Disha Committee meeting tomorrow: Dr.K.Sudhakar

ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 5 ಲಕ್ಷದವರೆಗೆ ಉಚಿತ ಚಿಕಿತ್ಸೆ: ಸಂಸದ Dr K Sudhakar

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 5 ಲಕ್ಷ ವರೆಗಿನ ಉಚಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ದೊರಕಲಿದ್ದು, ಈ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಿ ಎಂದು ಅಧಿಕಾರಿಗಳಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ ಕೆ ಸುಧಾಕರ್ (Dr K Sudhakar) ಅವರು ಹೇಳಿದರು.

ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ಎರಡನೇ ತ್ರೈಮಾಸಿಕ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರವು ದೇಶದ ಅಭಿವೃದ್ಧಿಗೆ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೆ ತಂದಿದೆ. ರೈತರ, ಹಿಂದುಳಿದವರ, ಬಡವರಪರ ಹಲವು ಜನಪ್ರಿಯ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ.

ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ತಂದು ಜನಸಾಮಾನ್ಯರಿಗೆ 5 ಲಕ್ಷದವರೆಗಿನ ಉಚಿತ ವೈದ್ಯಕೀಯ ಸೌಲಭ್ಯ ಕಲ್ಪಿಸಲಾಗುತ್ತಿದೆ. ಜನಸಾಮಾನ್ಯರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯ ಪ್ರತಿಯೊಬ್ಬರು ಆಯುಷ್ಮಾನ್ ಕಾರ್ಡ್ ಮಾಡಿಸಿಕೊಳ್ಳುವಂತೆ ಅರಿವು ಮೂಡಿಸಿ ಎಂದರು.

ಬೆಳೆ ವಿಮೆ ನೋಂದಣಿ ಹೆಚ್ಚಿಸಿ

ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಕಳೆದ ಸಾಲಿನಲ್ಲಿ ಜಿಲ್ಲೆಯಲ್ಲಿ 4885 ರೈತರು ನೋಂದಣಿ ಯಾಗಿದ್ದಾರೆ. ಜಿಲ್ಲೆಯ ರೈತರು ತೋಟಗಾರಿಕೆ ಹಾಗೂ ಕೃಷಿ ವಾಣಿಜ್ಯ ಬೆಳೆಗಳನ್ನು ಹೆಚ್ಚು ಬೆಳೆಯುತ್ತಾರೆ.

ಒಮ್ಮೆ ನಷ್ಟವಾದರೆ ರೈತರಿಗೆ ಬಹಳ ತೊಂದರೆ ಆಗುತ್ತದೆ. ಈ ಹಿನ್ನೆಲೆಯಲ್ಲಿ ಬೆಳೆ ವಿಮೆ ಮಾಡಿಸುವುದರಿಂದ ಆಗುವಂತಹ ಅನುಕೂಲಗಳ ಬಗ್ಗೆ ವ್ಯಾಪಕ ಪ್ರಚಾರ ಕೈಗೊಂಡು ರೈತರಿಗೆ ಅರಿವು ಮೂಡಿಸಿ ಈ ವರ್ಷ ನೋಂದಣಿ ಹೆಚ್ಚಿಸಿ ಎಂದರು.

29 ರೂ. ಗಳಿಗೆ ಭಾರತ್ ಅಕ್ಕಿ

ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಒಳ್ಳೆಯ ಗುಣಮಟ್ಟದ ಅಕ್ಕಿಯನ್ನು ಕೇಂದ್ರ ಸರ್ಕಾರ ಪೂರೈಸುತ್ತಿದ್ದು ಒಂದು ಕೆ.ಜಿ ಅಕ್ಕಿಗೆ 29 ರೂಪಾಯಿಗಳು ಮಾತ್ರ. ಸಾರ್ವಜನಿಕರಿಗೆ ಇದರ ಬಗ್ಗೆ ಅರಿವು ಮೂಡಿಸಿ ಎಂದರು.

ಗ್ಯಾಸ್ ಸಂಪರ್ಕ ಹೊಂದಿಲ್ಲದ 3098 ಕುಟುಂಬಗಳ ಜಿಲ್ಲೆಯಲ್ಲಿದ್ದು ಅಂತವರಿಗೆ ಉಜ್ವಲ ಯೋಜನೆಯಡಿ ಗ್ಯಾಸ್ ಸಂಪರ್ಕ ಕಲ್ಪಿಸಲು ಕ್ರಮ ವಹಿಸಿ.

ಒಂದು ದೇಶ ಒಂದು ಪಡಿತರ ಯೋಜನೆ ಜಾರಿಯಾಗಿ ದೇಶದ ಜನರು ದೇಶದ ಯಾವುದೇ ಪಡಿತರ ಅಂಗಡಿಯಲ್ಲಿ ಬೇಕಾದರೂ ಪಡಿತರ ಪಡೆಯಬಹುದಾದ ಸೌಲಭ್ಯವಿದೆ. ಆದರೆ ಹೊರ ರಾಜ್ಯದಿಂದ ಬಂದು ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ನಮ್ಮ ರಾಜ್ಯದಲ್ಲಿ ಪಡಿತರ ಪಡೆಯಲು ಆಗುತ್ತಿಲ್ಲ ಎಂಬ ಮಾಹಿತಿ ಬಂದಿದ್ದು ರಾಜ್ಯ ಸರ್ಕಾರಕ್ಕೆ ಇದರ ಬಗ್ಗೆ ವರದಿ ಸಲ್ಲಿಸಿ ಎಂದರು.

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜತೆಗೆ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪ್ರಗತಿ ಸಾಧಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು.

ಜಿಲ್ಲೆ ವ್ಯಾಪ್ತಿಯ ಸರ್ಕಾರಿ ಶಾಲೆಗಳಿಗೆ ತಿಂಗಳಿಗೊಮ್ಮೆ ಎಲ್ಲಾ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಮಕ್ಕಳ ಜತೆಗೆ ಮಧ್ಯಾಹ್ನದ ಬಿಸಿಯೂಟ ಮಾಡಬೇಕು. ಇದರಿಂದ ಆಹಾರದ ಗುಣಮಟ್ಟ ಹಾಗೂ ಅಧಿಕಾರಿಗಳ ಕಾರ್ಯಕ್ಷಮತೆ ಕಾಣಬಹುದು ಎಂದರು.

ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ನಿರ್ಮಾಣವಾಗಿರುವ ತ್ಯಾಜ್ಯ ನಿರ್ವಹಣಾ ಘಟಕಗಳು ಸರಿಯಾದ ರೀತಿಯಲ್ಲಿ ಸದ್ಬಳಕೆ ಆಗುತ್ತಿದೆಯೇ ಇಲ್ಲವೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿ. ಗ್ರಾಮೀಣ ಪ್ರದೇಶಗಳಲ್ಲಿ ತ್ಯಾಜ್ಯ ಸಂಗ್ರಹಣೆ ಹಾಗೂ ಒಣ ಕಸ-ಹಸಿ ಕಸ ವಿಂಗಡಣೆ ಜತೆಗೆ ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವುದರ ಮೂಲಕ ಕಸ ವಿಲೇವಾರಿ ಘಟಕಗಳ ಸದ್ಬಳಕೆ ಆಗಬೇಕು ಎಂದು ಹೇಳಿದರು.

ಬಾಣಂತಿಯರ, ಶಿಶುಗಳ ಸಾವು ತಡೆಗಟ್ಟಿ

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಹಾಗೂ ಖಾಸಗಿ ವೈದ್ಯರು, ನರ್ಸ್ ಗಳಿಗೆ ಕಾರ್ಯಾಗಾರ ಏರ್ಪಡಿಸಿ ಗರ್ಭಿಣಿ, ಬಾಣಂತಿಯರ ಹಾಗೂ ಶಿಶುಗಳ ಲಾಲನೆ, ಪಾಲನೆ, ಚಿಕಿತ್ಸಾ ವಿಧಾನ ಬಗ್ಗೆ ತರಬೇತಿ ನೀಡಿ. ಇದರಿಂದ ಗರ್ಭಿಣಿಯರ, ಶಿಶುಗಳ ಸಾವು ಸಂಭವಿಸುವುದನ್ನು ತಪ್ಪಿಸಬಹುದು ಎಂದರು.

ಬಾಲ್ಯವಿವಾಹ ಹಾಗೂ ಪೊಕ್ಸೋ ಪ್ರಕರಣಗಳು ತಡೆಯುವಲ್ಲಿ ಸಂಬಂಧಪಟ್ಟ ಇಲಾಖೆ ಜತೆಗೆ ಪೋಲಿಸ್ ಇಲಾಖೆ ಜಂಟಿಯಾಗಿ ಕಾರ್ಯ ಪ್ರವೃತರಾಗಿ ಕೆಲಸ ಮಾಡಬೇಕು. ಬಾಲ್ಯ ವಿವಾಹ ಪ್ರಕರಣ ದಾಖಲಾಗಿ ಇತ್ಯರ್ಥ ಆಗುವ ವರೆಗೆ ವರದಿ ಪಡೆದು ನಿಗಾ ವಹಿಸಬೇಕು ಎಂದರು.

ಕೇಂದ್ರ ಸರ್ಕಾರದ ಯಾವುದೇ ಯೋಜನೆಗಳ ಪ್ರಸ್ತಾವನೆ, ಅನುದಾನ, ಕಾಮಗಾರಿ ಹಾಗೂ ಇನ್ನಿತರ ಬಾಕಿ ಇರುವ ಕೆಲಸಗಳ ಬಗ್ಗೆ ಸಂಬಂಧಪಟ್ಟ ಆಯಾ ಇಲಾಖೆಗಳು ವರದಿ ಸಿದ್ಧಪಡಿಸಿ ಮಾಹಿತಿ ನೀಡಿ , ವರದಿಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದು ಕಾರ್ಯ ರೂಪಕ್ಕೆ ತರುವಲ್ಲಿ ಕೆಲಸ ಮಾಡಲಾಗುವುದು ಎಂದರು.

ಸರಕಾರಿ ಕಚೇರಿಗಳಲ್ಲಿ ಕೆಲಸ ವಿಳಂಬವಾಗುತ್ತಿರುವ ಬಗ್ಗೆ ಜನಸಾಮಾನ್ಯರ ದೂರುಗಳು ಕೇಳಿ ಬರುತ್ತಲೇ ಇರುತ್ತದೆ. ಸರಕಾರಿ ಸೌಲಭ್ಯ ಪಡೆಯಲು ಕಚೇರಿಗಳಿಗೆ ಅಲೆದಾಡಿಸಲಾಗುತ್ತದೆ ಎಂಬುದು ಜನರ ದೂರುಗಳಾಗಿವೆ.

ಅಧಿಕಾರಿಗಳು ಸಮಯ ಪ್ರಜ್ಞೆ ಇಟ್ಟುಕೊಂಡು ಕೆಲಸ ಮಾಡಬೇಕು. ಜನಸಾಮಾನ್ಯರ ಕೆಲಸಕ್ಕೆ ಆದ್ಯತೆ ನೀಡಿ ಕೆಲಸ ಮಾಡಬೇಕು. ಅಧಿಕಾರಿಗಳ ಹತ್ತಿರ ಕೆಲಸ ಆಗದಿದ್ದಾಗ ಮಾತ್ರ ಜನರು ಜನಪ್ರತಿನಿಧಿಗಳ ಬಳಿ ಬರುತ್ತಾರೆ. ಇದರಿಂದ ಅಧಿಕಾರಿಗಳು
ನಿರ್ಲಕ್ಷ್ಯ ತೋರದೆ ಕೆಲಸ ಮಾಡಬೇಕು ಎಂದರು.

ಸರಕಾರಿ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಜನಪ್ರತಿನಿಧಿಗಳು, ಅಧಿಕಾರಿಗಳು ಸಹಕಾರದಿಂದ ಕೆಲಸ ಮಾಡಿದರೆ ಸಮರ್ಪಕವಾಗಿ ಯೋಜನೆಗಳು ‌ಜನರನ್ನು ತಲುಪಲಿದೆ ಎಂದರು.

ಸಭೆಯಲ್ಲಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ಜಿಪಂ ಉಪಕಾರ್ಯದರ್ಶಿ ಟಿಕೆ ರಮೇಶ್, ಅಪರ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್, ದಿಶಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಇಒ ಗಳು ಉಪಸ್ಥಿತರಿದ್ದರು.

ರಾಜಕೀಯ

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ.

“ಕಾಂಗ್ರೆಸ್ ಸರ್ಕಾರಗಳ ವಿವಿಧ ಜನಪರ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣವನ್ನು ಹಾಕುತ್ತಿದ್ದೇವೆ”: ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="112873"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!