Kho Kho Champions Felicitated by Union Minister H.D. Kumaraswamy

ಖೋಖೋ ವಿಶ್ವಕಪ್; ಎಂ.ಕೆ.ಗೌತಮ್, ಚೈತ್ರಾ ಅವರನ್ನು ಗೌರವಿಸಿದ HDK

ನವದೆಹಲಿ: 2025ರ ಪುರುಷರ ಹಾಗೂ ಮಹಿಳಾ ಖೋ-ಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮುವಲ್ಲಿ ಪ್ರಮುಖ ಪಾತ್ರ ವಹಿಸಿದ ಕರ್ನಾಟಕದ ಎಂ.ಕೆ.ಗೌತಮ್ ಹಾಗೂ ಚೈತ್ರಾ ಅವರನ್ನು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (HDK) ಅವರು ಸನ್ಮಾನಿಸಿ ಗೌರವಿಸಿದರು.

ನವದೆಹಲಿಯ ಬೃಹತ್ ಕೈಗಾರಿಕೆ ಸಚಿವಾಲಯಕ್ಕೆ ಆಟಗಾರರಾದ ಎಂ.ಕೆ.ಗೌತಮ್ ಹಾಗೂ ಚೈತ್ರಾ, ಮತ್ತವರ ಕೋಚ್’ಗಳಾದ ಸುಮಿತ್ ಭಾಟಿಯಾ ಹಾಗೂ ತಂಡದ ಮ್ಯಾನೇಜರ್ ರಾಜಕುಮಾರಿ ಅವರನ್ನು ಬರಮಾಡಿಕೊಂಡ ಸಚಿವರು, ಎಲ್ಲರನ್ನೂ ಗೌರವಪೂರ್ವಕವಾಗಿ ಸನ್ಮಾನಿಸಿದರು.

ಗೌತಮ್, ಚಿತ್ರಾ ಇಬ್ಬರಿಗೂ ಶುಭ ಕೋರಿದ ಸಚಿವರು, ಭಾರತದ ಪುರುಷರು ಮತ್ತು ಮಹಿಳೆಯರ ಖೋಖೋ ವಿಶ್ವಕಪ್‌ ತಂಡದಲ್ಲಿ ಅಮೋಘ ಆಟವನ್ನಾಡಿ ಭಾರತವನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ನಿಮ್ಮಿಬ್ಬರಿಗೂ ನನ್ನ ಅಭಿನಂದನೆಗಳು.

ಕರ್ನಾಟಕದ ಗರಿಮೆಯನ್ನು ನೀವು ಹೆಚ್ಚಿಸಿದ್ದೀರಿ. ಮುಂದಿನ ದಿನಗಳಲ್ಲಿ ಇನ್ನಷ್ಟು ಎತ್ತರದ ಸಾಧನೆಗಳನ್ನು ಮಾಡಿ ಎಂದು ಶುಭ ಹಾರೈಸಿದರು ಸಚಿವರು.

ದೇಶೀಯ ಕ್ರೀಡೆ ಖೋಖೋದಲ್ಲಿ ಭಾರತ ವಿಶ್ವ ಚಾಂಪಿಯನ್ ಆಗಿರುವುದಕ್ಕೆ ನಿಮ್ಮ ಜೊತೆ ತಂಡಸ್ಫೂರ್ತಿಯಿಂದ ಆಟವಾಡಿದ ಇತರೆ ಎಲ್ಲಾ ಆಟಗಾರರಿಗೂ, ನಿಮ್ಮ ತರಬೇತುದಾರರಿಗೆ ಕೂಡ ನನ್ನ ಅಭಿನಂದನೆಗಳು ಎಂದು ಸಚಿವರು ಹೇಳಿದರು.

ಕನ್ನಡ ನೆಲದ ಗ್ರಾಮೀಣ ಮಕ್ಕಳಿಬ್ಬರೂ ಇಂದು ಭಾರತಾಂಬೆಯ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ್ದಾರೆ. ಮಾತ್ರವಲ್ಲದೆ, ಕನ್ನಡಮ್ಮನ ಕೀರ್ತಿ ಕಿರೀಟಕ್ಕೆ ಮತ್ತಷ್ಟು ಗರಿಗಳನ್ನು ಪೇರಿಸಿ ನಮ್ಮ ಸಂತಸವನ್ನು ಇಮ್ಮಡಿಗೊಳಿಸಿದ್ದಾರೆ.

ಇಬ್ಬರಿಗೂ ಶುಭವಾಗಲಿ, ಭವಿಷ್ಯದಲ್ಲಿ ಇಂತಹ ಅನೇಕ ಉನ್ನತ ಸಾಧನೆಗಳನ್ನು ಮಾಡಲಿ ಎಂದು ಹಾರೈಸುತ್ತೇನೆ ಹಾಗೂ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಮಕ್ಕಳಿಗೆ ಇವರ ಸಾಧನೆ ಸದಾ ಪ್ರೇರಣೆಯಾಗಲಿ ಎಂದು ಆಶಿಸುತ್ತೇನೆ ಎಂದು ಕುಮಾರಸ್ವಾಮಿ ಅವರು ಮಾಧ್ಯಮಗಳ ಜತೆ ಮಾತನಾಡುತ್ತಾ ಹೇಳಿದರು.

ಎಂ.ಕೆ.ಗೌತಮ್ ಅವರು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಡಿ.ಮಲ್ಲೀಗೆರೆ ಗ್ರಾಮದವರು ಹಾಗೂ ಚೈತ್ರಾ ಅವರು ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕುರುಬೂರು ಗ್ರಾಮದವರು.

ಗ್ರಾಮೀಣ ಮಕ್ಕಳು ಹೆಚ್ಚು ಪ್ರಮಾಣದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಬರಬೇಕು. ನಮ್ಮಿಂದ ಸಾಧ್ಯ ಆಗುವಷ್ಟು ಪ್ರೋತ್ಸಾಹ ನೀಡುತ್ತೇವೆ. ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಕ್ರೀಡೆಗೆ ಬಹಳಷ್ಟು ಬೆಂಬಲ, ಪ್ರೋತ್ಸಾಹ ನೀಡುತ್ತಿದೆ ಎಂದು ಸಚಿವರು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗೌತಮ್, ಚೈತ್ರಾ ಇಬ್ಬರೂ; ಕರ್ನಾಟಕದವರೇ ಆಗಿರುವ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಕಚೇರಿಗೆ ಬರಮಾಡಿಕೊಂಡು ನಮ್ಮಿಬ್ಬರನ್ನು ಗೌರವಿಸಿದ್ದು ಬಹಳ ಸಂತೋಷ ಉಂಟು ಮಾಡಿದೆ. ನಮ್ಮ ಬದುಕಿನಲ್ಲಿ ಇದು ಅವಿಸ್ಮರಣೀಯ ಘಟನೆ ಆಗಿದೆ ಎಂದು ಸಂತೋಷ ವ್ಯಕ್ತಪಡಿಸಿದರು.

ರಾಜಕೀಯ

ಎಷ್ಟೇ ಗ್ಯಾರಂಟಿಗಳನ್ನು ಕೊಟ್ಟರೂ ನಮಗೆ ತೊಂದರೆ ಇಲ್ಲ; ಪ್ರತಿಪಕ್ಷ ನಾಯಕ ಆರ್‌.ಅಶೋಕ

ಎಷ್ಟೇ ಗ್ಯಾರಂಟಿಗಳನ್ನು ಕೊಟ್ಟರೂ ನಮಗೆ ತೊಂದರೆ ಇಲ್ಲ; ಪ್ರತಿಪಕ್ಷ ನಾಯಕ ಆರ್‌.ಅಶೋಕ

ಗ್ಯಾರಂಟಿಗಳಿಗೆ ಈ ಹಣವನ್ನು ಬಳಸಿದರೂ ಇನ್ನೂ ಹಣ ಉಳಿಯುತ್ತದೆ. ಗ್ಯಾರಂಟಿಗೆ ಹಣ ಕೊಡಬೇಡಿ ಎಂದು ಹೇಳುತ್ತಿಲ್ಲ. ಆರ್. ಅಶೋಕ (R. Ashoka)

[ccc_my_favorite_select_button post_id="112891"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!