News update: Saif Ali Khan knife stabbing case

News update: ಸೈಫ್ ಅಲಿ ಖಾನ್‌ಗೆ ಚಾಕು ಇರಿದ ಪ್ರಕರಣ

ನವದೆಹಲಿ, (News update): ಇಂದು ಬೆಳಗಿನ ಜಾವ ಸುಮಾರು 2.30 ಕ್ಕೆ ದುಷ್ಕರ್ಮಿಯಿಂದ ಇರಿತಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಬಾಲಿವುಡ್​ ಖ್ಯಾತ ನಟ ಸೈಫ್ ಅಲಿ ಖಾನ್ (SaifAliKhan) ಆರೋಗ್ಯ ಸ್ಥಿರವಾಗಿದೆ.

ಡಾಕ್ಟರ್ ಉತ್ತಮಣಿ ಹೇಳಿದ್ ಇಷ್ಟು

ಸೈಫ್ ಅಲಿ ಖಾನ್ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಆಪರೇಷನ್ ಗಳು ನಡೆಸಲಾಗಿದೆ. ಪ್ರಸ್ತುತ ಮಾಹಿತಿ ಅನ್ವಯ​ ನಟ ಸೈಫ್ ಅಲಿ ಖಾನ್ ಆರೋಗ್ಯ ಸ್ಥಿರವಾಗಿದ್ದು, ಐಸಿಯುನಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಸಿಓಓ ಡಾ ಉತ್ತಮಣಿ ಹೇಳಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಸೈಫ್ ಅವರಿಗೆ ಚಾಕು ಇರಿತದ ಒಟ್ಟು 6 ಗಾಯಗಳಾಗಿದ್ದು ಅದರಲ್ಲಿ ಎರಡು ಚಿಕ್ಕ ಪ್ರಮಾಣದವು, ಎರಡು ಮಧ್ಯಂತರ ಮತ್ತು ಉಳಿದೆರಡು ಆಳವಾದ ಗಾಯಗಳು, ಅವರ ಬೆನ್ನಿಂದ ಸುಮಾರು ಎರಡೂವರೆ ಇಂಚು ಉದ್ದವಿರುವ ಚಾಕುವಿನ ತುಂಡನ್ನು ಸರ್ಜರಿ ಮೂಲಕ ತೆಗೆಯಲಾಗಿದೆ ಎಂದು ವೈದ್ಯ ಹೇಳಿದ್ದಾರೆ.

ಶಂಕಿತನ ಫೋಟೋ ಬಿಡುಗಡೆ

ಇದರ ಬೆನ್ನಲ್ಲೇ ಬಾಲಿವುಡ್ ನಟ ಸೈಫ್ ಅಲಿ ಖಾನ್​ ಅವರ ಮನೆಗೆ ನುಗ್ಗಿ, ಚಾಕು ಇರಿದ ಪ್ರಕರಣದಲ್ಲಿ ಇಬ್ಬರು ಶಂಕಿತ ವ್ಯಕ್ತಿಗಳನ್ನು ಮುಂಬೈ ಪೊಲೀಸರು ಗುರುತಿಸಿದ್ದಾರೆ. ಆ ಪೈಕಿ ಓರ್ವ ಶಂಕಿತನ ಫೋಟೋ ಮುಂಬೈ ಪೊಲೀಸರು ಬಿಡುಗಡೆ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋ ವೈರಲ್ ಆಗಿದೆ. ಸೈಫ್ ಕುಟುಂಬ ವಾಸವಾಗಿರುವ ಅಪಾರ್ಟ್​ಮೆಂಟ್​ನ ಮೆಟ್ಟಿಲುಗಳನ್ನು ಹತ್ತಿ ಬರುವಾಗ ಸಿಸಿಟಿವಿಯಲ್ಲಿ ಶಂಕಿತನ ವಿಡಿಯೋ ಸೆರೆಯಾಗಿದೆ.

ಶಂಕಿತ ವ್ಯಕ್ತಿಯು ಟಿ-ಶರ್ಟ್​ ಮತ್ತು ಜೀನ್ಸ್ ಧರಿಸಿದ್ದಾನೆ. ಆತ ಯಾರು? ಆತನ ಉದ್ದೇಶ ಏನಾಗಿತ್ತು ಎಂಬಿತ್ಯಾದಿ ವಿಚಾರಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ದರೋಡೆಕೋರರು ನುಗ್ಗಿದ್ದನ್ನು ಮೊದಲು ನೋಡಿದ್ದು ಸೈಫ್​ ಮನೆಯ ಕೆಲಸದವರು. ಕೂಡಲೇ ಅವರು ಸೈಫ್​ ಅಲಿ ಖಾನ್​ ಅವರನ್ನು ಎಚ್ಚರಿಸಿದರು.

ಈ ವೇಳೆ ಆಕ್ರಮಣ ಮಾಡಿದ ದರೋಡೆಕೋರನು ಸೈಫ್ ಅಲಿ ಖಾನ್​ಗೆ 6 ಬಾರಿ ಚಾಕುವಿನಿಂದ ತಿವಿದಿದ್ದಾನೆ. ಬೆನ್ನು, ಕುತ್ತಿಗೆ, ಕೈ ಮುಂತಾದ ಭಾಗಗಳಿಗೆ ಗಾಯಗೊಳಿಸಿದ್ದಾನೆ. ಕೂಡಲೇ ಸೈಫ್ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಆಟೋದಲ್ಲಿ ಆಸ್ಪತ್ರೆಗೆ..!

ಚಾಕು ಇರಿತದಿಂದ ಗಂಭೀರ ಗಾಯಗೊಂಡಿದ್ದ ಬಾಲಿವುಡ್ ನಟ ಸೈಫ್ ಆಲಿ ಖಾನ್ ಅವರನ್ನು ಪುತ್ರ ಆಟೋದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅವರ ಬಳಿ ಐಷಾರಾಮಿ ಕಾರುಗಳು ಇದ್ದರೂ ನಟನನ್ನು ಆಟೋದಲ್ಲಿ ಕರೆದೊಯ್ದಿದ್ದು ಯಾಕೆ ಎಂಬ ಪ್ರಶ್ನೆ ಎದ್ದಿದೆ.

ಹೌದು. ಸ್ಟಾರ್ ಹೀರೋ ಆಗಿರುವ ಸೈಫ್ ಬಳಿ ಹಲವು ಐಷಾರಾಮಿ ಕಾರುಗಳು ಇವೆ. ಆದರೆ ಈ ಘಟನೆ ವೇಳೆ ತಂದೆಯನ್ನು ಆಸ್ಪತ್ರೆಗೆ ಸೇರಿಸಲು ಅವರ ಪುತ್ರ ಕಾರಿನ ಬದಲು ಆಟೋ ಬಳಸಿದ್ದಾರೆ.

ಅಪರಿಚಿತನ ದಾಳಿಯಿಂದ ರಕ್ತದ ಮಡುವಿನಲ್ಲಿದ್ದ ತಂದೆಯನ್ನು ನೋಡಿ ಪುತ್ರ ಇಬ್ರಾಹಿಂ ಶಾಕ್ ಆಗಿದ್ದಾರೆ. ತಕ್ಷಣ ಅವರು ಕಾರಿನಲ್ಲಿ ತಂದೆಯನ್ನು ಆಸ್ಪತ್ರೆಯಿಂದ ಕರೆದುಕೊಂಡು ಹೋಗುವ ಪ್ರಯತ್ನ ಮಾಡಿದರು. ಆದರೆ ಯಾವ ಕಾರುಗಳೂ ಸಿದ್ಧವಿರಲಿಲ್ಲ ಎನ್ನಲಾಗಿದೆ.

ಇನ್ನು ಕಾರಿಗೆ ಕಾಯುತ್ತಿದ್ದಾಗ ಇನ್ನೇನೋ ಅನಾಹುತ ಸಂಭವಿಸಬಹುದು ಎಂದು ಅರಿತ ಇಬ್ರಾಹಿಂ, ಮನೆಯ ಹೊರಗಡೆ ತೆರಳಿ ಆಟೋದಲ್ಲಿ ಕರೆದುಕೊಂಡು ಹೋಗಿದ್ದಾರೆ.

ಸೈಫ್ ಅಲಿ ಖಾನ್ ವಾಸವಿರುವ ಸದ್ಗುರು ಶರಣ್ ಅಪಾರ್ಟ್‌ಮೆಂಟ್ ನಿಂದ ಲೀಲಾವತಿ ಆಸ್ಪತ್ರೆ ಕೇವಲ 1.6 ಕಿ.ಮೀ. ದೂರದಲ್ಲಿದೆ. ಹೀಗಾಗಿ ಸರಿಯಾದ ಸಮಯಕ್ಕೆ ಆಟೋ ಸಿಕ್ಕಿದ್ದರಿಂದ ಅವರು ಆಸ್ಪತ್ರೆ ಸೇರಲು ಸಹಕಾರಿ ಆಯಿತು.

ಸದ್ಯ ಸೈಫ್ ಅವರಿಗೆ ಸರ್ಜರಿ ಪೂರ್ಣಗೊಂಡಿದ್ದು, ಚೇತರಿಸಿಕೊಳ್ಳುತ್ತಿದ್ದು, ಪ್ರಕರಣದ ಬಗ್ಗೆ ಮುಂಬೈ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

ರಾಜಕೀಯ

ಸಂಸತ್‌ನಲ್ಲಿ ಆಪರೇಷನ್ ಸಿಂಧೂರ ಕದನವಿರಾಮದ ಕಾವೇರಿದ ಚರ್ಚೆ: ರಾಹುಲ್ ಗಾಂಧಿ ಸವಾಲು, ಮೋದಿ ಸ್ಪಷ್ಟನೆ

ಸಂಸತ್‌ನಲ್ಲಿ ಆಪರೇಷನ್ ಸಿಂಧೂರ ಕದನವಿರಾಮದ ಕಾವೇರಿದ ಚರ್ಚೆ: ರಾಹುಲ್ ಗಾಂಧಿ ಸವಾಲು, ಮೋದಿ

ಚಳಿಗಾಲದ ಅಧಿವೇಶನದಲ್ಲಿ ಆಪರೇಷನ್ ಸಿಂಧೂರ (Operation Sindoor), ಏಕಾಏಕಿ ಕದನ ವಿರಾಮ (ceasefire) ಘೋಷಣೆ ಕುರಿತು ತೀವ್ರ ಚರ್ಚೆಗೆ ಕಾರಣವಾಗಿತ್ತು.

[ccc_my_favorite_select_button post_id="111876"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಮತ್ತೊಂದು ಬಲಿ.!

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಮತ್ತೊಂದು ಬಲಿ.!

ಸರ್ಕಾರಗಳು ಮುಂಜಾಗ್ರತೆ ಕ್ರಮ ಕೈಗೊಳ್ಳಿ ಎಂದು ಎಷ್ಟೇ ಸೂಚನೆ ನೀಡಿದರು, ಕೃಷಿ ಹೊಂಡದಲ್ಲಿ (Agricultural pit) ಆಕಸ್ಮಿಕವಾಗಿ ಬಿದ್ದು ಸಾವನಪ್ಪುತ್ತಿರುವ ಪ್ರಕರಣಗಳು ಮಾತ್ರ ನಿಲ್ಲುತ್ತಿಲ್ಲ.

[ccc_my_favorite_select_button post_id="111873"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!