139 people including Anant Nag, Balakrishna were honored with Padma Award

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ನವದೆಹಲಿ (Padma Award): ಕೇಂದ್ರ ಸರ್ಕಾರ ದೇಶದ ಎರಡನೇ ಅತ್ಯುನ್ನತ ನಾಗರಿಕ ಗೌರವಗಳೆಂದೇ ಮನ್ನಣೆ ಗಳಿಸಿರುವ ಪದ್ದ ಪ್ರಶಸ್ತಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಹಿರಿಯ ನಟ ಅನಂತ್ ನಾಗ್ ಸೇರಿ ಕರ್ನಾಟಕದ ಒಂಬತ್ತು ಸಾಧಕರು ಭಾಜನರಾಗಿದ್ದಾರೆ.

ಲಕ್ಷ್ಮೀನಾರಾಯಣ ಸುಬ್ರಮಣಿಯಂ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಲಭಿಸಿದ್ದರೆ, ಎ.ಸೂರ್ಯಪ್ರಕಾಶ್ ಮತ್ತು ಹಿರಿಯ ನಟ ಅನಂತನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಸಿಕ್ಕಿದೆ.

ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ(ಕಲೆ), ಹಾಸನ್ ರಘು(ಕಲೆ), ಪ್ರಶಾಂತ್ ಪ್ರಕಾಶ್(ವಾಣಿಜ್ಯ ಮತ್ತು ಉದ್ಯಮ) ರಿಖಿ ಗ್ಯಾನ್ ಕೇಜ್(ಕಲೆ), ವೆಂಕಪ್ಪ ಅಂಬಾಜಿ ಸುಗತೇಕರ್(ಕಲೆ) ಮತ್ತು ವಿಜಯಲಕ್ಷ್ಮೀ ದೇಶಮನೆ(ವೈದ್ಯಕೀಯ) ಅವರಿಗೆ ಪದ್ಮಶ್ರೀ ಪ್ರಶಸ್ತಿ ಸಂದಿದೆ.

ಈ ಬಾರಿ ಒಟ್ಟು 139 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿದ್ದು, ಇದರಲ್ಲಿ ಏಳು ಮಂದಿಗೆ ಪದ್ಮವಿಭೂಷಣ, 19 ಮಂದಿಗೆ ಪದ್ಮಭೂಷಣ ಮತ್ತು 113 ಮಂದಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. 23 ಮಂದಿ ಮಹಿಳೆಯರು, 10 ಮಂದಿ ವಿದೇಶಿಯರು ಹಾಗೂ 1 ಮಂದಿಗೆ ಮರಣೋತ್ತರವಾಗಿ ಪ್ರಶಸ್ತಿ ಘೋಷಿಸಲಾಗಿದೆ. ಈ ಬಾರಿಯೂ ಪ್ರಶಸ್ತಿ ನೀಡುವಲ್ಲಿ ಎಲೆಮರೆಯ ಕಾಯಿಗಳಿಗೇ ಹೆಚ್ಚಿನ ಆದ್ಯತೆ ನೀಡಲಾಗಿದೆ.

ಕ್ರೀಡೆಯಲ್ಲಿ ಪಿ.ಆರ್.ಶ್ರೀಜೇಶ್ ಅವರಿಗೆ ಪದ್ಮಭೂಷಣ ನೀಡಿರುವುದು ವಿಶೇಷ. ಉಳಿದಂತೆ ಇದೇ ವಿಭಾಗದಲ್ಲಿ ಹರ್ಯಾಣದ ಹರ್ವೀಂದರ್ ಸಿಂಗ್, ಕೇರಳದ ಇನ್ವಿಲಪ್ಟಿಲ್ ಮಣಿ ವಿಜಯನ್, ತಮಿಳುನಾಡಿನ ಆರ್.ಅಶ್ವಿನ್, ಉತ್ತರ ಪ್ರದೇಶದ ಸತ್ಯಪಾಲ್ ಸಿಂಗ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಸಂದಿದೆ.

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಜೆ,ಎಸ್. ಖೇಹರ್, ಸುಜುಕಿ ಮುಖ್ಯಸ್ಥ ಒಸಾಮು ಸುಜುಕಿ, ಜಾನಪದ ಗಾಯಕಿ ದಿವಂಗತ ಶಾರದಾಸಿನ್ಹಾಮತ್ತು ಮಾಜಿ ಕ್ರಿಕೆಟಿಗಆರ್.ಅಶ್ವಿನ್‌ಸೇರಿದಂತೆ 139 ಗಣ್ಯರಿಗೆ ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿದೆ.

ಭಾರತಕ್ಕೆ ಮಾರುತಿ ಸುಝುಕಿ ಕಾರು ಪರಿಚಯಿಸಿದ ಜಪಾನ್ ಉದ್ಯಮಿ ಒಸಾಮು ಸುಜುಕಿ, ಮಲಯಾಳಂ ಸಾಹಿತ್ಯದ ದಂತಕಥೆ ಎಂಟಿವಾಸುದೇವನ್‌ ನಾಯರ್‌ ಅವರಿಗೆ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಲಾಗಿದೆ.

ಪ್ರಧಾನಮಂತ್ರಿಯವರ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷರಾಗಿದ್ದ ಬಿಬೇಕ್‌ ದೆಬ್ರಾಯ್, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ / ಶಿವಸೇನೆಯ ಘಟಾನುಘಟಿ ಮನೋಹ‌ರ್ ಜೋಶಿ, ಗಜಲ್ ಗಾಯಕ ಪಂಕಜ್ ಉಧಾಸ್, ಖ್ಯಾತ ನಟ ಅನಂತ ನಾಗ್, ನಟಿ ಶೋಭನಾ, ಹಿಂದೂ ಫೈರ್‌ಬ್ರಾಂಡ್ ನಾಯಕಿ ಸಾದ್ವಿ ಋತಾಂಬರಾ, ನಟ ಅಜಿತ್ ಕುಮಾರ್ ಸೇರಿದಂತೆ 19 ಮಂದಿಗೆ ಪದ್ಮಭೂಷಣ ಪ್ರಶಸ್ತಿ ನೀಡಲಾಗಿದೆ.

ತೆಲುಗು ಸೂಪರ್‌ಸ್ಟಾ‌ರ್ ನಂದಮೂರಿ ಬಾಲ ಕೃಷ್ಣ, ಎಸ್ ಬಿಐ ಮಾಜಿ ಅಧ್ಯಕ್ಷೆ ಅರುಂಧತಿ ಭಟ್ಟಾಚಾರ್ಯ, ಸಂಗೀತಗಾರ ರಿಕ್ಕಿ ಕೇಜ್, ರಾಮಮಂದಿರ ಶಿಲ್ಪಿಚಂದ್ರಕಾಂತ ಸೋಂಪುರ ಆವರಿಗೆ ಪದ್ಮಶ್ರೀ ಸಂದಿದೆ.

ಕನ್ನಡಿಗರ ಅಭಿಯಾನ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ ಭಾಜನರಾಗಿರುವ ಮೇರು ನಟನಿಗೆ ಪದ್ಮ ಶ್ರೀ ಗೌರವ ಇದುವರೆಗೂ ನಿಲುಕದ ಪದಕ ವಾಗಿತ್ತು.

ಬಾಲಿವುಡ್ ನಟ ಸೈಫ್ ಅಲಿ ಖಾನ್ ಮುಂತಾದ ಅವರಿಗೆ ದಶಕದ ಹಿಂದೆಯೇ ಪದ್ಮ ಶ್ರೀ ಪುರಸ್ಕಾರ ಸಿಕ್ಕಿತ್ತು. ಇದರಿಂದ ಬೇಸರಗೊಂಡಿದ್ದ ಕನ್ನಡ ಚಿತ್ರ ಪ್ರೇಮಿಗಳು ಅನಂತ್ ನಾಗ್ ಅವರಿಗೆ ಪದ್ಮ ಗೌರವ ಕೊಡಲೇಬೇಕೆಂದು ಕಳೆದ ಕೆಲವು ವರ್ಷಗಳಿಂದ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ನಡೆಸಿದ್ದರು.

ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ್ದ ಅನಂತ್ ನಾಗ್, ತಮ್ಮ ಹೆಸರಿನಲ್ಲಿ ಪ್ರಶಸ್ತಿ ಗಾಗಿ ಯಾರೂ ಅಭಿಯಾನ ನಡೆಸಬಾರದು ಎಂದು ಮನವು ಮಾಡಿದ್ದರು.

ಚಿತ್ರೋದ್ಯಮದ ಅನೇಕ ಕಿರಿಯರಿಗೆ ಪದ್ಮಶ್ರೀ ಸಿಕ್ಕಿರುವ ಹಿನ್ನೆಲೆಯಲ್ಲಿ ಅನಂತ್ ನಾಗ್ ಈ ಹಂತ ದಲ್ಲಿ ಪ್ರಶಸ್ತಿ ಸ್ವೀಕರಿಸಬಾರದು ಎಂಬ ಮಾತುಗಳೂ ಕೇಳಿ ಬಂದಿದ್ದವು. ಈ ಆಕ್ರೋಶ ಸಹಜವೂ ಆಗಿತ್ತು. ಮೇರು ಗಾಯಕಿ ಎಸ್. ಜಾನಕಿ ಅವರು ಇಂಥದ್ದೇ ಸನ್ನಿವೇಶದಲ್ಲಿ ಕೆಲ ವರ್ಷಗಳ ಹಿಂದೆ ಪದ್ಮ ಪುರಸ್ಕಾರ ವನ್ನು ನಿರಾಕರಿಸಿದ್ದರು.

ಇದೀಗ ಕೇಂದ್ರ ಸರಕಾರ ಅನಂತ್ ಅವರನ್ನು ನೇರವಾಗಿ ಪದ್ಮಭೂಷಣ ಪುರಸ್ಕಾರಕ್ಕೆ ಆಯ್ಕೆ ಮಾಡುವ ಮೂಲಕ ಈ ವಿವೇಚನಾಯುಕ್ತ ನಿರ್ಧಾರ ತೆಗೆದುಕೊಂಡಿದೆ. ಈ ಮೂಲಕ ಅನಂತ್ ಮತ್ತವರ ಸಹಜ ನಟನೆಯ ಅಭಿಮಾನಿಗಳ ಭಾವನೆಗಳನ್ನು ಗೌರವಿಸಿದೆ.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!