Increase in milk price; R. Ashoka said that BJP will fight

ರಾಜ್ಯದಲ್ಲಿ ಹದಗೆಟ್ಟ ಕಾನೂನು ವ್ಯವಸ್ಥೆ, ಜನರ ರಕ್ಷಣೆ ಮಾಡುವವರೇ ಇಲ್ಲ: R Ashoka ಆಕ್ರೋಶ

ಬೆಂಗಳೂರು: ಕರ್ನಾಟಕ ದರೋಡೆ ರಾಜ್ಯವಾಗಿ ಬದಲಾಗಿದ್ದು, ಜನರು ಆತಂಕದಲ್ಲಿ ಬದುಕುತ್ತಿದ್ದಾರೆ. ಜನರ ರಕ್ಷಣೆಯನ್ನು ಮಾಡುವವರೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೀದರ್‌ನಲ್ಲಿ ಬ್ಯಾಂಕ್‌ನ ಹಣದ ದರೋಡೆ ಹಾಗೂ ಸಿಬ್ಬಂದಿ ಕೊಲೆ ನಡೆದಿದೆ. ಮಂಗಳೂರಿನಲ್ಲಿ ಹಾಲಿವುಡ್‌ ಸಿನಿಮಾ ಶೈಲಿಯಲ್ಲಿ 15 ಕೋಟಿ ರೂ. ಬ್ಯಾಂಕ್‌ ಹಣ ಲೂಟಿಯಾಗಿದೆ.

ರಾಜ್ಯದ ಪೊಲೀಸರ ಬಗ್ಗೆ ಯಾರಿಗೂ ಭಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪೊಲೀಸ್‌ ಅಧಿಕಾರಿಗಳ ಮೇಲೆ ಎಷ್ಟು ಹಿಡಿತ ಇದೆ ಎಂದು ಇದರಿಂದ ತಿಳಿಯುತ್ತದೆ. ರಾಜ್ಯದ ಕಾನೂನು ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎಂದು ಗೊತ್ತಾಗಿದೆ ಎಂದರು.

ಬೇರೆ ರಾಜ್ಯಗಳಿಂದ ಕಳ್ಳರು ಬಂದು ದರೋಡೆ ಮಾಡಿಕೊಂಡು ಬಸ್ಸು, ರೈಲಿನಲ್ಲಿ ಹೋಗುತ್ತಿದ್ದಾರೆ. ಜನರು ಅವರ ರಕ್ಷಣೆಯನ್ನು ಅವರೇ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದೆ. ಪೊಲೀಸರ ಕೈಯಲ್ಲಿ ಪಿಸ್ತೂಲ್‌ ಇಲ್ಲ. ಆದರೆ ದರೋಡೆ ಮಾಡುವವರ ಕೈಯಲ್ಲಿ ಆಧುನಿಕ ಶಸ್ತ್ರಾಸ್ತ್ರಗಳಿವೆ ಎಂದರು.

ಲವ್‌ ಜಿಹಾದ್‌, ಕೋಮುಗಲಭೆ, ಹಸುಗಳ ಕೆಚ್ಚಲು ಕತ್ತರಿಸಿದ್ದು ಮೊದಲಾದ ಘಟನೆಗಳ ವಿರುದ್ಧ ಕಠಿಣ ಕ್ರಮ ವಹಿಸಲಿಲ್ಲ. ಪೊಲೀಸ್‌ ಇಲಾಖೆ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದು, ಅಧಿಕಾರಿಗಳು ಸಾಯುತ್ತಿದ್ದಾರೆ.

ಇಷ್ಟಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಇಲಾಖೆಯ ಸಭೆ ಕರೆದು ಮಾತನಾಡಿಲ್ಲ.

ಡಿಕೆಶಿವಕುಮಾರ್‌-ಸತೀಶ್‌ ಜಾರಕಿಹೊಳಿ ಗಲಾಟೆ, ಸಿಎಂ ನಿರ್ಗಮನ ಮೊದಲಾದ ರಾಜಕೀಯದಲ್ಲೇ ಸರ್ಕಾರ ಮುಳುಗಿದೆ. ಹೀಗಾಗಿ ಅಧಿಕಾರಿಗಳಿಗೆ ಕೆಲಸ ಮಾಡಲು ಆಸಕ್ತಿ ಇಲ್ಲ ಎಂದು ದೂರಿದರು.

ಕರ್ನಾಟಕ ದರೋಡೆಕೋರರ ಸ್ವರ್ಗವಾಗಿರುವುದರಿಂದ ಹೂಡಿಕೆದಾರರು ಮುಂದೆ ಬರುತ್ತಿಲ್ಲ. ಇದು ಪಶ್ಚಿಮ ಬಂಗಾಳದಂತೆಯೇ ಆಗುತ್ತಿದೆ. ಎಲ್ಲರೂ ಆತಂಕದಲ್ಲೇ ಬದುಕುತ್ತಿದ್ದಾರೆ ಎಂದರು.

ಶ್ವೇತಪತ್ರ ಬಿಡುಗಡೆ ಮಾಡಿ

ಬಸವರಾಜ ಬೊಮ್ಮಾಯಿ ಅವಧಿಯಲ್ಲಿ ಎಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ, ಸಿಎಂ ಸಿದ್ದರಾಮಯ್ಯ ಎಷ್ಟು ಅನುದಾನ ನೀಡಿದ್ದಾರೆ ಎಂದು ಶ್ವೇತಪತ್ರ ಬಿಡುಗಡೆ ಮಾಡಲಿ. ಬಿಜೆಪಿ ಅವಧಿಯಲ್ಲಿ ಎಷ್ಟು ಸಾಲ ಮಾಡಲಾಗಿದೆ, ಕಾಂಗ್ರೆಸ್‌ ಅವಧಿಯಲ್ಲಿ 60 ವರ್ಷಗಳಲ್ಲಿ ಎಷ್ಟು ಸಾಲ ಮಾಡಲಾಗಿದೆ ಎಂದು ಕೂಡ ತಿಳಿಸಲಿ ಎಂದು ಸವಾಲೆಸೆದರು.

ಕ್ಲೀನ್‌ಚಿಟ್‌ಗೆ ಸಿದ್ಧತೆ

ಮುಡಾಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ನನಗೆ ಉತ್ತರ ನೀಡಿಲ್ಲ. ಲೋಕಾಯುಕ್ತ ಪೊಲೀಸರು ತನಿಖೆ ಮಾಡಲು ಆಸಕ್ತಿ ತೋರದೆ ಕ್ಲೀನ್‌ಚಿಟ್‌ ನೀಡಲು ಸಿದ್ಧತೆ ಮಾಡಿಕೊಂಡಿರುವಂತಿದೆ.

ಜಾರಿ ನಿರ್ದೇಶನಾಲಯ ಮಧ್ಯವರ್ತಿಗಳ ಹಣವನ್ನು ವಶಕ್ಕೆ ಪಡೆದಿದೆ. ಆದರೆ ಲೋಕಾಯುಕ್ತ ಪೊಲೀಸರು ಏನೂ ಮಾಡಿಲ್ಲ. ಆದ್ದರಿಂದ ಸಿಬಿಐ ತನಿಖೆಗೆ ವಹಿಸಿ ಎಂದು ಒತ್ತಾಯಿಸಿದ್ದೇವೆ ಎಂದರು.

ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳು ಹೆಚ್ಚಿವೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಬದುಕಿಗೆ ಗ್ಯಾರಂಟಿ ಇಲ್ಲ. ಇಂತಹ ಪರಿಸ್ಥಿತಿಯಲ್ಲೂ ಸರ್ಕಾರ ದರ ಏರಿಕೆ ಮಾಡುತ್ತಿದೆ. ಈ ರೀತಿ ಮಾಡುವ ಬದಲು ಒಂದೇ ಬಾರಿಗೆ ದರ ಏರಿಕೆ ಮಾಡಲಿ ಎಂದರು.

ರಾಜಕೀಯ

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ.

“ಕಾಂಗ್ರೆಸ್ ಸರ್ಕಾರಗಳ ವಿವಿಧ ಜನಪರ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣವನ್ನು ಹಾಕುತ್ತಿದ್ದೇವೆ”: ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="112873"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!