Doddaballapura; There is no one to listen to the farmers..

Doddaballapura; ಕೇಳುವವರಿಲ್ಲ ರೈತರ ಅಳಲು.. ರಸ್ತೆ ತಡೆ ನಡೆಸಿ ಅನ್ನದಾತರ ಆಕ್ರೋಶ

ದೊಡ್ಡಬಳ್ಳಾಪುರ (Doddaballapura): ತಾಲೂಕಿನ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸರಬರಾಜು ಕಡಿತದಿಂದ ರೈತರ ಕೃಷಿಗೆ ಸಂಕಷ್ಟ ಒದಗಿದೆ. ಈ ಬಗ್ಗೆ ಸಾಕಷ್ಟು ಮನವಿ ಮಾಡಿದ್ದರೂ ಸಹ ಅಧಿಕಾರಿಗಳು ಸ್ಪಂಧಿಸುತ್ತಿಲ್ಲ ಎಂದು ಆರೋಪಿಸಿ ರೈತರು ಬೆಂಗಳೂರು ಹಿಂದೂಪುರ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ರೈತ ಮುಖಂಡರು, ಕಳೆದ ಒಂದೂವರೆ ತಿಂಗಳಿನಿಂದ ಗ್ರಾಮಾಂತರ ಪ್ರದೇಶದ ಕೃಷಿ ಪಂಪ್ ಸೆಟ್ಗೆ ನೀಡುವ ವಿದ್ಯುತ್ ಕಡಿತ ಗೊಳಿಸಿದ್ದಾರೆ. ಸಾಲ ಮಾಡಿ ಬೆಳೆದಿರುವ ಬೆಳೆಗಳಿಗೆ ನೀರಿಲ್ಲದೆ ಬಾಡುತ್ತಿವೆ. ಇಡೀ ರಾಜ್ಯದ ಯಾವ ತಾಲ್ಲೂಕಿನಲ್ಲೂ ಇಲ್ಲದ ವಿದ್ಯುತ್ ಕಡಿತವನ್ನು ನಮ್ಮ ತಾಲ್ಲೂಕಿನಲ್ಲಿ ಮಾತ್ರ ಮಾಡುತ್ತಿರುವುದು ಖಂಡನೀಯ.

ಹತ್ತು ದಿನಗಳ ಹಿಂದಷ್ಟೇ ಈ ಬಗ್ಗೆ ಪ್ರತಿಭಟನೆ ನಡೆಸಿ ಇಲಾಖೆಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಗ್ರಾಮೀಣ ಪ್ರದೇಶಗಳಿಗೆ ವಿದ್ಯುತ್ ನೀಡುವ ಬಗ್ಗೆ ಈಗಲೂ ತಾರತಮ್ಯವಿದೆ. 7 ಗಂಟೆ ನಿರಂತರ ವಿದ್ಯುತ್ ನೀಡಬೇಕೆಂಬ ನಿಯಮವಿದ್ದರೂ 1ರಿಂದ 2 ಗಂಟೆ ವಿದ್ಯುತ್ ಸರಬರಾಜು ಇದ್ದರೆ ಹೆಚ್ಚು ಎನ್ನುವಂತಾಗಿದೆ.

ಇದಲ್ಲದೇ ವಿದ್ಯುತ್ ಪರಿವರ್ತಕಗಳು ಸರಿಯಾಗಿ ಕಾರ್ಯ ನಿರ್ವಹಿಸದೇ ವೊಲ್ಟೇಜ್ ತೀರಾ ಕಡಿಮೆಯಾಗಿ, ಪಂಪ್ಸೆಟ್ ಮೋಟಾರ್ಗಳು ಸುಟ್ಟು ಹೋಗಿರುವ ಪ್ರಸಂಗಗಳೂ ನಡೆದಿವೆ. ಈಗಷ್ಟೇ ಬೇಸಿಗೆ ಪ್ರಾರಂಭವಾಗುತ್ತಿರುವ ದಿನಗಳ ಸಮಯ ನಿಗದಿ ಇಲ್ಲದೆ, ಸರ್ಕಾರದ ಸೂಚನೆ ಇಲ್ಲದೆ ವಿದ್ಯುತ್ ಕಡಿತ ಪ್ರಾರಂಭವಾಗಿದೆ.

ಕುಡಿಯುವ ನೀರಿಗೂ ಸಹ ಗ್ರಾಮೀಣ ಭಾಗದ ಜನರು ಪರದಾಡುವಂತಾಗಿದೆ. ಈ ಬಗ್ಗೆ ಅಕಾರಿಗಳು ನಿರ್ಲಕ್ಷ್ಯ ಮುಂದುವರೆದಿದ್ದು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದರು.

ಪ್ರತಿಭಟನಾನಿರತರೊಂದಿಗೆ ಮಾತನಾಡಿದ ಗ್ರಾಮೀಣ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಂಜುನಾಥ್, ವಿದ್ಯುತ್ ಸರಬರಾಜು ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರಮುಖ ವಿದ್ಯುತ್ ಪರಿವರ್ತಕಗಳು ಹಾನಿಯಾಗಿದ್ದು, ಒಂದೇ ಪರಿವರ್ತಕದಲ್ಲಿ ವಿದ್ಯುತ್ ಪ್ರಸರಣ ಸರಿತೂಗಿಸಲು ಲೋಡ್ ಶೆಡ್ಡಿಂಗ್ ಮಾಡಬೇಕಾದ ಅನಿವಾರ್ಯತೆ ಇದೆ.

ಇದು ಇಲ್ಲಿನ ತಾಂತ್ರಿಕ ಸಮಸ್ಯೆಯೇ ಹೊರತು ಲೋಡ್ ಶೆಡ್ಡಿಂಗ್ ಬಗ್ಗೆ ಯಾವುದೇ ಸೂಚನೆಯಿಲ್ಲ. ವಿದ್ಯುತ್ ಪರಿವರ್ತಕಗಳ ದುರಸ್ಥಿ ಅಂತಿಮ ಹಂತದಲ್ಲಿದ್ದು, ಇಂದು ರಾತ್ರಿಯೇ ವಿದ್ಯುತ್ ಸರಬರಾಜು ಸರಿಯಾಗಲಿದೆ ಎಂದರು.

ಹಿಂದೆಯೂ ಇದೇ ರೀತಿ ಉತ್ತರ ಹೇಳಿದ್ದರು. ವಿದ್ಯುತ್ ಸರಬರಾಜು ಅವ್ಯವಸ್ಥೆ ಸರಿಹೋಗದಿದ್ದರೆ, ಡಿ.ಕ್ರಾಸ್ ಬಳಿ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಮುಖಂಡರು ಎಚ್ಚರಿಸಿದರು.

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!