HD Kumaraswamy: ದಲಿತರಿಗೆ ದೇವೇಗೌಡರು ಕೊಟ್ಟ ಕೊಡುಗೆ ಸ್ಮರಿಸಿದ ಹೆಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ಸಂವಿಧಾನದ ಆಶಯದಂತೆ ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ ಕಾರ್ಯ ನಿರ್ವಹಿಸುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಹೇಳಿದರು.

ಮಳವಳ್ಳಿ ತಾಲೂಕಿನ ಕಲ್ಕುಣಿ ಗ್ರಾಮದಲ್ಲಿ ನಿರ್ಮಿಸಲಾಗಿರುವ ‘ಬೌದ್ಧ ಅಂಬೇಡ್ಕರ್ ಮಹಾದ್ವಾರ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅತ್ಯಂತ ಅರ್ಥಪೂರ್ಣವಾಗಿ ನಿರ್ಮಿಸಲಾಗಿರುವ ಈ ಮಹಾದ್ವಾರ ಸಮ ಸಮಾಜದ ಸಂಕೇತವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಐತಿಹಾಸಿಕವಾಗಿ ಅಂಬೇಡ್ಕರ್ ಅವರಿಗೆ ಬಹಳ ಅಪಚಾರವಾಗಿತ್ತು. ಅದನ್ನು ಸರಿಪಡಿಸಿ ಮನುಕುಲ ಇರುವವರೆಗೂ ಬಾಬಾ ಸಾಹೇಬ್ ಅವರನ್ನು ಸ್ಮರಿಸಿಕೊಳ್ಳುವ ಕೆಲಸವನ್ನು ಕೇಂದ್ರ ಸರಕಾರ ಮಾಡುತ್ತಿದೆ ಎಂದು ಕೇಂದ್ರ ಸಚಿವರು ಹೇಳಿದರು.

ದಲಿತರಿಗೆ ದೇವೆಗೌಡರ ಕೊಡುಗೆ

ದೇವೇಗೌಡರು ದಲಿತರ ಉದ್ಧಾರಕ್ಕಾಗಿ ಅನೇಕ ಉತ್ತಮ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದರು. ಗಂಗಾ ಕಲ್ಯಾಣ ಯೋಜನೆಯನ್ನು ಅವರು ಜಾರಿಗೆ ತಂದು ಅನೇಕರಿಗೆ ಸಹಾಯ ಮಾಡಿದ್ದರು. ಸಚಿವರಾಗಿ, ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ ದಲಿತರ ಉದ್ಧಾರಕ್ಕೆ ಬಹುದೊಡ್ಡ ಕಾಣಿಕೆ ನೀಡಿದ್ದಾರೆ ಎಂದು ಸಚಿವರು ಹೇಳಿದರು.

ಮೊದಲು ಮೀಸಲು ಸೌಲಭ್ಯ ಕೇವಲ ವಿಧಾನಸಭೆ ,ಲೋಕಸಭೆ ಕ್ಷೇತ್ರಗಳಿಗೆ ಮೀಸಲಾಗಿತ್ತು. ದೇವೇಗೌಡರು ಆ ಮೀಸಲು ಸೌಲಭ್ಯವನ್ನು ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ ಸೇರಿ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿಯೂ ಜಾರಿಗೆ ತಂದರು. ಹಾಸನ ಜಿಲ್ಲಾ ಪಂಚಾಯತಿ ಅಧ್ಯಕ್ಷರನ್ನಾಗಿ ಎಂಎ ಪದವೀಧರನಾಗಿದ್ದ ಒಬ್ಬ ದಲಿತ ಯುವಕನನ್ನು ಮಾಡಿದ್ದರು. ತಳಮಟ್ಟದ ಸಮುದಾಯಗಳ ವಿದ್ಯಾವಂತರನ್ನು ಗುರುತಿಸಿ ಅಧಿಕಾರ ನೀಡುವ ಕೆಲಸವನ್ನು ಅವರು ಮಾಡಿದ್ದರು ಎಂದು ಅವರು ಹೇಳಿದರು.

ಕಲ್ಕುಣಿ ಗ್ರಾಮದಲ್ಲಿ ಸಮುದಾಯ ಭವನ

ಗ್ರಾಮದಲ್ಲಿ ಸಮುದಾಯ ಭವನ ನಿರ್ಮಾಣ ಬೇಕೆಂದು ಗ್ರಾಮಸ್ಥರು ಕೇಂದ್ರ ಸಚಿವರಿಗೆ ಬೇಡಿಕೆ ಮಂಡಿಸಿದರು. ಇದಕ್ಕೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು; ತಕ್ಷಣವೇ ಸಮುದಾಯ ಭವನ ಮಂಜೂರು ಮಾಡಿ, ನಿರ್ಮಾಣ ಮಾಡಿಕೊಡಲಾಗುವುದು. ಅದಕ್ಕೆ ಅಗತ್ಯವಾದ ಸೂಕ್ತ ಜಾಗವನ್ನು ತಕ್ಷಣವೇ ಗ್ರಾಮಸ್ಥರ ಜತೆ ಸೇರಿ ಗುರುತಿಸುವಂತೆ ಮಾಜಿ ಶಾಸಕ ಅನ್ನದಾನಿ ಅವರಿಗೆ ಸೂಚಿಸಿದರು.

ಮಾಜಿ ಶಾಸಕ ಡಾ.ಕೆ.ಅನ್ನದಾನಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಜಕ್ರಿಯಾ ಖಾನ್, ಯುವ ಜನತಾದಳ ಮುಖಂಡ ಸುಹಾಸ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಶ್ರೀ ನಂಜುಂಡ ಸ್ವಾಮಿ, ಮಲ್ಲು ಹಾಗೂ ತಾಲೂಕು ಬಹುಜನ ಸಮಾಜ ಪಕ್ಷದ ಮಾಜಿ ಅಧ್ಯಕ್ಷ ಚಿನ್ನಸ್ವಾಮಿ ಮುಂತಾದವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!