Who increased the metro fare..?; Cmsiddaramaiah

ಮೆಟ್ರೋ ದರ ಹೆಚ್ಚಳ ಮಾಡಿದ್ ಯಾರು..?; ಬಿಜೆಪಿಯವರು ಸುಳ್ಳು ಹೇಳುದ್ರಾ..? ಸಿಎಂ ಹೇಳಿದ್ ಇಷ್ಟು..!

ಬೆಂಗಳೂರು: ಜನರ ಆಕ್ರೋಶಕ್ಕೆ ಹೆದರಿ ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳ ರಾಜ್ಯ ಸರ್ಕಾರ ಮಾಡಿದೆ ಎಂದು ಸುಳ್ಳು ಸುದ್ದಿಯನ್ನು ಬಿಜೆಪಿ ಹಬ್ಬಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು,
ಮೆಟ್ರೋ ಪ್ರಯಾಣ ದರ ಹೆಚ್ಚಳವನ್ನು ವಿರೋಧಿಸುತ್ತಿರುವ ವಿರೋಧ ಪಕ್ಷವಾದ ಬಿಜೆಪಿಯ ನಾಯಕರು ಯಥಾಪ್ರಕಾರ ಸುಳ್ಳು ಮತ್ತು ತಿರುಚಿದ ಮಾಹಿತಿಯನ್ನು ಬಳಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿ ಸಾರ್ವಜನಿಕರ ಹಾದಿ ತಪ್ಪಿಸುತ್ತಿದ್ದಾರೆ.

ಸರ್ಕಾರದ ಯಾವುದೇ ನೀತಿ-ನಿರ್ಧಾರಗಳನ್ನು ವಿರೋಧಿಸುವ ಅಧಿಕಾರ ಸಾರ್ವಜನಿಕರಿಗೆ ಇದೆ, ಸಂವಿಧಾನಬದ್ಧವಾದ ಅವರ ಹಕ್ಕನ್ನು ನಾನು ಗೌರವಿಸುತ್ತೇನೆ.

ಆದರೆ ವಿರೋಧ ಪಕ್ಷದ ಸ‍್ಥಾನದಲ್ಲಿ ಜನ ಕೂರಿಸಿರುವ ರಾಜ್ಯದ ಬಿಜೆಪಿ ರಾಜಕೀಯ ದುರುದ್ದೇಶದಿಂದ ಸುಳ್ಳು ಮಾಹಿತಿಗಳನ್ನು ನೀಡಿ ಸಾರ್ವಜನಿಕರ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿರುವುದು ಅಕ್ಷಮ್ಯ.

ಜನಾಕ್ರೋಶಕ್ಕೆ ಹೆದರಿದ ಬಿಜೆಪಿ ನಾಯಕರು

ಒಂದೆಡೆ ಮೆಟ್ರೋ ರೈಲು ನಿರ್ಮಾಣದ ಸಾಧನೆ ಕೇಂದ್ರದ ಬಿಜೆಪಿ ಸರ್ಕಾರದ್ದು ಎಂದು ಡಂಗುರ ಬಾರಿಸುತ್ತಿರುವ ಬಿಜೆಪಿ ನಾಯಕರು ದರ ಪರಿಷ್ಕರಣೆ ವಿರುದ್ದ ಜನಾಕ್ರೋಶ ವ್ಯಕ್ತವಾಗುತ್ತಿರುವುದನ್ನು ಕಂಡು ಅದರ ಜವಾಬ್ದಾರಿಯನ್ನು ರಾಜ್ಯ ಸರ್ಕಾರದ ಮೇಲೆ ಹೊರಿಸುತ್ತಿರುವುದು ಆತ್ಮವಂಚಕ ನಡವಳಿಕೆಯಾಗಿದೆ.

ಕೇಂದ್ರ ಮತ್ತು ಕರ್ನಾಟಕ ಸರ್ಕಾರ ಜೊತೆಗೂಡಿ ಬೆಂಗಳೂರು ಮೆಟ್ರೊ ರೈಲು ನಿಗಮವನ್ನು ಸ್ಥಾಪಿಸಿದ್ದು, ಇದರಲ್ಲಿ ಎರಡೂ ಸರ್ಕಾರಗಳ ಸಮ (50:50) ಪಾಲುದಾರಿಕೆ ಇದೆ.

ಕೇಂದ್ರ ನಗರ ಮತ್ತು ವಸತಿ ವ್ಯವಹಾರ ಇಲಾಖೆಯ ಕಾರ್ಯದರ್ಶಿಯಾಗಿರುವ ಶ್ರೀನಿವಾಸ ಕಟಿಕಿಥಲ ಅವರು ನಿಗಮದ ಈಗಿನ ಅಧ್ಯಕ್ಷರು. ವ್ಯವಸ್ಥಾಪಕ ನಿರ್ದೇಶಕ ಮತ್ತು ನಿರ್ದೇಶಕರ ಸ‍್ಥಾನದಲ್ಲಿ ಕೇಂದ್ರ ಮತ್ತು ರಾಜ್ಯದ ಅಧಿಕಾರಿಗಳಿದ್ದಾರೆ.

ಇದೊಂದು ಸ್ವಾಯತ್ತ ಸಂಸ್ಥೆಯಾಗಿದ್ದು ಇದರ ಮೇಲೆ ರಾಜ್ಯ ಸರ್ಕಾರಕ್ಕೆ ಪೂರ್ಣ ನಿಯಂತ್ರಣಾಧಿಕಾರ ಇಲ್ಲ.

ಉಳಿದೆಲ್ಲ ನಗರಗಳ ಮೆಟ್ರೋ ರೈಲು ನಿಗಮಗಳಂತೆ ಬೆಂಗಳೂರು ಮೆಟ್ರೊ ರೈಲು ನಿಗಮ ಕೂಡಾ ಕೇಂದ್ರ ಸರ್ಕಾರದ ಮೆಟ್ರೋ ರೈಲು (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ 2002ರ ಅಡಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ.

2017ರ ನಂತರ ಮೆಟ್ರೊ ರೈಲಿನ ಪ್ರಯಾಣ ದರ ಪರಿಷ್ಕರಣೆ ಮಾಡದೆ ಇರುವ ಕಾರಣ ದರ ಪರಿಷ್ಕರಣೆ ನಡೆಸುವಂತೆ ಬಿಎಂಆರ್‌ಸಿಎಲ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು.

ಪ್ರಯಾಣ ದರ ಹೆಚ್ಚಳದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲೇ ಇದ್ದಿದ್ದರೆ ಬಿಎಂಆರ್‌ಸಿಎಲ್ ನಮಗೆ ಪತ್ರ ಬರೆಯದೆ, ಕೇಂದ್ರ ಸರ್ಕಾರಕ್ಕೆ ಯಾಕೆ ಪತ್ರ ಬರೆಯುತ್ತಿತ್ತು?

ಬಿಎಂಆರ್‌ಸಿಎಲ್ ಪತ್ರಕ್ಕೆ ಪ್ರತಿಕ್ರಿಯಿಸಿದ್ದ ಕೇಂದ್ರ ಸರ್ಕಾರ ಮದ್ರಾಸ್ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಆರ್ ಥರಾನಿ ಅವರ ಅಧ್ಯಕ್ಷತೆಯಲ್ಲಿ ದರ ಪರಿಷ್ಕರಣಾ ಸಮಿತಿ ರಚಿಸಿತ್ತು, ಈ ಸಮಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರತಿನಿಧಿಗಳು ಸದಸ್ಯರಾಗಿದ್ದರು.

2024ರ ಸೆಪ್ಟೆಂಬರ್ 16ರಂದು ಅಧಿಕಾರ ಸ್ವೀಕರಿಸಿದ ಈ ಸಮಿತಿ ಮೂರು ತಿಂಗಳೊಳಗೆ ತನ್ನ ಶಿಫಾರಸನ್ನು ಸಲ್ಲಿಸಬೇಕೆಂದು ಕೇಂದ್ರ ಸರ್ಕಾರ ತನ್ನ ಪತ್ರದಲ್ಲಿ ತಿಳಿಸಿತ್ತು.

ಮೂರು ತಿಂಗಳ ಅವಧಿಯಲ್ಲಿ ಸಮಿತಿ ಬಿಎಂಆರ್‌ಸಿಎಲ್ ಅಧಿಕಾರಿಗಳ ಜೊತೆ ಮಾತ್ರವಲ್ಲ ದೆಹಲಿ ಮತ್ತು ಚೆನೈಗಳಿಗೆ ತೆರಳಿ ಅಲ್ಲಿನ ಮೆಟ್ರೋ ಸಂಸ್ಥೆಗಳ ಅಧಿಕಾರಿಗಳ ಜೊತೆಯಲ್ಲಿ ಕೂಡಾ ಕಾರ್ಯಾಚರಣೆ ಮತ್ತು ಪ್ರಯಾಣ ದರದ ಬಗ್ಗೆ ಸಮಾಲೋಚನೆ ನಡೆಸಿತ್ತು.

2017ರ ಜೂನ್ ನಲ್ಲಿ ಬೆಂಗಳೂರು ಮೆಟ್ರೋ ರೈಲಿಗೆ ನಿಗದಿಗೊಳಿಸಿದ್ದ ಪ್ರಯಾಣದರ, ಮೆಟ್ರೋದಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರ ಅನುಭವಗಳನ್ನು ದರಪರಿಷ್ಕರಣ ಸಮಿತಿ ಕಲೆ ಹಾಕಿತ್ತು.

ಇದರ ಜೊತೆಯಲ್ಲಿ ಬಿಎಂಆರ್‌ಸಿಎಲ್ ನ ಹಣಕಾಸು ಸಾಮರ್ಥ್ಯವನ್ನು ಕೂಡಾ ಸಮಿತಿ ಅಧ್ಯಯನ ಮಾಡಿ 2024ರ ಡಿಸೆಬರ್ 16ರಂದು ಸಮಿತಿ ತನ್ನ ವರದಿನ್ನು ಸಲ್ಲಿಸಿತ್ತು.

2017ರ ಜೂನ್ ತಿಂಗಳಲ್ಲಿ ಬಿಎಂಆರ್‌ಸಿಎಲ್ ಪ್ರಯಾಣ ದರ ನಿಗದಿಪಡಿಸಿದಾಗ ಮೆಟ್ರೋ ಪ್ರಥಮ ಹಂತದ 42.30 ಕಿ.ಮೀ ಮಾರ್ಗ ಮಾತ್ರ ಪೂರ್ಣಗೊಂಡಿತ್ತು. ಮೆಟ್ರೋ ಎರಡನೇ ಹಂತ ಭಾಗಶ: ಪೂರ್ಣಗೊಂಡ ನಂತರ ಈಗ ಮೆಟ್ರೋ ಮಾರ್ಗ 42.30 ಕಿ.ಮೀಟರ್ ಗೆ ವಿಸ್ತರಣೆ ಗೊಂಡಿದೆ.

ಮೆಟ್ರೋ 2, 2ಎ, ಮತ್ತು 2ಬಿ ಮಾರ್ಗಗಳು (96.60 ಕಿ.ಮೀ.) 2026ರ ಡಿಸೆಂಬರ್ ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದ್ದು ಆಗ ಬೆಂಗಳೂರು ಮೆಟ್ರೋ ಮಾರ್ಗ 175,55 ಕಿ.ಮೀ.ಗೆ ವಿಸ್ತರಣೆಯಾಗಲಿದೆ.

ಬೆಂಗಳೂರು ಮೆಟ್ರೋ ರೈಲಿಗೆ ಸಂಬಂಧಿಸಿದ ಈ ಎಲ್ಲ ಅಂಶಗಳನ್ನು ಗಮನಕ್ಕೆ ತೆಗೆದುಕೊಂಡು ಚರ್ಚೆ ನಡೆಸಿದ ನಂತರ ಹತ್ತು ಅಧ್ಯಾಯಗಳಲ್ಲಿ ತನ್ನ ವರದಿ ನೀಡಿದೆ. ಸಮಿತಿ ದೇಶದ ಉಳಿದ ಮೆಟ್ರೋ ರೈಲಿನ ಪ್ರಯಾಣದರವನ್ನು ಅಧ್ಯಯನ ಮಾಡಿದೆ.

ಸದ್ಯ ಬೆಂಗಳೂರು ಮೆಟ್ರೋ ಪ್ರಯಾಣ ದರ ಕನಿಷ್ಠ ರೂ.10 ಮತ್ತು ಗರಿಷ್ಠ ರೂ.60 ಆಗಿದೆ. ಮುಂಬೈ ಮೆಟ್ರೋ ರೈಲಿನ ಕನಿಷ್ಠ ಪ್ರಯಾಣದರ ರೂ.10 ಮತ್ತು ಗರಿಷ್ಠ ಪ್ರಯಾಣ ದರ ರೂ.80 ಆಗಿದೆ.

ದೆಹಲಿ ಮೆಟ್ರೋವನ್ನು ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿ ಮೊದಲ ಹಂತದ ಪ್ರಯಾಣದರವನ್ನು ಆಯಾ ರಾಜ್ಯಗಳ ಮೆಟ್ರೊ ನಿಗಮಗಳೇ ನಿಗದಿ ಪಡಿಸಿತ್ತು. ಈಗ ಪ್ರಯಾಣ ದರವನ್ನು ಕೇಂದ್ರ ಸರ್ಕಾರ ನೇಮಿಸುವ ಸಮಿತಿ ನಿಗದಿಪಡಿಸುತ್ತದೆ.

ಮೆಟ್ರೋ ರೈಲ್ವೆ (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯಿದೆಯ ಸೆಕ್ಷನ್ 37ರ ಪ್ರಕಾರ ಪ್ರಯಾಣ ದರ ನಿಗದಿ ಸಮಿತಿ ನೀಡಿದ ವರದಿಯನ್ನು ಮೆಟ್ರೋ ರೈಲು ನಿಗಮಗಳು ( ಈ ಪ್ರಕರಣದಲ್ಲಿ ಬಿಎಂಆರ್ ಸಿಎಲ್ ) ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕಾಗಿದೆ.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!