ದೊಡ್ಡಬಳ್ಳಾಪುರ, (Doddaballapura): ಇತ್ತೀಚಿಗೆ ನಿಧನರಾದ ಜೆಡಿಎಸ್ ಹಿರಿಯ ಮುಖಂಡ ಹೆಚ್.ಅಪ್ಪಯ್ಯಣ್ಣ ಅವರ ನುಡಿ ನಮನ ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ಹಿನ್ನೆಲೆಯಲ್ಲಿ ತಾಲೂಕಿನ ಹಾಡೋನಹಳ್ಳಿ ಗ್ರಾಮಕ್ಕೆ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮಿಜಿ, ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿದ್ದಾರೆ.
ಮೊದಲಿಗೆ ಅಪ್ಪಯ್ಯಣ್ಣ ಅವರ ಸಮಾಧಿಗೆ ಭೇಟಿ ನೀಡಿರುವ ಅವರು, ಪುಷ್ಪ ನಮನ ಸಲ್ಲಿಸಿದ್ದಾರೆ.
ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ, ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಜೆಡಿಎಸ್ ತಾಲೂಕು ಅಧ್ಯಕ್ಷ ಲಕ್ಷ್ಮೀಪತಯ್ಯ, ಮಾಜಿ ಎಂಎಲ್ಸಿ ರಮೇಶ್ ಗೌಡ, ತೆಂಗು ನಾರು ಮಂಡಳಿ ಅಧ್ಯಕ್ಷ ಗಂಟಿಗಾನಹಳ್ಳಿ ಬಾಬು, ವಕ್ತಾರ ಕುಂಟನಹಳ್ಳಿ ಮಂಜುನಾಥ್ ಸೇರಿದಂತೆ ಅನೇಕರು ಇದ್ದರು.