Big Boss ಗೆ ಅಭಿನಯ ಚಕ್ರವರ್ತಿ ಗುಡ್ ಬೈ..!

Sudeep Goodbye to Big Boss..!

ಬೆಂಗಳೂರು; ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಪ್ರಸಿದ್ಧ ರಿಯಾಲಿಟಿ ಶೋ ಬಿಗ್ ಬಾಸ್ (Big Boss) ನಿರೂಪಣೆಗೆ ನಟ ಕಿಚ್ಚ ಸುದೀಪ್ ಅವರು ವಿದಾಯ ಹೇಳಿದ್ದಾರೆ.

ಈ ಸೀಸನ್ ಮುಗಿದ ಬಳಿಕ ಸುದೀಪ್ ಅಧಿಕೃತವಾಗಿ ಬಿಗ್ ಬಾಸ್ ವೇದಿಕೆಗೆ ಫುಲ್ ಸ್ಟಾಪ್ ಹೇಳಲಿದ್ದಾರೆ.

ಈ ಕುರಿತು ಕಿಚ್ಚ ಸುದೀಪ್ ಟ್ವಿಟ್ ಮಾಡಿದ್ದು, ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ.

ಬಿಗ್ ಬಾಸ್ (Big Boss) ಶೋ ನನ್ನು ಕಳೆದ 11 ಸೀಸನ್ ಗಳಿಂದ ನಾನು ಆನಂದಿಸಿದ್ದೇನೆ. ನೀವು ತೋರಿಸಿದ ಎಲ್ಲಾ ಪ್ರೀತಿಗೆ ಧನ್ಯವಾದಗಳು ಎಂದು ಅಭಿನಯ ಚಕ್ರವರ್ತಿ ಧನ್ಯವಾದ ಹೇಳಿದ್ದಾರೆ.

ಮುಂಬರುವ ಫಿನಾಲೆ ನಿರೂಪಕನಾಗಿ ನನ್ನ ಕೊನೆಯದು, ಮತ್ತು ನಿಮ್ಮೆಲ್ಲರನ್ನೂ ನನ್ನ ಅತ್ಯುತ್ತಮವಾಗಿ ರಂಜಿಸುತ್ತೇನೆ ಎಂದು ನಾನು ಭಾವಿಸುತ್ತೇನೆ.

ಇದು ಮರೆಯಲಾಗದ ಪ್ರಯಾಣ, ಅದನ್ನು ನನ್ನ ಅತ್ಯುತ್ತಮವಾಗಿ ನಿಭಾಯಿಸಿದ್ದಕ್ಕೆ ನನಗೆ ಸಂತೋಷವಾಗಿದೆ. ಕಲರ್ಸ್ ಕನ್ನಡ ವಾಹಿನಿಗೆ ಈ ಅವಕಾಶ ನೀಡಿದ್ದಕ್ಕೆ ಧನ್ಯವಾದಗಳು ಎಲ್ಲರಿಗೂ ತುಂಬಾ ಪ್ರೀತಿ ಮತ್ತು ಗೌರವ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.

ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್-11 ಕಾರ್ಯಕ್ರಮವನ್ನು ನಟ ಕಿಚ್ಚ ಸುದೀಪ್ ಬಹಳ ಅಚ್ಚುಕಟ್ಟಾಗಿ, ಸೊಗಸಾಗಿ ನಡೆಸಿಕೊಡುತ್ತಿದ್ದಾರೆ.

ಇವರ ಖಡಕ್ ಮಾತಿಗೆ, ಸ್ಪರ್ಧಿಗಳನ್ನು ಕ್ಲಾಸ್ ತೆಗೆದುಕೊಳ್ಳುವ ರೀತಿಗೆ, ಸ್ಪರ್ಧಿಗಳನ್ನು ಕಾಲೆಳೆಯುವ ಶೈಲಿಗೆ ಎಲ್ಲರೂ ಫಿದಾ ಆಗಿದ್ದಾರೆ. ಆದರೆ ಇನ್ಮುಂದೆ ಬಿಗ್ ಬಾಸ್ ನಿರೂಪಣೆ ಮಾಡುವುದಿಲ್ಲ ಎಂದು ನಟ ಸುದೀಪ್ ಘೋಷಣೆ ಮಾಡಿದ್ದಾರೆ.

ಸುದೀಪನ ನಿರ್ಧಾರಕ್ಕೆ ಪ್ರೇಕ್ಷಕರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಸುದೀಪ್ ಪೋಸ್ಟ್ ಗೆ ಅಭಿಮಾನಿಗಳು ಕಮೆಂಟ್ಸ್ ಗಳ ಸುರಿಮಳೆಗೈದಿದ್ದಾರೆ.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]