Good news for those who don't have land: Cmsiddaramaiah

ನಿವೇಶನ ಜಮೀನು ಇಲ್ಲದಿರುವವರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್

ಕೊಡಗು: ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಾದ ತೆರಿಗೆ ಪಾಲನ್ನು ಪಡೆಯಲು ನಿರಂತರವಾಗಿ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ಕೊಡಗಿನ ಭಾಗಮಂಡಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ನಾಳೆ ಕೇಂದ್ರ ಬಜೆಟ್ ಮಂಡನೆಯಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಕಿವುಡಾಗಿದೆ. ಕೇಂದ್ರ ಸರ್ಕಾರದಿಂದ ನಿರೀಕ್ಷೆ ಮಾಡುವುದೇ ಇಲ್ಲ ಎಂದೇನಿಲ್ಲ. ನಿರೀಕ್ಷೆ ಮಾಡಿದರೂ ಅವು ಹುಸಿಯಾಗುತ್ತಿವೆ ಎಂದು ಹೇಳಿದ್ದೇನೆ.

ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರಕ್ಕೆ ತೆರಿಗೆ ಕೊಡುತ್ತೇವೆ. ದೆಹಲಿಗೆ ಹೋಗಿ ತೆರಿಗೆ ಹಂಚಿಕೆಯಲ್ಲಿ ಕಡಿಮೆ ಅನುದಾನ ಬರುತ್ತಿದೆ, ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯಕ್ಕೆ ಅನುದಾನ ಕಡಿಮೆಯಾಗಿದೆ, ಕೇಂದ್ರದಿಂದ ಅನುದಾನ ಬರುತ್ತಿಲ್ಲ ಎಂದು ಶಾಸಕರು, ಸಂಸದರು, ಸಚಿವರು ದೆಹಲಿಯಲ್ಲಿಯೇ ಪ್ರತಿಭಟನೆ ಮಾಡಿದೆವು.

ಕೇಂದ್ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಅನುದಾನ ನೀಡುವುದಾಗಿ ಬಜೆಟ್ ನಲ್ಲಿ ಘೋಷಣೆ ಮಾಡಿದ್ದರು. ಇಂದಿನವರೆಗೂ ಒಂದು ರೂಪಾಯಿ ಬಿಡುಗಡೆಯಾಗಿಲ್ಲ ಎಂದರು.

ಕಾಮಗಾರಿಗೆ ಅನುದಾನ ನೀಡಿ ಶೀಘ್ರಗತಿಯಲ್ಲಿ ಪೂರ್ಣ

ಒಂಭತ್ತು ವರ್ಷಗಳ ನಂತರ ಮೇಲ್ಸೇತುವೆ ಉದ್ಘಾಟನೆಯಾಗುತ್ತಿರುವ ಬಗ್ಗೆ ಮಾತನಾಡಿ 2016 ರಲ್ಲಿ ನಮ್ಮ ಸರ್ಕಾರ ಕಾಮಗಾರಿಗೆ ಮಂಜೂರಾತಿ ಕೊಟ್ಟು, 2017 ರಲ್ಲಿ ಪ್ರಾರಂಭವಾಗಿತ್ತು.

ಹಿಂದಿನ ಸರ್ಕಾರ ಅದನ್ನು ಪೂರ್ಣಮಾಡದೇ ವಿಳಂಬವಾಯಿತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಗತ್ಯ ಅನುದಾನವನ್ನು ನೀಡಿ ಶೀಘ್ರಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿದ್ದೇವೆ ಎಂದರು.

ಕೊಡಗಿನಲ್ಲಿ ಸಿ ಅಂಡ್ ಡಿ ಭೂಮಿ ಮತ್ತು ಸೆಕ್ಷನ್ 4 ಅಧಿಸೂಚಿತ ಜಾಗವನ್ನು ಮೀಸಲು ಅರಣ್ಯ ಮಾಡುವ ಪ್ರಸ್ತಾವಕ್ಕೆ ರೈತರು ವ್ಯಾಪಕ ವಿರೋಧ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಕುರಿತು ಸಮಿತಿ ರಚಿಸಬೇಕಾಗುತ್ತದೆ. ಸಮಿತಿ ವರದಿ ಕೊಟ್ಟ ನಂತರ ಸರ್ಕಾರ ಕ್ರಮ ವಹಿಸಲಿದೆ ಎಂದರು.

ನಿವೇಶನ ಜಮೀನು ಇಲ್ಲದಿರುವವರಿಗೆ ಸರ್ಕಾರಿ ಭೂಮಿ

ಸರ್ಕಾರಿ ಭೂಮಿ ಭೂ ಗುತ್ತಿಗೆ ನೀಡುವುದಕ್ಕೆ ಜಿಲ್ಲೆಯಲ್ಲಿ ವಿರೋಧ ವ್ಯಕ್ತವಾಗಿರುವ ಬಗ್ಗೆ ಮಾತನಾಡಿ, ಸರ್ಕಾರಿ ಭೂಮಿ ಕೊಟ್ಟರೆ ವಿರೋಧ ಯಾಕೆ ಮಾಡಬೇಕು ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ನಿವೇಶನ ಇಲ್ಲದಿರುವವರಿಗೆ, ಜಮೀನು ಇಲ್ಲದವರಿಗೂ ಭೂಮಿ ಕೊಡುತ್ತೇವೆ ಎಂದರು.

ವನ್ಯ ಜೀವಿ -ಮಾನವ ಸಂಘರ್ಷ ತಪ್ಪಿಸಲು ಎಲ್ಲಾ ಕ್ರಮ

ವನ್ಯಜೀವಿ ಮಾನವ ಸಂಘರ್ಷ ಕಾಡಿಂಚಿನ ಊರುಗಳಲ್ಲಿ ಹೆಚ್ಚಾಗಿ ನಡೆಯುತ್ತಿವೆ.. ಆನೆಗಳು, ಚಿರತೆಗಳ ಸಂಖ್ಯೆ ಕರ್ನಾಟಕದಲ್ಲಿ ಹೆಚ್ಚಾಗಿದೆ. ಪ್ರಾಣಿಗಳು ಆಹಾರ ಮತ್ತು ನೀರಿಗಾಗಿ ಕಾಡಿನಿಂದ ನಾಡಿಗೆ ಬರುತ್ತಿವೆ. ಹಾಗಾಗಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡಲಾಗುತ್ತಿದೆ. ವನ್ಯ ಜೀವಿ -ಮಾನವ ಸಂಘರ್ಷ ತಪ್ಪಿಸಲು ಎಲ್ಲಾ ಕ್ರಮ ಕೈಕೊಳ್ಳಲಾಗುವುದು ಎಂದರು.

ಕಾವೇರಿ ನದಿ ಸ್ವಚ್ಛತೆಯ ಬಗ್ಗೆ ರಚಿಸಲಾಗಿದ್ದ ಸಮಿತಿ ಇನ್ನೂ ವರದಿ ನೀಡಿಲ್ಲ. ವರದಿ ನೀಡಿದ ನಂತರ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!