BJP means Burude people's party; Minister Ramalinga Reddy

ಬಿಜೆಪಿ ಎಂದರೆ ಬುರುಡೆ‌ ಜನರ ಪಕ್ಷ; ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು

ಬೆಂಗಳೂರು: ಬಿಜೆಪಿ (BJP) ಎಂದರೆ ಬುರುಡೆ‌ ಜನರ ಪಕ್ಷ, ಅವರಿಗೆ ಬುರುಡೆಯಲ್ಲಿ ಮೆದುಳು ಇದೆಯೋ ಇಲ್ಲವೋ ಗೊತ್ತಿಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ತರಾಟೆಗೆ ತೆಗೆದುಕೊಂಡಿದ್ದಾರೆ.

“ಸುಳ್ಳು ಎಂದರೆ ರಾಮಲಿಂಗಾರೆಡ್ಡಿ – ರಾಮಲಿಂಗಾರೆಡ್ಡಿ ಎಂದರೆ ಸುಳ್ಳು” ಸಾರಿಗೆ ಸಂಸ್ಥೆ ಮಹಾನ್ ಲಾಭದಲ್ಲಿದೆ ಎಂದು ಪುಟಗಟ್ಟಲೆ ಜಾಹೀರಾತು ನೀಡಿದ್ದ ರಾಮಲಿಂಗಾ ರೆಡ್ಡಿ ಅವರೆ, ಸಾರಿಗೆ ಸಂಸ್ಥೆ ಲಾಭದಲ್ಲಿದೆ ಎಂದ ಮೇಲೆ ಇಂಧನ ಬಾಕಿಯನ್ನು ಪಾವತಿಸಲು ಸಾಲ ಎತ್ತಲು ಮುಂದಾಗಿರುವುದರ ಹಿಂದಿನ ರಹಸ್ಯವನ್ನು ತಿಳಿಸುವಿರಾ..??!! ಎಂಬ ಪ್ರಶ್ನೆಗೆ ರಾಮಲಿಂಗಾ ರೆಡ್ಡಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ಬಿಜೆಪಿ ಎಂದರೆ ಬುರುಡೆ‌ ಜನರ ಪಕ್ಷ, ಅವರಿಗೆ ಬುರುಡೆಯಲ್ಲಿ ಮೆದುಳು ಇದೆಯೋ ಇಲ್ಲವೋ ಗೊತ್ತಿಲ್ಲ.. ಬುರುಡೆ ಜನರೆಲ್ಲ ಕೂಡಿಕೊಂಡು ಪುಖಾಂನುಪುಂಖವಾಗಿ ಸುಳ್ಳನ್ನೇ ಸತ್ಯವೆಂದು ಬಿಂಬಿಸುವ ಬುರುಡೆ‌ ಪಕ್ಷ ದವರೇ..

ಸಾರಿಗೆ ಸಂಸ್ಥೆಗಳು ಲೋನ್ ತೆಗೆದುಕೊಳ್ಳಬೇಕು ಯಾಕೆಂದರೆ, ತಮ್ಮ ಪಕ್ಷದ ದುರಾಡಳಿತದ ಅವಧಿಯಲ್ಲಿನ ₹5900 ಕೋಟಿ ಸಾಲ‌ ತೀರಿಸಬೇಕಾದ ಅನಿವಾರ್ಯತೆ ಇದೆಯಲ್ಲ ಅದಕ್ಕೆ.

ಸಾರಿಗೆ ಸಂಸ್ಥೆಗಳ ಆದಾಯ ವೃದ್ದಿಯಾಗಿದೆ ಎಂದೇ ನಾವು ಪದೇ ಪದೇ ಹೇಳುತ್ತಿರುವುದು. ಲಾಭ ಆಗಿದೆ ಎಂದು ನಾವು ಎಲ್ಲೂ ಹೇಳಿಲ್ಲ. ಆದಾಯ ಮತ್ತು ಲಾಭಕ್ಕೆ ವ್ಯತ್ಯಾಸ ತಿಳಿಯದ, ಸಾಮಾನ್ಯ ಗಣಿತವು ಬಾರದ ಅಜ್ಞಾನಿಗಳು ಬಿ.ಜೆ.ಪಿ ಅವರು.

ಬಿಎಸ್ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರ ಆಡಳಿತದಲ್ಲಿ ರಾಜ್ಯ ಸರ್ಕಾರ ಹೊಸದಾಗಿ ಮಾಡಿದ ಸಾಲ ₹ 2 ಲಕ್ಷ 30 ಸಾವಿರ ಕೋಟಿ ಅದರ ಬಗ್ಗೆ ಸ್ವಲ್ಪ ಗಮನಹರಿಸಿ ವಿಷಯ ಸಂಗ್ರಹಿಸಿ ಮಾತನಾಡಿ.

1947 ರಿಂದ 2014 ರವರೆಗೆ ದೇಶದ‌ 67 ವರ್ಷಗಳ ಇತಿಹಾಸದಲ್ಲಿ ಎಲ್ಲಾ ಪ್ರಧಾನಮಂತ್ರಿಗಳು ಮಾಡಿದ ಸಾಲ ಸುಮಾರು ₹ 53 ಲಕ್ಷ ಕೋಟಿಗಳು.

ಇಂದಿನ ಕೇಂದ್ರ ಸರ್ಕಾರದ ಮಾಡಿರುವ ಸಾಲ 2014-2025 ರ ಅವಧಿಗೆ ₹ 149 ಲಕ್ಷ ಕೋಟಿಗಳು. ಇಲ್ಲಿಯವರೆಗೆ ಒಟ್ಟು ಸಾಲ ಇರುವುದು ₹ 202 ಲಕ್ಷ ಕೋಟಿ. ಅಂದರೆ ಅತ್ಯಂತ ಕಡಿಮೆ ಅವಧಿಯಲ್ಲಿ ಅತೀ ಹೆಚ್ಚು ಸಾಲ‌ ಮಾಡಿದ ಕೀರ್ತಿ ಬಿಜೆಪಿ ಪಕ್ಷಕ್ಕೆ ಸಲ್ಲಬೇಕು.

ದೇಶದ ಜನರಿಗೆ ಸುಳ್ಳು ಅಂಕಿ ಅಂಶಗಳನ್ನು ನೀಡಿ, ದಾರಿ ತಪ್ಪಿಸುತ್ತಾ, ಜನರ ಆರ್ಥಿಕ ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಯಾವುದೇ ಪ್ರಶ್ನೆಗೆ ಉತ್ತರ ನೀಡದಿರುವುದು ದುರಂತವೇ ಸರಿ ಎಂದಿದ್ದಾರೆ.

ರಾಜಕೀಯ

ಸೋನಮ್ ವಾಂಗ್ಚುಕ್ ಬಂಧನ ರದ್ದು

ಸೋನಮ್ ವಾಂಗ್ಚುಕ್ ಬಂಧನ ರದ್ದು

6 ತಿಂಗಳ ನಂತರ ಸೋನಮ್ ವಾಂಗ್ಚುಕ್ (Sonam Wangchuk) ಜೈಲಿನಿಂದ ಬಿಡುಗಡೆಯಾಗಲಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಂಧನ ರದ್ದುಗೊಳಿಸಿದೆ.

[ccc_my_favorite_select_button post_id="120204"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!