಪೋಲಿಸರು ಸ್ಥಳಕ್ಕಾಗಮಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿದರು.

ಘಟನೆ ಬಗ್ಗೆ ಮೃತನ ಸಂಬಂಧಿಕರು ದೂರು ನೀಡಿದ್ದು, ಕಾರ್ಮಿಕ ಇಲಾಖಾಧಿಕಾರಿಗಳು ಸ್ಥಳಕ್ಕೆ ಬಂದ ಅಧಿಕಾರಿಗಳು ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ.

ಕಳೆದ 14 ವರ್ಷಗಳ ಹಿಂದೆ ಇದೇ ರಾಮ್ ಕೀ (ರಾಮ್ ರಸಾಯನಿಕ್) ಕಾರ್ಖಾನೆಯಿಂದ ಕೆಮಿಕಲ್‌ ಸೋರಿಕೆಯಾಗಿ ಅಗಲಗುರ್ಕಿ ಬಿಜಿಎಸ್ ಇಂಗ್ಲೀಷ್ ಶಾಲೆಯವರೆಗೂ ಗಾಳಿಯಲ್ಲಿ ಆವರಿಸಿತ್ತು. ಇದರಿಂದ ಹಲವಾರು ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆ ಗೆದಾಖಲಾಗಿದ್ದರು. ಆಗ ಕಾರ್ಖಾನೆಯನ್ನು ಕೆಲ ದಿನಗಳ ಕಾಲ ಮುಚ್ಚಿದ್ದರು.

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

ಐಪಿಎಲ್‌ (IPL) ಅತ್ಯಂತ ಜನಪ್ರಿಯ ಫ್ರಾಂಚೈಸಿ ಆರ್‌ಸಿಬಿಯನ್ನು (RCB) ಆದಿತ್ಯ ಬಿರ್ಲಾ ಗ್ರೂಪ್ ಮತ್ತು ಟೈಮ್ಸ್ ಆಫ್ ಇಂಡಿಯಾ ನೇತೃತ್ವದ ಒಕ್ಕೂಟವು ಖರೀದಿಸಿದೆ.

[ccc_my_favorite_select_button post_id="120461"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!