R Ashoka: ಹಿಂದೂಗಳ ಸಂಖ್ಯೆ ಕಡಿಮೆಯಾಗಲಿ ಎಂಬುದು ಸಿಎಂ ಸಿದ್ದರಾಮಯ್ಯನವರ ಉದ್ದೇಶ: ಆರ್ ಅಶೋಕ

Give justice to the candidates in the case of KAS Prelims Reexamination

ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಪತ್ತೆ ಮಾಡಬೇಕೇ ಹೊರತು ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಪೊಲೀಸರು ಇದರ ಹಿಂದಿರುವವರನ್ನು ಹುಡುಕಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಆಗ್ರಹಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಿಂದೂಗಳಿಗೆ ಘಾಸಿಯಾಗುವ ಘಟನೆ ನಡೆದಿದೆ.

ಸಂಕ್ರಾಂತಿ ಹಬ್ಬದ ಸಮಯದಲ್ಲೇ ಹಸುಗಳ ಕೆಚ್ಚಲು ಕೊಯ್ದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ವಹಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದೆ. ಈಗ ಕಾಟಾಚಾರಕ್ಕಾಗಿ ಒಬ್ಬನನ್ನು ಬಂಧಿಸಿದ್ದು, ಈತ ಬಿಹಾರದಿಂದ ಬಂದವನು ಎನ್ನಲಾಗಿದೆ. ಆದರೆ ಈತ ಇದೇ ಊರಿನಲ್ಲಿ ಹತ್ತು ವರ್ಷಗಳಿಂದ ನೆಲೆಸಿದ್ದು, ಆತನ ಅಣ್ಣನಿಗೆ ಫ್ಯಾಕ್ಟರಿ ಕೂಡ ಇದೆ.

ಪೊಲೀಸರು ಈತನನ್ನು ವಿಚಾರಣೆ ಮಾಡಿ, ಇದರ ಹಿಂದೆ ಯಾರಿದ್ದಾರೆ ಎಂದು ಪತ್ತೆ ಮಾಡಬೇಕಿತ್ತು ಎಂದರು.

ಈ ಘಟನೆಯಲ್ಲಿ ಯಾರ ಕೈವಾಡವಿದೆ ಎಂದು ತನಿಖೆ ಮಾಡಬೇಕಿತ್ತು. ಇಲ್ಲಿ ಪಶು ಆಸ್ಪತ್ರೆಯ ಜಾಗವಿದ್ದು, ಅದನ್ನು ವಕ್ಫ್‌ಗೆ ನೀಡಲು ಪ್ರಯತ್ನ ನಡೆದಿತ್ತು. ಸುಮಾರು 500 ಕೋಟಿ ರೂ. ಬೆಲೆಬಾಳುವ ಆಸ್ತಿಯನ್ನು ಲೂಟಿ ಮಾಡಲು ನಕಲಿ ದಾಖಲೆಗಳನ್ನು ಸರ್ಕಾರ ಸೃಷ್ಟಿ ಮಾಡಿತ್ತು. ಅದರ ವಿರುದ್ಧ ಹೋರಾಟ ಮಾಡಿದ ಕರ್ಣ ಅವರ ಮೇಲೆ ಸೇಡು ತೀರಿಸಿಕೊಳ್ಳಲು ಹೀಗೆ ಮಾಡಿದ್ದಾರೆ. ಸಚಿವ ಜಮೀರ್‌ ಅಹ್ಮದ್‌ ಹಸು ನೀಡುವುದರಿಂದ ಪರಿಹಾರ ಸಿಗಲ್ಲ. ಇದಕ್ಕೆ ನ್ಯಾಯ ಸಿಗಬೇಕಿದೆ ಎಂದು ಆಗ್ರಹಿಸಿದರು.

ಹಿಂದೂಗಳ ಸಂಖ್ಯೆ ಕಡಿಮೆಯಾಗಿಸುವ ಹುನ್ನಾರ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಎರಡು ಮಕ್ಕಳು ಮಾಡಿಕೊಳ್ಳಿ ಎಂದು ಹೇಳಿದ್ದಾರೆ. ಇದನ್ನೇ ಮುಸ್ಲಿಮರ ಬಳಿ ಹೋಗಿ ಹೇಳಲಿ. ಹಿಂದೂಗಳ ಸಂಖ್ಯೆ ಕಡಿಮೆಯಾಗಲಿ, ಮುಸ್ಲಿಮರ ಸಂಖ್ಯೆ ಹೆಚ್ಚಲಿ ಎಂಬುದು ಅವರ ಉದ್ದೇಶ.

ಒಂದು ಧರ್ಮಕ್ಕೆ ಬೆಣ್ಣೆ, ಮತ್ತೊಂದು ಧರ್ಮಕ್ಕೆ ಸುಣ್ಣ ಹಚ್ಚಲಾಗುತ್ತಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಎಲ್ಲ ಸಮುದಾಯಗಳನ್ನು ಒಂದಾಗಿ ಕೊಂಡೊಯ್ಯಬೇಕು ಎಂದು ಕಿವಿಮಾತು ಹೇಳಿದರು.

ರಾಜ್ಯದಲ್ಲಿ ಆಡಳಿತ ನೆಲ ಕಚ್ಚಿದೆ. ಅಭಿವೃದ್ಧಿ ಕಾರ್ಯವನ್ನು ಟಾರ್ಚ್‌ ಹಾಕಿ ಹುಡುಕಬೇಕಿದೆ. ಸಿಎಂ ಕುರ್ಚಿ ಖಾಲಿ ಇಲ್ಲವೆಂದು ಸಿದ್ದರಾಮಯ್ಯ ಸಾವಿರ ಬಾರಿ ಹೇಳಿದ್ದಾರೆ. ಎಲ್ಲೇ ಹೋದರೂ ಅದನ್ನೇ ಮಾತಾಡುತ್ತಿದ್ದಾರೆ.

ಎಲ್ಲ ನಾಯಕರು ಪವರ್‌ ಪಾಲಿಟಿಕ್ಸ್‌ನಲ್ಲಿ ಮುಳುಗಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಮಂಡ್ಯಕ್ಕೆ ಹೋಗಿ ಅಧಿಕಾರ ಕೊಡಿ ಎಂದು ಜನರ ಮುಂದೆ ಹೇಳಿದ್ದರು. ಈಗ ಶಾಸಕರ ಮುಂದೆ ಹೋಗಿ ಅಂಗಲಾಚುತ್ತಿದ್ದಾರೆ. ಇವರ ಕಥೆ ಕತ್ತಲಲ್ಲಿ ಕರಡಿಯನ್ನು ಹುಡುಕುವಂತಾಗಿದೆ. ಈ ಪವರ್‌ ಶೇರಿಂಗ್‌ ಎಲ್ಲಿ ನಡೆದಿದೆ ಎಂದು ಜನರಿಗೆ ಸ್ಪಷ್ಟವಾಗಿ ತಿಳಿಸಲಿ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್‌ ಶ್ಲೋಕ ಹೇಳಿದರೆ, ಸಚಿವ ರಾಜಣ್ಣ ಟೀಕೆ ಮಾಡುತ್ತಿದ್ದಾರೆ. ಸಚಿವ ಪರಮೇಶ್ವರ್‌ ಕೂಡ ಕೆಂಡಕಾರಿದ್ದಾರೆ. ಕೆಲವು ಶಾಸಕರು ಮುಂದಿನ ಸಿಎಂ ಶಿವಕುಮಾರ್‌ ಎನ್ನುತ್ತಿದ್ದಾರೆ. ಜನರು ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಇಂತಹ ಪಾಪಿ ಸರ್ಕಾರ ಯಾಕಾದರೂ ಬಂತೋ ಎಂದು ಜನರು ಶಾಪ ಹಾಕುತ್ತಿದ್ದಾರೆ ಎಂದರು.

ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲ ಬಂದು ಹೋದ ಬಳಿಕವೂ ಈ ಸಮಸ್ಯೆ ನಿವಾರಣೆಯಾಗಲ್ಲ. ಪವರ್‌‌ ಶೇರಿಂಗ್‌ ಬಗ್ಗೆ ಶಾಸಕರಿಗೆ ಸ್ಪಷ್ಟವಾಗಬೇಕಿದೆ. ಹೈಕಮಾಂಡ್‌ ಡಿ.ಕೆ.ಶಿವಕುಮಾರ್‌ ಅವರಿಗೆ ಮಾತು ನೀಡಿದೆ. ಅದರ ಬಗ್ಗೆ ಸರಿಯಾಗಿ ತಿಳಿಸಲಿ ಎಂದರು.

ರಾಜಕೀಯ

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಜೆಡಿಎಸ್ (JDS) ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಹರೀಶ್ ಗೌಡ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಬಿ.ಮುನೇಗೌಡ ಅವರ ಸ್ವ ಗೃಹಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="121727"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]