ಬೆಂಗಳೂರು: ಇಂದು ಬೆಳಗ್ಗೆ ಲೋಕಾಯುಕ್ತ (Lokayukta) ಅಧಿಕಾರಿಗಳು ಭ್ರಷ್ಟರ ಬೇಟೆಗೆ ಇಳಿದಿದ್ದು, ಬೆಂಗಳೂರು, ಬೆಳಗಾವಿ, ಚಿತ್ರದುರ್ಗ, ಬಾಗಲಕೋಟೆ, ರಾಯಚೂರಿನ ಹಲವೆಡೆ ದಾಳಿ ನಡೆಸಿದ್ದಾರೆ.
ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳು, ಬಾಗಲಕೋಟೆಯ ಗ್ರಾಮ ಪಂಚಾಯತ್ ಪಿಡಿಒ, ಚಿತ್ರದುರ್ಗದಲ್ಲಿ ಬಿಸಿಎಂ ಇಲಾಖೆ ಮ್ಯಾನೇಜರ್, ರಾಯಚೂರಿನಲ್ಲಿ ಜಿಲ್ಲಾ ಪಂಚಾಯತ್ ಲೆಕ್ಕಪತ್ರ ಅಧಿಕಾರಿ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.
ರಾಜ್ಯಾದ್ಯಂತ ಒಟ್ಟು ಏಳು ಕಡೆ ಲೋಕಾಯುಕ್ತ ದಾಳಿ ನಡೆದಿದ್ದು, ಬೆಂಗಳೂರಿನ ಎರಡು ಕಡೆ, ಬೆಳಗಾವಿಯಲ್ಲಿ ಎರಡು ಕಡೆ, ಚಿತ್ರದುರ್ಗ, ರಾಯಚೂರು ಹಾಗೂ ಬಾಗಲಕೋಟೆಯ ತಲಾ ಒಂದು ಕಡೆ ದಾಳಿ ನಡೆಸಲಾಗುತ್ತಿದೆ.
ಬೆಳ್ಳಂಬೆಳಗ್ಗೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಸಧ್ಯ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ ಇಬ್ಬರು ಅಧಿಕಾರಿಗಳ ಮನೆ ಹಾಗೂ ಕಚೇರಿ ಮೇಲೆ ಆದಾಯಕ್ಕು ಮೀರಿ ಅಧಿಕ ಆಸ್ತಿ ಗಳಿಕೆ ಸಂಬಂಧ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ.