Doddaballapura: ಲೈಸೆನ್ಸ್ ಪಡೆಯದೆ ವ್ಯಾಪಾರ ಮಾಡುವವರ ನಿಯಂತ್ರಿಸಿ – ವ್ಯಾಪಾರಿಗಳ ಸಂಘ

Doddaballapura: Regulate Unlicensed Traders - Traders Association

ದೊಡ್ಡಬಳ್ಳಾಪುರ (Doddaballapura): ನಿನ್ನೆ ಪಿಯು ಕಾಲೇಜು ಮುಂದೆ ನಡೆದ ವ್ಯಾಪಾರಿಗಳು ಹಾಗೂ ರೈತರ ನಡುವಿನ ಮಾತಿ‌ನ ಚಕಮಕಿ ತೀವ್ರ ಸ್ವರೂಪ ಪಡೆಯುವ ಲಕ್ಷಣ ಕಾಣುತ್ತಿದೆ.

ರೈತರ ವ್ಯಾಪಾರಕ್ಕೆ ಅಡ್ಡಿ ಮಾಡಬೇಡಿ ಎಂದು ಪೊಲೀಸರ ಸೂಚನೆ ಬೆನ್ನಲ್ಲೇ, ಲೈಸೆನ್ಸ್ ಪಡೆಯದೆ ನಗರದಲ್ಲಿ ವ್ಯಾಪಾರ ನಡೆಸುತ್ತಿರುವುದನ್ನು ತಡೆಯುವಂತೆ ಒತ್ತಾಯಿಸಿ ಬೀದಿ ಬದಿ ವ್ಯಾಪಾರಿಗಳ ಸಂಘದಿಂದ ನಗರಸಭೆ ಪೌರಾಯುಕ್ತರಿಗೆ ಮನವಿ ಪತ್ರ ನೀಡಿದ್ದಾರೆ.

ಈ ಪತ್ರದ ಅನ್ವಯ ಕಳೆದ 30 ರಿಂದ 40 ವರ್ಷಗಳಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಳೆಚಳಿ ಧೂಳು ಬಿಸಿಲಿನಲ್ಲಿ ಯಾವುದೇ ಮೂಲಭೂತ ಸೌಲಭ್ಯಗಳಿಲ್ಲದೆ, ಹಣ್ಣು, ಹಂಪಲುಗಳ ವ್ಯಾಪಾರ ಮಾಡಿಕೊಂಡು ಇದನ್ನೇ ನಂಬಿ ಬದುಕು ಕಟ್ಟಿಕೊಂಡು, ಈ ವ್ಯಾಪಾರ ಬಿಟ್ಟರೆ ಬೇರೆ ಕಸಬು ತಿಳಿಯದೆ ಬೀದಿ ಬದಿಯಲ್ಲಿ ವ್ಯಾಪಾರ ನಡೆಸುತ್ತಿದ್ದೇವೆ.

ಈ ಹಿಂದೆ ಸಾಕಷ್ಟು ಬಾರಿ ನಗರಸಭೆಗೆ ನಮ್ಮ ಸಮಸ್ಯೆಗಳನ್ನು ಬಗೆ ಹರಿಸಲು ಒತ್ತಾಯಿಸಿ ನೂರಾರು ಬೀದಿಬದಿ ವ್ಯಾಪಾರಸ್ಥರನ್ನು ನಗರಸಭೆ ಮುಂದೆ ಸೇರಿಸಿ ಪ್ರತಿಭಟನೆ ನಡೆಸಿ ಮನವಿಯನ್ನು ಸಹಸಲ್ಲಿಸಲಾಗಿದೆ‌. ಆದರೆ ಇಲ್ಲಿಯತನಕ ನಮ್ಮಬಬೇಡಿಕೆಗಳು ಈಡೇರಿಸಿಲ್ಲ ಅದನ್ನು ಗಮನಿಸಬೇಕು.

ನಾವು ವರ್ಷಾ ಪೂರ್ತಿ ತುಂಬಾ ಕಷ್ಟ ಬಿದ್ದು ವ್ಯಾಪಾರವಹಿವಾಟು ನಡೆಸುತ್ತಿರುತ್ತೇವೆ. ಆದರೆ ಕೆಲವರು ಹೊರಗಿನಿಂದ ಬಂದು ಸೀಸನ್ನಲ್ಲಿ ವ್ಯಾಪಾರ ಮಾಡಿಕೊಂಡು ನಮಗೆ ತೊಂದರೆ ನೀಡುತ್ತಿದ್ದಾರೆ.

ನಗರಸಭೆಯಿಂದ ಗುರುತಿನ ಚೀಟಿಯನ್ನು ಪಡೆಯದೆ ನಿಯಮಾನುಸರ ವ್ಯಾಪಾರ ಮಾಡುತ್ತಿರುವವರಿಗೆ ತುಂಬಾ ಕಷ್ಟನಷ್ಟ ಆಗುತ್ತಿದೆ. ಈ ಬಗ್ಗೆ ನಗರಸಭೆಯ ಅಧಿಕಾರಿಗಳು ಸೂಕ್ತಕ್ರಮ ಜರುಗಿಸುವುದರೊಂದಿಗೆ ನಿಯಂತ್ರಣ ಮಾಡಬೇಕಾಗಿದೆ.

ವಿಷಾದ ವ್ಯಕ್ತಪಡಿಸಿದ ಸಿಐಟಿಯು

ನಿನ್ನೆ ವ್ಯಾಪಾರಿಗಳ ನಡುವೆ ನಡೆದ ಮಾತಿನ ಚಕಮುಖಿಯನ್ನು ಬೀದಿಬದಿ ವ್ಯಾಪಾರಿಗಳ ಸಂಘ(ಸಿಐಟಿಯು) ಗಮನಿಸಿದೆ ಇದಕ್ಕೆ ವಿಷಾದ ವ್ಯಕ್ತಪಡಿಸುತ್ತಿದೆ.

ನಾವು ರೈತರು ಬೆಳೆದ ಪದಾರ್ಥಗಳನ್ನು ತಂದು ವ್ಯಾಪಾರ ನಡೆಸುವವರು ನಮಗೂ ಮತ್ತು ರೈತರ ನಡುವೆ ಸೌಹಾರ್ದ ಸಂಬಂಧವಿದೆ, ರೈತರು ಬೆಳೆದ ಪದಾರ್ಥಗಳನ್ನು ವ್ಯಾಪಾರ ಮಾಡಲು ನಮ್ಮ ವಿರೋಧವಿಲ್ಲ ಆದರೆ ನಿಯಮಾನುಸಾರ ಮಾಡಬೇಕಷ್ಟೆ.

ಸರಿಯಾಗಿ ಬಿಸಿನೆಸ್ ಇಲ್ಲದೆ ಜೀವನ ನಡೆಸಲು ಕಷ್ಟವಾದಾಗ ವ್ಯಾಪಾರಸ್ಥರ ನಡುವೆ ಜಗಳ ನಡೆಯುತ್ತಿರುತ್ತದೆ. ಆದರೆ ದೊಡ್ಡದೊಡ್ಡ ಮಾಲ್ಗಳು ಬಂದು ವ್ಯಾಪಾರಸ್ಥರನ್ನು ನುಂಗಿ ಕುಳಿತಿವೆ. ಈ ನೀತಿಯ ವಿರುದ್ಧ ನಮ್ಮ ಹೋರಾಟ ನಡೆಸಬೇಕಾಗಿದೆ.

ಆದ್ದರಿಂದ ತಾವುಗಳು ನಮ್ಮ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಈ ಮೂಲಕ ಮನವಿ ಸಲ್ಲಿಸುತ್ತೇವೆ ಎಂದಿದೆ.

ಬೇಡಿಕೆಗಳು

  • ಎಲ್ಲಾ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿಯನ್ನು ನೀಡಬೇಕು.
  • ನಗರದಲ್ಲಿ ಅಗತ್ಯವಿರುವ ಕಡೆವ್ಯಾಪಾರಿ ವಲಯ ಸ್ಥಾಪಿಸಬೇಕು. (ಸ್ಟ್ರೀಟ್ವೆಂಡರ್ಸ್ಜೋನ್)
  • ಪರ್ಯಾಯ ವ್ಯವಸ್ಥೆ ಮಾಡದೆ ಬೀದಿಬದಿ’ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸಬಾರದು.
  • ಅನಗತ್ಯ ಪೊಲೀಸರ ಕಿರುಕುಳ ನಿಲ್ಲಬೇಕು.
  • ವಸತಿ ಯೋಜನೆಯಲ್ಲಿ ಮನೆಗಳನ್ನು ನಿರ್ಮಿಸಿಕೊಡಬೇಕು.
  • ಉಚಿತ ಆರೋಗ್ಯ ಮತ್ತು ಶಿಕ್ಷಣ ನೀಡಬೇಕು. ಎಲ್ಲರಿಗೂ ಬಿ.ಪಿ.ಎಲ್ ಕಾರ್ಡ್ ನೀಡಬೇಕು.
  • ಕಟ್ಟಡ ಕಾರ್ಮಿಕರಿಗೆ ಸಿಗುತ್ತಿರುವ ರೀತಿಯಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಎಲ್ಲ ರೀತಿಯ ಸೌಲಭ್ಯಗಳು ಸಿಗಬೇಕು.
  • ಶ್ರೀಸಿದ್ಧಲಿಂಗಯ್ಯ ವೃತ್ತದಲ್ಲಿ ಮತ್ತು ನಗರದ ಪ್ರಮುಖ ವೃತ್ತಗಳಲ್ಲಿ ರಸ್ತೆಗಳಲ್ಲಿ ಸಿಸಿಟಿವಿಗಳನ್ನು ಆಳವಡಿಸಲು ಮನವಿ.
  • ಬೀದಿಬದಿ ವ್ಯಾಪಾರಿಗಳ ಹಕ್ಕುಗಳನ್ನು ರಕ್ಷಣೆ ಮಾಡಲು ಕಾನೂನು ಬದ್ಧವಾಗಿ ರಚಿಸಲ್ಪಟ್ಟಿರುವ ನಮ್ಮ ಸಂಘದೊಂದಿಗೆ ವ್ಯವಹರಿಸಲು ನಗರಸಭಾ ಆಡಳಿತ ಮತ್ತು ತಾಲ್ಲೂಕು ಆಡಳಿತ ಸೂಕ್ತ ಕ್ರಮವನ್ನು ಜರುಗಿಸಬೇಕು.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]