District level 8th Janatadarshan; Acceptance of 200 petitioner..

ಜಿಲ್ಲಾ ಮಟ್ಟದ 8ನೇ ಜನತಾದರ್ಶನ; 200 ಅಹವಾಲು ಸ್ವೀಕಾರ..

ಧಾರವಾಡ: ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ (Santosh lad) ಅವರು ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಇಂದು ಬೆಳಿಗ್ಗೆ ಜಿಲ್ಲಾ ಮಟ್ಟದ 8ನೇ ಜನತಾ ದರ್ಶನ ಕಾರ್ಯಕ್ರಮ ನಡೆಸಿದರು.

ಅವರು ಇಂದು ಬೆಳಿಗ್ಗೆ 11:40 ರಿಂದ ಸಂಜೆ 4:45 ಗಂಟೆವರೆಗೆ ನಿರಂತರವಾಗಿ ಐದು ಗಂಟೆಗಳಿಗೂ ಹೆಚ್ಚು ಕಾಲ ಸಾರ್ವಜನಿಕರ ಸಮಸ್ಯೆಗಳನ್ನು ಪೂರ್ಣವಾಗಿ ಆಲಿಸಿ, ಪರಿಹಾರದ ಭರವಸೆ ನೀಡಿದರು. ಜನತಾ ದರ್ಶನ ಮುಗಿಯುವರೆಗೆ ಸುಮಾರು 5 ಗಂಟೆಗೂ ಹೆಚ್ಚು ಕಾಲ ಸಚಿವರು ನಿಂತುಕೊಂಡೆ ಜನರ ಸಮಸ್ಯೆ ಆಲಿಸಿದ್ದು ಎಲ್ಲರ ಗಮನ ಸೆಳೆಯಿತು.

ಸೆಪ್ಟೆಂಬರ 25, 2023 ರಿಂದ ಜನವರಿ 27, 2025 ರ 14 ತಿಂಗಳ ಅವಧಿಯಲ್ಲಿ ಜಿಲ್ಲಾ ಮಟ್ಟದ ಎಂಟು ಜನತಾ ದರ್ಶನ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ರಾಜ್ಯದಲ್ಲಿಯೇ ಅತಿ ಹೆಚ್ಚು ಜನತಾ ದರ್ಶನ ಆಯೋಜಿಸಿದ ಏಕೈಕ ಸಚಿವರಾಗಿದ್ದಾರೆ.

ಸಭೆಯುದ್ದಕ್ಕೂ ಸಹನೆಯಿಂದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ ಸಚಿವರು, ತಪ್ಪು ಕಂಡು ಬಂದಲ್ಲಿ ಅಧಿಕಾರಿಗಳಿಗೆ ಗದರಿಸಿ, ಸರಿಯಾಗಿ ಸಾರ್ವಜನಿಕರ ಸೇವೆ ಮಾಡುವಂತೆ ಎಚ್ಚರಿಸಿದರು.

ತಪ್ಪು ಮಾಹಿತಿ ನೀಡಲು ಪ್ರಯತ್ನಿಸುವ ಹಾಗೂ ಅಧಿಕಾರಿಗಳ ಮೇಲೆ ವಿನಾಕಾರಣ ದೂರು ಹೇಳುವವರೆಗೂ ಸಿಟ್ಟಿನಿಂದ ಸಚಿವರು ಬಿಸಿ ಮುಟ್ಟಿಸುತ್ತಾರೆ. ಜನತಾದರ್ಶನಕ್ಕೆ ತಮ್ಮ ಸಮಸ್ಯೆ ಹೊತ್ತು ಬರುವ ಪ್ರತಿಯೊಬ್ಬರನ್ನು ಸಹನೆಯಿಂದ ವಿಚಾರಿಸಿ, ಸರಕಾರದ ಸಹಾಯದೊಂದಿಗೆ, ಅಗತ್ಯವಿದ್ದಲ್ಲಿ ವೈಯಕ್ತಿಕ ನೆರವು ನೀಡುತ್ತಾರೆ. ಅಹವಾಲು ನೀಡಿದವರು ಪರಿಹಾರದ ಭರವಸೆಯೊಂದಿಗೆ ಮನೆಗೆ ಮರಳುತ್ತಾರೆ.

ಜನತಾದರ್ಶನ ಮುಕ್ತಾಯವಾದ ನಂತರ ಸಚಿವ ಸಂತೋಷ್ ಲಾಡ್ ಅವರು ಮಾತನಾಡಿ, ಜನತಾದರ್ಶನಕ್ಕೆ ಪರಿಹಾರದ ಭರವಸೆಯೊಂದಿಗೆ ಸಾರ್ವಜನಿಕರು ಬಂದಿರುತ್ತಾರೆ. ಅವರಿಗೆ ನಿರಾಸೆ ಮೂಡಿಸದೆ ಸಾಧ್ಯವಾದಷ್ಟು ಸ್ಥಳದಲ್ಲಿ ಅವರ ಸಮಸ್ಯೆ ಪರಿಹರಿಸಬೇಕು. ಅಗತ್ಯವಿದ್ದಲ್ಲಿ ಸರಕಾರಕ್ಕೆ ಶಿಫಾರಸ್ಸು ಮಾಡಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಪ್ರತಿ ಇಲಾಖೆ ಅಧಿಕಾರಿಗಳು ಸಾರ್ವಜನಿಕ ಕಳಕಳಿ, ಕಾಳಜಿ ಮತ್ತು ಮಾನವೀಯತೆಯಿಂದ ಸಮಸ್ಯೆಗಳನ್ನು, ಅಹವಾಲುಗಳನ್ನು ಆಲಿಸಿದರೆ, ಅರ್ಧ ಪರಿಹಾರ ಸಿಕಷ್ಟು ಅವರು ಖುಷಿಯಾಗುತ್ತಾರೆ. ಸಾರ್ವಜನಿಕರೊಂದಿಗೆ ಉತ್ತಮ ರೀತಿಯಲ್ಲಿ ಸಂವಹನ ಮಾಡಿ ಜನಸ್ನೇಹಿ ಆಡಳಿತ ನೀಡಬೇಕು. ಸರಕಾರದ ಯೋಜನೆ, ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸಬೇಕು ಎಂದು ಹೇಳಿದರು.

ಇಂದಿನ ಜನತಾದರ್ಶನದಲ್ಲಿ 200 ಅರ್ಜಿ ಸ್ವೀಕಾರ: ಇಂದು ಜರುಗಿದ ಜನತಾದರ್ಶನದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ 61, ಮಹಾನಗರ ಪಾಲಿಕೆಗೆ ಸಂಬಂಧಿಸಿದ 33, ಜಿಲ್ಲಾ ಪಂಚಾಯತ ಸಂಬಂಧಿಸಿದ 16 ಹಾಗೂ ಇತರೆ ಇಲಾಖೆಗಳಿಗೆ ಸಂಬಂಧಿಸಿದ 88 ಅರ್ಜಿಗಳು ಸೇರಿ ಒಟ್ಟು 200 ಅರ್ಜಿಗಳನ್ನು ಸ್ವೀಕರಿಸಲಾಯಿತು. ಪ್ರತಿ ಅರ್ಜಿ ಪರಿಶೀಲಿಸಿ ಕಾಲಮಿತಿಯಲ್ಲಿ ಇತ್ಯರ್ಥಗೊಳಿಸಲು ಸಚಿವರು ನಿರ್ದೇಶಿಸಿದರು.

ಜನತಾ ದರ್ಶನದಲ್ಲಿ ಭಾಗವಹಿಸಿದ್ದ ಶಾಸಕ ಎನ್.ಎಚ್.ಕೋನರೆಡ್ಡಿ ಅವರು ಜನರ ಸಮಸ್ಯೆಗಳನ್ನು ಸಚಿವರಿಗೆ ಮನವರಿಕೆ ಮಾಡುವಲ್ಲಿ ಮತ್ತು ಸರಕಾರದ ನಿಯಮಾವಳಿಗಳನ್ನು ಸಾರ್ವಜನಿಕರಿಗೆ ತಿಳಿಸಿ ಹೇಳುವ ಮೂಲಕ ಜನತಾದರ್ಶನ ಯಶಸ್ವಿಗೆ ಸಹಕರಿಸಿದರು.

ಸೆಪ್ಟೆಂಬರ 25, 2023 ರಿಂದ ಆರಂಭವಾದ ಮೊದಲ ಜನತಾ ದರ್ಶನದಲ್ಲಿ 450, 2ನೇ ಜನತಾ ದರ್ಶನದಲ್ಲಿ 197, 3ನೇ ಜನತಾ ದರ್ಶನದಲ್ಲಿ 177, 4 ನೇ ಜನತಾ ದರ್ಶನದಲ್ಲಿ 112, 5ನೇ ಜನತಾ ದರ್ಶನದಲ್ಲಿ 175, 6ನೇ ಜನತಾ ದರ್ಶನದಲ್ಲಿ 131, 7ನೇ ಜನತಾ ದರ್ಶನದಲ್ಲಿ 213 ಮತ್ತು ಇಂದಿನ 8ನೇ ಜನತಾ ದರ್ಶನದಲ್ಲಿ 200 ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಲಾಗಿದೆ. ಹಿಂದಿನ ಏಳು ಜನತಾ ದರ್ಶನಗಳಲ್ಲಿ ಸ್ವೀಕರಿಸಿದ್ದ ಒಟ್ಟು 1,455 ಅಹವಾಲುಗಳನ್ನು ನಿಯಮಾನುಸಾರ ಇತ್ಯರ್ಥ ಪಡಿಸಲಾಗಿದೆ.

ಇಂದಿನ ಜನತಾ ದರ್ಶನದಲ್ಲಿ ಮುಖ್ಯವಾಗಿ ಮನೆ ನಿರ್ಮಾಣಕ್ಕೆ ಸಹಾಯಧನ, ಪ್ಲಾಟ್ ಹಕ್ಕುಪತ್ರ, ಆರೋಗ್ಯ ಸಹಾಯ, ರಸ್ತೆ ನಿರ್ಮಾಣ, ಉದ್ಯೋಗ ಸಮಸ್ಯೆಗಳ ಕುರಿತು ಅಹವಾಲು ಸಲ್ಲಿಕೆ ಆಗಿವೆ.

ಪರಿಶೀಲಿಸಿ ಕ್ರಮವಹಿಸಲು ಜಿಲ್ಲಾಡಳಿತವು ಆಯಾ ಇಲಾಖೆಗಳಿಗೆ ಅಹವಾಲುಗಳನ್ನು ರವಾನಿಸಿ, ಕಾಲಮಿತಿಯಲ್ಲಿ ನಿಯಮಾನುಸಾರ ಸಮಸ್ಯೆ ಇತ್ಯರ್ಥಗೊಳಿಸಿ ವರದಿ ಸಲ್ಲಿಸಲು ಸೂಚಿಸಿದೆ.

ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಸ್ವಾಗತಿಸಿ, ಸಭೆ ನಿರ್ವಹಿಸಿದರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾಋಇ ಭುವನೇಶ ಪಾಟೀಲ, ಉಪ ಪೊಲೀಸ್ ಆಯುಕ್ತ ಮಾನಿಂಗ ನಂದಗಾವಿ, ಮಹಾನಗರ ಪಾಲಿಕೆ ಆಯುಕ್ತ ರುದ್ದೇಶ ಗಾಳಿ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಿ.ಎಸ್. ಮೂಗನೂರಮಠ ಅವರು ವೇದಿಕೆಯಲ್ಲಿದ್ದರು.

ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ವಿವಿಧ ಗ್ರಾಮಗಳ ಸಾರ್ವಜನಿಕರು ಜನತಾ ದರ್ಶನದಲ್ಲಿ ಭಾಗವಹಿಸಿದ್ದರು.

ಸರಕಾರಿ ಸೌಲಭ್ಯ ವಿತರಣೆ

ಇಂದಿನ ಜನತಾ ದರ್ಶನದ ನಂತರ ರೇಷ್ಮೆ ಮತ್ತು ಕಾರ್ಮಿಕ ಇಲಾಖೆಯಿಂದ ಫಲಾನುಭವಿಗಳಿಗೆ ಸರ್ಕಾರದ ಯೋಜನೆಯಡಿ ಸ್ವಉದ್ಯೋಗಕ್ಕಾಗಿ ಉಪಕರಣಗಳನ್ನು ಸಚಿವ ಸಂತೋಷ ಲಾಡ್ ಅವರು ವಿತರಿಸಿದರು.

ಅಳ್ನಾವರ ತಾಲೂಕಿನ ಪೂಜಾ ಶಶಿಕುಮಾರ ಪತಂಗೆ ಅವರಿಗೆ ಹೊಲಿಗೆ ಯಂತ್ರ, ರಾಮದಾಸ ಸುರೇಶ ಜೂಜಗಾರ ಅವರಿಗೆ ಬಡಿಗೆತನ ಉಪಕರಣದ ಕಿಟ್, ಫಕ್ಕೀರಪ್ಪ ಪರಸಪ್ಪ ಸುಳಗೇಕರ ಅವರಿಗೆ ಗೌಂಡಿ ಉಪಕರಣಗಳ ಕಿಟ್ ವಿತರಿಸಲಾಯಿತು. ಹಾಗೂ ಕಲಘಟಗಿ ತಾಲೂಕಿನ ಲಕ್ಷ್ಮೀ ಬಸಪ್ಪ ಹುದ್ದಾರ ಅವರಿಗೆ ಹೊಲಿಗೆ ಯಂತ್ರ, ನಿತ್ಯಾನಂದ ಕಮ್ಮಾರ ಅವರಿಗೆ ಬಡಿಗೆತನ ಉಪಕರಣದ ಕಿಟ್, ಮಲ್ಲಿಕಾರ್ಜುನ ಮಹದೇವ ಬೇಗೂರ ಅವರಿಗೆ ಗೌಂಡಿ ಉಪಕರಣಗಳ ಕಿಟ್ ವಿತರಿಸಲಾಯಿತು.

ಧಾರವಾಡ ಜಿಲ್ಲೆಯ ರೇಷ್ಮೆ ಬೆಳೆಗಾರರಾದ ಕಲಘಟಗಿ ತಾಲೂಕಿನ ಬಮ್ಮಿಗಟ್ಟಿ ಗ್ರಾಮದ ಗುರುಸಿದ್ದಯ್ಯಾ ವೀರನಗೌಡ ಪಾಟೀಲ ಅವರಿಗೆ ರೂ. 3.375 ಲಕ್ಷ, ಕುಂದಗೋಳ ತಾಲೂಕಿನ ರಟ್ಟಿಗೇರಿ ಗ್ರಾಮದ ಸತ್ಯನಾರಾಯಣ ನಾಗರಾಜ ಕುರಹಟ್ಟಿ ಅವರಿಗೆ ರೂ. 4.05 ಲಕ್ಷ ರೂಪಾಯಿಗಳ ರೇಷ್ಮೆ ಅಭಿವೃದ್ಧಿ ಸಿಲ್ಕ್ ಸಮಗ್ರ ಯೋಜನೆಯ ಸಹಾಯಧನದಡಿ ನಿರ್ಮಿಸಿದ ಪ್ರತ್ಯೇಕ ರೇಷ್ಮೆ ಹುಳು ಸಾಗಾಣಿಕೆ ಮನೆಗೆ ಸಹಾಯಧನ ನೀಡುವ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು.

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!