ಬೆಂ.ಗ್ರಾ.ಜಿಲ್ಲೆ: “ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ” ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ “ವೀರ ಮಹಿಳೆ ಪ್ರಶಸ್ತಿ” ಎಂದು ಗುರುತಿಸಿ ಪ್ರಶಸ್ತಿ ನೀಡಲು ಮಹಿಳೆ ಹಾಗೂ ಸಂಸ್ಥೆಗಳ ಪ್ರಶಸ್ತಿಗಾಗಿ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ (Application Invitation).
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ, ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತಿಯುಳ್ಳ ಸಂಸ್ಥೆ ಹಾಗೂ ವ್ಯಕ್ತಿಗಳು
ಅರ್ಜಿ ಪಡೆಯಲು ಅದನ್ನು ಸೂಕ್ತ ದಾಖಲಾತಿಯೊಂದಿಗೆ ಭರ್ತಿ ಮಾಡಿ ಫೆಬ್ರವರಿ 5 ರ ಒಳಗೆ ಕಛೇರಿಗೆ ಸಲ್ಲಿಸತಕ್ಕದ್ದು.
ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ : 206, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕಛೇರಿ ದೂ: 080-29787445 ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.